ಯೋನ 2 : 1 (OCVKN)
ಆಗ ಯೋನನು ಮೀನಿನ ಹೊಟ್ಟೆಯೊಳಗಿಂದ ತನ್ನ ದೇವರಾದ ಯೆಹೋವ ದೇವರಿಗೆ ಪ್ರಾರ್ಥನೆಮಾಡಿದನು.
ಯೋನ 2 : 2 (OCVKN)
ಅವನು ಹೀಗೆ ಹೇಳಿದನು: “ನಾನು ನನ್ನ ವ್ಯಥೆಯಲ್ಲಿ ಯೆಹೋವ ದೇವರಿಗೆ ಮೊರೆಯಿಟ್ಟೆನು. ಅವರು ನನ್ನ ಕೂಗನ್ನು ಕೇಳಿದರು. ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ನಾನು ಕೂಗಿದೆನು, ಆಗ ನನ್ನ ಕರೆಯನ್ನು ನೀವು ಕೇಳಿದಿರಿ.
ಯೋನ 2 : 3 (OCVKN)
ನನ್ನನ್ನು ನೀವು ಅಗಾಧದಲ್ಲಿಯೂ, ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿರಿ. ಪ್ರವಾಹಗಳು ನನ್ನನ್ನು ಸುತ್ತಿಕೊಂಡವು. ನಿಮ್ಮ ಎಲ್ಲಾ ಅಲೆಗಳೂ ನಿಮ್ಮ ತೆರೆಗಳೂ ನನ್ನ ಮೇಲೆ ದಾಟಿಹೋದವು.
ಯೋನ 2 : 4 (OCVKN)
ಆಗ ನಾನು ಹೇಳಿದ್ದು, ‘ನಿಮ್ಮ ಕಣ್ಣುಗಳ ಎದುರಿನಿಂದ ಬಹಿಷ್ಕೃತನಾಗಿದ್ದೇನೆ. ಆದರೂ ನಾನು ನಿಮ್ಮ ಪರಿಶುದ್ಧ ಮಂದಿರದ ಕಡೆಗೆ ಪುನಃ ನೋಡುವೆನು.’
ಯೋನ 2 : 5 (OCVKN)
ನನ್ನನ್ನು ಸುತ್ತುತ್ತಿದ್ದ ನೀರು, ನನ್ನನ್ನು ಭಯಪಡಿಸಿತು. ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು. ಜಂಬು ಹುಲ್ಲು ನನ್ನ ತಲೆಗೆ ಸುತ್ತಲಾಗಿತ್ತು.
ಯೋನ 2 : 6 (OCVKN)
ಬೆಟ್ಟಗಳ ಅಡಿಗಳ ಪರ್ಯಂತರ ಇಳಿದು ಹೋದೆನು. ಕೆಳಗಿನ ಭೂಮಿಯು ನನ್ನನ್ನು ಶಾಶ್ವತವಾಗಿ ನಿರ್ಬಂಧಿಸಿತು. ಆದರೂ ದೇವರಾದ ನನ್ನ ಯೆಹೋವ ದೇವರೇ, ನೀವು ನನ್ನ ಪ್ರಾಣವನ್ನು ತಗ್ಗಿನಿಂದ ಮೇಲಕ್ಕೆ ಎಬ್ಬಿಸಿದ್ದೀರಿ.
ಯೋನ 2 : 7 (OCVKN)
“ನನ್ನ ಪ್ರಾಣವು ನನ್ನಲ್ಲಿ ಕುಂದಿ ಹೋದಾಗ, ಯೆಹೋವ ದೇವರೇ ನಿಮ್ಮನ್ನು ಜ್ಞಾಪಕಮಾಡಿಕೊಂಡೆನು. ನನ್ನ ಪ್ರಾರ್ಥನೆಯು ನಿಮ್ಮ ಬಳಿಗೆ ನಿಮ್ಮ ಪರಿಶುದ್ಧ ಮಂದಿರದೊಳಗೆ ಬಂದಿತು.
ಯೋನ 2 : 8 (OCVKN)
“ನಿರುಪಯೋಗ ಮೂರ್ತಿಗಳಿಗೆ ಅಂಟಿಕೊಳ್ಳುವವರು, ಅವರದಾಗುವ ದೇವರ ಪ್ರೀತಿಯನ್ನು ಕಳೆದುಕೊಳ್ಳುವರು.
ಯೋನ 2 : 9 (OCVKN)
ಆದರೆ ನಾನು ಸ್ತೋತ್ರದ ಗೀತೆಯಿಂದ ನಿಮಗೆ ಬಲಿ ಅರ್ಪಿಸುವೆನು. ನಾನು ಮಾಡಿದ ಹರಕೆಯನ್ನು ತೀರಿಸುವೆನು. ಆಗ ನಾನು, ‘ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು,’ ಎಂದು ಹೇಳಿದನು.”
ಯೋನ 2 : 10 (OCVKN)
ಆಗ ಯೆಹೋವ ದೇವರು ಮೀನಿಗೆ ಹೇಳಿದ್ದರಿಂದ, ಅದು ಯೋನನನ್ನು ಒಣಭೂಮಿಯ ಮೇಲೆ ಕಾರಿಬಿಟ್ಟಿತು.

1 2 3 4 5 6 7 8 9 10