ಪ್ರಲಾಪಗಳು 1 : 1 (OCVKN)
ಜನಭರಿತವಾಗಿದ್ದ ನಗರಿಯು ಹೇಗೆ ಬರಿದಾಗಿ ಹೋಗಿದೆ! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ, ಈಗ ಹೇಗೆ ವಿಧವೆಯಾಗಿದ್ದಾಳೆ! ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ, ಹೇಗೆ ಈಗ ದಾಸಿಯಂತಾಗಿದ್ದಾಳೆ!
ಪ್ರಲಾಪಗಳು 1 : 2 (OCVKN)
ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ, ಆಕೆಯ ಕಣ್ಣೀರು, ಆಕೆಯ ಕೆನ್ನೆಗಳ ಮೇಲಿದೆ. ಆಕೆಯ ಎಲ್ಲಾ ಪ್ರಿಯರಲ್ಲಿ, ಆಕೆಯನ್ನು ಸಂತೈಸುವವರು ಒಬ್ಬರೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ, ಆಕೆಗೆ ವಂಚನೆಮಾಡಿ, ಆಕೆಗೆ ಶತ್ರುಗಳಾದರು.
ಪ್ರಲಾಪಗಳು 1 : 3 (OCVKN)
ಯೆಹೂದವೆಂಬಾಕೆಯು ಸಂಕಟದ ನಿಮಿತ್ತವೂ, ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋದಳು. ಆಕೆಯು ಬೇರೆ ಜನಾಂಗಗಳೊಳಗೆ ವಾಸಮಾಡುವವಳಾಗಿ, ವಿಶ್ರಾಂತಿಯನ್ನು ಕಾಣಳು. ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.
ಪ್ರಲಾಪಗಳು 1 : 4 (OCVKN)
ಚೀಯೋನಿನ ಮಾರ್ಗಗಳು ದುಃಖಿಸುತ್ತವೆ. ಏಕೆಂದರೆ ಆಕೆಯ ನಿರ್ಧರಿತ ಹಬ್ಬಗಳಿಗೆ ಯಾರೂ ಬರಲಿಲ್ಲ. ಆಕೆಯ ಎಲ್ಲಾ ಬಾಗಿಲುಗಳು ಹಾಳು ಬಿದ್ದಿವೆ. ಆಕೆಯ ಯಾಜಕರು ನರಳುತ್ತಾರೆ. ಆಕೆಯ ಕನ್ಯೆಯರು ದುಃಖಿಸುತ್ತಾರೆ. ಆಕೆಯು ಕಹಿ ವೇದನೆಯಲ್ಲಿದ್ದಾಳೆ.
ಪ್ರಲಾಪಗಳು 1 : 5 (OCVKN)
ಆಕೆಯ ವೈರಿಗಳು ಆಕೆಯ ಯಜಮಾನರಾಗಿದ್ದಾರೆ. ಆಕೆಯ ಶತ್ರುಗಳು ನೆಮ್ಮದಿಯಿಂದ ಇದ್ದಾರೆ. ಏಕೆಂದರೆ ಆಕೆಯ ಅನೇಕ ಪಾಪಗಳ ನಿಮಿತ್ತ ಯೆಹೋವ ದೇವರು ಆಕೆಯನ್ನು ಸಂಕಟಪಡಿಸಿದ್ದಾರೆ. ಆಕೆಯ ಮಕ್ಕಳು ಶತ್ರುವಿನ ಮುಂದೆ ಸೆರೆಗೆ ಹೋಗಿದ್ದಾರೆ.
ಪ್ರಲಾಪಗಳು 1 : 6 (OCVKN)
ಚೀಯೋನ್ ಪುತ್ರಿಯ ಎಲ್ಲಾ ವೈಭವವು ಅವಳನ್ನು ಬಿಟ್ಟುಹೋಯಿತು. ಅವಳ ಪ್ರಧಾನರು ಹುಲ್ಲುಗಾವಲು ಕಾಣದ ಜಿಂಕೆಗಳ ಹಾಗಾದರು, ಅವರು ಹಿಂದಟ್ಟುವವನ ಮುಂದೆ ತ್ರಾಣವಿಲ್ಲದವರ ಹಾಗೆ ಓಡಿಹೋದರು.
ಪ್ರಲಾಪಗಳು 1 : 7 (OCVKN)
ಯೆರೂಸಲೇಮು ಕಷ್ಟದ ಮತ್ತು ಸಂಕಟದ ದಿನಗಳಲ್ಲಿ ಪೂರ್ವದಿನಗಳಲ್ಲಿ ತನಗಿದ್ದ ಸಂಪತ್ತೆಲ್ಲವನ್ನು ಜ್ಞಾಪಕ ಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ, ಅವಳಿಗೆ ಯಾರೂ ಸಹಾಯ ಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ನಾಶನದ ವಿಷಯವಾಗಿ ಅಪಹಾಸ್ಯ ಮಾಡಿದರು.
ಪ್ರಲಾಪಗಳು 1 : 8 (OCVKN)
ಯೆರೂಸಲೇಮು ಘೋರ ಪಾಪಮಾಡಿದೆ. ಆದ್ದರಿಂದ ಅವಳು ಅಶುದ್ಧಳಾಗಿದ್ದಾಳೆ. ಅವಳನ್ನು ಸನ್ಮಾನಿಸಿದವರೆಲ್ಲರೂ, ಅವಳನ್ನು ಹೀನೈಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ. ಹೌದು, ಅವಳು ನರಳುತ್ತಾ ಹಿಂದಕ್ಕೆ ತಿರುಗುತ್ತಾಳೆ.
ಪ್ರಲಾಪಗಳು 1 : 9 (OCVKN)
ಅವಳ ಅಶುದ್ಧವು ಅವಳ ನೆರಿಗೆಗೆ ಅಂಟಿಕೊಂಡಿದೆ. ಅವಳು ತನ್ನ ಭವಿಷ್ಯವನ್ನು ಜ್ಞಾಪಕಮಾಡಿಕೊಳ್ಳುವುದಿಲ್ಲ. ಆದ್ದರಿಂದ ಅವಳು ಭಯಂಕರವಾಗಿ ಇಳಿದು ಬಂದಳು. ಅವಳನ್ನು ಆದರಿಸುವವರು ಯಾರೂ ಇಲ್ಲ. “ಓ ಯೆಹೋವ ದೇವರೇ, ನನ್ನ ಸಂಕಟವನ್ನು ನೋಡಿರಿ, ಶತ್ರುವು ಜಯಿಸಿದ್ದಾನೆ.”
ಪ್ರಲಾಪಗಳು 1 : 10 (OCVKN)
ವೈರಿಯು ಆಕೆಯ ಎಲ್ಲಾ ಬೊಕ್ಕಸಗಳ ಮೇಲೆ ತನ್ನ ಕೈಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರಬಾರದೆಂದು ನೀನು ಆಜ್ಞಾಪಿಸಿದ ಇತರ ಜನಾಂಗಗಳು, ತನ್ನ ಪರಿಶುದ್ಧ ಸ್ಥಳದಲ್ಲಿ ಸೇರುವುದನ್ನು ನೋಡಿದ್ದಾಳೆ.
ಪ್ರಲಾಪಗಳು 1 : 11 (OCVKN)
ಅವಳ ಜನರೆಲ್ಲರು ನರಳಾಡುತ್ತಾರೆ. ಅವರು ರೊಟ್ಟಿ ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು, ಅವರು ಆಹಾರಕ್ಕಾಗಿ ತಮ್ಮ ಬೊಕ್ಕಸಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ “ಯೆಹೋವ ದೇವರೇ, ನೋಡು, ಲಕ್ಷಿಸಿ; ಏಕೆಂದರೆ ನಾನು ಭ್ರಷ್ಠಳಾದೆನು.”
ಪ್ರಲಾಪಗಳು 1 : 12 (OCVKN)
ಹಾದು ಹೋಗುವವರೇ, ಇದು ನಿಮಗೆ ಏನೂ ಇಲ್ಲವೋ? ಸುತ್ತಲೂ ದೃಷ್ಟಿಸಿ ನೋಡಿರಿ. ಯೆಹೋವ ದೇವರ ಉಗ್ರಕೋಪದ ದಿನದಲ್ಲಿ ನನ್ನನ್ನು ಸಂಕಟ ಪಡಿಸಿದ ಇಂಥಾ ದುಃಖವು, ಯಾರಿಗಾದರೂ ಉಂಟೋ ನೋಡಿರಿ.
ಪ್ರಲಾಪಗಳು 1 : 13 (OCVKN)
ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿದ್ದಾನೆ. ಆತನು ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ, ಆತನು ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾರೆ. ಆತನು ನನ್ನನ್ನು ದಿನವೆಲ್ಲಾ ಹಾಳಾಗಿಯೂ, ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ.
ಪ್ರಲಾಪಗಳು 1 : 14 (OCVKN)
ನನ್ನ ಪಾಪಗಳು ನನಗೆ ನೊಗವಾಗಿ, ನನ್ನ ಕುತ್ತಿಗೆಯ ಮೇಲೆ ಅವು ಬಂದಿವೆ. ಕರ್ತದೇವರು ನನ್ನ ಶಕ್ತಿಯನ್ನು ಕುಂದಿಸಿದ್ದಾರೆ. ಯೆಹೋವ ದೇವರು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ, ಅವರನ್ನು ನಾನು ಎದುರಿಸಲಾರದಂತೆ ಮಾಡಿದ್ದಾರೆ.
ಪ್ರಲಾಪಗಳು 1 : 15 (OCVKN)
ಕರ್ತದೇವರು ನನ್ನ ಶೂರರನ್ನೆಲ್ಲಾ ತಿರಸ್ಕರಿಸಿದ್ದಾರೆ. ಅವರು ನನಗೆ ವಿರುದ್ಧ ಸೈನ್ಯವನ್ನು ಬರಮಾಡಿ, ನನ್ನ ಯುವಕರನ್ನು ಜಜ್ಜಿದ್ದಾರೆ. ಕರ್ತದೇವರು ಯೆಹೂದದ ಕನ್ಯೆಯನ್ನು ದ್ರಾಕ್ಷಿಯ ತೊಟ್ಟಿಯಂತೆ ತುಳಿದಿದ್ದಾರೆ.
ಪ್ರಲಾಪಗಳು 1 : 16 (OCVKN)
ಇವುಗಳ ನಿಮಿತ್ತ ನಾನು ಅಳುತ್ತೇನೆ. ನನ್ನ ಕಣ್ಣೀರು ಕಣ್ಣಿನಿಂದ ತುಂಬಿ ಹರಿಯುತ್ತದೆ. ಏಕೆಂದರೆ ನನ್ನನ್ನು ಆದರಿಸುವವರೂ, ನನ್ನ ಪ್ರಾಣವನ್ನು ಬದುಕಿಸುವ ಆದರಿಕರೂ ನನ್ನಿಂದ ದೂರವಾಗಿದ್ದಾರೆ. ನನ್ನ ಮಕ್ಕಳು ಹಾಳಾಗಿದ್ದಾರೆ. ಏಕೆಂದರೆ ನನ್ನ ಶತ್ರುವು ಜಯಿಸಿದ್ದಾನೆ.
ಪ್ರಲಾಪಗಳು 1 : 17 (OCVKN)
ಚೀಯೋನ್ ತನ್ನ ಕೈಗಳನ್ನು ಚಾಚುತ್ತಾಳೆ. ಅವಳನ್ನು ಆದರಿಸುವವನು ಒಬ್ಬನೂ ಇಲ್ಲ. ಯಾಕೋಬಿಗೆ ಸಂಬಂಧಿಸಿದ ಅವನ ವೈರಿಗಳು ಅವನ ಸುತ್ತಲೂ ಇರಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದಾರೆ. ಯೆರೂಸಲೇಮ್ ಅವರ ಮಧ್ಯದಲ್ಲಿ ಅಶುದ್ಧ ವಸ್ತುವಿನಂತಿದೆ.
ಪ್ರಲಾಪಗಳು 1 : 18 (OCVKN)
ಯೆಹೋವ ದೇವರು ನೀತಿವಂತನು. ಏಕೆಂದರೆ ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದೇನೆ. ಎಲ್ಲಾ ಜನರೇ ಕೇಳಿರಿ, ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ನನ್ನ ದುಃಖವನ್ನು ನೋಡಿರಿ. ನನ್ನ ಕನ್ಯೆಯರೂ, ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.
ಪ್ರಲಾಪಗಳು 1 : 19 (OCVKN)
ನಾನು ನನ್ನ ಪ್ರಿಯರನ್ನು ಕರೆದೆನು. ಆದರೆ ಅವರು ನನ್ನನ್ನು ಮೋಸಗೊಳಿಸಿದರು. ನನ್ನ ಯಾಜಕರು, ನನ್ನ ಹಿರಿಯರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ರೊಟ್ಟಿಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.
ಪ್ರಲಾಪಗಳು 1 : 20 (OCVKN)
ಯೆಹೋವ ದೇವರೇ ನೋಡು, ಏಕೆಂದರೆ ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನನ್ನೊಂದಿಗೆ ತಿರುಗಿಕೊಂಡಿದೆ. ಏಕೆಂದರೆ ನಾನು ಘೋರವಾಗಿ ಬಿದ್ದಿದ್ದೇನೆ. ಹೊರಗೆ ಖಡ್ಗದಿಂದ ಸಂಹಾರ, ಮನೆಯೊಳಗೆ ಮರಣ.
ಪ್ರಲಾಪಗಳು 1 : 21 (OCVKN)
ನಾನು ನರಳಾಡುವುದನ್ನು ಅವರು ಕೇಳಿದರೂ, ನನ್ನನ್ನು ಆದರಿಸಲು ಅಲ್ಲಿರಲಿಲ್ಲ. ನನ್ನ ಎಲ್ಲಾ ಶತ್ರುಗಳು ನನ್ನ ಕಷ್ಟದ ವಿಷಯವನ್ನು ಕೇಳಿದರು. ನೀವು ಹಾಗೆ ಮಾಡಿದಿರೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು, ಅವರು ನನ್ನ ಹಾಗೆಯೇ ಆಗುವರು.
ಪ್ರಲಾಪಗಳು 1 : 22 (OCVKN)
ಅವರ ಎಲ್ಲಾ ಕೆಟ್ಟತನವು ನಿನ್ನ ಮುಂದೆ ಇರಲಿ. ನನ್ನ ಎಲ್ಲಾ ದ್ರೋಹಗಳ ನಿಮಿತ್ತ, ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು. ಏಕೆಂದರೆ ನನ್ನ ನರಳಾಟವು ಅನೇಕವಾಗಿವೆ. ನನ್ನ ಹೃದಯವು ಮೂರ್ಛೆಗೊಂಡಿದೆ.

1 2 3 4 5 6 7 8 9 10 11 12 13 14 15 16 17 18 19 20 21 22