ಯೋಹಾನನು 15 : 1 (OCVKN)
ದ್ರಾಕ್ಷಿಯ ಬಳ್ಳಿ ಮತ್ತು ಕವಲುಬಳ್ಳಿಗಳು “ನಾನೇ ನಿಜವಾದ ದ್ರಾಕ್ಷಿಯ ಬಳ್ಳಿ, ನನ್ನ ತಂದೆಯೇ ತೋಟಗಾರರು.
ಯೋಹಾನನು 15 : 2 (OCVKN)
ನನ್ನಲ್ಲಿದ್ದು ಫಲವನ್ನು ಕೊಡದ ಪ್ರತಿಯೊಂದು ಕವಲುಬಳ್ಳಿಯನ್ನು ತಂದೆ ಮೇಲಕ್ಕೆ ಎತ್ತಿಡುವರು. ಆದರೆ ಫಲಕೊಡುವ ಪ್ರತಿಯೊಂದು ಕವಲುಬಳ್ಳಿಯು ಹೆಚ್ಚು ಫಲಕೊಡುವಂತೆ ಅದನ್ನು ಕತ್ತರಿಸಿ ಶುದ್ಧ ಮಾಡುತ್ತಾರೆ.
ಯೋಹಾನನು 15 : 3 (OCVKN)
ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ.
ಯೋಹಾನನು 15 : 4 (OCVKN)
ನಾನು ನಿಮ್ಮಲ್ಲಿ ನೆಲೆಗೊಂಡಿರುವ ಹಾಗೇ ನನ್ನಲ್ಲಿ ನೆಲೆಗೊಂಡಿರಿ. ಕವಲುಬಳ್ಳಿಯು ದ್ರಾಕ್ಷಿಯ ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.
ಯೋಹಾನನು 15 : 5 (OCVKN)
“ನಾನೇ ದ್ರಾಕ್ಷಿಯ ಬಳ್ಳಿ, ನೀವು ಕವಲುಬಳ್ಳಿಗಳು. ನೀವು ನನ್ನಲ್ಲಿ ಮತ್ತು ನಾನು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಬಹಳ ಫಲಕೊಡುವಿರಿ. ಏಕೆಂದರೆ ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.
ಯೋಹಾನನು 15 : 6 (OCVKN)
ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ನೀವು ಎಸೆಯಲಾದ ಕವಲುಬಳ್ಳಿಯಂತೆ ಒಣಗಿ ಹೋಗುವಿರಿ. ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು ಮತ್ತು ಅವುಗಳನ್ನು ಸುಟ್ಟುಹಾಕಲಾಗುವುದು.
ಯೋಹಾನನು 15 : 7 (OCVKN)
ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಬಯಸುವ ಯಾವುದನ್ನಾದರೂ ಬೇಡಿಕೊಳ್ಳಿರಿ. ಅದು ನಿಮ್ಮದಾಗುವುದು.
ಯೋಹಾನನು 15 : 8 (OCVKN)
ನೀವು ಬಹಳ ಫಲಕೊಡುವುದರಿಂದಲೇ ನನ್ನ ಶಿಷ್ಯರಾಗಿರುವಿರಿ, ಇದರಿಂದ ನನ್ನ ತಂದೆಗೆ ಮಹಿಮೆಯಾಗುವುದು.
ಯೋಹಾನನು 15 : 9 (OCVKN)
“ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ಈಗ ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ.
ಯೋಹಾನನು 15 : 10 (OCVKN)
ನಾನು ನನ್ನ ತಂದೆಯ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನೆಲೆಗೊಂಡಿರುವಂತೆಯೇ ನೀವು ನನ್ನ ಆಜ್ಞೆಗಳನ್ನು ಪಾಲಿಸಿ ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಳ್ಳುವಿರಿ.
ಯೋಹಾನನು 15 : 11 (OCVKN)
ನನ್ನ ಆನಂದವು ನಿಮ್ಮಲ್ಲಿ ಇರುವಂತೆಯೂ ಆ ನಿಮ್ಮ ಆನಂದವು ಪರಿಪೂರ್ಣವಾಗುವಂತೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
ಯೋಹಾನನು 15 : 12 (OCVKN)
ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದು ನನ್ನ ಆಜ್ಞೆಯಾಗಿದೆ.
ಯೋಹಾನನು 15 : 13 (OCVKN)
ಒಬ್ಬನು ತನ್ನ ಸ್ನೇಹಿತರಿಗಾಗಿ ತನ್ನ ಪ್ರಾಣವನ್ನೇ ಕೊಡುವ ಪ್ರೀತಿಗಿಂತ ಮಹತ್ತಾದದ್ದು ಯಾರಲ್ಲೂ ಇಲ್ಲ.
ಯೋಹಾನನು 15 : 14 (OCVKN)
ನಾನು ನಿಮಗೆ ಆಜ್ಞಾಪಿಸಿದ್ದನ್ನು ಪಾಲಿಸಿದರೆ ನೀವು ನನ್ನ ಸ್ನೇಹಿತರು.
ಯೋಹಾನನು 15 : 15 (OCVKN)
ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ. ಏಕೆಂದರೆ ತನ್ನ ಧಣಿಯು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.
ಯೋಹಾನನು 15 : 16 (OCVKN)
ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.
ಯೋಹಾನನು 15 : 17 (OCVKN)
ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆಯಾಗಿದೆ.
ಯೋಹಾನನು 15 : 18 (OCVKN)
ಲೋಕವು ಶಿಷ್ಯರನ್ನು ದ್ವೇಷಿಸುತ್ತದೆ “ಲೋಕವು ನಿಮ್ಮನ್ನು ದ್ವೇಷಿಸಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಿಸಿತು ಎಂದು ನೀವು ತಿಳಿಯಿರಿ.
ಯೋಹಾನನು 15 : 19 (OCVKN)
ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ಪ್ರೀತಿಸುತ್ತಿತ್ತು. ಆದರೆ ನೀವು ಲೋಕದವರಲ್ಲದೆ ಇರುವುದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.
ಯೋಹಾನನು 15 : 20 (OCVKN)
‘ಧಣಿಗಿಂತ ಆಳು ದೊಡ್ಡವನಲ್ಲ,’* ಯೋಹಾನ 13:16 ಎಂದು ನಾನು ನಿಮಗೆ ಹೇಳಿದ ಮಾತನ್ನು ನೆನಪಿಗೆ ತಂದುಕೊಳ್ಳಿರಿ. ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಅನುಸರಿಸಿದರೆ ನಿಮ್ಮ ಮಾತನ್ನು ಸಹ ಅನುಸರಿಸುವರು.
ಯೋಹಾನನು 15 : 21 (OCVKN)
ಆದರೆ ಅವರು ನನ್ನನ್ನು ಕಳುಹಿಸಿದ ತಂದೆಯನ್ನು ತಿಳಿಯದಿರುವುದರಿಂದಲೇ ನನ್ನ ಹೆಸರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.
ಯೋಹಾನನು 15 : 22 (OCVKN)
ನಾನು ಬಂದು ಅವರೊಂದಿಗೆ ಮಾತನಾಡದಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರ ಪಾಪದ ವಿಷಯವಾಗಿ ಅವರಿಗೆ ನೆಪವಿಲ್ಲ.
ಯೋಹಾನನು 15 : 23 (OCVKN)
ನನ್ನನ್ನು ದ್ವೇಷಿಸುವವರು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾರೆ.
ಯೋಹಾನನು 15 : 24 (OCVKN)
ಬೇರೆ ಯಾರೂ ಮಾಡದ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆ ಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಕ್ರಿಯೆಗಳನ್ನು ಕಂಡೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಮಾಡಿದ್ದಾರೆ.
ಯೋಹಾನನು 15 : 25 (OCVKN)
ಆದರೆ, ‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಮಾಡಿದರು,’ ಎಂದು ಅವರ ನಿಯಮದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.† ಕೀರ್ತನೆ 35:19; 69:4
ಯೋಹಾನನು 15 : 26 (OCVKN)
ಪವಿತ್ರಾತ್ಮ ದೇವರ ಕಾರ್ಯ “ಆದರೂ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆ ಸಹಾಯಕರೊಬ್ಬರು ನಿಮ್ಮ ಬಳಿಗೆ ಬರುವರು. ಆಗ ತಂದೆಯಿಂದ ಬರುವ ಆ ಸತ್ಯದ ಆತ್ಮವಾಗಿರುವವರೇ ನನ್ನ ವಿಷಯವಾಗಿ ಸಾಕ್ಷಿಕೊಡುವರು.
ಯೋಹಾನನು 15 : 27 (OCVKN)
ನೀವು ಪ್ರಾರಂಭದಿಂದಲೂ ನನ್ನ ಸಂಗಡ ಇದ್ದುದರಿಂದ ನೀವು ಸಹ ನನಗೆ ಸಾಕ್ಷಿಗಳಾಗಿದ್ದೀರಿ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27