ಯೋಹಾನನು 7 : 1 (OCVKN)
ಯೇಸು ದೇವದರ್ಶನ ಗುಡಾರದ ಹಬ್ಬಕ್ಕೆ ಹೋದದ್ದು ಇವುಗಳಾದ ಮೇಲೆ ಯೇಸು ಗಲಿಲಾಯದ ಪ್ರಾಂತದಲ್ಲಿ ಸಂಚಾರ ಮಾಡಿದರು. ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದುದರಿಂದ ಯೂದಾಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.
ಯೋಹಾನನು 7 : 2 (OCVKN)
ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.
ಯೋಹಾನನು 7 : 3 (OCVKN)
ಆದ್ದರಿಂದ ಯೇಸುವಿನ ಸಹೋದರರು, “ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು.
ಯೋಹಾನನು 7 : 4 (OCVKN)
ಏಕೆಂದರೆ ಪ್ರಖ್ಯಾತನಾಗಲು ಬಯಸುವ ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದಾದರೆ, ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ,” ಎಂದು ಯೇಸುವಿಗೆ ಹೇಳಿದರು.
ಯೋಹಾನನು 7 : 5 (OCVKN)
ಏಕೆಂದರೆ ಯೇಸುವಿನ ಸಹೋದರರು ಸಹ ಅವರನ್ನು ನಂಬಲಿಲ್ಲ.
ಯೋಹಾನನು 7 : 6 (OCVKN)
ಅದಕ್ಕೆ ಯೇಸು ಅವರಿಗೆ, “ನನ್ನ ಸಮಯವು ಇನ್ನೂ ಬಂದಿಲ್ಲ. ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
ಯೋಹಾನನು 7 : 7 (OCVKN)
ಲೋಕವು ನಿಮ್ಮನ್ನು ದ್ವೇಷಿಸಲಾರದು. ಲೋಕದ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯದಲ್ಲಿ ನಾನು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.
ಯೋಹಾನನು 7 : 8 (OCVKN)
ನೀವು ಈ ಹಬ್ಬಕ್ಕೆ ಹೋಗಿರಿ. ನಾನು ಈ ಹಬ್ಬಕ್ಕೆ ಹೋಗುವುದಿಲ್ಲ. ಏಕೆಂದರೆ ನನ್ನ ಸಮಯವು ಇನ್ನೂ ಪೂರ್ಣವಾಗಿ ಬರಲಿಲ್ಲ,” ಎಂದರು.
ಯೋಹಾನನು 7 : 9 (OCVKN)
ಯೇಸು ಈ ಮಾತುಗಳನ್ನು ಅವರಿಗೆ ಹೇಳಿದ ಮೇಲೆ ಗಲಿಲಾಯದಲ್ಲಿಯೇ ಉಳಿದರು.
ಯೋಹಾನನು 7 : 10 (OCVKN)
ಆದರೆ ಯೇಸುವಿನ ಸಹೋದರರು ಹಬ್ಬಕ್ಕೆ ಹೋದರು. ಯೇಸು ಸಹ ಬಹಿರಂಗವಾಗಿ ಹೋಗದೆ ರಹಸ್ಯವಾಗಿ ಅಲ್ಲಿಗೆ ಹೋದರು.
ಯೋಹಾನನು 7 : 11 (OCVKN)
ಯೆಹೂದ್ಯರು ಆ ಹಬ್ಬದಲ್ಲಿ, “ಆ ಮನುಷ್ಯನು ಎಲ್ಲಿ?” ಎಂದು ಹುಡುಕುತ್ತಿದ್ದರು.
ಯೋಹಾನನು 7 : 12 (OCVKN)
ಜನರ ಗುಂಪುಗಳಲ್ಲಿ ಯೇಸುವಿನ ವಿಷಯವಾಗಿ ಬಹಳ ಗೊಣಗುಟ್ಟುವಿಕೆ ಇತ್ತು. ಏಕೆಂದರೆ ಕೆಲವರು, “ಆತ ಒಳ್ಳೆಯ ಮನುಷ್ಯ,” ಎಂದರು. ಬೇರೆ ಕೆಲವರು, “ಇಲ್ಲ ಆತ ಜನರಿಗೆ ಮೋಸಮಾಡುತ್ತಾನೆ,” ಎಂದರು.
ಯೋಹಾನನು 7 : 13 (OCVKN)
ಆದರೂ ಯೆಹೂದ್ಯರ ಭಯದ ನಿಮಿತ್ತ ಯೇಸುವಿನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ.
ಯೋಹಾನನು 7 : 14 (OCVKN)
ಯೇಸು ದೇವಾಲಯದಲ್ಲಿ ಬೋಧಿಸಿದ್ದು ಯೇಸು ಆ ಹಬ್ಬದ ಮಧ್ಯದಲ್ಲಿ ದೇವಾಲಯಕ್ಕೆ ಹೋಗಿ ಬೋಧಿಸಿದರು.
ಯೋಹಾನನು 7 : 15 (OCVKN)
ಯೆಹೂದ್ಯರು ಆಶ್ಚರ್ಯಪಟ್ಟು, “ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಷ್ಟೆಲ್ಲಾ ಜ್ಞಾನ ತಿಳಿದಿರುವುದು ಹೇಗೆ?” ಎಂದರು.
ಯೋಹಾನನು 7 : 16 (OCVKN)
ಅದಕ್ಕೆ ಯೇಸು ಅವರಿಗೆ, “ನನ್ನ ಬೋಧನೆಯು ನನ್ನದಲ್ಲ, ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ.
ಯೋಹಾನನು 7 : 17 (OCVKN)
ಯಾರಾದರೂ ದೇವರ ಚಿತ್ತವನ್ನು ಮಾಡಬಯಸುವುದಾದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಮಾತನಾಡುತ್ತೇನೋ ಎಂಬುದು ಅವರಿಗೆ ತಿಳಿಯುವುದು.
ಯೋಹಾನನು 7 : 18 (OCVKN)
ತಮ್ಮಷ್ಟಕ್ಕೆ ತಾವೇ ಮಾತನಾಡುವವರು ತಮ್ಮ ಸ್ವಂತ ಮಹಿಮೆಯನ್ನು ಹುಡುಕುತ್ತಾರೆ. ಆದರೆ ತನ್ನನ್ನು ಕಳುಹಿಸಿದ ತಂದೆಯ ಮಹಿಮೆಯನ್ನು ಹುಡುಕುವ ಮನುಷ್ಯನು ಸತ್ಯವಂತನು; ಆತನಲ್ಲಿ ಅನೀತಿಯಿಲ್ಲ.
ಯೋಹಾನನು 7 : 19 (OCVKN)
ಮೋಶೆಯು ನಿಮಗೆ ನಿಯಮವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಯಾರೂ ಆ ನಿಯಮದಂತೆ ನಡೆಯುವುದಿಲ್ಲ. ನೀವು ನನ್ನನ್ನು ಕೊಲ್ಲಲು ಹುಡುಕುವುದೇಕೆ?” ಎಂದು ಕೇಳಿದರು.
ಯೋಹಾನನು 7 : 20 (OCVKN)
ಯೋಹಾನನು 7 : 21 (OCVKN)
ಅದಕ್ಕೆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಹುಡುಕುವವರು ಯಾರು?” ಎಂದರು. ಯೇಸು ಅವರಿಗೆ, “ನಾನು ಒಂದು ಕ್ರಿಯೆಯನ್ನು ಮಾಡಿದೆನು. ಅದಕ್ಕೆ ನೀವೆಲ್ಲರೂ ಆಶ್ವರ್ಯಪಡುತ್ತೀರಿ.
ಯೋಹಾನನು 7 : 22 (OCVKN)
ಮೋಶೆ ನಿಮಗೆ ಸುನ್ನತಿಯನ್ನು ಇದಕ್ಕಾಗಿಯೇ ಕೊಟ್ಟನು. ಅದು ಮೋಶೆಯಿಂದಾಗಿರದೆ ನಿಮ್ಮ ಪಿತೃಗಳಿಂದಾದದ್ದು. ಆದರೆ ನೀವು ಸಬ್ಬತ್ ದಿನದಲ್ಲಿಯೂ ಸುನ್ನತಿ ಮಾಡುತ್ತೀರಿ.
ಯೋಹಾನನು 7 : 23 (OCVKN)
ಮೋಶೆಯ ನಿಯಮವನ್ನು ಉಲ್ಲಂಘಿಸದೆ ನೀವು ಸಬ್ಬತ್ ದಿನದಲ್ಲಿ ಒಬ್ಬನಿಗೆ ಸುನ್ನತಿಯನ್ನು ಮಾಡುವುದಾದರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್ ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ?
ಯೋಹಾನನು 7 : 24 (OCVKN)
ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ಆದರೆ ನೀತಿಯ ತೀರ್ಪನ್ನು ಮಾಡಿರಿ,” ಎಂದರು.
ಯೋಹಾನನು 7 : 25 (OCVKN)
ಕ್ರಿಸ್ತ ಯೇಸು ಯಾರು? ಆಮೇಲೆ ಯೆರೂಸಲೇಮಿನ ಕೆಲವರು, “ಅವರು ಕೊಲ್ಲಬೇಕೆಂದು ಹುಡುಕುವುದು ಈತನನ್ನೇ ಅಲ್ಲವೇ?
ಯೋಹಾನನು 7 : 26 (OCVKN)
ಇಗೋ, ಈತನು ಬಹಿರಂಗವಾಗಿ ಮಾತನಾಡುತ್ತಿದ್ದಾನೆ. ಆದರೆ ಅವರು ಈತನಿಗೆ ಏನೂ ಹೇಳುವುದಿಲ್ಲ. ಬಹುಶಃ ಈತನೇ ನಿಜವಾದ ಕ್ರಿಸ್ತ ಎಂದು ಅಧಿಕಾರಿಗಳು ತಿಳಿದುಕೊಂಡಿದ್ದಾರೋ?
ಯೋಹಾನನು 7 : 27 (OCVKN)
ಆದರೆ ಈತನು ಎಲ್ಲಿಂದ ಬಂದವನೆಂದು ನಾವು ಬಲ್ಲೆವು. ಆದರೂ ಕ್ರಿಸ್ತನು ಬಂದಾಗ ಆತನು ಎಲ್ಲಿಂದ ಬಂದವನೆಂದು ಯಾರಿಗೂ ತಿಳಿಯದು,” ಎಂದರು.
ಯೋಹಾನನು 7 : 28 (OCVKN)
ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸು, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ. ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ತಂದೆಯನ್ನು ನೀವು ಅರಿತವರಲ್ಲ.
ಯೋಹಾನನು 7 : 29 (OCVKN)
ನಾನಾದರೋ ಅವರನ್ನು ಅರಿತಿದ್ದೇನೆ. ಏಕೆಂದರೆ ನಾನು ಅವರ ಕಡೆಯಿಂದ ಬಂದವನು. ಅವರೇ ನನ್ನನ್ನು ಕಳುಹಿಸಿಕೊಟ್ಟಿದ್ದಾರೆ,” ಎಂದು ಗಟ್ಟಿಯಾಗಿ ಕೂಗಿ ಹೇಳಿದರು.
ಯೋಹಾನನು 7 : 30 (OCVKN)
ಆಗ ಅವರು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಅವರ ಸಮಯ ಇನ್ನೂ ಬಾರದೆ ಇದ್ದುದರಿಂದ ಅವರ ಮೇಲೆ ಯಾರೂ ಕೈಹಾಕಲಿಲ್ಲ.
ಯೋಹಾನನು 7 : 31 (OCVKN)
ಜನರಲ್ಲಿ ಅನೇಕರು ಯೇಸುವನ್ನು ನಂಬಿ, “ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕಕಾರ್ಯಗಳನ್ನು ಮಾಡುವನೋ?” ಎಂದರು.
ಯೋಹಾನನು 7 : 32 (OCVKN)
ಯೋಹಾನನು 7 : 33 (OCVKN)
ಯೇಸುವಿನ ವಿಷಯವಾಗಿ ಜನರು ತಮ್ಮತಮ್ಮೊಳಗೆ ಮಾತನಾಡುವುದನ್ನು ಫರಿಸಾಯರು ಕೇಳಿದರು. ಫರಿಸಾಯರು ಮತ್ತು ಮುಖ್ಯಯಾಜಕರು ಯೇಸುವನ್ನು ಬಂಧಿಸಲು ಕಾವಲುಗಾರರನ್ನು ಕಳುಹಿಸಿದರು. ಯೇಸು ಅವರಿಗೆ, “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಅನಂತರ ನನ್ನನ್ನು ಕಳುಹಿಸಿದ ತಂದೆಯ ಬಳಿಗೆ ಹೋಗುತ್ತೇನೆ.
ಯೋಹಾನನು 7 : 34 (OCVKN)
ನೀವು ನನ್ನನ್ನು ಹುಡುಕುವಿರಿ. ಆದರೆ ನನ್ನನ್ನು ಕಾಣುವುದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ,” ಎಂದರು.
ಯೋಹಾನನು 7 : 35 (OCVKN)
ಆಗ ಯೆಹೂದಿ ನಾಯಕರು, “ನಾವು ಈತನನ್ನು ಕಾಣದ ಹಾಗೆ ಈತ ಎಲ್ಲಿಗೆ ಹೋಗಲಿದ್ದಾನೆ? ಗ್ರೀಕರ ನಡುವೆ ಚದರಿ ಹೋದವರ ಬಳಿಗೆ ಹೋಗಿ ಗ್ರೀಕರಿಗೆ ಬೋಧಿಸುವನೋ?
ಯೋಹಾನನು 7 : 36 (OCVKN)
ಈತನು, ‘ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವುದಿಲ್ಲ ಮತ್ತು ನಾನಿರುವಲ್ಲಿಗೆ ನೀವು ಬರಲಾರಿರಿ,’ ಎಂದು ಹೇಳಿದ ಮಾತು ಏನಾಗಿರಬಹುದು?” ಎಂದು ತಮ್ಮೊಳಗೆ ಮಾತನಾಡಿಕೊಂಡರು.
ಯೋಹಾನನು 7 : 37 (OCVKN)
ಹಬ್ಬದ ಆ ಮಹಾದಿವಸವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು, “ಯಾರಿಗಾದರೂ ಬಾಯಾರಿಕೆಯಾಗಿದ್ದರೆ ಅವರು ನನ್ನ ಬಳಿಗೆ ಬಂದು ಕುಡಿಯಲಿ.
ಯೋಹಾನನು 7 : 38 (OCVKN)
ಪವಿತ್ರ ವೇದವು ಹೇಳಿದ ಪ್ರಕಾರ ನನ್ನಲ್ಲಿ ನಂಬಿಕೆಯಿಡುವವರ ಅಂತರಂಗದಿಂದ ಜೀವಜಲದ ಹೊಳೆಗಳು ಹರಿಯುವವು,” ಎಂದು ಕೂಗಿ ಹೇಳಿದರು.
ಯೋಹಾನನು 7 : 39 (OCVKN)
ಆದರೆ ಯೇಸು ತಮ್ಮಲ್ಲಿ ನಂಬಿಕೆಯಿಡುವವರು ಹೊಂದಲಿರುವ ಪವಿತ್ರಾತ್ಮರನ್ನು ಕುರಿತು ಹೀಗೆ ಹೇಳಿದರು. ಯೇಸು ಇನ್ನೂ ಮಹಿಮೆ ಹೊಂದಿರಲಿಲ್ಲ. ಈ ಕಾರಣದಿಂದ ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ.
ಯೋಹಾನನು 7 : 40 (OCVKN)
ಯೋಹಾನನು 7 : 41 (OCVKN)
ಆದ್ದರಿಂದ ಜನರಲ್ಲಿ ಕೆಲವರು ಈ ಮಾತನ್ನು ಕೇಳಿದಾಗ, “ಈತನು ನಿಜವಾಗಿಯೂ ಪ್ರವಾದಿಯಾಗಿದ್ದಾನೆ,” ಎಂದರು. ಬೇರೆಯವರು, “ಈತನೇ ಕ್ರಿಸ್ತನು,” ಎಂದರು. ಆದರೆ ಇನ್ನೂ ಕೆಲವರು, “ಕ್ರಿಸ್ತನು ಗಲಿಲಾಯದಿಂದ ಬರುವುದು ಹೇಗೆ?
ಯೋಹಾನನು 7 : 42 (OCVKN)
‘ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತ್ಲೆಹೇಮೆಂಬ ಊರಿನಿಂದಲೂ ಬರುವನು,’ ಎಂದು ಪವಿತ್ರ ವೇದವು ಹೇಳುತ್ತದಲ್ಲವೇ?” ಎಂದರು.
ಯೋಹಾನನು 7 : 43 (OCVKN)
ಹೀಗೆ ಯೇಸುವಿನ ನಿಮಿತ್ತವಾಗಿ ಜನರಲ್ಲಿ ಭೇದ ಉಂಟಾಯಿತು.
ಯೋಹಾನನು 7 : 44 (OCVKN)
ಅವರಲ್ಲಿ ಕೆಲವರು ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಯಾರೂ ಯೇಸುವಿನ ಮೇಲೆ ಕೈಹಾಕಲಿಲ್ಲ.
ಯೋಹಾನನು 7 : 45 (OCVKN)
ಯೆಹೂದ್ಯ ಅಧಿಕಾರಿಗಳ ಅವಿಶ್ವಾಸ
ಯೋಹಾನನು 7 : 46 (OCVKN)
ಬಳಿಕ ಕಾವಲುಗಾರರು, ಮುಖ್ಯಯಾಜಕರ ಹಾಗೂ ಫರಿಸಾಯರ ಬಳಿಗೆ ಬಂದಾಗ ಅವರು, “ನೀವು ಏಕೆ ಆತನನ್ನು ಹಿಡಿದು ತರಲಿಲ್ಲ?” ಎಂದು ಕೇಳಿದರು.
ಯೋಹಾನನು 7 : 47 (OCVKN)
ಅದಕ್ಕೆ ಕಾವಲುಗಾರರು, “ಯಾವ ಮನುಷ್ಯನೂ ಎಂದೂ ಈತನು ಮಾತನಾಡುವಂತೆ ಮಾತನಾಡಿದ್ದಿಲ್ಲ,” ಎಂದರು. ಆಗ ಫರಿಸಾಯರು ಅವರಿಗೆ, “ನೀವು ಸಹ ಮರುಳಾದೀರಾ?
ಯೋಹಾನನು 7 : 48 (OCVKN)
ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಯೇಸುವನ್ನು ನಂಬಿದ್ದುಂಟೇ?
ಯೋಹಾನನು 7 : 49 (OCVKN)
ಆದರೆ ಮೋಶೆಯ ನಿಯಮವನ್ನು ಅರಿಯದ ಈ ಜನರು ಶಾಪಗ್ರಸ್ತರೇ,”* ಧರ್ಮೋ 27:26 ಎಂದು ಹೇಳಿದರು.
ಯೋಹಾನನು 7 : 50 (OCVKN)
ಯೇಸುವಿನ ಬಳಿಗೆ ಒಮ್ಮೆ ಬಂದಿದ್ದ ನಿಕೊದೇಮನು ಅವರಲ್ಲಿ ಒಬ್ಬನಾಗಿದ್ದನು. ಅವನು ಅವರಿಗೆ,
ಯೋಹಾನನು 7 : 51 (OCVKN)
“ಒಬ್ಬ ಮನುಷ್ಯನನ್ನು ಮೊದಲು ವಿಚಾರಿಸಿ, ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ನಮ್ಮ ನಿಯಮವು ಅವನಿಗೆ ತೀರ್ಪುಮಾಡುವುದುಂಟೇ?” ಎಂದನು.
ಯೋಹಾನನು 7 : 52 (OCVKN)
ಯೋಹಾನನು 7 : 53 (OCVKN)
ಅವರು ಅವನಿಗೆ, “ನೀನು ಸಹ ಗಲಿಲಾಯದವನೋ? ಗಲಿಲಾಯದಿಂದ ಒಬ್ಬ ಪ್ರವಾದಿಯೂ ಏಳುವುದಿಲ್ಲ, ನೀನೇ ಪರಿಶೋಧಿಸಿ ನೋಡು,” ಎಂದರು. ಬಳಿಕ ಎಲ್ಲರೂ ತಮ್ಮ ತಮ್ಮ ಮನೆಗೆ ಹೋದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53