ಪ್ರಲಾಪಗಳು 2 : 1 (OCVKN)
ಕರ್ತದೇವರು ಹೇಗೆ ತಮ್ಮ ಕೋಪದ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದರು. ತನ್ನ ಕೋಪದ ದಿನದಲ್ಲಿ, ತನ್ನ ಪಾದಪೀಠವನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ.
ಪ್ರಲಾಪಗಳು 2 : 2 (OCVKN)
ಕರ್ತದೇವರು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾರೆ. ಯೆಹೂದದ ಪುತ್ರಿಯ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿ ಹಾಕಿದ್ದಾರೆ. ಅವರು ಅವುಗಳನ್ನು ನೆಲಸಮ ಮಾಡಿದ್ದಾರೆ. ಅವರು ಆಕೆಯ ರಾಜ್ಯವನ್ನೂ, ಪ್ರಭುಗಳನ್ನೂ ಅಗೌರವಿಸಿ ನೆಲಕ್ಕೆ ದಬ್ಬಿದ್ದಾರೆ.
ಪ್ರಲಾಪಗಳು 2 : 3 (OCVKN)
ಅವರು ತನ್ನ ತೀಕ್ಷ್ಣ ಕೋಪದಲ್ಲಿ ಇಸ್ರಾಯೇಲಿನ ಕೊಂಬುಗಳನ್ನೆಲ್ಲಾ ಮುರಿದು ಹಾಕಿದ್ದಾರೆ. ಅವರು ಶತ್ರುವಿನ ಎದುರಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡಿದ್ದಾರೆ. ತನ್ನ ಸುತ್ತಲೂ ಇರುವವರನ್ನು ದಹಿಸುವ ಬೆಂಕಿಯಂತೆ, ಅವರು ಯಾಕೋಬನಿಗೆ ವಿರುದ್ಧವಾಗಿ ದಹಿಸಿಬಿಟ್ಟಿದ್ದಾರೆ.
ಪ್ರಲಾಪಗಳು 2 : 4 (OCVKN)
ಅವರು ಶತ್ರುವಿನ ಹಾಗೆಯೇ ತನ್ನ ಬಿಲ್ಲನ್ನು ಬಗ್ಗಿಸಿದ್ದಾರೆ. ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು, ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾರೆ. ಅವರು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್ ಪುತ್ರಿಯ ಡೇರೆಯಲ್ಲಿ ಸುರಿದಿದ್ದಾರೆ.
ಪ್ರಲಾಪಗಳು 2 : 5 (OCVKN)
ಕರ್ತದೇವರು ಶತ್ರುವಿನಂತೆ ಆಗಿ, ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾರೆ. ಕರ್ತದೇವರು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾರೆ. ಯೆಹೂದದ ದುಃಖವನ್ನೂ, ಪ್ರಲಾಪವನ್ನೂ ಹೆಚ್ಚಿಸಿದ್ದಾರೆ.
ಪ್ರಲಾಪಗಳು 2 : 6 (OCVKN)
ಅವರು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾರೆ. ಅವರು ತನ್ನ ಸಭಾ ಸ್ಥಾನಗಳನ್ನು ನಾಶಮಾಡಿದ್ದಾರೆ. ಯೆಹೋವ ದೇವರು ಚೀಯೋನಿಗೆ ಪವಿತ್ರ ಹಬ್ಬಗಳನ್ನೂ, ಸಬ್ಬತ್ ದಿನಗಳನ್ನೂ ಮರೆತುಬಿಡುವಂತೆ ಮಾಡಿದ್ದಾರೆ. ತನ್ನ ಕೋಪದ ಉರಿಯಲ್ಲಿ ಅರಸನನ್ನೂ, ಯಾಜಕನನ್ನೂ ತುಚ್ಛೀಕರಿಸಿದ್ದಾರೆ.
ಪ್ರಲಾಪಗಳು 2 : 7 (OCVKN)
ಕರ್ತದೇವರು ತನ್ನ ಬಲಿಪೀಠವನ್ನು ತಳ್ಳಿಬಿಟ್ಟಿದ್ದಾರೆ. ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯ ಪಡಿಸಿದ್ದಾನೆ. ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ. ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ, ಅವರು ಯೆಹೋವ ದೇವರು ಆಲಯದಲ್ಲಿ ಶಬ್ದ ಮಾಡಿದ್ದಾರೆ.
ಪ್ರಲಾಪಗಳು 2 : 8 (OCVKN)
ಯೆಹೋವ ದೇವರು ಚೀಯೋನಿನ ಗೋಡೆಯನ್ನು ನಾಶಮಾಡಬೇಕೆಂದು ಉದ್ದೇಶಿಸಿದ್ದಾರೆ. ಅಳತೆಯ ಗೆರೆಯನ್ನು ಎಳೆದಿದ್ದಾರೆ. ತನ್ನ ಕೈಯನ್ನು ಕೆಡಿಸುವುದರಿಂದ ಹಿಂದೆಗೆಯಲಿಲ್ಲ. ಆದ್ದರಿಂದ ಕಲ್ಲಿನ ಪ್ರಾಕಾರವನ್ನು ಮತ್ತು ಗೋಡೆಯನ್ನು ಗೋಳಾಡುವಂತೆ ಆತನು ಮಾಡಿದ್ದಾನೆ. ಅವೆರಡೂ ಜೊತೆಯಾಗಿ ಕುಸಿದು ಹೋಗಿವೆ.
ಪ್ರಲಾಪಗಳು 2 : 9 (OCVKN)
ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ. ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಅವಳ ಪ್ರಭುಗಳು ಇತರ ಜನಾಂಗಗಳ ಮಧ್ಯೆ ಇರುವರು. ಇನ್ನು ದೈವನಿಯಮವು ನಿಂತುಹೋಗಿವೆ. ಆಕೆಯ ಪ್ರವಾದಿಗಳು ಸಹ ಯೆಹೋವ ದೇವರಿಂದ ದರ್ಶನವನ್ನು ಕಂಡುಕೊಳ್ಳುವುದಿಲ್ಲ.
ಪ್ರಲಾಪಗಳು 2 : 10 (OCVKN)
ಚೀಯೋನಿನ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಶಬ್ದವಾಗಿದ್ದಾರೆ. ಅವರು ತಮ್ಮ ತಲೆಗಳ ಮೇಲೆ ಧೂಳು ಹಾಕಿಕೊಂಡಿದ್ದಾರೆ. ಅವರು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ. ಯೆರೂಸಲೇಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬಗ್ಗಿಸಿಕೊಂಡಿದ್ದಾರೆ.
ಪ್ರಲಾಪಗಳು 2 : 11 (OCVKN)
ನನ್ನ ಕಣ್ಣುಗಳು ಕಣ್ಣೀರಿನಿಂದ ಕುಂದಿ ಹೋಗುತ್ತವೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನೆಲದ ಮೇಲೆ ಹರಡಿದೆ. ಏಕೆಂದರೆ ನನ್ನ ಜನರು ನಾಶವಾಗಿದ್ದಾರೆ. ಮಕ್ಕಳೂ ಶಿಶುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.
ಪ್ರಲಾಪಗಳು 2 : 12 (OCVKN)
ಅವರು ನಗರದ ಬೀದಿಗಳಲ್ಲಿ ಗಾಯಪಟ್ಟವರ ಹಾಗೆ ಮೂರ್ಛೆ ಹೋದಾಗ, ತಮ್ಮ ತಾಯಂದಿರ ಎದೆಯಲ್ಲಿ ಪ್ರಾಣ ಸುರಿದಾಗ, “ತಿನ್ನಲಿಕ್ಕೆ ರೊಟ್ಟಿಯೂ ದ್ರಾಕ್ಷಾರಸವೂ ಎಲ್ಲಿ?” ಎಂದು ತಮ್ಮ ತಾಯಂದಿರಿಗೆ ಕೇಳುತ್ತಾರೆ.
ಪ್ರಲಾಪಗಳು 2 : 13 (OCVKN)
ಯೆರೂಸಲೇಮಿನ ಪುತ್ರಿಯೇ, ನಾನು ಯಾವುದನ್ನು ನಿನಗೆ ಸಾಕ್ಷಿಯನ್ನಾಗಿಡಲಿ? ಯಾವುದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಕನ್ಯೆಯೇ, ನಿನ್ನನ್ನು ಆದರಿಸುವವರು ಯಾರು?
ಪ್ರಲಾಪಗಳು 2 : 14 (OCVKN)
ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮತ್ತು ಮೂರ್ಖತನದ ದರ್ಶನಗಳನ್ನು ನೋಡಿದ್ದಾರೆ. ಅವರು ನಿನ್ನ ಬಂಧನವನ್ನು ನೀಗಿಸುವುದಕ್ಕಾಗಿ ನಿನ್ನ ಪಾಪವನ್ನು ಬಯಲಿಗೆ ತರಲಿಲ್ಲ. ಆದರೆ ನಿನಗಾಗಿ ಸುಳ್ಳಿನ ಪ್ರವಾದನೆಗಳನ್ನು ಕೊಟ್ಟು ಗಡಿಪಾರು ಮಾಡುವುದಕ್ಕೆ ಕಾರಣರಾಗಿದ್ದಾರೆ.
ಪ್ರಲಾಪಗಳು 2 : 15 (OCVKN)
ದಾರಿಯಲ್ಲಿ ಹೋಗುವವರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ. ಅವರು ಯೆರೂಸಲೇಮಿನ ಪುತ್ರಿಯ ವಿಷಯದಲ್ಲಿ ಸಿಳ್ಳುಹಾಕಿ, ತಲೆಯಾಡಿಸಿ ಆ ಮನುಷ್ಯರು ಕರೆಯುತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ, ಸರ್ವಭೂಮಿಯ ಸಂತೋಷವೂ ಆಗಿರುವ ನಗರಿಯು ಇದೆಯೋ?
ಪ್ರಲಾಪಗಳು 2 : 16 (OCVKN)
ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿತೆರೆದಿದ್ದಾರೆ. “ನಾವು ಆಕೆಯನ್ನು ನುಂಗಿಬಿಟ್ಟೆವು. ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ. ಅದನ್ನು ನಾವು ಕಣ್ಣಾರೆ ಕಂಡಿದ್ದೇವೆ,” ಎಂದು ಅವರು ಕೊಚ್ಚಿಕೊಳ್ಳುತ್ತಾರೆ.
ಪ್ರಲಾಪಗಳು 2 : 17 (OCVKN)
ಯೆಹೋವ ದೇವರು ತಾವು ಸಂಕಲ್ಪಿಸಿದ್ದನ್ನು ಮಾಡಿದ್ದಾರೆ. ಅವರು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತಮ್ಮ ವಾಕ್ಯವನ್ನು ಪೂರೈಸಿದ್ದಾರೆ. ಅವರು ಕೆಡವಿ ಕನಿಕರಿಸಲಿಲ್ಲ. ಅವರು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿದ್ದಾರೆ. ಆತನು ನಿನ್ನ ವೈರಿಗಳ ಕೊಂಬನ್ನು ಎತ್ತಿದ್ದಾರೆ.
ಪ್ರಲಾಪಗಳು 2 : 18 (OCVKN)
ಅವರ ಹೃದಯವು ಕರ್ತದೇವರ ಕಡೆಗೆ ಕೂಗಿ, ಚೀಯೋನಿನ ಗೋಡೆಯೇ, ರಾತ್ರಿ ಹಗಲೂ ನಿನ್ನ ಕಣ್ಣೀರು ನದಿಯಂತೆ ಹರಿದು ಹೋಗಲಿ, ನಿನಗೆ ವಿಶ್ರಾಂತಿ ಬೇಡ, ನಿನ್ನ ಕಣ್ಣ ರೆಪ್ಪೆಯನ್ನು ಮುಚ್ಚಬೇಡ.
ಪ್ರಲಾಪಗಳು 2 : 19 (OCVKN)
ಎದ್ದೇಳು, ರಾತ್ರಿಯಲ್ಲಿ ಕೂಗು. ನಿನ್ನ ಹೃದಯವನ್ನು ಕರ್ತದೇವರ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ ನೀರಿನಂತೆ ಹೊಯ್ದುಬಿಡಿರಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಏಕೆಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.
ಪ್ರಲಾಪಗಳು 2 : 20 (OCVKN)
ಯೆಹೋವ ದೇವರೇ, ಕಟಾಕ್ಷಿಸಿ: ನೀವು ಇದನ್ನು ಯಾರಿಗೆ ಮಾಡಿದಿರೋ ಯೋಚಿಸಿರಿ. ಸ್ತ್ರೀಯರು ತಮ್ಮ ಫಲವಾದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಮತ್ತು ಪ್ರವಾದಿಯು ಕರ್ತದೇವರ ಪರಿಶುದ್ಧ ಸ್ಥಳದಲ್ಲಿ ಹತರಾಗಬೇಕೋ?
ಪ್ರಲಾಪಗಳು 2 : 21 (OCVKN)
ಯುವಕರು ಮತ್ತು ವೃದ್ಧರು ಬೀದಿಗಳ ನೆಲದ ಮೇಲೆ ಮಲಗಿದ್ದಾರೆ. ನನ್ನ ಯುವಕರು, ಯುವತಿಯರು ಖಡ್ಗದಿಂದ ಹತರಾಗಿದ್ದಾರೆ. ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿರಿ, ಕೊಂದುಹಾಕಿದಿರಿ, ಕನಿಕರಿಸಲಿಲ್ಲ.
ಪ್ರಲಾಪಗಳು 2 : 22 (OCVKN)
ಹಬ್ಬದ ದಿನಕ್ಕೆ ಕರೆಯುವಂತೆಯೇ ನನ್ನ ವಿರುದ್ಧವಾಗಿ ಪ್ರತಿಯೊಂದು ದಿಕ್ಕಿನಲ್ಲಿಯ ವಿರೋಧಿಗಳನ್ನು ಕರೆದಿದ್ದೀರಿ. ಯೆಹೋವ ದೇವರ ಕೋಪದ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಾರರು, ಉಳಿದುಕೊಳ್ಳಲಾರರು. ನಾನು ಬೆಳೆಸಿ ಸಾಕಿದವರನ್ನು ವೈರಿಯು ನಾಶಮಾಡಿದ್ದಾನೆ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22