ಯೆಹೋಶುವ 15 : 1 (OCVKN)
ಯೆಹೂದ ಗೋತ್ರದವರಿಗೆ ಹಂಚಿಕೊಟ್ಟದ್ದು ಯೆಹೂದ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ವಿಭಾಗಿಸಿದ ಮೇರೆ ಯಾವುದೆಂದರೆ: ಕಟ್ಟಕಡೆಗಿರುವ ದಕ್ಷಿಣ ಕಡೆಗೆ ಎದೋಮಿನ ಮೇರೆಯಾದ ಚಿನ್ ಮರುಭೂಮಿಯ ದಕ್ಷಿಣ ಭಾಗ.
ಯೆಹೋಶುವ 15 : 2 (OCVKN)
ಲವಣ ಸಮುದ್ರದ ಕಡೆಯಲ್ಲಿ ದಕ್ಷಿಣ ಕಡೆಗಿರುವ ಕೊನೆಯಿಂದ,
ಯೆಹೋಶುವ 15 : 3 (OCVKN)
ಅಕ್ರಬ್ಬೀಮ್* ಅಕ್ರಬ್ಬೀಮ್ ಎಂದರೆ ಚೇಳುಗಳು ಎಂಬ ಕಣಿವೆಯ ದಕ್ಷಿಣಮಾರ್ಗವಾಗಿ ಚಿನಿಗೆ ಹೋಗುವದು. ಅಲ್ಲಿಂದ ದಕ್ಷಿಣದಲ್ಲಿರುವ ಕಾದೇಶ್ ಬರ್ನೇಯಕ್ಕೂ ಅಲ್ಲಿಂದ ಹೆಚ್ರೋನನಿಂದ ಅದ್ದಾರವರೆಗೂ ಮುಂದುವರೆದು ಅಲ್ಲಿ ತಿರಿಗಿಕೊಂಡು ಕರ್ಕದವರೆಗೂ ವಿಸ್ತರಿಸಿಕೊಂಡಿತ್ತು,
ಯೆಹೋಶುವ 15 : 4 (OCVKN)
ಅಲ್ಲಿಂದ ಈಜಿಪ್ಟನ ಅಚ್ಮೋನ ನದಿಗೆ ಬಂದು ಮೆಡಿಟೆರಿಯನ್ ಸಮುದ್ರದವರೆಗೆ ಹೋಗಿ ಸೇರುವುದು. ಇದೇ ಯೆಹೂದದ ದಕ್ಷಿಣ ಮೇರೆ.
ಯೆಹೋಶುವ 15 : 5 (OCVKN)
ಅದರ ಪೂರ್ವದ ಮೇರೆ, ಯೊರ್ದನ್ ನದಿ ಕೊನೆಯ ಮಟ್ಟಿಗಿರುವ ಲವಣ ಸಮುದ್ರವು. ಉತ್ತರ ಕಡೆಗೆ ಯೊರ್ದನ್ ನದಿ ಮೇರೆ ಕೊನೆ ಹತ್ತಿರ ಸಮುದ್ರದ ಮುಖದ್ವಾರದಿಂದ ಇತ್ತು;
ಯೆಹೋಶುವ 15 : 6 (OCVKN)
ಅಲ್ಲಿಂದ ಬೇತ್ ಹೊಗ್ಲಾಕ್ಕೂ, ಅಲ್ಲಿಂದ ಉತ್ತರಕ್ಕಿರುವ ಬೇತ್ ಅರಾಬನ್ನು ದಾಟಿ, ರೂಬೇನನ ಮಗ ಬೋಹನನ ಬಂಡೆಯ ವರೆಗೆ ಇತ್ತು.
ಯೆಹೋಶುವ 15 : 7 (OCVKN)
ಅಲ್ಲಿಂದ ಆಕೋರ್ ತಗ್ಗನ್ನು ಬಿಟ್ಟು ದೆಬೀರಿಗೂ ಉತ್ತರಕ್ಕೆ ನದಿಗೆ ತಿರುಗಿಕೊಂಡು ದಕ್ಷಿಣದಲ್ಲಿರುವ ಅದುಮೀಮಿನ ದಿಬ್ಬೆಗೆ ಎದುರಾಗಿರುವ ಗಿಲ್ಗಾಲಿಗೂ, ಅಲ್ಲಿಂದ ಏನ್ ಷೆಮೆಷ್ ಎಂಬ ಬುಗ್ಗೆಗೂ, ಅಲ್ಲಿಂದ ಏನ್ ರೋಗೆಲ್‌ವರೆಗೂ ಇತ್ತು.
ಯೆಹೋಶುವ 15 : 8 (OCVKN)
ಅಲ್ಲಿಂದ ಯೆಬೂಸಿಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣಮಾರ್ಗವಾಗಿ ಹಿನ್ನೋಮ್ ತಗ್ಗನ್ನು ದಾಟಿ, ಉತ್ತರಕ್ಕಿರುವ ರೆಫಾಯಿಮ್ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕೆ ಬೆನ್ ಹಿನ್ನೋಮನ ತಗ್ಗಿನ ಮುಂದಿರುವ ಬೆಟ್ಟದ ಶಿಖರದವರೆಗೂ ಹೋಗುತ್ತದೆ.
ಯೆಹೋಶುವ 15 : 9 (OCVKN)
ಆ ಬೆಟ್ಟದ ಶಿಖರದಿಂದ ನೆಫ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣಗಳಿಗೂ ಅಲ್ಲಿಂದ ಕಿರ್ಯತ್ ಯಾರೀಮ್ ಆದ ಬಾಲಾ ಎಂಬ ಊರಿನವರೆಗೆ ಹೋಗುತ್ತದೆ.
ಯೆಹೋಶುವ 15 : 10 (OCVKN)
ಬಾಲಾದಿಂದ ಪಶ್ಚಿಮಕ್ಕಿರುವ ಸೇಯೀರ್ ಬೆಟ್ಟವನ್ನು ಸುತ್ತಿ, ಅಲ್ಲಿಂದ ಕೆಸಾಲೋನಿನ ಯಾರೀಮ್ ಬೆಟ್ಟದ ಉತ್ತರಕ್ಕೂ ಅಲ್ಲಿಂದ ಬೇತ್ ಷೆಮೆಷ್ ಕಡೆಗೆ ಇಳಿದು ತಿಮ್ನಾಗೆ ಹೋಯಿತು.
ಯೆಹೋಶುವ 15 : 11 (OCVKN)
ಅಲ್ಲಿಂದ ಉತ್ತರಕ್ಕಿರುವ ಎಕ್ರೋನಿನ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೂ, ಅಲ್ಲಿಂದ ಬಾಲಾ ಬೆಟ್ಟವನ್ನು ದಾಟಿ ಯಬ್ನೆಯೇಲಿಗೆ ಹೊರಟು ಸಮುದ್ರ ತೀರದಲ್ಲಿ ಮುಗಿಯುತ್ತದೆ.
ಯೆಹೋಶುವ 15 : 12 (OCVKN)
ಅದು ಪಶ್ಚಿಮದ ಮೇರೆಯ ಮೆಡಿಟರೇನಿಯನ್ ಮಹಾಸಾಗರವಾಗಿದೆ. ಇದೇ ಯೆಹೂದ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸುತ್ತಲಿರುವ ಮೇರೆ.
ಯೆಹೋಶುವ 15 : 13 (OCVKN)
ಇದಲ್ಲದೆ ಯೆಹೋಶುವನು ಯೆಹೋವ ದೇವರ ಅಪ್ಪಣೆಯ ಪ್ರಕಾರ ಯೆಫುನ್ನೆಯ ಮಗ ಕಾಲೇಬನಿಗೆ ಅನಾಕನ ತಂದೆಯ ಕಿರ್ಯತ್ ಅರ್ಬ ಎಂಬ ಹೆಬ್ರೋನನ್ನು ಯೆಹೂದನ ಮಕ್ಕಳ ನಡುವೆ ಸೊತ್ತಾಗಿ ಕೊಟ್ಟನು.
ಯೆಹೋಶುವ 15 : 14 (OCVKN)
ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ, ಅಹೀಮನ್, ತಲ್ಮೈರನ್ನು ಹೊರಡಿಸಿಬಿಟ್ಟನು.
ಯೆಹೋಶುವ 15 : 15 (OCVKN)
ಕಾಲೇಬನು ಅಲ್ಲಿಂದ ಹೊರಟು, ಕಿರ್ಯತ್ ಸೇಫೆರ್ ಎಂದು ಅನ್ನಿಸಿಕೊಳ್ಳುತ್ತಿದ್ದ ದೆಬೀರಿನ ವಾಸಿಗಳ ವಿರೋಧವಾಗಿ ಹೋದನು.
ಯೆಹೋಶುವ 15 : 16 (OCVKN)
ಅಲ್ಲಿ ಕಾಲೇಬನು, “ಕಿರ್ಯತ್ ಸೇಫೆರನ್ನು ದಾಳಿಮಾಡಿ ತೆಗೆದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ,” ಎಂದು ಹೇಳಿದ್ದನು.
ಯೆಹೋಶುವ 15 : 17 (OCVKN)
ಆಗ ಕಾಲೇಬನ ತಮ್ಮನಾದ ಕೆನಾಜನ ಮಗನಾದ ಒತ್ನಿಯೇಲನು ಅದನ್ನು ಹಿಡಿದನು. ಅನಂತರ ಕಾಲೇಬನು ತನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಅವನಿಗೆ ಮದುವೆ ಮಾಡಿಕೊಟ್ಟನು.
ಯೆಹೋಶುವ 15 : 18 (OCVKN)
ಒಂದು ದಿನ ಅಕ್ಷಾ ಒತ್ನಿಯೇಲನೊಂದಿಗೆ ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಇನ್ನೂ ಒಂದು ಹೊಲವನ್ನು ಕೇಳುವುದಕ್ಕೆ ಅವನನ್ನು ಪ್ರೇರೇಪಿಸಿ, ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳಿಗೆ, “ನಿನಗೆ ಏನು ಬೇಕು?” ಎಂದನು.
ಯೆಹೋಶುವ 15 : 19 (OCVKN)
ಅದಕ್ಕೆ ಅವಳು ಅವನಿಗೆ, “ನನಗೆ ಒಂದು ಸಹಾಯಮಾಡಬೇಕು. ಮೊದಲು ದಕ್ಷಿಣ ಹೊಲವನ್ನು ಕೊಟ್ಟೆ; ನೀರಿನ ಬುಗ್ಗೆಗಳನ್ನು ಸಹ ನೀನು ನನಗೆ ಕೊಡು,” ಎಂದಳು. ಆಗ ಕಾಲೇಬನು ಅವಳಿಗೆ ಮೇಲಿನ ಹಾಗೂ ಕೆಳಗಿನ ನೀರಿನ ಬುಗ್ಗೆಗಳನ್ನು ಕೊಟ್ಟನು.
ಯೆಹೋಶುವ 15 : 20 (OCVKN)
ಯೆಹೂದ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸೊತ್ತಿನ ವಿವರ:
ಯೆಹೋಶುವ 15 : 21 (OCVKN)
ದಕ್ಷಿಣದ ಕಟ್ಟಕಡೆಗಿರುವ ಎದೋಮಿನ ಮೇರೆಗೆ ಸರಿಯಾಗಿ ಯೆಹೂದ ಗೋತ್ರಕ್ಕೆ ಇರುವ ಪಟ್ಟಣಗಳು. ಅವು: ಕಬ್ಜಯೇಲ್, ಏದೆರ್, ಯಾಗೂರ್,
ಯೆಹೋಶುವ 15 : 22 (OCVKN)
ಕೀನಾ, ದೀಮೋನಾ, ಅದಾದಾ,
ಯೆಹೋಶುವ 15 : 23 (OCVKN)
ಕೆದೆಷ್, ಹಾಚೋರ್, ಇತ್ನಾನ್,
ಯೆಹೋಶುವ 15 : 24 (OCVKN)
ಜೀಫ್, ಟೆಲೆಮ್, ಬೆಯಾಲೋತ್,
ಯೆಹೋಶುವ 15 : 25 (OCVKN)
ಹಾಚೋರ್ ಹದತ್ತಾ, ಕಿರ್ಯೋತ್ ಹೆಚ್ರೋನ್, ಎಂಬುವ ಹಾಚೋರ್,
ಯೆಹೋಶುವ 15 : 26 (OCVKN)
ಅಮಾಮ್, ಶೆಮ, ಮೋಲಾದ,
ಯೆಹೋಶುವ 15 : 27 (OCVKN)
ಹಜರ್ ಗದ್ದಾ, ಹೆಷ್ಮೋನ್, ಬೇತ್ ಪೆಲೆಟ್,
ಯೆಹೋಶುವ 15 : 28 (OCVKN)
ಹಚರ್ ಷೂವಾಲ್, ಬೇರ್ಷೆಬ, ಬಿಜ್ಯೋತ್ಯಾ,
ಯೆಹೋಶುವ 15 : 29 (OCVKN)
ಬಾಲಾ, ಇಯೀಮ್, ಎಚೆಮ್,
ಯೆಹೋಶುವ 15 : 30 (OCVKN)
ಎಲ್ತೋಲದ್, ಕೆಸೀಲ್, ಹೊರ್ಮಾ,
ಯೆಹೋಶುವ 15 : 31 (OCVKN)
ಚಿಕ್ಲಗ್, ಮದ್ಮನ್ನಾ, ಸನ್ಸನ್ನಾ,
ಯೆಹೋಶುವ 15 : 32 (OCVKN)
ಲೆಬಾವೋತ್, ಶಿಲ್ಹೀಮ್, ಆಯಿನ್, ರಿಮ್ಮೋನ್ ಎಂಬವುಗಳೇ ಪಟ್ಟಣಗಳೆಲ್ಲಾ ಇಪ್ಪತ್ತೊಂಬತ್ತು ಮತ್ತು ಅವುಗಳ ಗ್ರಾಮಗಳು.
ಯೆಹೋಶುವ 15 : 33 (OCVKN)
ಪಶ್ಚಿಮದ ತಗ್ಗಿನ ದೇಶ ಎಷ್ಟಾವೋಲ್, ಚೊರ್ಗಾ, ಅಶ್ಣಾ,
ಯೆಹೋಶುವ 15 : 34 (OCVKN)
ಜಾನೋಹ, ಏಂಗನ್ನೀಮ್, ತಪ್ಪೂಹ, ಏನಾಮ್,
ಯೆಹೋಶುವ 15 : 35 (OCVKN)
ಯರ್ಮೂತ್, ಅದುಲ್ಲಾಮ್, ಸೋಕೋ, ಅಜೇಕಾ,
ಯೆಹೋಶುವ 15 : 36 (OCVKN)
ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
ಯೆಹೋಶುವ 15 : 37 (OCVKN)
ಚೆನಾನ್, ಹದಾಷಾ, ಮಿಗ್ದಲ್ಗಾದ್,
ಯೆಹೋಶುವ 15 : 38 (OCVKN)
ದಿಲಾನ್, ಮಿಚ್ಪೆ, ಯೊಕ್ತೇಲ್,
ಯೆಹೋಶುವ 15 : 39 (OCVKN)
ಲಾಕೀಷ್, ಬೊಚ್ಕತ್, ಎಗ್ಲೋನ್,
ಯೆಹೋಶುವ 15 : 40 (OCVKN)
ಕಬ್ಬೋನ್, ಲಹ್ಮಾಸ್, ಕಿತ್ಲೀಷ್,
ಯೆಹೋಶುವ 15 : 41 (OCVKN)
ಗೆದೇರೋತ್, ಬೇತ್‌ದಾಗೋನ್, ನಾಮಾ, ಮಕ್ಕೇದಾ, ಎಂಬ ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳು.
ಯೆಹೋಶುವ 15 : 42 (OCVKN)
ಇದಲ್ಲದೆ ಲಿಬ್ನಾ, ಎತೆರ್, ಆಷಾನ್,
ಯೆಹೋಶುವ 15 : 43 (OCVKN)
ಇಪ್ತಾಹ, ಅಶ್ಣಾ, ನೆಜೀಬ್,
ಯೆಹೋಶುವ 15 : 44 (OCVKN)
ಕೆಯೀಲಾ, ಅಕ್ಜೀಬ್, ಮಾರೇಷಾ, ಎಂಬ ಒಂಬತ್ತು ಪಟ್ಟಣಗಳೂ ಅವುಗಳ ಗ್ರಾಮಗಳು.
ಯೆಹೋಶುವ 15 : 45 (OCVKN)
ಎಕ್ರೋನ್ ಅದರ ಪಟ್ಟಣಗಳು ಗ್ರಾಮಗಳು ಸಹ.
ಯೆಹೋಶುವ 15 : 46 (OCVKN)
ಎಕ್ರೋನಿನ ಪಶ್ಚಿಮ ಸಮುದ್ರದವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳು.
ಯೆಹೋಶುವ 15 : 47 (OCVKN)
ಅಷ್ಡೋದ್ ಪಟ್ಟಣ ಮತ್ತು ಅದರ ಸುತ್ತಲಿನ ಪಟ್ಟಣಗಳೂ ಗ್ರಾಮಗಳೂ, ಗಾಜಾ, ಅದರ ಪಟ್ಟಣಗಳು, ಅದರ ಗ್ರಾಮಗಳು. ಈಜಿಪ್ಟಿನ ಕಲ್ಲಿನ ನಾಲೆ, ಮೆಡಿಟೆರಿಯನ್ ಸಮುದ್ರ, ಅದರ ಮೇರೆ ಇವುಗಳವರೆಗೂ ಇತ್ತು.
ಯೆಹೋಶುವ 15 : 48 (OCVKN)
ಬೆಟ್ಟಗಳಲ್ಲಿರುವ ಪ್ರದೇಶಗಳು: ಶಾಮೀರ್, ಯತ್ತೀರ್, ಸೋಕೋ,
ಯೆಹೋಶುವ 15 : 49 (OCVKN)
ದನ್ನಾ, ದೆಬೀರ್ ಎಂಬ ಕಿರ್ಯತ್ ಸನ್ನಾ,
ಯೆಹೋಶುವ 15 : 50 (OCVKN)
ಅನಾಬ್, ಎಷ್ಟೆಮೋ, ಅನೀಮ್,
ಯೆಹೋಶುವ 15 : 51 (OCVKN)
ಗೋಷೆನ್, ಹೋಲೋನ್ ಮತ್ತು ಗಿಲೋ ಎಂಬ ಹನ್ನೊಂದು ಪಟ್ಟಣಗಳು ಅವುಗಳ ಗ್ರಾಮಗಳು.
ಯೆಹೋಶುವ 15 : 52 (OCVKN)
ಅರಬ್, ರೂಮಾ ರೂಮಾ ಅಥವಾ ದೂಮಾ , ಎಷಾನ್,
ಯೆಹೋಶುವ 15 : 53 (OCVKN)
ಯಾನೂಮ್, ಬೇತ್ ತಪ್ಪೂಹ, ಅಫೇಕಾ,
ಯೆಹೋಶುವ 15 : 54 (OCVKN)
ಹುಮ್ಟಾ, ಹೆಬ್ರೋನೆಂಬ ಕಿರ್ಯತ್ ಅರ್ಬ, ಚೀಯೋರ್ ಎಂಬ ಒಂಬತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳು.
ಯೆಹೋಶುವ 15 : 55 (OCVKN)
ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ,
ಯೆಹೋಶುವ 15 : 56 (OCVKN)
ಇಜ್ರೆಯೇಲ್, ಯೊಗ್ದೆಯಾಮ್, ಜಾನೋಹ,
ಯೆಹೋಶುವ 15 : 57 (OCVKN)
ಕಯಿನ್, ಗಿಬೆಯ, ತಿಮ್ನಾ ಎಂಬ ಹತ್ತು ಪಟ್ಟಣಗಳು, ಅವುಗಳ ಗ್ರಾಮಗಳು.
ಯೆಹೋಶುವ 15 : 58 (OCVKN)
ಹಲ್ಹೂಲ್, ಬೇತ್ ಚೂರ್, ಗೆದೋರ್,
ಯೆಹೋಶುವ 15 : 59 (OCVKN)
ಮಾರಾತ್, ಬೇತ್ ಅನೋತ್, ಎಲ್ಟೆಕೋನ್ ಎಂಬ ಆರು ಪಟ್ಟಣಗಳು, ಅವುಗಳ ಗ್ರಾಮಗಳು.
ಯೆಹೋಶುವ 15 : 60 (OCVKN)
ಕಿರ್ಯತ್ ಯಾರೀಮ್ ಎಂಬ ಕಿರ್ಯತ್ ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.
ಯೆಹೋಶುವ 15 : 61 (OCVKN)
ಮರುಭೂಮಿಯಲ್ಲಿರುವ ಬೇತ್ ಅರಾಬಾ, ಮಿದ್ದೀನ್, ಸೆಕಾಕಾ,
ಯೆಹೋಶುವ 15 : 62 (OCVKN)
ನಿಬ್ಷಾನ್, ಉಪ್ಪಿನ ಪಟ್ಟಣವು ಮತ್ತು ಏನ್ಗೆದಿ ಎಂಬ ಪಟ್ಟಣಗಳನ್ನು ಒಳಗೊಂಡ ಆರು ಪಟ್ಟಣಗಳು ಅವುಗಳ ಗ್ರಾಮಗಳು.
ಯೆಹೋಶುವ 15 : 63 (OCVKN)
ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೆಹೂದ ಗೋತ್ರದವರಿಂದ ಹೊರಡಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಈ ದಿವಸದವರೆಗೂ ಯೆಬೂಸಿಯರು ಯೆಹೂದ ಗೋತ್ರದವರ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57 58 59 60 61 62 63