ಯೋಹಾನನು 1 : 1 (OCVKN)
ವಾಕ್ಯವು ದೇಹಧಾರಿಯಾದದ್ದು ಆದಿಯಲ್ಲಿ ವಾಕ್ಯವಿತ್ತು, ಆ ವಾಕ್ಯವು ದೇವರ ಬಳಿಯಲ್ಲಿತ್ತು, ಆ ವಾಕ್ಯವು ದೇವರಾಗಿತ್ತು.
ಯೋಹಾನನು 1 : 2 (OCVKN)
ಆ ವಾಕ್ಯವೆಂಬುವವರು ಆದಿಯಲ್ಲಿ ದೇವರ ಬಳಿಯಲ್ಲಿದ್ದರು.
ಯೋಹಾನನು 1 : 3 (OCVKN)
ಆ ವಾಕ್ಯವೆಂಬುವವರ ಮೂಲಕವಾಗಿಯೇ ಸಮಸ್ತವೂ ಸೃಷ್ಟಿಯಾಯಿತು. ಸೃಷ್ಟಿಯಾದವುಗಳಲ್ಲಿ ಯಾವುದೂ ಅವರಿಲ್ಲದೆ ಸೃಷ್ಟಿಯಾಗಲಿಲ್ಲ.
ಯೋಹಾನನು 1 : 4 (OCVKN)
ಅವರಲ್ಲಿ ಜೀವವಿತ್ತು. ಆ ಜೀವವು ಮಾನವರಿಗೆ ಬೆಳಕಾಗಿತ್ತು.
ಯೋಹಾನನು 1 : 5 (OCVKN)
ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲೆಯು ಆ ಬೆಳಕನ್ನು ಅಡಗಿಸಲಿಲ್ಲ.
ಯೋಹಾನನು 1 : 6 (OCVKN)
ದೇವರು ಕಳುಹಿಸಿದ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಹಾನನು.
ಯೋಹಾನನು 1 : 7 (OCVKN)
ತನ್ನ ಮೂಲಕ ಎಲ್ಲರು ವಿಶ್ವಾಸವಿಡುವಂತೆ ಅವನು ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡಲು ಯೋಹಾನನು ಸಾಕ್ಷಿಯಾಗಿ ಬಂದನು.
ಯೋಹಾನನು 1 : 8 (OCVKN)
ಅವನೇ ಆ ಬೆಳಕಾಗಿರಲಿಲ್ಲ. ಆ ಬೆಳಕಿನ ವಿಷಯದಲ್ಲಿ ಸಾಕ್ಷಿಯಾಗಿ ಬಂದನಷ್ಟೇ.
ಯೋಹಾನನು 1 : 9 (OCVKN)
ನಿಜ ಬೆಳಕು ಲೋಕಕ್ಕೆ ಬರುವುದಾಗಿತ್ತು. ಆ ಬೆಳಕೇ ಪ್ರತಿ ಮಾನವನಿಗೂ ಬೆಳಕನ್ನು ನೀಡುವುದಾಗಿತ್ತು.
ಯೋಹಾನನು 1 : 10 (OCVKN)
ಆ ವಾಕ್ಯವೆಂಬುವವರು ಲೋಕದಲ್ಲಿದ್ದರು ಮತ್ತು ಲೋಕವು ಅವರ ಮೂಲಕ ಉಂಟಾಯಿತು. ಆದರೂ ಲೋಕವು ಅವರ ಗುರುತು ಹಿಡಿಯಲಿಲ್ಲ.
ಯೋಹಾನನು 1 : 11 (OCVKN)
ಅವರು ತಮ್ಮ ಸ್ವಜನರ ಬಳಿಗೆ ಬಂದರು. ಆದರೆ ಸ್ವಜನರೇ ಅವರನ್ನು ಸ್ವೀಕರಿಸಲಿಲ್ಲ.
ಯೋಹಾನನು 1 : 12 (OCVKN)
ಆದರೂ ಯಾರಾರು ಅವರನ್ನು ಸ್ವೀಕರಿಸಿದರೋ, ಅಂದರೆ ಅವರ ಹೆಸರಿನಲ್ಲಿ ವಿಶ್ವಾಸವಿಟ್ಟರೋ ಅವರೆಲ್ಲರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಕೊಟ್ಟರು.
ಯೋಹಾನನು 1 : 13 (OCVKN)
ಇವರು ರಕ್ತಸಂಬಂಧದಿಂದಾಗಲಿ, ದೈಹಿಕ ಇಚ್ಛೆಯಿಂದಾಗಲಿ, ಪುರುಷನ ಇಚ್ಛೆಯಿಂದಾಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.
ಯೋಹಾನನು 1 : 14 (OCVKN)
ಯೋಹಾನನು 1 : 15 (OCVKN)
ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು. “ಅವರನ್ನು ಕುರಿತು ಯೋಹಾನನು ಸಾಕ್ಷಿ ಕೊಡುತ್ತಾ, ‘ನನ್ನ ಬಳಿಕ ಬರುವವರು ನನಗಿಂತ ಮೊದಲೇ ಇದ್ದುದರಿಂದ ಅವರು ನನಗಿಂತಲೂ ಶ್ರೇಷ್ಠರು’ ಎಂದು ನಾನು ಹೇಳಿದವರು ಇವರೇ,” ಎಂದು ಘೋಷಿಸಿದನು.
ಯೋಹಾನನು 1 : 16 (OCVKN)
ಅವರ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಪಡೆದೆವು.
ಯೋಹಾನನು 1 : 17 (OCVKN)
ಏಕೆಂದರೆ ನಿಯಮವು ಮೋಶೆಯ ಮೂಲಕ ಕೊಡಲಾಯಿತು. ಕೃಪೆಯೂ ಸತ್ಯವೂ ಕ್ರಿಸ್ತ ಯೇಸುವಿನ ಮೂಲಕ ಬಂದವು.
ಯೋಹಾನನು 1 : 18 (OCVKN)
ದೇವರನ್ನು ಯಾರೂ ಎಂದೂ ಕಂಡಿಲ್ಲ; ತಂದೆ ದೇವರ ಹೃದಯಕ್ಕೆ ಹತ್ತಿರವಾಗಿರುವ ಏಕೈಕ ಪುತ್ರ ಆಗಿರುವವರೂ ಸ್ವತಃ ದೇವರೂ ಆಗಿರುವವರೂ ತಂದೆಯನ್ನು ಪ್ರಕಟಪಡಿಸಿದ್ದಾರೆ.
ಯೋಹಾನನು 1 : 19 (OCVKN)
ಸ್ನಾನಿಕ ಯೋಹಾನನು ತಾನು ಕ್ರಿಸ್ತ ಅಲ್ಲ ಎಂದು ಪ್ರಕಟಿಸುವುದು ಯೆರೂಸಲೇಮಿನ ಯೆಹೂದ್ಯ ನಾಯಕರು, ಯಾಜಕರನ್ನು ಮತ್ತು ಲೇವಿಯರನ್ನು ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದರು.
ಯೋಹಾನನು 1 : 20 (OCVKN)
ಅದಕ್ಕೆ ಯೋಹಾನನು, “ನಾನು ಕ್ರಿಸ್ತನಲ್ಲ” ಎಂದು ಅರಿಕೆಮಾಡಿ ಸಾಕ್ಷಿಕೊಟ್ಟನು.
ಯೋಹಾನನು 1 : 21 (OCVKN)
ಯೋಹಾನನು 1 : 22 (OCVKN)
ಅದಕ್ಕೆ ಅವರು, “ಹಾಗಾದರೆ ನೀನು ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ.” “ನೀನು ಆ ಪ್ರವಾದಿಯೋ?” ಎಂದು ಕೇಳಿದರು. ಅದಕ್ಕೆ ಅವನು, “ಅಲ್ಲ” ಎಂದನು.
ಯೋಹಾನನು 1 : 23 (OCVKN)
ಅವರು, “ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಕೊಡುವಂತೆ ನಿನ್ನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದು ಕೇಳಿದರು.
ಯೋಹಾನನು 1 : 24 (OCVKN)
ಅದಕ್ಕೆ ಯೋಹಾನನು, “ಪ್ರವಾದಿ ಯೆಶಾಯನು ಹೇಳಿದಂತೆ, ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವ ಸ್ವರವೇ ನಾನು,* ಯೆಶಾಯ 40:3 ” ಎಂದು ಹೇಳಿದನು. ಬಂದಿದ್ದವರು ಫರಿಸಾಯರ ಕಡೆಯವರಾಗಿದ್ದರು.
ಯೋಹಾನನು 1 : 25 (OCVKN)
ಅವರು ಯೋಹಾನನಿಗೆ, “ನೀನು ಕ್ರಿಸ್ತ ಇಲ್ಲವೆ ಎಲೀಯನಾಗಲಿ, ಆ ಪ್ರವಾದಿಯಾಗಲಿ ಆಗಿರದಿದ್ದರೆ ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು.
ಯೋಹಾನನು 1 : 26 (OCVKN)
ಅದಕ್ಕೆ ಯೋಹಾನನು, “ನಾನು ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನೀವು ಅರಿಯದ ಒಬ್ಬ ವ್ಯಕ್ತಿ ನಿಮ್ಮ ನಡುವೆ ಇದ್ದಾರೆ.
ಯೋಹಾನನು 1 : 27 (OCVKN)
ಅವರೇ ನನ್ನ ಬಳಿಕ ಬರುವವರು. ಅವರ ಪಾದರಕ್ಷೆಗಳ ದಾರವನ್ನು ಬಿಚ್ಚುವುದಕ್ಕೂ ಆ ಕಾಲದಲ್ಲಿ ಈ ಕೆಲಸವನ್ನು ಗುಲಾಮರು ಮಾಡುತ್ತಿದ್ದರು ನಾನು ಯೋಗ್ಯನಲ್ಲ,” ಎಂದು ಉತ್ತರಕೊಟ್ಟನು.
ಯೋಹಾನನು 1 : 28 (OCVKN)
ಯೋಹಾನನು 1 : 29 (OCVKN)
ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೊರ್ದನ್ ನದಿಯ ಆಚೆಕಡೆಯಲ್ಲಿರುವ ಬೇಥಾನ್ಯದಲ್ಲಿ ನಡೆಯಿತು. ಯೋಹಾನನು ಕ್ರಿಸ್ತ ಯೇಸುವಿನ ಬಗ್ಗೆ ಸಾಕ್ಷಿ ಹೇಳಿದ್ದು ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,
ಯೋಹಾನನು 1 : 30 (OCVKN)
‘ನನ್ನ ತರುವಾಯ ಬರುವವರು ನನಗಿಂತ ಮೊದಲೇ ಇದ್ದುದರಿಂದ ಅವರು ನನಗಿಂತಲೂ ಶ್ರೇಷ್ಠರು,’ ಎಂದು ನಾನು ಹೇಳಿದವರು ಇವರೇ.
ಯೋಹಾನನು 1 : 31 (OCVKN)
ನನಗೂ ಇವರ ಗುರುತಿರಲಿಲ್ಲ. ಆದರೆ ಇವರನ್ನು ಇಸ್ರಾಯೇಲರಿಗೆ ಪ್ರಕಟಪಡಿಸುವುದಕ್ಕೊಸ್ಕರ ನಾನು ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತಾ ಬಂದೆನು,” ಎಂದು ಹೇಳಿದನು.
ಯೋಹಾನನು 1 : 32 (OCVKN)
ಯೋಹಾನನು ಸಾಕ್ಷಿಕೊಟ್ಟು, “ಪವಿತ್ರಾತ್ಮರು ಪರಲೋಕದಿಂದ ಪಾರಿವಾಳದಂತೆ ಇಳಿದುಬಂದು ಯೇಸುವಿನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು.
ಯೋಹಾನನು 1 : 33 (OCVKN)
ನನಗೂ ಅವರ ಗುರುತಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಲು ನನ್ನನ್ನು ಕಳುಹಿಸಿದವರು, ‘ಯಾರ ಮೇಲೆ ಪವಿತ್ರಾತ್ಮರು ಇಳಿದುಬಂದು ನೆಲೆಸುವುದನ್ನು ನೀನು ನೋಡುವಿಯೋ ಅವರೇ ಪವಿತ್ರಾತ್ಮರಿಂದ ದೀಕ್ಷಾಸ್ನಾನ ಮಾಡಿಸುವವರು,’ ಎಂದು ತಿಳಿಸಿದರು.
ಯೋಹಾನನು 1 : 34 (OCVKN)
ಈಗ ನಾನು ಕಂಡು, ಇವರೇ ದೇವರ ಪುತ್ರರು ಕೆಲವು ಪ್ರತಿಗಳಲ್ಲಿ ದೇವರಿಂದ ಆಯ್ಕೆಯಾದವನು ಎಂದಿದೆ. ಎಂದು ಸಾಕ್ಷಿ ನೀಡುತ್ತಿದ್ದೇನೆ,” ಎಂದು ಹೇಳಿದನು.
ಯೋಹಾನನು 1 : 35 (OCVKN)
ಯೇಸುವಿನ ಪ್ರಥಮ ಶಿಷ್ಯರು ಮರುದಿನ ಯೋಹಾನನು ಪುನಃ ತನ್ನ ಶಿಷ್ಯರಲ್ಲಿ ಇಬ್ಬರೊಂದಿಗೆ ನಿಂತುಕೊಂಡಿದ್ದನು.
ಯೋಹಾನನು 1 : 36 (OCVKN)
ಆಗ ಯೇಸು ಹೋಗುತ್ತಿರುವುದನ್ನು ಕಂಡು ಅವನು, “ಇಗೋ, ದೇವರ ಕುರಿಮರಿ,” ಎಂದು ಹೇಳಿದನು.
ಯೋಹಾನನು 1 : 37 (OCVKN)
ಆ ಇಬ್ಬರು ಶಿಷ್ಯರು ಅವನು ಹೇಳಿದ್ದನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು.
ಯೋಹಾನನು 1 : 38 (OCVKN)
ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು,
ಯೋಹಾನನು 1 : 39 (OCVKN)
ಅವರು, “ಬೋಧಕರೇ, ನೀವು ವಾಸಿಸುವುದು ಎಲ್ಲಿ?” ಎಂದು ಕೇಳಿದರು.
ಯೋಹಾನನು 1 : 40 (OCVKN)
ಯೇಸು ಅವರಿಗೆ, “ಬಂದು ನೋಡಿರಿ,” ಎಂದು ಹೇಳಲು, ಅವರು ಹೋಗಿ ಯೇಸು ವಾಸಿಸುತ್ತಿದ್ದ ಸ್ಥಳವನ್ನು ಕಂಡು ಆ ದಿವಸ ಅವರ ಸಂಗಡ ಇದ್ದರು. ಆಗ ಸಂಜೆ ಸುಮಾರು ನಾಲ್ಕು ಗಂಟೆಯಾಗಿತ್ತು. ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರ ಅಂದ್ರೆಯನು ಒಬ್ಬನಾಗಿದ್ದನು.
ಯೋಹಾನನು 1 : 41 (OCVKN)
ಅಂದ್ರೆಯನು ಮೊದಲು ತನ್ನ ಸಹೋದರ ಸೀಮೋನನನ್ನು ಕಂಡು, “ನಾವು ಮೆಸ್ಸೀಯ ಆಗಿರುವವರನ್ನು ಕಂಡೆವು,” ಎಂದು ಹೇಳಿ,
ಯೋಹಾನನು 1 : 42 (OCVKN)
ಅವನನ್ನು ಯೇಸುವಿನ ಬಳಿಗೆ ಕರೆತಂದನು. “ಮೆಸ್ಸೀಯ” ಎಂದರೆ ಕ್ರಿಸ್ತ ಎಂದು ಅರ್ಥ.
ಯೋಹಾನನು 1 : 43 (OCVKN)
ಯೇಸು ಅವನನ್ನು ನೋಡಿ, “ನೀನು ಯೋಹಾನನ ಮಗ ಸೀಮೋನನು. ನಿನ್ನನ್ನು ‘ಕೇಫ’ ಎಂದು ಕರೆಯುವರು,” ಎಂದು ಹೇಳಿದರು. “ಕೇಫ” ಎಂದರೆ ಪೇತ್ರ ಇಲ್ಲವೆ ಬಂಡೆ ಎಂದರ್ಥ. ಯೇಸು ಫಿಲಿಪ್ಪನನ್ನು ಮತ್ತು ನತಾನಯೇಲನನ್ನು ಕರೆದದ್ದು
ಯೋಹಾನನು 1 : 44 (OCVKN)
ಯೇಸು ಮರುದಿನ ಗಲಿಲಾಯಕ್ಕೆ ಹೋಗಬೇಕೆಂದಿದ್ದಾಗ, ಅವರು ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು,” ಎಂದರು. ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿದಕ್ಕೆ ಸೇರಿದವನು.
ಯೋಹಾನನು 1 : 45 (OCVKN)
ಫಿಲಿಪ್ಪನು ನತಾನಯೇಲನನ್ನು ಕಂಡು, “ಮೋಶೆಯ ನಿಯಮದಲ್ಲಿ ಸೂಚಿಸಿದವರೂ ಪ್ರವಾದಿಗಳೂ ಯಾರನ್ನು ಕುರಿತು ಬರೆದಿದ್ದಾರೋ ಅವರು ನಮಗೆ ಸಿಕ್ಕಿದ್ದಾರೆ. ಅವರೇ ಯೋಸೇಫನ ಪುತ್ರರಾಗಿರುವ ನಜರೇತಿನ ಯೇಸು,” ಎಂದನು.
ಯೋಹಾನನು 1 : 46 (OCVKN)
ಯೋಹಾನನು 1 : 47 (OCVKN)
“ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ನತಾನಯೇಲನು ಕೇಳಲು, “ಬಂದು ನೋಡು,” ಎಂದು ಫಿಲಿಪ್ಪನು ಹೇಳಿದನು.
ಯೋಹಾನನು 1 : 48 (OCVKN)
ನತಾನಯೇಲನು ತಮ್ಮ ಬಳಿಗೆ ಬರುವುದನ್ನು ಯೇಸು ಕಂಡು ಅವನ ವಿಷಯವಾಗಿ, “ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ,” ಎಂದು ಹೇಳಿದರು.
ಯೋಹಾನನು 1 : 49 (OCVKN)
ಅದಕ್ಕೆ ನತಾನಯೇಲನು, “ನೀವು ನನ್ನನ್ನು ಹೇಗೆ ಬಲ್ಲಿರಿ?” ಎಂದು ಕೇಳಲು, ಯೇಸು ಅವನಿಗೆ, “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮುಂಚೆಯೇ ನೀನು ಅಂಜೂರದ ಮರದ ಕೆಳಗಿರುವುದನ್ನು ನಾನು ಕಂಡೆನು,” ಎಂದು ಉತ್ತರಿಸಿದರು.
ಯೋಹಾನನು 1 : 50 (OCVKN)
ಅದಕ್ಕೆ ನತಾನಯೇಲನು, “ಗುರುವೇ, ನೀವು ದೇವಪುತ್ರ; ಇಸ್ರಾಯೇಲಿನ ಅರಸ ನೀವೇ,” ಎಂದನು. ಯೇಸು ಅವನಿಗೆ, “ನಿನ್ನನ್ನು ಅಂಜೂರದ ಮರದ ಕೆಳಗೆ ಕಂಡಿದ್ದೆ ಎಂದು ನಾನು ಹೇಳಿದ್ದಕ್ಕೆ ನೀನು ನಂಬುತ್ತೀಯೋ? ನೀನು ಇವುಗಳಿಗಿಂತಲೂ ಮಹಾಕಾರ್ಯಗಳನ್ನು ಕಾಣುವೆ,” ಎಂದು ಉತ್ತರಿಸಿದರು.
ಯೋಹಾನನು 1 : 51 (OCVKN)
ಯೇಸು ಅವನಿಗೆ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ನೀವು ಪರಲೋಕವು ತೆರೆದಿರುವುದನ್ನೂ ದೇವದೂತರು ಮನುಷ್ಯಪುತ್ರನಾದ ನನ್ನ ಮುಖಾಂತರ ಇಳಿಯುತ್ತಾ ಏರುತ್ತಾ ಇರುವುದನ್ನೂ ಕಾಣುವಿರಿ,”§ ಆದಿ 28:12 ಎಂದು ಹೇಳಿದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51