ನ್ಯಾಯಸ್ಥಾಪಕರು 5 : 1 (OCVKN)
ನ್ಯಾಯಸ್ಥಾಪಕರು 5 : 2 (OCVKN)
ಆ ದಿವಸದಲ್ಲಿ ದೆಬೋರಳೂ, ಅಬೀನೋವಮನ ಮಗ ಬಾರಾಕನೂ ಹಾಡಿದ್ದೇನೆಂದರೆ: “ಇಸ್ರಾಯೇಲಿನ ನಾಯಕರು ಮುನ್ನಡೆದಾಗ, ಜನರು ಸ್ವಇಚ್ಛೆಯಿಂದ ಅವರನ್ನು ಹಿಂಬಾಲಿಸಿದಾಗ ಯೆಹೋವ ದೇವರನ್ನು ಸ್ತುತಿಸಿರಿ!
ನ್ಯಾಯಸ್ಥಾಪಕರು 5 : 3 (OCVKN)
“ಅರಸರೇ ಕೇಳಿರಿ, ಪ್ರಭುಗಳೇ ಕೇಳಿರಿ, ಕಿವಿಗೊಡಿರಿ; ನಾನು, ನಾನೇ ಯೆಹೋವ ದೇವರಿಗೆ ಹಾಡುವೆನು. ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತುತಿಗೀತೆ ಹಾಡುವೆನು.
ನ್ಯಾಯಸ್ಥಾಪಕರು 5 : 4 (OCVKN)
“ಯೆಹೋವ ದೇವರೇ, ನೀವು ಸೇಯೀರಿನಿಂದ ಹೊರಟು, ಎದೋಮಿನ ಹೊಲದಿಂದ ಮುನ್ನಡೆಯುವಾಗ, ಭೂಮಿ ನಡುಗಿತು. ಆಕಾಶವು ಸಹ ಸುರಿಸಿತು. ಮೇಘಗಳು ಸಹ ನೀರು ಸುರಿಸಿದವು.
ನ್ಯಾಯಸ್ಥಾಪಕರು 5 : 5 (OCVKN)
ಯೆಹೋವ ದೇವರ ಮುಂದೆ ಬೆಟ್ಟಗಳು ಕಂಪಿಸಿದವು. ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮುಂದೆ ಸೀನಾಯಿ ಪರ್ವತವು ಸಹ ಕಂಪಿಸಿತು.
ನ್ಯಾಯಸ್ಥಾಪಕರು 5 : 6 (OCVKN)
“ಅನಾತನ ಮಗ ಶಮ್ಗರನ ಕಾಲದಲ್ಲಿಯೂ, ಯಾಯೇಲಳ ದಿವಸಗಳಲ್ಲಿಯೂ ಹೆದ್ದಾರಿಯ ಸಂಚಾರ ನಿಂತುಹೋಯಿತು. ಪ್ರಯಾಣಿಕರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು.
ನ್ಯಾಯಸ್ಥಾಪಕರು 5 : 7 (OCVKN)
ದೆಬೋರಳಾದ ನಾನು ಏಳುವವರೆಗೂ, ಇಸ್ರಾಯೇಲಿನಲ್ಲಿ ತಾಯಿಯಾಗಿ ನಾನು ಏಳುವವರೆಗೂ ಇಸ್ರಾಯೇಲಿನ ಹಳ್ಳಿಗಳ ನಿವಾಸಿಗಳು ಯುದ್ಧಮಾಡಲಿಲ್ಲ.
ನ್ಯಾಯಸ್ಥಾಪಕರು 5 : 8 (OCVKN)
ಅವರು ಹೊಸ ದೇವರುಗಳನ್ನು ಆಯ್ದುಕೊಂಡರು. ಆಗ ಯುದ್ಧವು ಬಾಗಿಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಲವತ್ತು ಸಾವಿರ ಸೈನಿಕರಲ್ಲಿ ಗುರಾಣಿಯೂ, ಕಠಾರಿಯೂ ಇರಲಿಲ್ಲ.
ನ್ಯಾಯಸ್ಥಾಪಕರು 5 : 9 (OCVKN)
ನಾನು ಇಸ್ರಾಯೇಲ್ ನಾಯಕರೊಂದಿಗೂ ಸ್ವೇಚ್ಛೆಯಿಂದ ಬಂದ ಜನರೊಂದಿಗೆ ನನ್ನ ಹೃದಯವಿದೆ. ಯೆಹೋವ ದೇವರನ್ನು ಸ್ತುತಿಸಿರಿ.
ನ್ಯಾಯಸ್ಥಾಪಕರು 5 : 10 (OCVKN)
“ಬಿಳಿ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ರತ್ನಗಂಬಳಿಗಳ ಮೇಲೆ ಕುಳಿತಿರುವವರೇ, ಮಾರ್ಗದಲ್ಲಿ ನಡೆಯುವವರೇ, ಗಾನಮಾಡಿರಿ.
ನ್ಯಾಯಸ್ಥಾಪಕರು 5 : 11 (OCVKN)
ನೀರು ಸೇದುವ ಸ್ಥಳಗಳ ಹತ್ತಿರ ಗಾಯಕರ ಶಬ್ದದಿಂದ ಯೆಹೋವ ದೇವರ ನೀತಿಸಾಧನೆಗಳನ್ನು ವರ್ಣಿಸುತ್ತಾರೆ. ಇಸ್ರಾಯೇಲಿನಲ್ಲಿ ಅವರ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ಮಹತ್ಕಾರ್ಯಗಳನ್ನು ತಿರುಗಿ ಪ್ರಕಟಿಸುವರು. “ಆಗ ಯೆಹೋವ ದೇವರ ಜನರು ಪಟ್ಟಣದ ಬಾಗಿಲುಗಳಿಗೆ ಇಳಿದು ಬರುವರು.
ನ್ಯಾಯಸ್ಥಾಪಕರು 5 : 12 (OCVKN)
‘ಎಚ್ಚರವಾಗು, ಎಚ್ಚರವಾಗು, ದೆಬೋರಳೇ, ಎಚ್ಚರವಾಗು, ಎಚ್ಚರವಾಗಿ ಹಾಡನ್ನು ಹಾಡು; ಬಾರಾಕನೇ, ಏಳು; ಅಬೀನೋವಮನ ಮಗನೇ, ನಿನ್ನನ್ನು ಸೆರೆಹಿಡಿದವರನ್ನು ಸೆರೆಯಾಗಿ ನಡೆಸು.’
ನ್ಯಾಯಸ್ಥಾಪಕರು 5 : 13 (OCVKN)
“ಆಗ ಉಳಿದವನನ್ನು ಅವರು ಜನರಲ್ಲಿ ಶ್ರೇಷ್ಠರಾದವರ ಮೇಲೆ ಆಳುವಂತೆ ಮಾಡಿದರು. ಯೆಹೋವ ದೇವರ ಜನರು ನನ್ನ ಸಹಾಯಕ್ಕಾಗಿ ಬಂದು, ಪರಾಕ್ರಮಶಾಲಿಗಳ ವಿರುದ್ಧ ಯುದ್ಧಮಾಡಿದರು.
ನ್ಯಾಯಸ್ಥಾಪಕರು 5 : 14 (OCVKN)
ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯೀಮಿನಿಂದ ಉಂಟಾಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾಮೀನನು ಮಾಕೀರನಲ್ಲಿಂದ ಅಧಿಪತಿಗಳೂ, ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವವರೂ ಬಂದರು.
ನ್ಯಾಯಸ್ಥಾಪಕರು 5 : 15 (OCVKN)
ಇಸ್ಸಾಕಾರನ ಪ್ರಧಾನರು ದೆಬೋರಳ ಸಂಗಡ ಇದ್ದರು. ಹೌದು, ಇಸ್ಸಾಕಾರನ ಗೋತ್ರದವರು ಬಾರಾಕನ ಹಿಂದೆ ಅವನ ಕಟ್ಟಳೆಯ ಪ್ರಕಾರ, ಕಾಲುನಡಿಗೆಯಾಗಿ ಕಣಿವೆಯಲ್ಲಿ ನಡೆದರು. ರೂಬೇನನ ಕಡೆಯವರು ತಮ್ಮ ಹೃದಯಗಳನ್ನು ಮಹಾ ಪರಿಶೋಧನೆ ಮಾಡಿಕೊಂಡರು.
ನ್ಯಾಯಸ್ಥಾಪಕರು 5 : 16 (OCVKN)
ಮಂದೆಗಳ ಕೂಗನ್ನು ಕೇಳಿ, ನೀನು ಕುರಿ ಹಟ್ಟಿಗಳ ಬಳಿಯಲ್ಲಿ ಇದ್ದದ್ದೇನು? ರೂಬೇನ್ಯರ ನಡುವೆ ಹೃದಯದ ಮಹಾ ಪರಿಶೋಧನೆಗಳು ಇದ್ದವು.
ನ್ಯಾಯಸ್ಥಾಪಕರು 5 : 17 (OCVKN)
ಗಿಲ್ಯಾದನು ಯೊರ್ದನ್ ನದಿಯ ಆಚೆ ವಾಸಿಸಿದನು. ದಾನನು ಹಡಗುಗಳಲ್ಲಿ ನಿಂತದ್ದೇನು? ಆಶೇರನು ಸಮುದ್ರದ ದಡದಲ್ಲಿದ್ದು, ತನ್ನ ರೇವುಗಳ ಬಳಿಯಲ್ಲಿ ವಾಸಿಸಿದನು.
ನ್ಯಾಯಸ್ಥಾಪಕರು 5 : 18 (OCVKN)
ಜೆಬುಲೂನ್ಯರು ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಕೊಡುವ ಜನರಾಗಿದ್ದರು. ನಫ್ತಾಲಿಯೂ ಸಹ ಹೊಲದ ಎತ್ತರವಾದ ಸ್ಥಳಗಳಲ್ಲಿ ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಕೊಡುವ ಜನರಾಗಿದ್ದರು.
ನ್ಯಾಯಸ್ಥಾಪಕರು 5 : 19 (OCVKN)
“ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸಮೀಪವಾದ ತಾನಕದಲ್ಲಿ ಯುದ್ಧಮಾಡಿದರು. ಅವರು ಬೆಳ್ಳಿ ದ್ರವ್ಯಗಳನ್ನು ತೆಗೆದುಕೊಳ್ಳಲಿಲ್ಲ.
ನ್ಯಾಯಸ್ಥಾಪಕರು 5 : 20 (OCVKN)
ಆಕಾಶದಲ್ಲಿ ಇರುವವುಗಳು ಯುದ್ಧ ಮಾಡಿದವು. ನಕ್ಷತ್ರಗಳು ತಮ್ಮ ಓಟಗಳಲ್ಲಿ ಸೀಸೆರನಿಗೆ ವಿರೋಧವಾಗಿ ಯುದ್ಧ ಮಾಡಿದವು.
ನ್ಯಾಯಸ್ಥಾಪಕರು 5 : 21 (OCVKN)
ಕೀಷೋನ್ ನದಿಯು, ಆ ಹಳೆಯದಾದ ಕೀಷೋನ್ ನದಿಯು ಅವರನ್ನು ಬಡಿದುಕೊಂಡು ಹೋಯಿತು. ನನ್ನ ಪ್ರಾಣವೇ, ನೀನು ಬಲವನ್ನು ತುಳಿದು ಹಾಕಿದೆ.
ನ್ಯಾಯಸ್ಥಾಪಕರು 5 : 22 (OCVKN)
ಆಗ ನೆಲವನ್ನು ಘಟ್ಟಿಸಿ ಓಡುವ ಅವನ ಬಲವಾದ ಕುದುರೆಗಳ ಮೆಟ್ಟಿನಿಂದ ಗೊರಸುಗಳು ಸೀಳಿಹೋದವು.
ನ್ಯಾಯಸ್ಥಾಪಕರು 5 : 23 (OCVKN)
ಯೆಹೋವ ದೇವರ ದೂತನು ಹೀಗೆ ಹೇಳುತ್ತಾನೆ, ‘ನೀವು ಮೆರೋಜನ್ನು ಶಪಿಸಿರಿ. ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ, ಏಕೆಂದರೆ ಅವರು ಯೆಹೋವ ದೇವರ ಸಹಾಯಕ್ಕೂ, ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಯೆಹೋವ ದೇವರ ಸಹಾಯಕ್ಕೂ ಬಾರದೆ ಹೋದರು.’
ನ್ಯಾಯಸ್ಥಾಪಕರು 5 : 24 (OCVKN)
“ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳು ಆಶೀರ್ವಾದ ಹೊಂದಿದವಳು. ಗುಡಾರದಲ್ಲಿ ವಾಸಿಸುವ ಹೌದು, ಅವಳೇ ಸ್ತ್ರೀಯರೊಳಗೆ ಅಧಿಕ ಆಶೀರ್ವಾದ ಹೊಂದಿದವಳು.
ನ್ಯಾಯಸ್ಥಾಪಕರು 5 : 25 (OCVKN)
ಅವನು ನೀರನ್ನು ಕೇಳಿದನು. ಅವಳು ಹಾಲು ಕೊಟ್ಟಳು; ಅಮೂಲ್ಯವಾದ ಬಟ್ಟಲಿನಲ್ಲಿ ಬೆಣ್ಣೆಯನ್ನು ತಂದಿಟ್ಟಳು.
ನ್ಯಾಯಸ್ಥಾಪಕರು 5 : 26 (OCVKN)
ತನ್ನ ಕೈಯಲ್ಲಿ ಮೊಳೆಯನ್ನೂ, ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆಯನ್ನೂ ತೆಗೆದುಕೊಂಡಳು. ಸುತ್ತಿಗೆಯಿಂದ ಸೀಸೆರನನ್ನು ಅವಳು ಹೊಡೆದಳು. ಅವಳು ಅವನ ತಲೆಯನ್ನು ತಿವಿದು ಹೊಡೆದಳು. ಅವನ ತಲೆಯನ್ನು ಹೊಡೆದು ಬಿಟ್ಟಳು.
ನ್ಯಾಯಸ್ಥಾಪಕರು 5 : 27 (OCVKN)
ಅವಳ ಕಾಲುಗಳ ಹತ್ತಿರ ಮುದುರಿ ಬಿದ್ದು ಮಲಗಿದನು. ಅವಳ ಕಾಲುಗಳ ಹತ್ತಿರ ಬಾಗಿ ಬಿದ್ದನು. ಎಲ್ಲಿ ಬಾಗಿ ಬಿದ್ದನೋ, ಅಲ್ಲಿಯೇ ಬಿದ್ದು ಮರಣಹೊಂದಿದನು.
ನ್ಯಾಯಸ್ಥಾಪಕರು 5 : 28 (OCVKN)
“ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿಯಿಂದ ಕೂಗಿದಳು, ‘ಅವನ ರಥವು ಬರುವುದಕ್ಕೆ ಇಷ್ಟು ತಡವಾದದ್ದೇನು? ಅವನ ರಥಗಳ ಗಾಲಿಗಳು ಹಿಂದುಳಿದಿರುವುದೇನು?’
ನ್ಯಾಯಸ್ಥಾಪಕರು 5 : 29 (OCVKN)
ಅದಕ್ಕೆ ಅವಳ ಜ್ಞಾನವುಳ್ಳ ಪ್ರಧಾನ ಸ್ತ್ರೀಯರು ಉತ್ತರಕೊಟ್ಟರು. ಅವಳೇ ತನಗೆ ಬದಲು ಮಾತು ಕೇಳಿಕೊಂಡಳು:
ನ್ಯಾಯಸ್ಥಾಪಕರು 5 : 30 (OCVKN)
‘ಅವರು ಓಡಲಿಲ್ಲವೋ? ಕೊಳ್ಳೆ ಹಂಚಿಕೊಳ್ಳಲಿಲ್ಲವೋ? ಒಬ್ಬೊಬ್ಬ ಸೈನಿಕನಿಗೆ ಒಂದೆರಡು ದಾಸಿಯರು ಸೀಸೆರನಿಗಾದರೋ ನಾನಾ ವರ್ಣವುಳ್ಳ ಬಟ್ಟೆಗಳು. ನಾನಾ ವರ್ಣವುಳ್ಳ ವಿಚಿತ್ರವಾಗಿ ಕಸೂತಿಹಾಕಿದ ಬಟ್ಟೆಗಳು, ವಿಚಿತ್ರವಾಗಿ ಕಸೂತಿಹಾಕಿದ ಒಂದೆರಡು ಬಟ್ಟೆಗಳೂ ಕೊಳ್ಳೆ ಹಿಡಿಯುವವರಿಗೆ ತಕ್ಕಂಥ ಕಂಠಮಾಲೆಗಳೂ ಸಿಕ್ಕಲಿಲ್ಲವೋ?’
ನ್ಯಾಯಸ್ಥಾಪಕರು 5 : 31 (OCVKN)
“ಯೆಹೋವ ದೇವರೇ, ಹೀಗೆಯೇ ನಿಮ್ಮ ಶತ್ರುಗಳೆಲ್ಲರೂ ನಾಶವಾಗಲಿ. ಆದರೆ ಅವರನ್ನು ಪ್ರೀತಿ ಮಾಡುವವರು ಪರಾಕ್ರಮದಿಂದ ಹೊರಡುವ ಸೂರ್ಯನ ಹಾಗೆಯೇ ಇರಲಿ.” ಅನಂತರ ದೇಶವು ನಲವತ್ತು ವರ್ಷ ವಿಶ್ರಾಂತಿಯಲ್ಲಿತ್ತು.
❮
❯