ಯೋಹಾನನು 10 : 1 (OCVKN)
ಒಳ್ಳೆಯ ಕುರುಬ ಮತ್ತು ಆತನ ಕುರಿ “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಬಾಗಿಲಿನಿಂದ ಕುರಿಹಟ್ಟಿಯೊಳಗೆ ಬಾರದೆ ಬೇರೆ ಎಲ್ಲಿಂದಾದರೂ ಒಳಗೆ ಬರುವವನು ಕಳ್ಳನೂ ದರೋಡೆಕೋರನೂ ಆಗಿದ್ದಾನೆ.
ಯೋಹಾನನು 10 : 2 (OCVKN)
ಆದರೆ ಬಾಗಿಲಿನ ಮೂಲಕ ಪ್ರವೇಶಿಸುವವನೇ ಆ ಕುರಿಗಳ ಕುರುಬನು.
ಯೋಹಾನನು 10 : 3 (OCVKN)
ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ. ಕುರಿಗಳು ಅವನ ಸ್ವರವನ್ನು ಕೇಳುತ್ತವೆ. ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ.
ಯೋಹಾನನು 10 : 4 (OCVKN)
ಅವನು ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ.
ಯೋಹಾನನು 10 : 5 (OCVKN)
ಆದರೆ ಅವು ಅಪರಿಚಿತನನ್ನು ಹಿಂಬಾಲಿಸದೇ ಅವನ ಬಳಿಯಿಂದ ಓಡಿಹೋಗುವವು. ಏಕೆಂದರೆ ಅವು ಅಪರಿಚಿತನ ಸ್ವರವನ್ನು ಗುರುತಿಸುವುದಿಲ್ಲ,” ಎಂದರು.
ಯೋಹಾನನು 10 : 6 (OCVKN)
ಯೇಸು ಈ ಸಾಮ್ಯವನ್ನು ಅವರಿಗೆ ಹೇಳಿದರು. ಆದರೂ ಯೇಸು ಅವರ ಸಂಗಡ ಮಾತನಾಡಿದ ವಿಷಯಗಳು ಏನಾಗಿದ್ದವು ಎಂದು ಫರಿಸಾಯರು ಗ್ರಹಿಸಲಿಲ್ಲ.
ಯೋಹಾನನು 10 : 7 (OCVKN)
ಯೇಸು ತಿರುಗಿ ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ.
ಯೋಹಾನನು 10 : 8 (OCVKN)
ನನಗಿಂತ ಮೊದಲು ಬಂದವರೆಲ್ಲರು ಕಳ್ಳರೂ ದರೋಡೆಕೋರರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.
ಯೋಹಾನನು 10 : 9 (OCVKN)
ನಾನೇ ಬಾಗಿಲು; ನನ್ನ ಮೂಲಕವಾಗಿ ಯಾರು ಪ್ರವೇಶಿಸುವರೋ ಅವರೇ ಸುರಕ್ಷಿತವಾಗಿರುವರು. ಇದಲ್ಲದೆ ಅವರು ಒಳಗೆ ಹೋಗುವರು, ಹೊರಗೆ ಬರುವರು ಮತ್ತು ಮೇವನ್ನು ಕಂಡುಕೊಳ್ಳುವರು.
ಯೋಹಾನನು 10 : 10 (OCVKN)
ಕಳ್ಳನು ಕದಿಯಲು, ಕೊಯ್ಯಲು ಮತ್ತು ನಾಶಮಾಡಲು ಮಾತ್ರ ಬರುತ್ತಾನೆ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.
ಯೋಹಾನನು 10 : 11 (OCVKN)
“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
ಯೋಹಾನನು 10 : 12 (OCVKN)
ಕೂಲಿಯಾಳು ಕುರಿಗಳ ಕುರುಬನಲ್ಲ; ಅವನು ತೋಳ ಬರುವುದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಹಿಂಡನ್ನು ಚದರಿಸುತ್ತದೆ.
ಯೋಹಾನನು 10 : 13 (OCVKN)
ಅವನು ಕೇವಲ ಕೂಲಿಯಾಳು ಆಗಿರುವುದರಿಂದ ಅವನಿಗೆ ಕುರಿಗಳ ಚಿಂತೆಯಿಲ್ಲ.
ಯೋಹಾನನು 10 : 14 (OCVKN)
“ನಾನೇ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ನನ್ನ ಕುರಿಗಳು ನನ್ನನ್ನು ತಿಳಿದಿವೆ.
ಯೋಹಾನನು 10 : 15 (OCVKN)
ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ.
ಯೋಹಾನನು 10 : 16 (OCVKN)
ಈ ಹಿಂಡಿಗೆ ಸೇರದ ಬೇರೆ ಕುರಿಗಳು ನನಗಿವೆ. ಅವುಗಳನ್ನೂ ಸಹ ನಾನು ತರಬೇಕಾಗಿದೆ. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಹಿಂಡೂ ಒಬ್ಬನೇ ಕುರುಬನೂ ಆಗಿರುವುದು.
ಯೋಹಾನನು 10 : 17 (OCVKN)
ಮರಳಿ ಪಡೆಯುವಂತೆ ನನ್ನ ಪ್ರಾಣವನ್ನು ನಾನು ಕೊಡುವುದರಿಂದ ನನ್ನ ತಂದೆಯು ನನ್ನನ್ನು ಪ್ರೀತಿಸುತ್ತಾರೆ.
ಯೋಹಾನನು 10 : 18 (OCVKN)
ಯಾರೂ ನನ್ನ ಪ್ರಾಣವನ್ನು ನನ್ನಿಂದ ತೆಗೆಯುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುವೆನು. ನಾನು ಅದನ್ನು ಕೊಡುವುದಕ್ಕೆ ನನಗೆ ಅಧಿಕಾರವಿದೆ. ಅದನ್ನು ಪುನಃ ತೆಗೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಪಡೆದಿದ್ದೇನೆ,” ಎಂದರು.
ಯೋಹಾನನು 10 : 19 (OCVKN)
ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ಮತ್ತೆ ಭೇದ ಉಂಟಾಯಿತು.
ಯೋಹಾನನು 10 : 20 (OCVKN)
ಅವರಲ್ಲಿ ಅನೇಕರು, “ಆತನಿಗೆ ದೆವ್ವ ಹಿಡಿದಿದೆ. ಆತನು ಹುಚ್ಚನಾಗಿದ್ದಾನೆ, ನೀವು ಏಕೆ ಆತನಿಗೆ ಕಿವಿಗೊಡುತ್ತೀರಿ?” ಎಂದರು.
ಯೋಹಾನನು 10 : 22 (OCVKN)
ಇನ್ನು ಕೆಲವರು, “ಇವು ದೆವ್ವ ಹಿಡಿದವನ ಮಾತುಗಳಲ್ಲ. ದೆವ್ವವು ಕುರುಡನ ಕಣ್ಣುಗಳನ್ನು ತೆರೆಯಲು ಸಾಧ್ಯವೇ?” ಎಂದರು. ಯೆಹೂದ್ಯರ ಅವಿಶ್ವಾಸ ಆಗ ಯೆರೂಸಲೇಮಿನಲ್ಲಿ ದೇವಾಲಯದ ಪ್ರತಿಷ್ಠೆಯ ಹಬ್ಬವಿತ್ತು.* ಹೀಬ್ರೂ ಭಾಷೆಯಲ್ಲಿ ಹನುಕ್ಕಾ ಹಬ್ಬ ಅದು ಚಳಿಗಾಲವಾಗಿತ್ತು.
ಯೋಹಾನನು 10 : 23 (OCVKN)
ಯೇಸು ದೇವಾಲಯದೊಳಗೆ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಿದ್ದರು.
ಯೋಹಾನನು 10 : 24 (OCVKN)
ಆಗ ಯೆಹೂದ್ಯರು ಯೇಸುವನ್ನು ಸುತ್ತುವರೆದು, “ಇನ್ನೆಷ್ಟು ಕಾಲ ನಮ್ಮನ್ನು ಸಂಶಯದಲ್ಲಿರಿಸುವೆ? ನೀನು ಕ್ರಿಸ್ತನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು,” ಎಂದರು.
ಯೋಹಾನನು 10 : 25 (OCVKN)
ಯೇಸು ಅವರಿಗೆ, “ನಾನು ನಿಮಗೆ ಹೇಳಿದೆನು. ಆದರೆ ನೀವು ನಂಬುತ್ತಾ ಇಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
ಯೋಹಾನನು 10 : 26 (OCVKN)
ನೀವು ನನ್ನ ಕುರಿಗಳಲ್ಲ, ಆದ್ದರಿಂದಲೇ ನೀವು ನಂಬುವುದಿಲ್ಲ.
ಯೋಹಾನನು 10 : 27 (OCVKN)
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.
ಯೋಹಾನನು 10 : 28 (OCVKN)
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದಿಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.
ಯೋಹಾನನು 10 : 29 (OCVKN)
ಅವುಗಳನ್ನು ನನಗೆ ಕೊಟ್ಟ ನನ್ನ ತಂದೆ ಎಲ್ಲರಿಗಿಂತಲೂ ಮಹೋನ್ನತರು. ನನ್ನ ತಂದೆಯ ಕೈಯಿಂದ ಅವುಗಳನ್ನು ಯಾರೂ ಕಸಿದುಕೊಳ್ಳಲಾರರು.
ಯೋಹಾನನು 10 : 30 (OCVKN)
ನಾನು ಮತ್ತು ನನ್ನ ತಂದೆ ಒಂದೇ ಆಗಿದ್ದೇವೆ,” ಎಂದು ಉತ್ತರಕೊಟ್ಟರು.
ಯೋಹಾನನು 10 : 31 (OCVKN)
ಆಗ ಯೆಹೂದಿ ನಾಯಕರು ಪುನಃ ಯೇಸುವಿನ ಮೇಲೆ ಕಲ್ಲೆಸೆಯಲು ಕಲ್ಲುಗಳನ್ನು ಎತ್ತಿಕೊಂಡರು.
ಯೋಹಾನನು 10 : 32 (OCVKN)
ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ನಾನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕಾರ್ಯಕ್ಕಾಗಿ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದರು.
ಯೋಹಾನನು 10 : 34 (OCVKN)
ಅದಕ್ಕೆ ಯೆಹೂದ್ಯರು ಯೇಸುವಿಗೆ, “ಒಳ್ಳೆಯ ಕಾರ್ಯಗಳಿಗಾಗಿಯಲ್ಲ. ನೀನು ಮನುಷ್ಯನಾಗಿದ್ದು ನಿನ್ನನ್ನೇ ದೇವರನ್ನಾಗಿ ಮಾಡಿಕೊಂಡದ್ದಕ್ಕೂ ದೇವದೂಷಣೆ ಮಾಡುತ್ತಿರುವದಕ್ಕೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ,” ಎಂದು ಉತ್ತರಕೊಟ್ಟರು. ಅದಕ್ಕೆ ಯೇಸು, “ ‘ನೀವು ದೇವರುಗಳು,’ ಎಂದು ದೇವರೇ ಹೇಳಿರುವುದಾಗಿ ನಿಮ್ಮ ನಿಯಮದಲ್ಲಿ ಬರೆದಿಲ್ಲವೋ?† ಕೀರ್ತನೆ 82:6
ಯೋಹಾನನು 10 : 35 (OCVKN)
ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಆತನು ಕರೆದಿರುವುದಾದರೆ, ಪವಿತ್ರ ವೇದವು ಸುಳ್ಳಾಗಲಾರದು.
ಯೋಹಾನನು 10 : 36 (OCVKN)
ಹೀಗಿರುವಾಗ ತಂದೆಯು ಪ್ರತಿಷ್ಠಿಸಿ ನನ್ನನ್ನು ಲೋಕಕ್ಕೆ ಕಳುಹಿಸಿಕೊಟ್ಟಿರುವ ನಾನು, ‘ದೇವರ ಪುತ್ರನಾಗಿದ್ದೇನೆ,’ ಎಂದು ಹೇಳಿದ್ದಕ್ಕೆ, ‘ನೀನು ದೇವದೂಷಣೆ ಮಾಡುತ್ತೀ,’ ಎಂದು ನೀವು ನನಗೆ ಹೇಳುತ್ತೀರಲ್ಲಾ?
ಯೋಹಾನನು 10 : 37 (OCVKN)
ನನ್ನ ತಂದೆಯ ಕಾರ್ಯಗಳನ್ನು ನಾನು ಮಾಡದಿದ್ದರೆ ನನ್ನನ್ನು ನಂಬಬೇಡಿರಿ.
ಯೋಹಾನನು 10 : 38 (OCVKN)
ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದಿದ್ದರೂ ಈ ಕಾರ್ಯಗಳನ್ನಾದರೂ ನಂಬಿರಿ. ಆಗ ತಂದೆಯು ನನ್ನಲ್ಲಿಯೂ ನಾನು ತಂದೆಯಲ್ಲಿಯೂ ಇರುವುದು ನಿಮಗೆ ಗೊತ್ತಾಗುವುದು ಹಾಗೂ ಮನದಟ್ಟಾಗುವುದು,” ಎಂದರು.
ಯೋಹಾನನು 10 : 39 (OCVKN)
ತಿರುಗಿ ಅವರು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಯೇಸು ಅವರ ಕೈಯಿಂದ ತಪ್ಪಿಸಿಕೊಂಡು ಹೋದರು.
ಯೋಹಾನನು 10 : 40 (OCVKN)
ಆಮೇಲೆ ಯೇಸು ಯೊರ್ದನ್ ನದಿಯನ್ನು ದಾಟಿ ಯೋಹಾನನು ಮೊದಲು ದೀಕ್ಷಾಸ್ನಾನ ಮಾಡಿಸುತ್ತಿದ್ದ ಸ್ಥಳಕ್ಕೆ ಬಂದು, ಅಲ್ಲಿಯೇ ವಾಸಮಾಡಿದರು.
ಯೋಹಾನನು 10 : 41 (OCVKN)
ಆಗ ಅನೇಕರು ಯೇಸುವಿನ ಬಳಿಗೆ ಬಂದು, “ಯೋಹಾನನು ಯಾವುದೇ ಸೂಚಕಕಾರ್ಯವನ್ನು ಮಾಡಲಿಲ್ಲ. ಆದರೆ ಇವರ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ಸತ್ಯವಾಗಿದೆ,” ಎಂದರು.
ಯೋಹಾನನು 10 : 42 (OCVKN)
ಅಲ್ಲಿ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42