ಯೋನ 3 : 1 (OCVKN)
ಯೋನನು ನಿನೆವೆಗೆ ಹೋದದ್ದು ಯೆಹೋವ ದೇವರ ವಾಕ್ಯವು ಎರಡನೆಯ ಸಾರಿ ಯೋನನಿಗೆ ಬಂದಿತು.
ಯೋನ 3 : 2 (OCVKN)
“ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ, ನಾನು ನಿನಗೆ ಹೇಳಿದ ಸಂದೇಶವನ್ನು ಅದರ ನಿವಾಸಿಗಳಿಗೆ ಸಾರು,” ಎಂದು ಹೇಳಿದರು.
ಯೋನ 3 : 3 (OCVKN)
ಹೀಗೆ ಯೋನನು ಯೆಹೋವ ದೇವರ ಮಾತಿಗೆ ವಿಧೇಯನಾಗಿ ನಿನೆವೆಗೆ ಹೋದನು. ನಿನೆವೆಯು ಮೂರು ದಿವಸದ ಪ್ರಯಾಣದ ಮಹಾ ದೊಡ್ಡ ಪಟ್ಟಣವಾಗಿತ್ತು.
ಯೋನ 3 : 4 (OCVKN)
ಆಗ ಯೋನನು ಒಂದು ದಿವಸದ ಪ್ರಯಾಣಮಾಡಿ, ಪಟ್ಟಣದಲ್ಲಿ ಪ್ರವೇಶಿಸಿ, “ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ನಾಶವಾಗುವುದು,” ಎಂದು ಕೂಗಿ ಹೇಳಿದನು.
ಯೋನ 3 : 5 (OCVKN)
ನಿನೆವೆಯ ಮನುಷ್ಯರು, ದೇವರನ್ನು ನಂಬಿ, ಉಪವಾಸವನ್ನು ಸಾರಿ, ಅವರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನವರೆಗೂ ಗೋಣಿತಟ್ಟನ್ನು ಉಟ್ಟುಕೊಂಡರು.
ಯೋನ 3 : 6 (OCVKN)
ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ, ಅವನು ತನ್ನ ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯಲ್ಲಿ ಕುಳಿತುಕೊಂಡನು.
ಯೋನ 3 : 7 (OCVKN)
ಅವನು ನಿನೆವೆಯಲ್ಲಿ ಈ ಘೋಷಣೆಯನ್ನು ಮಾಡಿದನು: POS “ಅರಸನ ಮತ್ತು ಶ್ರೇಷ್ಠರ ತೀರ್ಪಿನ ಪ್ರಕಾರ: OE “ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನನ್ನೂ ರುಚಿ ನೋಡದಿರಲಿ, ಮೇಯದಿರಲಿ, ನೀರನ್ನು ಕುಡಿಯದಿರಲಿ.
ಯೋನ 3 : 8 (OCVKN)
ಆದರೆ ಮನುಷ್ಯರೂ ಮೃಗಗಳೂ ಗೋಣಿತಟ್ಟು ಹಾಕಿಕೊಂಡು, ಜೋರಾದ ಧ್ವನಿಯಿಂದ ದೇವರಿಗೆ ಮೊರೆಯಿಡಲಿ. ಎಲ್ಲರೂ ತಮ್ಮ ತಮ್ಮ ದುರ್ಮಾರ್ಗಗಳನ್ನೂ, ತಮ್ಮ ತಮ್ಮ ಕೈಗಳಲ್ಲಿರುವ ಹಿಂಸಾಚಾರವನ್ನೂ ಬಿಟ್ಟು ತಿರುಗಲಿ.
ಯೋನ 3 : 9 (OCVKN)
ಹೀಗೆ ಮಾಡಿದರೆ, ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ಅನುಕಂಪದಿಂದ ತಮ್ಮ ಉಗ್ರಕೋಪವನ್ನು ತಡೆದು, ನಾವು ನಾಶವಾಗದೆ ಉಳಿಸುವರೇನೋ, ಯಾರು ಬಲ್ಲರು?”
ಯೋನ 3 : 10 (OCVKN)
ಆಗ ದೇವರು, ನಿನೆವೆಯವರು ತಮ್ಮ ದುರ್ಮಾರ್ಗವನ್ನು ಬಿಟ್ಟು ತಿರುಗಿಕೊಂಡರೆಂದು ಕಂಡು, ತಾವು ವಿಧಿಸುವುದಾಗಿ ನುಡಿದ ವಿನಾಶವನ್ನು ಅವರ ಮೇಲೆ ಬರಮಾಡದೆ, ಅವರನ್ನು ಕನಿಕರಿಸಿದರು.
❮
❯
1
2
3
4
5
6
7
8
9
10