ಯೋಹಾನನು 5 : 1 (OCVKN)
ಮೂವತ್ತೆಂಟು ವರ್ಷದ ರೋಗಿಯ ಸ್ವಸ್ಥತೆ ಇದಾದ ಮೇಲೆ ಯೆಹೂದ್ಯರ ಹಬ್ಬವೊಂದು ಬಂತು. ಆದ್ದರಿಂದ, ಯೇಸು ಯೆರೂಸಲೇಮಿಗೆ ಹೋದರು.
ಯೋಹಾನನು 5 : 2 (OCVKN)
ಯೆರೂಸಲೇಮಿನಲ್ಲಿ “ಕುರಿಬಾಗಿಲು” ಎಂಬ ಸ್ಥಳದ ಬಳಿ ಒಂದು ಕೊಳವಿದೆ. ಇದನ್ನು ಹೀಬ್ರೂ ಭಾಷೆಯಲ್ಲಿ ಬೇತ್ಸಥಾ* ಅರಾಮಿಕ್ ಭಾಷೆಯಲ್ಲಿ ಕರುಣಾಭವನ ಎಂದು ಅರ್ಥ ಎಂದು ಕರೆಯುತ್ತಾರೆ. ಅದಕ್ಕೆ ಐದು ಮಂಟಪಗಳಿದ್ದವು.
ಯೋಹಾನನು 5 : 3 (OCVKN)
ಅವುಗಳಲ್ಲಿ ಅಸ್ವಸ್ಥರೂ ಕುರುಡರೂ ಕುಂಟರೂ ಪಾರ್ಶ್ವವಾಯು ಪೀಡಿತರೂ ಆಗಿದ್ದವರ ದೊಡ್ಡ ಸಮೂಹವೇ ಬಿದ್ದುಕೊಂಡು, ನೀರು ಉಕ್ಕುವುದನ್ನೇ ಕಾದು ನೋಡುತ್ತಿದ್ದರು.
ಯೋಹಾನನು 5 : 4 (OCVKN)
ಏಕೆಂದರೆ ಕೆಲವೊಮ್ಮೆ ದೇವದೂತನು ಇಳಿದುಬಂದು ನೀರನ್ನು ಕಲಕುತ್ತಿದ್ದನು. ನೀರು ಕಲಕಿದೊಡನೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಅದು ಗುಣವಾಗುತ್ತಿತ್ತು. ಕೆಲವು ಮೂಲ ಹಸ್ತಪ್ರತಿಗಳಲ್ಲಿ ಈ ವಾಕ್ಯ ಸೇರ್ಪಡೆಯಾಗಿರುವುದಿಲ್ಲ.
ಯೋಹಾನನು 5 : 5 (OCVKN)
ಆಗ ಮೂವತ್ತೆಂಟು ವರ್ಷದಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನು ಅಲ್ಲಿ ಇದ್ದನು.
ಯೋಹಾನನು 5 : 6 (OCVKN)
ಅವನು ಬಿದ್ದುಕೊಂಡಿರುವುದನ್ನು ಯೇಸು ಕಂಡು ಅವನು ಈಗಾಗಲೇ ಬಹುಕಾಲದಿಂದ ಆ ಸ್ಥಿತಿಯಲ್ಲಿದ್ದಾನೆಂದು ತಿಳಿದು ಅವನಿಗೆ, “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದರು.
ಯೋಹಾನನು 5 : 7 (OCVKN)
ಯೋಹಾನನು 5 : 8 (OCVKN)
ಅದಕ್ಕೆ ಆ ರೋಗಿಯು ಯೇಸುವಿಗೆ, “ಸ್ವಾಮಿ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ನನಗೆ ಯಾರೂ ಇಲ್ಲ. ಆದರೆ ನಾನು ಹೋಗುತ್ತಿರುವಾಗಲೇ ನನಗಿಂತ ಮುಂದಾಗಿ ಮತ್ತೊಬ್ಬನು ಹೋಗುತ್ತಾನೆ,” ಎಂದನು. ಯೇಸು ಅವನಿಗೆ, “ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ,” ಎಂದರು.
ಯೋಹಾನನು 5 : 9 (OCVKN)
ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಆ ದಿನವು ಸಬ್ಬತ್ ದಿನವಾಗಿತ್ತು.
ಯೋಹಾನನು 5 : 10 (OCVKN)
ಆದ್ದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ, “ಇದು ಸಬ್ಬತ್ ದಿನ ನೀನು ಹಾಸಿಗೆಯನ್ನು ಹೊತ್ತುಕೊಂಡು ನಡೆಯುವುದಕ್ಕೆ ನಿಷೇಧವಿದೆ,” ಎಂದರು.
ಯೋಹಾನನು 5 : 11 (OCVKN)
ಯೋಹಾನನು 5 : 12 (OCVKN)
ಆದರೆ ಅವನು ಅವರಿಗೆ, “ನನ್ನನ್ನು ಸ್ವಸ್ಥಪಡಿಸಿದವರೇ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ನನಗೆ ಹೇಳಿದ್ದಾರೆ,” ಎಂದನು.
ಯೋಹಾನನು 5 : 13 (OCVKN)
ಅದಕ್ಕೆ ಯೆಹೂದ್ಯರು ಅವನಿಗೆ, “ ‘ಅದನ್ನು ಎತ್ತಿಕೊಂಡು ನಡೆ,’ ಎಂದು ನಿನಗೆ ಹೇಳಿದ ಮನುಷ್ಯನು ಯಾರು?” ಎಂದು ಕೇಳಿದರು.
ಯೋಹಾನನು 5 : 14 (OCVKN)
ಆದರೆ ಆ ವ್ಯಕ್ತಿ ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ. ಏಕೆಂದರೆ ಆ ಸ್ಥಳದಲ್ಲಿ ಜನಸಮೂಹವು ಇದ್ದುದರಿಂದ ಯೇಸು ಅಲ್ಲಿಂದ ಮರೆಯಾಗಿಬಿಟ್ಟಿದ್ದರು. ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ಇಗೋ, ನೀನು ಸ್ವಸ್ಥನಾಗಿರುವೆ, ಹೆಚ್ಚಿನ ಕೇಡು ಬಾರದಂತೆ ಇನ್ನು ಮೇಲೆ ಪಾಪ ಮಾಡಬೇಡ,” ಎಂದರು.
ಯೋಹಾನನು 5 : 15 (OCVKN)
ಆಗ ಅವನು ಹೊರಟುಹೋಗಿ ತನ್ನನ್ನು ಸ್ವಸ್ಥಪಡಿಸಿದವರು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು.
ಯೋಹಾನನು 5 : 16 (OCVKN)
ದೇವಪುತ್ರ ಆಗಿರುವವರ ಮೂಲಕ ಜೀವ ಯೇಸು ಇವುಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸುವನ್ನು ಹಿಂಸಿಸತೊಡಗಿದರು.
ಯೋಹಾನನು 5 : 17 (OCVKN)
ಯೇಸು ಅವರಿಗೆ, “ನನ್ನ ತಂದೆ ಯಾವಾಗಲೂ ಕೆಲಸ ಮಾಡುತ್ತಾರೆ. ನಾನೂ ಕೆಲಸ ಮಾಡುತ್ತೇನೆ,” ಎಂದರು.
ಯೋಹಾನನು 5 : 18 (OCVKN)
ಯೇಸು ಸಬ್ಬತ್ ದಿನವನ್ನು ಮುರಿದದ್ದು ಅಲ್ಲದೆ ದೇವರನ್ನು ತಮ್ಮ ಸ್ವಂತ ತಂದೆ ಎಂದು ಹೇಳಿ ತಮ್ಮನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಮಾಡಿದರು.
ಯೋಹಾನನು 5 : 19 (OCVKN)
ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಪುತ್ರನು ಮಾಡುತ್ತಾನೆ ಹೊರತು ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ತಂದೆ ಯಾವುದನ್ನೆಲ್ಲಾ ಮಾಡುವರೋ ಹಾಗೆಯೇ ಪುತ್ರನೂ ಮಾಡುವನು.
ಯೋಹಾನನು 5 : 20 (OCVKN)
ತಂದೆ ಪುತ್ರನನ್ನು ಪ್ರೀತಿಸಿ ತಾನು ಮಾಡುವುದನ್ನೆಲ್ಲಾ ಪುತ್ರನಿಗೆ ತೋರಿಸುತ್ತಾರೆ. ನೀವು ಆಶ್ಚರ್ಯಪಡುವಂತೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಪುತ್ರನಿಗೆ ತೋರಿಸುವರು.
ಯೋಹಾನನು 5 : 21 (OCVKN)
ತಂದೆ ಸತ್ತವರನ್ನು ಎಬ್ಬಿಸಿ ಬದುಕಿಸುವಂತೆಯೇ ಪುತ್ರನೂ ತನಗಿಷ್ಟ ಬಂದವರನ್ನು ಬದುಕಿಸುತ್ತಾರೆ.
ಯೋಹಾನನು 5 : 22 (OCVKN)
ತಂದೆ ಯಾರಿಗೂ ತೀರ್ಪು ಮಾಡುವುದಿಲ್ಲ. ಆದರೆ ತೀರ್ಪು ಮಾಡುವುದನ್ನೆಲ್ಲಾ ಪುತ್ರನಿಗೆ ಒಪ್ಪಿಸಿದ್ದಾರೆ.
ಯೋಹಾನನು 5 : 23 (OCVKN)
ಎಲ್ಲರೂ ತಂದೆಯನ್ನು ಸನ್ಮಾನಿಸುವಂತೆಯೇ ಪುತ್ರನನ್ನೂ ಸನ್ಮಾನಿಸಬೇಕು. ಪುತ್ರನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿದ ತಂದೆಯನ್ನೂ ಸನ್ಮಾನಿಸುವುದಿಲ್ಲ.
ಯೋಹಾನನು 5 : 24 (OCVKN)
“ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ.
ಯೋಹಾನನು 5 : 25 (OCVKN)
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಪುತ್ರನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಈಗಾಗಲೇ ಬಂದಿದೆ. ಈ ಸ್ವರವನ್ನು ಕೇಳುವವರು ಬದುಕುವರು.
ಯೋಹಾನನು 5 : 26 (OCVKN)
ತಂದೆಯು ಸ್ವತಃ ಜೀವವುಳ್ಳವರಾಗಿರುವಂತೆಯೇ ಪುತ್ರನೂ ಸಹ ಸ್ವತಃ ಜೀವವುಳ್ಳವನಾಗಿರುವಂತೆ ಅನುಗ್ರಹ ಮಾಡಿದ್ದಾರೆ.
ಯೋಹಾನನು 5 : 27 (OCVKN)
ನಾನು ಮನುಷ್ಯಪುತ್ರನಾಗಿರುವುದರಿಂದ ನ್ಯಾಯತೀರಿಸುವ ಅಧಿಕಾರವನ್ನು ತಂದೆ ನನಗೆ ಕೊಟ್ಟಿದ್ದಾರೆ.
ಯೋಹಾನನು 5 : 28 (OCVKN)
“ಇದಕ್ಕೆ ಆಶ್ಚರ್ಯಪಡಬೇಡಿರಿ, ಆಗ ಸಮಾಧಿಗಳಲ್ಲಿ ಇರುವವರೆಲ್ಲರೂ ನನ್ನ ಸ್ವರವನ್ನು ಕೇಳಿ ಹೊರಗೆ ಬರುವ ಒಂದುಕಾಲ ಬರುತ್ತದೆ.
ಯೋಹಾನನು 5 : 29 (OCVKN)
ಒಳ್ಳೆಯದನ್ನು ಮಾಡಿದವರು ಜೀವಕ್ಕಾಗಿ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ನ್ಯಾಯತೀರ್ಪಿಗಾಗಿ ಪುನರುತ್ಥಾನವನ್ನೂ ಹೊಂದುವರು.
ಯೋಹಾನನು 5 : 30 (OCVKN)
ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು. ನಾನು ಕೇಳಿರುವಂತೆಯೇ ತೀರ್ಪು ಮಾಡುತ್ತೇನೆ. ನನ್ನ ತೀರ್ಪು ನ್ಯಾಯವಾದದ್ದು. ಏಕೆಂದರೆ ನಾನು ನನ್ನ ಚಿತ್ತವನ್ನಲ್ಲ, ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ನೆರವೇರಿಸಲು ಅಪೇಕ್ಷಿಸುತ್ತೇನೆ.
ಯೋಹಾನನು 5 : 31 (OCVKN)
ಯೇಸುವನ್ನು ಕುರಿತು ಸಾಕ್ಷಿ “ನನ್ನನ್ನು ಕುರಿತು ನಾನೇ ಸಾಕ್ಷಿಹೇಳಿಕೊಂಡರೆ ನನ್ನ ಸಾಕ್ಷಿಯು ಸತ್ಯವಾದದ್ದಲ್ಲ.
ಯೋಹಾನನು 5 : 32 (OCVKN)
ನನ್ನನ್ನು ಕುರಿತು ಸಾಕ್ಷಿಕೊಡುವವರು ಬೇರೊಬ್ಬರಿದ್ದಾರೆ. ಅವರು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯೇ ಸತ್ಯವಾದುದೆಂದು ನಾನು ಬಲ್ಲೆನು.
ಯೋಹಾನನು 5 : 33 (OCVKN)
“ನೀವು ಯೋಹಾನನ ಬಳಿಗೆ ದೂತರನ್ನು ಕಳುಹಿಸಿದಿರಿ. ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು.
ಯೋಹಾನನು 5 : 34 (OCVKN)
ನಾನಾದರೋ ಮಾನವರ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ. ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವುಗಳನ್ನು ಹೇಳುತ್ತೇನೆ.
ಯೋಹಾನನು 5 : 35 (OCVKN)
ಯೋಹಾನನು ಉರಿದು ಪ್ರಕಾಶಿಸುವ ದೀಪವಾಗಿದ್ದನು. ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಅತ್ಯಾನಂದಪಡಲು ನೀವು ಇಚ್ಚಿಸಿದಿರಿ.
ಯೋಹಾನನು 5 : 36 (OCVKN)
“ಆದರೆ ನನಗೆ ಯೋಹಾನನಿಗಿಂತಲೂ ಮಹಾ ಸಾಕ್ಷಿ ಉಂಟು. ಹೇಗೆಂದರೆ, ತಂದೆ ನನಗೆ ಮಾಡಿ ಮುಗಿಸಲು ಕೊಟ್ಟ ಕೆಲಸಗಳು, ಅಂದರೆ, ನಾನು ಮಾಡುತ್ತಿರುವ ಈ ಕೆಲಸಗಳೇ, ತಂದೆ ನನ್ನನ್ನು ಕಳಿಹಿಸಿದ್ದಾರೆಂದು ನನ್ನನ್ನು ಕುರಿತು ಸಾಕ್ಷಿ ಕೊಡುತ್ತವೆ.
ಯೋಹಾನನು 5 : 37 (OCVKN)
ನನ್ನನ್ನು ಕಳುಹಿಸಿದ ತಂದೆ ತಾವೇ ನನ್ನನ್ನು ಕುರಿತು ಸಾಕ್ಷಿ ಹೇಳಿದ್ದಾರೆ. ನೀವು ಎಂದೂ ಅವರ ಸ್ವರವನ್ನು ಕೇಳಲಿಲ್ಲ, ಅವರ ರೂಪವನ್ನು ಕಾಣಲಿಲ್ಲ.
ಯೋಹಾನನು 5 : 38 (OCVKN)
ಅವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವರು ಕಳುಹಿಸಿದವನನ್ನು ನೀವು ನಂಬುವುದಿಲ್ಲ.
ಯೋಹಾನನು 5 : 39 (OCVKN)
ನೀವು ಪವಿತ್ರ ವೇದದಲ್ಲಿ ನಿತ್ಯಜೀವ ದೊರೆಯುತ್ತದೆ ಎಂದು ನೆನಸಿ, ಅವುಗಳನ್ನು ಪರಿಶೋಧಿಸುತ್ತೀದ್ದಿರಿ. ಆ ಪವಿತ್ರ ವೇದವೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತದೆ.
ಯೋಹಾನನು 5 : 40 (OCVKN)
ಆದರೂ ನೀವು ಜೀವವನ್ನು ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಇಷ್ಟವಿಲ್ಲ.
ಯೋಹಾನನು 5 : 41 (OCVKN)
“ನಾನು ಮನುಷ್ಯರಿಂದ ಮಹಿಮೆಯನ್ನು ಸ್ವೀಕರಿಸುವುದಿಲ್ಲ.
ಯೋಹಾನನು 5 : 42 (OCVKN)
ಆದರೆ ನಿಮ್ಮನ್ನು ಬಲ್ಲೆನು. ನಿಮ್ಮ ಹೃದಯದಲ್ಲಿ ದೇವರ ಪ್ರೀತಿ ಇಲ್ಲ.
ಯೋಹಾನನು 5 : 43 (OCVKN)
ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ. ನೀವು ನನ್ನನ್ನು ಸ್ವೀಕರಿಸುವುದಿಲ್ಲ. ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅಂಥವನನ್ನು ಸ್ವೀಕರಿಸುತ್ತೀರಿ.
ಯೋಹಾನನು 5 : 44 (OCVKN)
ಒಬ್ಬರೇ ದೇವರಿಂದ ಬರುವ ಮಹಿಮೆಯನ್ನು ಹುಡುಕದೆ ಒಬ್ಬರಿಂದೊಬ್ಬರಿಗೆ ಬರುವ ಮಹಿಮೆಯನ್ನು ಸ್ವೀಕರಿಸುವ ನಿಮಗೆ ನಂಬಲು ಹೇಗೆ ಸಾಧ್ಯ?
ಯೋಹಾನನು 5 : 45 (OCVKN)
“ತಂದೆಯ ಮುಂದೆ ನಿಮ್ಮ ಮೇಲೆ ನಾನು ದೂರು ಹೇಳುತ್ತಿರುವೆನೆಂದು ನೀವು ನೆನಸಬೇಡಿರಿ. ನಿಮ್ಮ ಮೇಲೆ ದೂರು ಹೇಳುವವನು ಒಬ್ಬನಿದ್ದಾನೆ; ನೀವು ನಿರೀಕ್ಷೆಯಿಟ್ಟಿರುವ ಮೋಶೆಯೇ.
ಯೋಹಾನನು 5 : 46 (OCVKN)
ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ. ಏಕೆಂದರೆ ಅವನು ನನ್ನನ್ನು ಕುರಿತು ಬರೆದಿದ್ದಾನೆ.
ಯೋಹಾನನು 5 : 47 (OCVKN)
ಅವನು ಪವಿತ್ರ ವೇದಗಳಲ್ಲಿ ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬುವಿರಿ?” ಎಂದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47