ಯೆಹೋಶುವ 16 : 1 (OCVKN)
ಮನಸ್ಸೆ ಹಾಗೂ ಎಫ್ರಾಯೀಮ್ ಪಾಲು ಯೋಸೇಫನ ಮಕ್ಕಳಿಗೆ ಚೀಟು ಬಿದ್ದ ಪ್ರಕಾರ ಉಂಟಾದ ಸೊತ್ತಿನ ವಿವರ: ಯೆರಿಕೋವಿನ ಬಳಿಯಲ್ಲಿರುವ ಯೊರ್ದನ್ ನದಿಯಿಂದ ಪೂರ್ವದಲ್ಲಿರುವ ಯೆರಿಕೋವಿನ ಜಲದವರೆಗೂ ಮತ್ತು ಬೇತೇಲಿನ ಬೆಟ್ಟಗಳವರೆಗೂ ಇರುವ ಮರುಭೂಮಿಯ ಮಾರ್ಗವಾಗಿ ಹೋಗಿತ್ತು.
ಯೆಹೋಶುವ 16 : 2 (OCVKN)
ಬೇತೇಲಿನಿಂದ ಅಂದರೆ ಲೂಜ್ ಅಲ್ಲಿಂದ ಅರ್ಕಿಯ ಮೇರೆಗಳಾದ ಅಟಾರೋತನ್ನು ದಾಟಿ,
ಯೆಹೋಶುವ 16 : 3 (OCVKN)
ಪಶ್ಚಿಮಕ್ಕೆ ಯಫ್ಲೇಟ್ಯರ ಮೇರೆಗೂ ಕೆಳಗಡೆಯಾದ ಬೇತ್ ಹೋರೋನ್ ಮೇರೆಯವರೆಗೂ ಅಲ್ಲಿಂದ ಗೆಜೆರಿನವರೆಗೂ ಹೋಗಿ ಮೆಡಿಟೆರಿಯನ್ ಸಮುದ್ರ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.
ಯೆಹೋಶುವ 16 : 4 (OCVKN)
ಹೀಗೆ ಇದನ್ನು ಯೋಸೇಫನ ಮಕ್ಕಳಾದ ಮನಸ್ಸೆ ಎಫ್ರಾಯೀಮರು ತಮಗೆ ಸೊತ್ತಾಗಿ ತೆಗೆದುಕೊಂಡರು.
ಯೆಹೋಶುವ 16 : 5 (OCVKN)
ಅವರ ಕುಟುಂಬಗಳ ಪ್ರಕಾರ ಎಫ್ರಾಯೀಮ್ ಗೋತ್ರದ ಪ್ರದೇಶ ಹೀಗಿತ್ತು: ಪೂರ್ವದಿಕ್ಕಿನ ಅಟಾರೋತ್ ಅದ್ದಾರಿನಿಂದ ಪ್ರಾರಂಭಿಸಿ, ಮೇಲಿನ ಬೇತ್ ಹೋರೋನಿನವರೆಗೂ ಇತ್ತು.
ಯೆಹೋಶುವ 16 : 6 (OCVKN)
ಅಲ್ಲಿಂದ ಮೆಡಿಟೆರಿಯನ್ ಸಮುದ್ರದ ಪಶ್ಚಿಮ ಮೇರೆಗೆ ಮಿಕ್ಮೆತಾತಿನಿಂದ ಉತ್ತರಕ್ಕೆ ಹೊರಟು ಪೂರ್ವಕ್ಕೆ ತಾನತ್ ಶೀಲೋವಿಗೆ ತಿರುಗಿ ಯಾನೋಹಕ್ಕೆ ಪೂರ್ವದ ಕಡೆಗೆ ಹಾದು ಹೋಗಿತ್ತು.
ಯೆಹೋಶುವ 16 : 7 (OCVKN)
ಯಾನೋಹದಿಂದ ಅಟಾರೋತ್‌ಗೂ ನಾರಾ ಎಂಬ ಊರುಗಳ ಮೇಲೆ ಇಳಿದು ಯೆರಿಕೋವಿನ ಬಳಿಯಲ್ಲಿ ಬಂದು ಯೊರ್ದನ್ ನದಿಗೆ ಮುಗಿಯುವುದು.
ಯೆಹೋಶುವ 16 : 8 (OCVKN)
ತಪ್ಪೂಹದಿಂದ ಪಶ್ಚಿಮದ ಮೇರೆಯೂ ಕಾನಾ ನದಿಗೆ ಹೋಗಿ ಮೆಡಿಟೆರೆನಿಯನ್ ಸಮುದ್ರದವರೆಗೆ ಮುಗಿಯುವುದು. ಇದು ಎಫ್ರಾಯೀಮನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರವೇ ದೊರೆತ ಸೊತ್ತು.
ಯೆಹೋಶುವ 16 : 9 (OCVKN)
ಇದಲ್ಲದೆ ಎಫ್ರಾಯೀಮ್ ಹಾಗೂ ಮನಸ್ಸೆ ಗೋತ್ರದವರ ಮಧ್ಯೆ ಕೊಡಲಾದ ಎಲ್ಲಾ ಪಟ್ಟಣಗಳೂ ಅವುಗಳ ಗ್ರಾಮಗಳೂ ಪ್ರತ್ಯೇಕವಾಗಿ ಕೊಡಲಾಗಿತ್ತು.
ಯೆಹೋಶುವ 16 : 10 (OCVKN)
ಅವರು ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ, ಎಫ್ರಾಯೀಮ್ಯರ ಮಧ್ಯದಲ್ಲಿ ಕಾನಾನ್ಯರು ಈವರೆಗೂ ಅವರಲ್ಲಿ ದಾಸತ್ವದಲ್ಲಿದ್ದುಕೊಂಡು ಕೆಲಸಮಾಡುವವರಾಗಿದ್ದಾರೆ.

1 2 3 4 5 6 7 8 9 10