ನ್ಯಾಯಸ್ಥಾಪಕರು 2 : 1 (OCVKN)
{ಬೋಕಿಮ್‌ನಲ್ಲಿ ಯೆಹೋವ ದೇವರ ದೂತ } ಯೆಹೋವ ದೇವರ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು, “ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ, ನಿಮ್ಮ ತಂದೆಗಳಿಗೆ ಆಣೆ ಇಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು.
ನ್ಯಾಯಸ್ಥಾಪಕರು 2 : 2 (OCVKN)
‘ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ, ಅವರ ಬಲಿಪೀಠಗಳನ್ನು ಕೆಡಿವಿಬಿಡಿರಿ,’ ಎಂದು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಏಕೆ ಮಾಡಿದಿರಿ?
ನ್ಯಾಯಸ್ಥಾಪಕರು 2 : 3 (OCVKN)
ಆದ್ದರಿಂದ, ‘ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವುದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು. ಅವರ ದೇವರುಗಳು ನಿಮಗೆ ಉರುಲಾಗುವುವು,’ ಎಂದು ನಾನು ಹೇಳಿದ್ದೆನು.”
ನ್ಯಾಯಸ್ಥಾಪಕರು 2 : 4 (OCVKN)
ಯೆಹೋವ ದೇವರ ದೂತನು ಈ ಮಾತುಗಳನ್ನು ಇಸ್ರಾಯೇಲರೆಲ್ಲರಿಗೆ ಹೇಳುವಾಗ, ಜನರು ಗಟ್ಟಿಯಾಗಿ ಅತ್ತರು.
ನ್ಯಾಯಸ್ಥಾಪಕರು 2 : 5 (OCVKN)
ಆ ಸ್ಥಳಕ್ಕೆ ಬೋಕೀಮ್* ಬೋಕೀಮ್ ಎಂದರೆ ಅಳುವವರು ಎಂಬ ಹೆಸರಿಟ್ಟು, ಅಲ್ಲಿ ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸಿದರು.
ನ್ಯಾಯಸ್ಥಾಪಕರು 2 : 6 (OCVKN)
ಅವಿಧೇಯತೆ ಮತ್ತು ಸೋಲು ಯೆಹೋಶುವನು ಜನರನ್ನು ಕಳುಹಿಸಿಬಿಟ್ಟಾಗ, ಇಸ್ರಾಯೇಲರು ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ತಮ್ಮ ತಮ್ಮ ಬಾಧ್ಯತೆಗಳಿಗೆ ಹೋದರು.
ನ್ಯಾಯಸ್ಥಾಪಕರು 2 : 7 (OCVKN)
ಆದರೆ ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವ ದೇವರು ಇಸ್ರಾಯೇಲರಿಗೋಸ್ಕರ ಮಾಡಿದ ಎಲ್ಲ ಮಹತ್ಕಾರ್ಯಗಳನ್ನು ಅರಿತಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವ ದೇವರನ್ನು ಸೇವಿಸಿದರು.
ನ್ಯಾಯಸ್ಥಾಪಕರು 2 : 8 (OCVKN)
ಆದರೆ ನೂನನ ಮಗನೆಂಬ ಯೆಹೋವ ದೇವರ ಸೇವಕನಾದ ಯೆಹೋಶುವನು ನೂರಹತ್ತು ವರ್ಷ ಪ್ರಾಯದವನಾಗಿ ಮರಣಹೊಂದಿದನು.
ನ್ಯಾಯಸ್ಥಾಪಕರು 2 : 9 (OCVKN)
ಅವನನ್ನು ಎಫ್ರಾಯೀಮನ ಬೆಟ್ಟದಲ್ಲಿ ಗಾಷ್ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್ ಹೆರೆಸ್‌ನಲ್ಲಿ ತಿಮ್ನತ್ ಹೆರೆಸ್ ಇನ್ನೊಂದು ಹೆಸರು ಸೆರಾ ಹೂಳಿಟ್ಟರು.
ನ್ಯಾಯಸ್ಥಾಪಕರು 2 : 10 (OCVKN)
ಅವನ ಕಾಲದವರೆಲ್ಲರೂ ಪಿತೃಗಳ ಬಳಿಗೆ ಸೇರಿದ ಮೇಲೆ, ಯೆಹೋವ ದೇವರನ್ನೂ ಅವರು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.
ನ್ಯಾಯಸ್ಥಾಪಕರು 2 : 11 (OCVKN)
ಇಸ್ರಾಯೇಲರು ಯೆಹೋವ ದೇವರ ಮುಂದೆ ಕೆಟ್ಟತನ ಮಾಡಿ, ಬಾಳನನ್ನು ಸೇವಿಸಿ,
ನ್ಯಾಯಸ್ಥಾಪಕರು 2 : 12 (OCVKN)
ತಮ್ಮ ತಂದೆಗಳನ್ನು ಈಜಿಪ್ಟಿನಿಂದ ಹೊರಡಿಸಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು, ತಮ್ಮ ಸುತ್ತಲಿರುವ ಜನಾಂಗಗಳ ದೇವರುಗಳ ಹಿಂದೆ ಹೋಗಿ, ಅವುಗಳಿಗೆ ಅಡ್ಡಬಿದ್ದು, ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದರು.
ನ್ಯಾಯಸ್ಥಾಪಕರು 2 : 13 (OCVKN)
ಅವರು ಯೆಹೋವ ದೇವರನ್ನು ಬಿಟ್ಟು, ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.
ನ್ಯಾಯಸ್ಥಾಪಕರು 2 : 14 (OCVKN)
ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿಗೆ ವಿರೋಧವಾಗಿ ಉರಿಗೊಂಡು, ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಇನ್ನು ಮೇಲೆ ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ, ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟರು.
ನ್ಯಾಯಸ್ಥಾಪಕರು 2 : 15 (OCVKN)
ಯೆಹೋವ ದೇವರು ಹೇಳಿದ ಹಾಗೆಯೂ ಕರ್ತನು ಅವರಿಗೆ ಆಣೆಯಿಟ್ಟ ಹಾಗೆಯೂ ಅವರು ಎಲ್ಲಿ ಹೋದರೂ ಅಲ್ಲಿ ಕೇಡು ಆಗುವುದಕ್ಕೆ ಯೆಹೋವ ದೇವರ ಕೈ ಅವರಿಗೆ ವಿರೋಧವಾಗಿತ್ತು.
ನ್ಯಾಯಸ್ಥಾಪಕರು 2 : 16 (OCVKN)
ಆದರೂ ಯೆಹೋವ ದೇವರು ಅವರನ್ನು ಕೊಳ್ಳೆಹೊಡೆಯುವವರ ಕೈಯಿಂದ ಬಿಡಿಸುವದಕ್ಕೋಸ್ಕರ ನ್ಯಾಯಾಧಿಪತಿಗಳನ್ನು ಎಬ್ಬಿಸಿದರು.
ನ್ಯಾಯಸ್ಥಾಪಕರು 2 : 17 (OCVKN)
ಅವರು ತಮ್ಮ ನ್ಯಾಯಾಧಿಪತಿಗಳ ಮಾತನ್ನು ಕೇಳದೆ, ಅನ್ಯದೇವರುಗಳ ಹಿಂದೆ ಹೋಗಿ, ಅವುಗಳಿಗೆ ಅಡ್ಡಬಿದ್ದು, ತಮ್ಮ ಪಿತೃಗಳು ಯೆಹೋವ ದೇವರ ಆಜ್ಞೆಗಳನ್ನು ಕೇಳಿ ನಡೆದ ಮಾರ್ಗವನ್ನು ಶೀಘ್ರವಾಗಿ ತೊರೆದುಬಿಟ್ಟರು. ಅವರು ಮಾಡಿದ ಪ್ರಕಾರ ಮಾಡಲಿಲ್ಲ.
ನ್ಯಾಯಸ್ಥಾಪಕರು 2 : 18 (OCVKN)
ಯೆಹೋವ ದೇವರು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿದಾಗ, ಯೆಹೋವ ದೇವರು ನ್ಯಾಯಾಧಿಪತಿಯ ಸಂಗಡ ಇದ್ದು, ಆ ನ್ಯಾಯಾಧಿಪತಿಯ ದಿವಸಗಳಲ್ಲೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ತಪ್ಪಿಸಿ ರಕ್ಷಿಸುತ್ತಿದ್ದರು. ಏಕೆಂದರೆ ಅವರು ತಮ್ಮನ್ನು ಬಾಧಿಸಿ, ಶ್ರಮೆಪಡಿಸುವವರ ನಿಮಿತ್ತ ಗೋಳಾಡಿದ್ದರಿಂದ ಯೆಹೋವ ದೇವರು ಕನಿಕರಪಟ್ಟರು.
ನ್ಯಾಯಸ್ಥಾಪಕರು 2 : 19 (OCVKN)
ಆ ನ್ಯಾಯಾಧಿಪತಿಯ ಮರಣದ ನಂತರ, ಅವರು ತಿರುಗಿ ಮಾರ್ಗತಪ್ಪಿ, ಅನ್ಯದೇವರುಗಳನ್ನು ಹಿಂಬಾಲಿಸಿ ಹೋಗಿ, ಅವುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದು, ತಮ್ಮ ಹಿರಿಯರಿಗಿಂತ ಅಧಿಕ ಭ್ರಷ್ಟರಾದರು. ಅವರು ತಮ್ಮ ದುರ್ಮಾರ್ಗಗಳನ್ನೂ ಹಟಮಾರಿತನವನ್ನೂ ಬಿಡಲೇ ಇಲ್ಲ.
ನ್ಯಾಯಸ್ಥಾಪಕರು 2 : 20 (OCVKN)
ಆದ್ದರಿಂದ ಯೆಹೋವ ದೇವರು ಇಸ್ರಾಯೇಲರ ಮೇಲೆ ಕೋಪದಿಂದ ಉರಿಗೊಂಡು, “ಈ ಜನಾಂಗವು ನಾನು ಅವರ ಪಿತೃಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ,
ನ್ಯಾಯಸ್ಥಾಪಕರು 2 : 21 (OCVKN)
ನಾನು ಸಹ ಇನ್ನು ಮೇಲೆ ಯೆಹೋಶುವನು ಮರಣಹೊಂದುವಾಗ ಉಳಿಸಿದ ಜನಾಂಗಗಳಲ್ಲಿ ಒಬ್ಬರನ್ನಾದರೂ ಇವರ ಮುಂದೆ ಹೊರಡಿಸಿಬಿಡುವುದಿಲ್ಲ,” ಎಂದರು.
ನ್ಯಾಯಸ್ಥಾಪಕರು 2 : 22 (OCVKN)
ಇಸ್ರಾಯೇಲರು ತಮ್ಮ ತಂದೆಗಳು ಕೈಗೊಂಡು ನಡೆದ ಯೆಹೋವ ದೇವರ ಮಾರ್ಗದಲ್ಲಿ ತಾವು ಕೈಗೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ,
ನ್ಯಾಯಸ್ಥಾಪಕರು 2 : 23 (OCVKN)
ಯೆಹೋವ ದೇವರು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ, ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದರು.

1 2 3 4 5 6 7 8 9 10 11 12 13 14 15 16 17 18 19 20 21 22 23