ಯೋಹಾನನು 11 : 1 (OCVKN)
ಲಾಜರನ ಮರಣ ಮರಿಯಳ ಮತ್ತು ಆಕೆಯ ಸಹೋದರಿಯಾದ ಮಾರ್ಥಳ ಊರಾದ ಬೇಥಾನ್ಯದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು.
ಯೋಹಾನನು 11 : 2 (OCVKN)
ಯೇಸುಸ್ವಾಮಿಯ ಪಾದಗಳಿಗೆ ತೈಲವನ್ನು ಹಚ್ಚಿ ತನ್ನ ತಲೆಕೂದಲಿನಿಂದ ಅವರ ಪಾದಗಳನ್ನು ಒರಸಿದ ಮರಿಯಳ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು.
ಯೋಹಾನನು 11 : 3 (OCVKN)
ಆದ್ದರಿಂದ ಅವನ ಸಹೋದರಿಯರು, “ಸ್ವಾಮೀ, ಇಗೋ, ನೀವು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ,” ಎಂದು ಯೇಸುವಿಗೆ ಹೇಳಿ ಕಳುಹಿಸಿದರು.
ಯೋಹಾನನು 11 : 4 (OCVKN)
ಯೇಸು ಅದನ್ನು ಕೇಳಿ, “ಈ ಕಾಯಿಲೆಯು ಮರಣಕ್ಕಾಗಿಯಲ್ಲ. ದೇವರ ಮಹಿಮೆಗಾಗಿಯೇ ಬಂದದ್ದು. ಇದರಿಂದ ದೇವರ ಪುತ್ರನಿಗೆ ಮಹಿಮೆಯಾಗುವುದು,” ಎಂದು ಹೇಳಿದರು.
ಯೋಹಾನನು 11 : 5 (OCVKN)
ಮಾರ್ಥಳನ್ನು ಅವಳ ಸಹೋದರಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದರು.
ಯೋಹಾನನು 11 : 6 (OCVKN)
ಅವನು ಅಸ್ವಸ್ಥನಾಗಿದ್ದಾನೆಂದು ಯೇಸು ಕೇಳಿದ ಮೇಲೆಯೂ ಎರಡು ದಿವಸ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡರು.
ಯೋಹಾನನು 11 : 7 (OCVKN)
ತರುವಾಯ ಯೇಸು ತಮ್ಮ ಶಿಷ್ಯರಿಗೆ, “ನಾವು ತಿರುಗಿ ಯೂದಾಯಕ್ಕೆ ಹೋಗೋಣ,” ಎಂದರು.
ಯೋಹಾನನು 11 : 9 (OCVKN)
ಯೇಸುವಿನ ಶಿಷ್ಯರು ಅವರಿಗೆ, “ಬೋಧಕರೇ, ಈಗ ಯೆಹೂದ್ಯರು ನಿಮ್ಮ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ. ತಿರುಗಿ ನೀವು ಅಲ್ಲಿಗೆ ಹೋಗಬೇಕೆಂದಿರುವಿರಾ?” ಎಂದರು. ಯೇಸು, “ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾರಾದರೂ ಹಗಲಿನಲ್ಲಿ ನಡೆದರೆ ಎಡವುದಿಲ್ಲ ಏಕೆಂದರೆ ಈ ಲೋಕದ ಬೆಳಕು ಅವರಿಗೆ ಕಾಣಿಸುತ್ತದೆ.
ಯೋಹಾನನು 11 : 10 (OCVKN)
ಯಾರಾದರೂ ರಾತ್ರಿಯಲ್ಲಿ ನಡೆದರೆ ತಮ್ಮಲ್ಲಿ ಬೆಳಕಿಲ್ಲದಿರುವುದರಿಂದ ಅವರು ಎಡವುತ್ತಾರೆ,” ಎಂದು ಉತ್ತರಕೊಟ್ಟರು.
ಯೋಹಾನನು 11 : 12 (OCVKN)
ಇದನ್ನು ಹೇಳಿದ ತರುವಾಯ ಯೇಸು ಅವರಿಗೆ, “ನಮ್ಮ ಸ್ನೇಹಿತ ಲಾಜರನು ನಿದ್ರೆ ಮಾಡುತ್ತಿದ್ದಾನೆ. ಆದರೆ ನಾನು ಹೋಗಿ ಅವನನ್ನು ಎಬ್ಬಿಸಬೇಕು,” ಎಂದರು. ಯೇಸುವಿನ ಶಿಷ್ಯರು, “ಸ್ವಾಮೀ, ಅವನು ನಿದ್ರೆಮಾಡುತ್ತಿದ್ದರೆ ಸ್ವಸ್ಥನಾಗುವನು,” ಎಂದರು.
ಯೋಹಾನನು 11 : 13 (OCVKN)
ಯೇಸು ಅವನ ಮರಣವನ್ನು ಕುರಿತು ಹೇಳಿದ್ದರು. ಆದರೆ ಶಿಷ್ಯರು ನಿದ್ರೆಯ ವಿಶ್ರಾಂತಿಯನ್ನು ಕುರಿತು ಯೇಸು ಹೇಳಿದರೆಂದು ಯೋಚಿಸಿದರು.
ಯೋಹಾನನು 11 : 14 (OCVKN)
ಆಗ ಯೇಸು ಸ್ಪಷ್ಟವಾಗಿ ಅವರಿಗೆ, “ಲಾಜರನು ಸತ್ತುಹೋಗಿದ್ದಾನೆ.
ಯೋಹಾನನು 11 : 15 (OCVKN)
ಆದರೆ ನಾನು ಅಲ್ಲಿ ಇಲ್ಲದೆ ಹೋದದ್ದು ನಿಮ್ಮ ನಿಮಿತ್ತವಾಗಿ ಸಂತೋಷಪಡುತ್ತೇನೆ, ಯಾಕೆಂದರೆ ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಆದರೆ ಅವನ ಬಳಿಗೆ ಹೋಗೋಣ,” ಎಂದು ಹೇಳಿದರು.
ಯೋಹಾನನು 11 : 17 (OCVKN)
ದಿದುಮನೆಂಬ ತೋಮನು* ಅರಾಮಿಕ್ ಭಾಷೆಯಲ್ಲಿ ತೋಮನು ಮತ್ತು ಗ್ರೀಕ್ ಭಾಷೆಯಲ್ಲಿ ದಿದುಮ ಇವುಗಳ ಅರ್ಥ ಅವಳಿ ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಗುರುವಿನೊಂದಿಗೆ ಸಾಯುವುದಕ್ಕೆ ಹೋಗೋಣ,” ಎಂದನು. ಮಾರ್ಥ, ಮರಿಯಳನ್ನು ಯೇಸು ಸಂತೈಸಿದ್ದು ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿವಸಗಳಾಗಿದ್ದವೆಂದು ತಿಳಿಯಿತು.
ಯೋಹಾನನು 11 : 18 (OCVKN)
ಬೇಥಾನ್ಯವು ಯೆರೂಸಲೇಮಿನಿಂದ ಸುಮಾರು ಮೂರು ಕಿಲೋಮೀಟರಿನಷ್ಟು ದೂರವಿತ್ತು.
ಯೋಹಾನನು 11 : 19 (OCVKN)
ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯವಾಗಿ ಸಂತೈಸುವುದಕ್ಕೆ ಬಂದಿದ್ದರು.
ಯೋಹಾನನು 11 : 20 (OCVKN)
ಯೇಸು ಬರುತ್ತಿದ್ದಾರೆಂದು ಮಾರ್ಥಳು ಕೇಳಿದಾಗ ಅವರನ್ನು ಎದುರುಗೊಳ್ಳಲು ಹೋದಳು. ಆದರೆ ಮರಿಯಳು ಮನೆಯಲ್ಲಿಯೇ ಕುಳಿತುಕೊಂಡಿದ್ದಳು.
ಯೋಹಾನನು 11 : 21 (OCVKN)
ಆಗ ಮಾರ್ಥಳು ಯೇಸುವಿಗೆ, “ಸ್ವಾಮೀ, ನೀವು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ.
ಯೋಹಾನನು 11 : 22 (OCVKN)
ಆದರೆ ಈಗಲೂ ನೀವು ದೇವರನ್ನು ಏನು ಕೇಳಿಕೊಂಡರೂ ದೇವರು ಅದನ್ನು ನಿಮಗೆ ಕೊಡುವರೆಂದು ನಾನು ಬಲ್ಲೆನು,” ಎಂದಳು.
ಯೋಹಾನನು 11 : 24 (OCVKN)
ಯೇಸು ಆಕೆಗೆ, “ನಿನ್ನ ಸಹೋದರನು ಪುನಃ ಜೀವಂತನಾಗಿ ಎದ್ದೇಳುವನು,” ಎಂದು ಹೇಳಿದರು.
ಯೋಹಾನನು 11 : 25 (OCVKN)
ಮಾರ್ಥಳು ಯೇಸುವಿಗೆ, “ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನು ಪುನಃ ಎದ್ದು ಬರುವನೆಂದು ನಾನು ಬಲ್ಲೆನು,” ಎಂದು ಹೇಳಿದಳು. ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಸತ್ತರೂ ಬದುಕುವರು.
ಯೋಹಾನನು 11 : 26 (OCVKN)
ಜೀವಿಸುವ ಪ್ರತಿಯೊಬ್ಬರೂ ನನ್ನಲ್ಲಿ ನಂಬಿಕೆಯಿಟ್ಟರೆ, ಅವರು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯಾ?” ಎಂದು ಕೇಳಿದ್ದಕ್ಕೆ,
ಯೋಹಾನನು 11 : 28 (OCVKN)
ಆಕೆಯು ಯೇಸುವಿಗೆ, “ಹೌದು, ಸ್ವಾಮೀ, ಲೋಕಕ್ಕೆ ಬರಬೇಕಾಗಿದ್ದ ದೇವರ ಪುತ್ರನಾದ ಕ್ರಿಸ್ತನು ನೀವೇ ಎಂದು ನಾನು ನಂಬಿದ್ದೇನೆ,” ಎಂದಳು. ಇದನ್ನು ಹೇಳಿ ಆಕೆಯು ಹೊರಟುಹೋಗಿ ತನ್ನ ಸಹೋದರಿ ಮರಿಯಳನ್ನು ರಹಸ್ಯವಾಗಿ ಕರೆದು, “ಬೋಧಕರು ಇಲ್ಲಿದ್ದಾರೆ, ನಿನ್ನನ್ನು ಕರೆಯುತ್ತಾರೆ,” ಎಂದಳು.
ಯೋಹಾನನು 11 : 29 (OCVKN)
ಆಕೆಯು ಇದನ್ನು ಕೇಳಿದಾಗ ತಟ್ಟನೆ ಎದ್ದು ಯೇಸುವಿನ ಬಳಿಗೆ ಹೋದಳು.
ಯೋಹಾನನು 11 : 30 (OCVKN)
ಯೇಸು ಇನ್ನೂ ಊರೊಳಕ್ಕೆ ಬಾರದೆ ಮಾರ್ಥಳು ಅವರನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದರು.
ಯೋಹಾನನು 11 : 31 (OCVKN)
ಮರಿಯಳೊಂದಿಗೆ ಮನೆಯಲ್ಲಿ ಆಕೆಯ ಜೊತೆಗಿದ್ದು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುತ್ತಿರುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯನ್ನು ಹಿಂಬಾಲಿಸಿದರು.
ಯೋಹಾನನು 11 : 33 (OCVKN)
ಯೇಸು ಇದ್ದ ಸ್ಥಳಕ್ಕೆ ಮರಿಯಳೂ ಬಂದು ಅವರನ್ನು ಕಂಡು ಅವರ ಪಾದಗಳಿಗೆ ಬಿದ್ದು, “ಸ್ವಾಮೀ, ನೀವು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ,” ಎಂದು ಹೇಳಿದಳು. ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಅಳುವುದನ್ನು ಯೇಸು ಕಂಡಾಗ ಆತ್ಮದಲ್ಲಿ ನೊಂದುಕೊಂಡು ಕಳವಳಗೊಂಡವರಾಗಿ,
ಯೋಹಾನನು 11 : 34 (OCVKN)
“ಅವನನ್ನು ಎಲ್ಲಿ ಸಮಾಧಿಮಾಡಿದ್ದೀರಿ?” ಎಂದು ಕೇಳಿದರು.
ಯೋಹಾನನು 11 : 35 (OCVKN)
ಅವರು ಯೇಸುವಿಗೆ, “ಸ್ವಾಮೀ, ಬಂದು ನೋಡಿರಿ,” ಎಂದರು.
ಯೋಹಾನನು 11 : 37 (OCVKN)
ಆಗ ಯೆಹೂದ್ಯರು, “ನೋಡಿರಿ, ಈತನಿಗೆ ಲಾಜರನ ಮೇಲೆ ಎಷ್ಟು ಪ್ರೀತಿ,” ಎಂದರು.
ಯೋಹಾನನು 11 : 38 (OCVKN)
ಅವರಲ್ಲಿ ಕೆಲವರು, “ಆ ಕುರುಡನ ಕಣ್ಣುಗಳನ್ನು ತೆರೆದ ಈತನು ಲಾಜರನನ್ನೂ ಸಾಯದಂತೆ ಮಾಡಬಾರದಿತ್ತೆ?” ಎಂದರು. ಯೇಸು ಲಾಜರನನ್ನು ಮರಣದಿಂದ ಎಬ್ಬಿಸಿದ್ದು ಯೇಸು ತಿರುಗಿ ತಮ್ಮಲ್ಲಿ ನೊಂದುಕೊಳ್ಳುತ್ತಾ ಸಮಾಧಿಗೆ ಬಂದರು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಬಾಗಿಲಿಗೆ ಮುಚ್ಚಲಾಗಿತ್ತು.
ಯೋಹಾನನು 11 : 39 (OCVKN)
ಯೇಸು, “ಆ ಕಲ್ಲನ್ನು ತೆಗೆದುಹಾಕಿರಿ,” ಎಂದರು.
ಯೋಹಾನನು 11 : 40 (OCVKN)
ಅದಕ್ಕೆ ಸತ್ತವನ ಸಹೋದರಿ ಮಾರ್ಥಳು ಯೇಸುವಿಗೆ, “ಸ್ವಾಮೀ, ಈಗ ದುರ್ವಾಸನೆ ಇರುವುದು. ಅವನು ಸತ್ತು ನಾಲ್ಕು ದಿನಗಳಾಗಿವೆ,” ಎಂದಳು.
ಯೋಹಾನನು 11 : 41 (OCVKN)
ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದರು. ಆಗ ಕೆಲವರು ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲೆ ನೋಡಿ, “ತಂದೆಯೇ, ನೀವು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
ಯೋಹಾನನು 11 : 42 (OCVKN)
ನೀವು ನನಗೆ ಯಾವಾಗಲೂ ಕಿವಿಗೊಡುತ್ತೀರಿ ಎಂದು ನಾನು ಬಲ್ಲೆನು. ಆದರೆ ನನ್ನ ಸುತ್ತಲೂ ನಿಂತಿರುವ ಈ ಜನರು, ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ನಂಬುವಂತೆ ನಾನು ಇದನ್ನು ಹೇಳಿದೆನು,” ಎಂದರು.
ಯೋಹಾನನು 11 : 43 (OCVKN)
ಯೇಸು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ,” ಎಂದು ಗಟ್ಟಿಯಾದ ಸ್ವರದಿಂದ ಕೂಗಿದರು.
ಯೋಹಾನನು 11 : 44 (OCVKN)
ಆಗ ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವವಸ್ತ್ರದಿಂದ ಕಟ್ಟಿದ್ದವು, ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು.
ಯೋಹಾನನು 11 : 45 (OCVKN)
ಯೇಸು ಅಲ್ಲಿದ್ದವರಿಗೆ, “ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ,” ಎಂದು ಹೇಳಿದರು. ಯೇಸುವನ್ನು ಕೊಲ್ಲಬೇಕೆಂಬ ಆಲೋಚನೆ ಆದ್ದರಿಂದ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಾರ್ಯಗಳನ್ನು ಕಂಡು ಅವರಲ್ಲಿ ನಂಬಿಕೆಯಿಟ್ಟರು.
ಯೋಹಾನನು 11 : 46 (OCVKN)
ಆದರೆ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ ಕೃತ್ಯಗಳನ್ನು ಅವರಿಗೆ ಹೇಳಿದರು.
ಯೋಹಾನನು 11 : 47 (OCVKN)
ಆಗ ಮುಖ್ಯಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ, “ಈತನು ಅನೇಕ ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?
ಯೋಹಾನನು 11 : 48 (OCVKN)
ನಾವು ಈತನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಆತನನ್ನೇ ನಂಬುವರು. ರೋಮನ್ನರು ಬಂದು ನಮ್ಮ ದೇವಾಲಯವನ್ನೂ ರಾಷ್ಟ್ರವನ್ನೂ ನಾಶಮಾಡುವರು,” ಎಂದರು.
ಯೋಹಾನನು 11 : 49 (OCVKN)
ಅವರಲ್ಲಿ ಆ ವರ್ಷದ ಮಹಾಯಾಜಕನಾದ ಕಾಯಫನೆಂಬವನು ಅವರಿಗೆ, “ನಿಮಗೆ ಏನೂ ತಿಳಿಯುವುದಿಲ್ಲ.
ಯೋಹಾನನು 11 : 50 (OCVKN)
ಇಡೀ ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಎಣಿಸುವುದೇ ಇಲ್ಲ,” ಎಂದನು.
ಯೋಹಾನನು 11 : 51 (OCVKN)
ಇದನ್ನು ಅವನು ತಾನಾಗಿಯೇ ಹೇಳಲಿಲ್ಲ. ಅವನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ ಯೇಸು ಆ ರಾಷ್ಟ್ರಕ್ಕಾಗಿ ಮಾತ್ರವಲ್ಲದೆ
ಯೋಹಾನನು 11 : 52 (OCVKN)
ಚದುರಿರುವ ದೇವರ ಮಕ್ಕಳನ್ನು ಒಂದಾಗಿ ಕೂಡಿಸುವುದಕ್ಕಾಗಿಯೂ ಯೇಸು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.
ಯೋಹಾನನು 11 : 53 (OCVKN)
ಅವರು ಆ ದಿನದಿಂದ ಯೇಸುವನ್ನು ಕೊಲ್ಲಬೇಕೆಂಬ ಒಳಸಂಚು ಮಾಡಿಕೊಂಡರು.
ಯೋಹಾನನು 11 : 55 (OCVKN)
ಹೀಗಿರುವುದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅವರು ಅಲ್ಲಿಂದ ಅರಣ್ಯಕ್ಕೆ ಸಮೀಪದಲ್ಲಿದ್ದ ಎಫ್ರಾಯೀಮ್ ಎಂಬ ಊರಿಗೆ ಹೋಗಿ ಅಲ್ಲಿ ತಮ್ಮ ಶಿಷ್ಯರ ಸಂಗಡ ವಾಸಮಾಡಿದರು. ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾಗಿತ್ತು. ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವುದಕ್ಕಾಗಿ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.
ಯೋಹಾನನು 11 : 56 (OCVKN)
ಅವರು ಯೇಸುವನ್ನು ಹುಡುಕುತ್ತಾ ದೇವಾಲಯದಲ್ಲಿ ನಿಂತುಕೊಂಡು, “ಆತನು ಹಬ್ಬಕ್ಕೆ ಬರುತ್ತಾನೋ ಇಲ್ಲವೋ? ನಿಮಗೆ ಹೇಗೆ ಕಾಣುತ್ತದೆ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
ಯೋಹಾನನು 11 : 57 (OCVKN)
ಆಗ ಮುಖ್ಯಯಾಜಕರೂ ಫರಿಸಾಯರೂ ಯೇಸುವನ್ನು ಬಂಧಿಸುವಂತೆ ಆತನ ಸುಳಿವು ಯಾರಿಗಾದರೂ ತಿಳಿದಿದ್ದರೆ ಅವರು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52
53
54
55
56
57