ನ್ಯಾಯಸ್ಥಾಪಕರು 10 : 1 (OCVKN)
ತೋಲ ಅಬೀಮೆಲೆಕನ ತರುವಾಯ ಇಸ್ಸಾಕಾರನ ಕುಲದ ದೋದೋವಿನ ಮಗನಾದ ಪೂವನ ಮಗನಾದ ತೋಲನು ಇಸ್ರಾಯೇಲರನ್ನು ರಕ್ಷಿಸುವುದಕ್ಕೆ ಎದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸಮಾಡಿದನು.
ನ್ಯಾಯಸ್ಥಾಪಕರು 10 : 2 (OCVKN)
ಇಸ್ರಾಯೇಲಿಗೆ ಇಪ್ಪತ್ಮೂರು ವರುಷ ನ್ಯಾಯ ತೀರಿಸಿದ ತರುವಾಯ, ಅವನು ಮರಣಹೊಂದಿ ಶಾಮೀರಲ್ಲಿ ಸಮಾಧಿಯಾದನು.
ನ್ಯಾಯಸ್ಥಾಪಕರು 10 : 3 (OCVKN)
ಯಾಯೀರ್ ಅವನ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಾಯೇಲರನ್ನು ಇಪ್ಪತ್ತೆರಡು ವರುಷ ನ್ಯಾಯತೀರಿಸಿದನು.
ನ್ಯಾಯಸ್ಥಾಪಕರು 10 : 4 (OCVKN)
ಅವನಿಗೆ ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುವ ಮೂವತ್ತು ಮಂದಿ ಪುತ್ರರು ಇದ್ದರು. ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳು ಅವರ ಅಧಿಕಾರದಲ್ಲಿದ್ದವು. ಅವುಗಳಿಗೆ ಈ ದಿನದವರೆಗೂ ಹವೋತ್ ಯಾಯೀರ್ ಎಂಬ ಹೆಸರಿದೆ.
ನ್ಯಾಯಸ್ಥಾಪಕರು 10 : 5 (OCVKN)
ಯಾಯೀರನು ಮರಣಹೊಂದಿ, ಕಾಮೋನಿನಲ್ಲಿ ಸಮಾಧಿಯಾದನು.
ನ್ಯಾಯಸ್ಥಾಪಕರು 10 : 6 (OCVKN)
ಯೆಫ್ತಾಹ ಇಸ್ರಾಯೇಲರು ಪುನಃ ಯೆಹೋವ ದೇವರ ಮುಂದೆ ಕೆಟ್ಟತನವನ್ನು ಮಾಡಿ, ಬಾಳನನ್ನೂ, ಅಷ್ಟೋರೆತನ್ನೂ, ಅರಾಮ್ ದೇಶದ ದೇವರುಗಳನ್ನೂ, ಸೀದೋನಿನ ದೇವರುಗಳನ್ನೂ, ಮೋವಾಬಿನ ದೇವರುಗಳನ್ನೂ, ಅಮ್ಮೋನಿಯರ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸಿದರು.
ನ್ಯಾಯಸ್ಥಾಪಕರು 10 : 7 (OCVKN)
ಅವರು ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ಯೆಹೋವ ದೇವರು ಇಸ್ರಾಯೇಲ್ಯರ ಮೇಲೆ ಕೋಪವುಳ್ಳವರಾಗಿ ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಮಾರಿಬಿಟ್ಟರು.
ನ್ಯಾಯಸ್ಥಾಪಕರು 10 : 8 (OCVKN)
ಇವರು ಆ ವರ್ಷ ಮೊದಲುಗೊಂಡು ಹದಿನೆಂಟು ವರ್ಷ ಯೊರ್ದನಿಗೆ ಆಚೆ ಗಿಲ್ಯಾದಿನಲ್ಲಿ ಅಮೋರಿಯರ ದೇಶದಲ್ಲಿರುವ ಇಸ್ರಾಯೇಲರನ್ನೆಲ್ಲಾ ಬಾಧಿಸಿ ಕುಂದಿಸಿದರು.
ನ್ಯಾಯಸ್ಥಾಪಕರು 10 : 9 (OCVKN)
ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದ ಹಾಗೂ ಬೆನ್ಯಾಮೀನರಿಗೆ ವಿರೋಧವಾಗಿಯೂ, ಎಫ್ರಾಯೀಮರ ಮನೆಗೆ ವಿರೋಧವಾಗಿಯೂ ಯುದ್ಧಮಾಡುವುದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹು ಸಂಕಟವಾಯಿತು.
ನ್ಯಾಯಸ್ಥಾಪಕರು 10 : 10 (OCVKN)
ಆಗ ಇಸ್ರಾಯೇಲರು ಯೆಹೋವ ದೇವರಿಗೆ ಕೂಗಿ, “ನಮ್ಮ ದೇವರನ್ನು ಬಿಟ್ಟು, ಬಾಳನನ್ನು ಸೇವಿಸಿದ್ದರಿಂದ, ನಾವು ನಿಮಗೆ ವಿರೋಧವಾಗಿ ಪಾಪಮಾಡಿದೆವು,” ಎಂದರು.
ನ್ಯಾಯಸ್ಥಾಪಕರು 10 : 11 (OCVKN)
ಯೆಹೋವ ದೇವರು ಇಸ್ರಾಯೇಲರಿಗೆ, “ನಾನು ನಿಮ್ಮನ್ನು ಈಜಿಪ್ಟ್, ಅಮೋರಿಯ, ಅಮ್ಮೋನಿಯ, ಫಿಲಿಷ್ಟಿಯ,
ನ್ಯಾಯಸ್ಥಾಪಕರು 10 : 12 (OCVKN)
ಸೀದೋನ್ಯ, ಅಮಾಲೇಕ್ಯ, ಮಾವೋನ್ಯ ಈ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ; ನಾನು ಅವುಗಳಿಂದ ನಿಮ್ಮನ್ನು ತಪ್ಪಿಸಿಬಿಡಲಿಲ್ಲವೋ?
ನ್ಯಾಯಸ್ಥಾಪಕರು 10 : 13 (OCVKN)
ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸುತ್ತಾ ಬಂದಿರಿ; ಆದ್ದರಿಂದ ಇನ್ನು ನಾನು ನಿಮ್ಮನ್ನು ರಕ್ಷಿಸುವುದಿಲ್ಲ.
ನ್ಯಾಯಸ್ಥಾಪಕರು 10 : 14 (OCVKN)
ನೀವು ಹೋಗಿ ನಿಮಗೆ ನೀವೇ ಆಯ್ದುಕೊಂಡ ದೇವರುಗಳಿಗೆ ಕೂಗಿರಿ, ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ,” ಎಂದರು.
ನ್ಯಾಯಸ್ಥಾಪಕರು 10 : 15 (OCVKN)
ಇಸ್ರಾಯೇಲರು ಯೆಹೋವ ದೇವರಿಗೆ, “ನಾವು ಪಾಪಮಾಡಿದೆವು. ನೀವು ನಿಮಗೆ ಒಳ್ಳೆಯದಾಗಿ ತೋರುವುದನ್ನೆಲ್ಲಾ ನಮಗೆ ಮಾಡಿರಿ. ಆದರೆ ಈ ಹೊತ್ತು ನಮ್ಮನ್ನು ರಕ್ಷಿಸಿರಿ,” ಎಂದು ಬೇಡಿಕೊಂಡರು.
ನ್ಯಾಯಸ್ಥಾಪಕರು 10 : 16 (OCVKN)
ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು, ಯೆಹೋವ ದೇವರನ್ನು ಸೇವಿಸಿದರು. ಆಗ ಯೆಹೋವ ದೇವರು ಇಸ್ರಾಯೇಲಿನ ಕಷ್ಟಕ್ಕೋಸ್ಕರ ಮನಸ್ಸಿನಲ್ಲಿ ಬಹಳ ನೊಂದುಕೊಂಡರು.
ನ್ಯಾಯಸ್ಥಾಪಕರು 10 : 17 (OCVKN)
ಅಮ್ಮೋನಿಯರು ಏಕವಾಗಿ ಕೂಡಿಕೊಂಡು, ಗಿಲ್ಯಾದಿನಲ್ಲಿ ಪಾಳೆಯಮಾಡಿಕೊಂಡರು. ಆದರೆ ಇಸ್ರಾಯೇಲರು ಏಕವಾಗಿ ಕೂಡಿ, ಮಿಚ್ಪೆಯಲ್ಲಿ ಪಾಳೆಯಮಾಡಿಕೊಂಡರು.
ನ್ಯಾಯಸ್ಥಾಪಕರು 10 : 18 (OCVKN)
ಆಗ ಗಿಲ್ಯಾದಿನ ಜನರೂ, ಪ್ರಧಾನರೂ ಒಬ್ಬರಿಗೊಬ್ಬರು, “ಯಾವನು ಅಮ್ಮೋನಿಯರ ಮೇಲೆ ಯುದ್ಧಮಾಡಲಾರಂಭಿಸುವನೋ, ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ತಲೆಯಾಗಿರುವನು,” ಎಂದು ಮಾತನಾಡಿಕೊಂಡರು.
❮
❯
1
2
3
4
5
6
7
8
9
10
11
12
13
14
15
16
17
18