ಯೋಹಾನನು 4 : 1 (OCVKN)
ಯೇಸು ಸಮಾರ್ಯದ ಸ್ತ್ರೀಯೊಂದಿಗೆ ಮಾತನಾಡಿದ್ದು ಫರಿಸಾಯರಲ್ಲಿ ಯೋಹಾನನಿಗಿಂತಲೂ ಯೇಸು ಹೆಚ್ಚಿನ ಶಿಷ್ಯರನ್ನು ಹೊಂದಿದ್ದಾರೆ ಮತ್ತು ದೀಕ್ಷಾಸ್ನಾನ ಮಾಡಿಸುತ್ತಾರೆ ಎಂಬುವುದನ್ನು ಫರಿಸಾಯರು ಕೇಳಿಸಿಕೊಂಡರು.
ಯೋಹಾನನು 4 : 2 (OCVKN)
ಆದರೆ ಯೇಸು ತಾವೇ ದೀಕ್ಷಾಸ್ನಾನ ಮಾಡಿಸುತ್ತಿರಲಿಲ್ಲ. ಅವರ ಶಿಷ್ಯರು ಮಾಡಿಸುತ್ತಿದ್ದರು.
ಯೋಹಾನನು 4 : 3 (OCVKN)
ಫರಿಸಾಯರು ಕೇಳಿಸಿಕೊಂಡದ್ದನ್ನು ಯೇಸು ತಿಳಿದಾಗ, ಯೇಸು ಯೂದಾಯವನ್ನು ಬಿಟ್ಟು ಗಲಿಲಾಯಕ್ಕೆ ತಿರುಗಿ ಹೊರಟು ಹೋದರು.
ಯೋಹಾನನು 4 : 4 (OCVKN)
ಯೇಸು ಸಮಾರ್ಯದ ಮಾರ್ಗವಾಗಿ ಹೋಗಬೇಕಾಗಿತ್ತು.
ಯೋಹಾನನು 4 : 5 (OCVKN)
ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಸಮೀಪದಲ್ಲಿರುವ ಸುಖರೆಂಬ ಸಮಾರ್ಯದ ಪಟ್ಟಣಕ್ಕೆ ಯೇಸು ಬಂದರು.
ಯೋಹಾನನು 4 : 6 (OCVKN)
ಅಲ್ಲಿ ಯಾಕೋಬನ ಬಾವಿ ಇತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡವರಾಗಿ ಆ ಬಾವಿಯ ಬಳಿಯಲ್ಲಿ ಕುಳಿತುಕೊಂಡರು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.
ಯೋಹಾನನು 4 : 7 (OCVKN)
ಆಗ ಸಮಾರ್ಯದವಳಾದ ಒಬ್ಬ ಸ್ತ್ರೀಯು ನೀರು ಸೇದುವುದಕ್ಕಾಗಿ ಬಂದಳು. ಯೇಸು ಆಕೆಗೆ, “ನನಗೆ ಕುಡಿಯುವುದಕ್ಕೆ ನೀರು ಕೊಡು,” ಎಂದರು.
ಯೋಹಾನನು 4 : 8 (OCVKN)
ಯೇಸುವಿನ ಶಿಷ್ಯರು ಆಹಾರವನ್ನು ಕೊಂಡುಕೊಳ್ಳಲು ಪಟ್ಟಣದೊಳಕ್ಕೆ ಹೋಗಿದ್ದರು.
ಯೋಹಾನನು 4 : 9 (OCVKN)
ಯೋಹಾನನು 4 : 10 (OCVKN)
ಆದ್ದರಿಂದ ಆ ಸಮಾರ್ಯ ಸ್ತ್ರೀಯು ಯೇಸುವಿಗೆ, “ನೀನು ಯೆಹೂದ್ಯನಾಗಿದ್ದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದು ಹೇಗೆ,” ಎಂದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಒಡನಾಟ ಇರಲಿಲ್ಲ.* ಒಡನಾಟ ಇರಲಿಲ್ಲ ಅಂದರೆ ಸಮಾರ್ಯದವರು ಬಳಸುತ್ತಿದ್ದ ಪಾತ್ರೆಗಳನ್ನು ಯೆಹೂದ್ಯರು ಬಳಸುತ್ತಿರಲಿಲ್ಲ
ಯೋಹಾನನು 4 : 11 (OCVKN)
ಯೇಸು ಆಕೆಗೆ, “ದೇವರ ವರವನ್ನೂ, ‘ಕುಡಿಯುವುದಕ್ಕೆ ನೀರು ಕೊಡು,’ ಎಂದು ಕೇಳುವ ನಾನು ಯಾರೆಂಬುದನ್ನೂ ನೀನು ತಿಳಿದಿದ್ದರೆ ನೀನೇ ನನ್ನಿಂದ ನೀರನ್ನು ಕೇಳುತ್ತಿದ್ದೆ. ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆನು,” ಎಂದು ಹೇಳಿದರು. ಅದಕ್ಕೆ ಆ ಸ್ತ್ರೀಯು, “ಅಯ್ಯಾ, ನೀರು ಸೇದುವುದಕ್ಕೆ ನಿಮ್ಮ ಹತ್ತಿರ ಏನೂ ಇಲ್ಲವಲ್ಲಾ, ಬಾವಿಯೋ ಆಳವಾಗಿದೆ. ಹೀಗಿರುವಲ್ಲಿ ಜೀವಜಲವು ನಿನಗೆ ಎಲ್ಲಿಂದ ಬಂದೀತು?
ಯೋಹಾನನು 4 : 12 (OCVKN)
ಯಾಕೋಬನ ಮಕ್ಕಳು ಮತ್ತು ಪಶುಗಳು ಈ ಬಾವಿಯ ನೀರನ್ನು ಕುಡಿದರು. ಅದನ್ನು ನಮಗೆ ಕೊಟ್ಟ ನಮ್ಮ ತಂದೆ ಯಾಕೋಬನಿಗಿಂತ ನೀನು ದೊಡ್ಡವನೋ?” ಎಂದಳು.
ಯೋಹಾನನು 4 : 13 (OCVKN)
ಯೇಸು ಆಕೆಗೆ, “ಈ ನೀರನ್ನು ಕುಡಿಯುವ ಪ್ರತಿಯೊಬ್ಬರಿಗೆ ಪುನಃ ದಾಹವಾಗುವುದು.
ಯೋಹಾನನು 4 : 14 (OCVKN)
ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು.
ಯೋಹಾನನು 4 : 15 (OCVKN)
ಯೋಹಾನನು 4 : 16 (OCVKN)
ಅದಕ್ಕೆ ಆ ಸ್ತ್ರೀಯು, “ಅಯ್ಯಾ, ಆ ನೀರನ್ನೇ ನನಗೆ ಕೊಡು. ಆಗ ನನಗೆ ದಾಹವಾಗುವುದಿಲ್ಲ. ಇನ್ನು ಮುಂದೆ ನಾನು ನೀರು ಸೇದುವುದಕ್ಕೆ ಇಲ್ಲಿಗೆ ಬರುವ ಅವಶ್ಯವಿರುವುದಿಲ್ಲ,” ಎಂದಳು.
ಯೋಹಾನನು 4 : 17 (OCVKN)
ಯೇಸು ಆಕೆಗೆ, “ಹೋಗಿ ನಿನ್ನ ಗಂಡನನ್ನು ಕರೆದುಕೊಂಡು ಬಾ,” ಎಂದರು. ಅದಕ್ಕೆ ಆ ಸ್ತ್ರೀಯು, “ನನಗೆ ಗಂಡನಿಲ್ಲ,” ಎಂದಳು. ಯೇಸು ಆಕೆಗೆ, “ನನಗೆ ಗಂಡನಿಲ್ಲ, ಎಂದು ನೀನು ಹೇಳಿದ್ದು ಸರಿಯೇ.
ಯೋಹಾನನು 4 : 18 (OCVKN)
ನಿನಗೆ ಐದು ಮಂದಿ ಗಂಡಂದಿರು ಇದ್ದರು. ಈಗ ನಿನಗಿರುವವನು ನಿನ್ನ ಗಂಡನಲ್ಲ, ನೀನು ಹೇಳಿದ್ದು ಸರಿಯೇ,” ಎಂದರು.
ಯೋಹಾನನು 4 : 19 (OCVKN)
ಆಗ ಆ ಸ್ತ್ರೀಯು ಯೇಸುವಿಗೆ, “ಅಯ್ಯಾ, ನೀವು ಒಬ್ಬ ಪ್ರವಾದಿಯೆಂದು ನನಗೆ ಕಾಣುತ್ತದೆ.
ಯೋಹಾನನು 4 : 20 (OCVKN)
ನಮ್ಮ ಪಿತೃಗಳು ಈ ಬೆಟ್ಟದ ಮೇಲೆ ದೇವರನ್ನು ಆರಾಧಿಸಿದರು. ಆದರೆ, ‘ಆರಾಧಿಸತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ’ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ,” ಎಂದಳು.
ಯೋಹಾನನು 4 : 21 (OCVKN)
ಯೇಸು ಆಕೆಗೆ, “ಅಮ್ಮಾ, ನನ್ನನ್ನು ನಂಬು, ಈ ಬೆಟ್ಟದಲ್ಲಿಯಾಗಲಿ ಯೆರೂಸಲೇಮಿನಲ್ಲಾಗಲಿ ನೀವು ತಂದೆಯನ್ನು ಆರಾಧಿಸದೆ ಇರುವ ಕಾಲ ಬರುತ್ತದೆ.
ಯೋಹಾನನು 4 : 22 (OCVKN)
ನೀವು ಸಮಾರ್ಯದವರು ಅರಿಯದೆ ಇರುವುದನ್ನು ಆರಾಧಿಸುತ್ತೀರಿ. ನಾವು ಅರಿತಿರುವುದನ್ನೇ ಆರಾಧಿಸುವವರು. ಏಕೆಂದರೆ ರಕ್ಷಣೆಯು ಯೆಹೂದ್ಯರಿಂದಲೇ.
ಯೋಹಾನನು 4 : 23 (OCVKN)
ಆದರೆ ನಿಜವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ. ಏಕೆಂದರೆ ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾರೆ.
ಯೋಹಾನನು 4 : 24 (OCVKN)
ದೇವರು ಆತ್ಮರಾಗಿದ್ದಾರೆ. ಅವರನ್ನು ಆರಾಧಿಸುವವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸಬೇಕು,” ಎಂದರು.
ಯೋಹಾನನು 4 : 25 (OCVKN)
ಯೋಹಾನನು 4 : 26 (OCVKN)
ಆ ಸ್ತ್ರೀಯು ಯೇಸುವಿಗೆ, “ಕ್ರಿಸ್ತ ಎಂದು ಕರೆಯಲಾಗುವ ಮೆಸ್ಸೀಯ ಬರುತ್ತಾರೆಂದು ನಾನು ಬಲ್ಲೆನು. ಅವರು ಬಂದಾಗ ನಮಗೆ ಎಲ್ಲವನ್ನೂ ತಿಳಿಸುವರು,” ಎಂದಳು.
ಯೋಹಾನನು 4 : 27 (OCVKN)
ಯೇಸು ಆಕೆಗೆ, “ನಿನ್ನೊಂದಿಗೆ ಮಾತನಾಡುವ ನಾನೇ ಆತನು!” ಎಂದರು. ಶಿಷ್ಯರು ಯೇಸುವಿನ ಹತ್ತಿರ ತಿರುಗಿ ಬಂದದ್ದು
ಯೋಹಾನನು 4 : 28 (OCVKN)
ಅಷ್ಟರೊಳಗೆ ಅವರ ಶಿಷ್ಯರು ಬಂದು ಯೇಸು ಆ ಸ್ತ್ರೀಯೊಂದಿಗೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೂ, “ನಿಮಗೆ ಏನು ಬೇಕು? ಆಕೆಯೊಂದಿಗೆ ಏಕೆ ಮಾತನಾಡುತ್ತಿರುವಿರಿ?” ಎಂದು ಒಬ್ಬನಾದರೂ ಕೇಳಲಿಲ್ಲ. ಆ ಸ್ತ್ರೀಯು ತನ್ನ ನೀರಿನ ಕೊಡವನ್ನು ಅಲ್ಲಿಯೇ ಬಿಟ್ಟು ಪಟ್ಟಣದೊಳಕ್ಕೆ ಹೊರಟುಹೋಗಿ ಜನರಿಗೆ,
ಯೋಹಾನನು 4 : 29 (OCVKN)
“ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ವ್ಯಕ್ತಿಯನ್ನು ಕಾಣಿರಿ, ಬರತಕ್ಕ ಕ್ರಿಸ್ತ ಇವರೇ ಆಗಿರಬಹುದು?” ಎಂದಳು.
ಯೋಹಾನನು 4 : 30 (OCVKN)
ಆಗ ಅವರು ಪಟ್ಟಣದಿಂದ ಯೇಸುವಿನ ಬಳಿಗೆ ಬಂದರು.
ಯೋಹಾನನು 4 : 31 (OCVKN)
ಯೋಹಾನನು 4 : 32 (OCVKN)
ಆ ಸಮಯದಲ್ಲಿ ಶಿಷ್ಯರು, “ಗುರುವೇ ಊಟಮಾಡಿರಿ,” ಎಂದು ಯೇಸುವನ್ನು ಕೇಳಿಕೊಂಡರು.
ಯೋಹಾನನು 4 : 33 (OCVKN)
ಆದರೆ ಯೇಸು ಅವರಿಗೆ, “ನಿಮಗೆ ತಿಳಿಯದಿರುವ ಆಹಾರವು ನನ್ನಲ್ಲಿದೆ,” ಎಂದರು.
ಯೋಹಾನನು 4 : 34 (OCVKN)
ಶಿಷ್ಯರು, “ಯಾರಾದರೂ ಅವರಿಗೆ ಏನಾದರೂ ತಿನ್ನುವುದಕ್ಕೆ ತಂದು ಕೊಟ್ಟರೋ?” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಯೇಸು ಅವರಿಗೆ, “ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನು ಮಾಡಿ ಅವರ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.
ಯೋಹಾನನು 4 : 35 (OCVKN)
ನೀವು, ‘ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುತ್ತದೆ’ ಎಂದು ಹೇಳುವುದಿಲ್ಲವೇ? ಮತ್ತು ಇಗೋ, ನಿಮ್ಮ ಕಣ್ಣೆತ್ತಿ ಹೊಲಗಳನ್ನು ನೋಡಿರಿ. ಏಕೆಂದರೆ ಅವು ಈಗಾಗಲೇ ಸುಗ್ಗಿಗೆ ಸಿದ್ಧವಾಗಿವೆ.
ಯೋಹಾನನು 4 : 36 (OCVKN)
ಕೊಯ್ಯುವವನು ಕೂಲಿಯನ್ನು ಪಡೆದು ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳುತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಿಸುವರು.
ಯೋಹಾನನು 4 : 37 (OCVKN)
‘ಬಿತ್ತುವವನೊಬ್ಬನು, ಕೊಯ್ಯುವವನು ಬೇರೊಬ್ಬನು,’ ಎಂದು ಹೇಳುವ ಮಾತು ಇದರಲ್ಲಿ ಸತ್ಯವಾಗಿದೆ.
ಯೋಹಾನನು 4 : 38 (OCVKN)
ನೀವು ಪ್ರಯಾಸ ಪಡದಂಥದ್ದನ್ನು ಕೊಯ್ಯುವುದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು. ಇತರರು ಪ್ರಯಾಸಪಟ್ಟರು. ನೀವು ಅವರ ಪ್ರಯಾಸದ ಫಲವನ್ನು ಪಡೆದಿದ್ದೀರಿ,” ಎಂದರು.
ಯೋಹಾನನು 4 : 39 (OCVKN)
ಸಮಾರ್ಯದವರು ಅನೇಕರು ನಂಬಿದ್ದು ಆಗ, “ನಾನು ಮಾಡಿದ್ದೆಲ್ಲವನ್ನು ಆತನು ನನಗೆ ತಿಳಿಸಿದನು” ಎಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿನಿಂದ ಆ ಪಟ್ಟಣದ ಅನೇಕ ಸಮಾರ್ಯದವರು ಯೇಸುವಿನಲ್ಲಿ ನಂಬಿಕೆ ಇಟ್ಟರು.
ಯೋಹಾನನು 4 : 40 (OCVKN)
ಆ ಸಮಾರ್ಯದವರು ಯೇಸುವಿನ ಬಳಿಗೆ ಬಂದು ತಮ್ಮೊಂದಿಗೆ ಇರಬೇಕೆಂದು ಅವರನ್ನು ಬೇಡಿಕೊಂಡರು. ಹೀಗೆ ಯೇಸು ಎರಡು ದಿವಸ ಅಲ್ಲಿಯೇ ಉಳಿದರು.
ಯೋಹಾನನು 4 : 41 (OCVKN)
ಇನ್ನೂ ಹೆಚ್ಚು ಜನರು ಯೇಸುವಿನ ವಾಕ್ಯದ ದೆಸೆಯಿಂದ ನಂಬಿದರು.
ಯೋಹಾನನು 4 : 42 (OCVKN)
ಯೋಹಾನನು 4 : 43 (OCVKN)
ಜನರು ಆ ಸ್ತ್ರೀಗೆ, “ನಾವು ಇನ್ನು ಮುಂದೆ ನಂಬುವುದು ನಿನ್ನ ಮಾತಿನಿಂದಲ್ಲ. ಏಕೆಂದರೆ ನಾವೇ ಸ್ವತಃ ಕೇಳಿದ್ದೇವೆ. ಈತನು ನಿಜವಾಗಿಯೂ ಲೋಕ ರಕ್ಷಕನೆಂದು ತಿಳಿದಿದ್ದೇವೆ,” ಎಂದರು. ಅಧಿಕಾರಿಯ ಮಗನನ್ನು ಯೇಸು ಗುಣಪಡಿಸಿದ್ದು ಎರಡು ದಿವಸಗಳಾದ ಮೇಲೆ ಯೇಸು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದರು.
ಯೋಹಾನನು 4 : 44 (OCVKN)
ಪ್ರವಾದಿಗೆ ತನ್ನ ಸ್ವದೇಶದಲ್ಲಿ ಮರ್ಯಾದೆ ಇಲ್ಲವೆಂದು ಯೇಸು ತಾವೇ ಹೇಳಿದ್ದರು.
ಯೋಹಾನನು 4 : 45 (OCVKN)
ಯೇಸು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಅವರನ್ನು ಸ್ವಾಗತಿಸಿದರು. ಪಸ್ಕಹಬ್ಬದ ಸಮಯದಲ್ಲಿ ಯೇಸು ಯೆರೂಸಲೇಮಿನಲ್ಲಿ ಮಾಡಿದವುಗಳನ್ನೆಲ್ಲಾ ಕಂಡಿದ್ದರು.
ಯೋಹಾನನು 4 : 46 (OCVKN)
ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ತಿರುಗಿ ಬಂದರು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.
ಯೋಹಾನನು 4 : 47 (OCVKN)
ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಿರುವುದನ್ನು ಅವನು ಕೇಳಿದಾಗ ಅವರ ಬಳಿಗೆ ಹೋಗಿ, ಯೇಸು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಬೇಡಿಕೊಂಡನು. ಏಕೆಂದರೆ ಅವನ ಮಗನು ಸಾಯುವ ಸ್ಥಿತಿಯಲ್ಲಿದ್ದನು.
ಯೋಹಾನನು 4 : 48 (OCVKN)
ಯೋಹಾನನು 4 : 49 (OCVKN)
ಯೇಸು ಅವನಿಗೆ, “ನೀವು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕಾಣದ ಹೊರತು ನಂಬುವುದೇ ಇಲ್ಲ,” ಎಂದರು.
ಯೋಹಾನನು 4 : 50 (OCVKN)
ಆಗ ಆ ಅಧಿಕಾರಿಯು ಯೇಸುವಿಗೆ, “ಅಯ್ಯಾ, ನನ್ನ ಮಗನು ಸಾಯುವ ಮೊದಲೇ ಬನ್ನಿರಿ,” ಎಂದನು. ಯೇಸು ಅವನಿಗೆ, “ಹೋಗು, ನಿನ್ನ ಮಗನು ಬದುಕುವನು,” ಎಂದರು. ಆ ಮನುಷ್ಯನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟುಹೋದನು.
ಯೋಹಾನನು 4 : 51 (OCVKN)
ಹೀಗೆ ಅವನು ಇಳಿದು ಹೋಗುತ್ತಿರುವಾಗಲೇ ಸೇವಕರು ಅವನನ್ನು ಸಂಧಿಸಿ, ಅವನ ಮಗನು ಬದುಕಿರುವುದಾಗಿ ಅವನಿಗೆ ಹೇಳಿದರು.
ಯೋಹಾನನು 4 : 52 (OCVKN)
ಅವನು, “ಯಾವ ಸಮಯದಲ್ಲಿ ಮಗನು ಚೇತರಿಸಿಕೊಂಡನು?” ಎಂದು ಅವರನ್ನು ವಿಚಾರಿಸಿದಾಗ ಅವರು, “ನಿನ್ನೆ ಮಧ್ಯಾಹ್ನ ಒಂದು ಗಂಟೆಗೆ ಜ್ವರವು ಬಿಟ್ಟಿತು,” ಎಂದು ಸೇವಕರು ಅವನಿಗೆ ಹೇಳಿದರು.
ಯೋಹಾನನು 4 : 53 (OCVKN)
ಯೋಹಾನನು 4 : 54 (OCVKN)
ಹೀಗೆ, “ನಿನ್ನ ಮಗನು ಬದುಕುವನು” ಎಂದು ಯೇಸು ತನಗೆ ಹೇಳಿದ ಸಮಯದಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು, ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ನಂಬಿದರು. ಇದು ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54