ಪ್ರಲಾಪಗಳು 3 : 1 (OCVKN)
ಯೆಹೋವ ದೇವರ ಕೋಪದ ಕೋಲಿನಿಂದ ಕಷ್ಟವನ್ನು ನೋಡಿದ ಮನುಷ್ಯನು ನಾನೇ.
ಪ್ರಲಾಪಗಳು 3 : 2 (OCVKN)
ಅವರು ನನ್ನನ್ನು ಕರೆತಂದು ನಡೆಸಿದ್ದು ಕತ್ತಲೆಗೇ ಹೊರತು ಬೆಳಕಿಗಲ್ಲ.
ಪ್ರಲಾಪಗಳು 3 : 3 (OCVKN)
ನಿಶ್ಚಯವಾಗಿ ಅವರು ನನಗೆ ವಿರೋಧವಾಗಿ ತಿರುಗಿದ್ದಾರೆ. ಅವರು ದಿನವೆಲ್ಲಾ ತಮ್ಮ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದ್ದಾರೆ.
ಪ್ರಲಾಪಗಳು 3 : 4 (OCVKN)
ನನ್ನ ಮಾಂಸ, ಚರ್ಮವನ್ನು ಆತನು ಹಳೆಯದನ್ನಾಗಿ ಮಾಡಿದ್ದಾರೆ. ಅವರು ನನ್ನ ಎಲುಬುಗಳನ್ನು ಮುರಿದಿದ್ದಾರೆ.
ಪ್ರಲಾಪಗಳು 3 : 5 (OCVKN)
ಅವರು ನನಗೆ ವಿರೋಧವಾಗಿ ಕಟ್ಟಿದ್ದಾರೆ ಮತ್ತು ನನ್ನನ್ನು ವಿಷದಿಂದಲೂ, ಸಂಕಟದಿಂದಲೂ ಸುತ್ತಿಕೊಂಡಿದ್ದಾರೆ.
ಪ್ರಲಾಪಗಳು 3 : 6 (OCVKN)
ಅವರು ನನ್ನನ್ನು ಬಹುಕಾಲದ ಹಿಂದೆ ಸತ್ತವರ ಹಾಗೆ, ಕತ್ತಲೆಯ ಸ್ಥಳಗಳಲ್ಲಿ ಇರಿಸಿದ್ದಾರೆ.
ಪ್ರಲಾಪಗಳು 3 : 7 (OCVKN)
ನಾನು ಹೊರಗೆ ಬಾರದ ಹಾಗೆ, ಅವರು ನನ್ನ ಸುತ್ತಲೂ ಗೋಡೆಯನ್ನು ಕಟ್ಟಿದ್ದಾರೆ. ಅವರು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾರೆ.
ಪ್ರಲಾಪಗಳು 3 : 8 (OCVKN)
ನಾನು ಕರೆದು ಕೂಗಿದರೂ ಅವರು ನನ್ನ ಪ್ರಾರ್ಥನೆಯನ್ನು ಲಾಲಿಸುವುದಿಲ್ಲ.
ಪ್ರಲಾಪಗಳು 3 : 9 (OCVKN)
ಕೆತ್ತಿದ ಕಲ್ಲಿನಿಂದ ನನ್ನ ಮಾರ್ಗಗಳನ್ನು ಮುಚ್ಚಿ, ಆ ನನ್ನ ದಾರಿಗಳನ್ನು ಡೊಂಕು ಮಾಡಿದ್ದಾನೆ.
ಪ್ರಲಾಪಗಳು 3 : 10 (OCVKN)
ಅವರು ನನಗೆ ಹೊಂಚು ಹಾಕುವ ಕರಡಿಯ ಹಾಗೆಯೂ, ಗುಪ್ತ ಸ್ಥಳಗಳಲ್ಲಿರುವ ಸಿಂಹದ ಹಾಗೆಯೂ ಇದ್ದಾರೆ.
ಪ್ರಲಾಪಗಳು 3 : 11 (OCVKN)
ಅವರು ನನ್ನ ಮಾರ್ಗಗಳನ್ನು ತಪ್ಪಿಸಿ, ನನ್ನನ್ನು ತುಂಡುಗಳನ್ನಾಗಿ ಕತ್ತರಿಸಿ, ನನ್ನನ್ನು ಹಾಳು ಮಾಡಿದ್ದಾರೆ.
ಪ್ರಲಾಪಗಳು 3 : 12 (OCVKN)
ಅವರು ತನ್ನ ಬಿಲ್ಲನ್ನು ಬಗ್ಗಿಸಿದ್ದಾರೆ, ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾರೆ.
ಪ್ರಲಾಪಗಳು 3 : 13 (OCVKN)
ಅವರು ತನ್ನ ಬತ್ತಳಿಕೆಯಲ್ಲಿನ ಬಾಣಗಳನ್ನು ನನ್ನ ಅಂತರಂಗಗಳಲ್ಲಿ ತೂರಿ ಹೋಗುವಹಾಗೆ ಮಾಡಿದ್ದಾರೆ.
ಪ್ರಲಾಪಗಳು 3 : 14 (OCVKN)
ನಾನು ನನ್ನ ಎಲ್ಲಾ ಜನರಿಗೆ ಹಾಸ್ಯವೂ, ದಿನವೆಲ್ಲವೂ ಅವರ ಗೇಲಿಯ ಹಾಡಾಗಿಯೂ ಇದ್ದೇನೆ.
ಪ್ರಲಾಪಗಳು 3 : 15 (OCVKN)
ಅವರು ನನ್ನನ್ನು ಕಹಿಯಿಂದ ತುಂಬಿಸಿ, ವಿಷ ಸಸ್ಯಗಳಿಂದ ನನ್ನನ್ನು ತಣಿಸಿದ್ದಾರೆ.
ಪ್ರಲಾಪಗಳು 3 : 16 (OCVKN)
ಅವರು ನುರುಜು ಕಲ್ಲುಗಳಿಂದ ನನ್ನ ಹಲ್ಲುಗಳನ್ನು ಮುರಿದು, ಅವರು ನನ್ನನ್ನು ಧೂಳಿನಲ್ಲಿ ತುಳಿದಿದ್ದಾರೆ.
ಪ್ರಲಾಪಗಳು 3 : 17 (OCVKN)
ನನ್ನ ಪ್ರಾಣವನ್ನು ಸಮಾಧಾನದಿಂದ ದೂರ ಮಾಡಿದ್ದಾರೆ, ನಾನು ಸಮೃದ್ಧಿಯನ್ನು ಮರೆತುಬಿಟ್ಟೆನು.
ಪ್ರಲಾಪಗಳು 3 : 18 (OCVKN)
“ಅಯ್ಯೋ, ನನ್ನ ಬಲವು ಮತ್ತು ನನ್ನ ನಿರೀಕ್ಷೆಯು ಯೆಹೋವ ದೇವರಿಂದ ನಾಶವಾದವು,” ಎಂದು ನಾನು ಹೇಳಿದೆನು.
ಪ್ರಲಾಪಗಳು 3 : 19 (OCVKN)
ನನ್ನ ಸಂಕಟವನ್ನು, ನನ್ನ ಅಲೆದಾಡುವಿಕೆಯನ್ನು, ನನ್ನ ಕಹಿಯನ್ನು, ನನ್ನ ವಿಷತನವನ್ನು ನಾನು ಜ್ಞಾಪಕಮಾಡಿಕೊಂಡಿದ್ದೇನೆ.
ಪ್ರಲಾಪಗಳು 3 : 20 (OCVKN)
ನನ್ನ ಪ್ರಾಣವು ಇನ್ನೂ ಅವುಗಳನ್ನು ಜ್ಞಾಪಿಸಿಕೊಳ್ಳುತ್ತಾ ನನ್ನೊಳಗೆ ಕುಂದಿಹೋಗಿದೆ.
ಪ್ರಲಾಪಗಳು 3 : 21 (OCVKN)
ಇದನ್ನು ನಾನು ನನ್ನ ಮನಸ್ಸಿಗೆ ತಂದುಕೊಳ್ಳುತ್ತೇನೆ. ಆದ್ದರಿಂದ ನನಗೆ ನಿರೀಕ್ಷೆ ಇದೆ.
ಪ್ರಲಾಪಗಳು 3 : 22 (OCVKN)
ನಾವು ನಾಶವಾಗದೇ ಉಳಿದಿರುವುದು ಯೆಹೋವ ದೇವರ ಮಹಾ ಪ್ರೀತಿಯಿಂದಲೇ. ಏಕೆಂದರೆ ಅವರ ಅನುಕಂಪಗಳು ಮುಗಿಯುವುದಿಲ್ಲ.
ಪ್ರಲಾಪಗಳು 3 : 23 (OCVKN)
ಅವು ಪ್ರತಿ ಮುಂಜಾನೆಯೂ ಹೊಸದಾಗಿರುವುವು. ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.
ಪ್ರಲಾಪಗಳು 3 : 24 (OCVKN)
“ಯೆಹೋವ ದೇವರೇ ನನ್ನ ಪಾಲು, ಆದ್ದರಿಂದ ನಾನು ಅವರಿಗಾಗಿ ಕಾದಿರುತ್ತೇನೆ,” ಎಂದು ನಾನು ನನ್ನೊಳಗೆ ಎಂದುಕೊಳ್ಳುವೆನು.
ಪ್ರಲಾಪಗಳು 3 : 25 (OCVKN)
ಆತನನ್ನು ನಿರೀಕ್ಷಿಸುವವರಿಗೂ, ಆತನನ್ನು ಹುಡಕುವವರಿಗೂ ಯೆಹೋವ ದೇವರು ಒಳ್ಳೆಯವರಾಗಿದ್ದಾರೆ.
ಪ್ರಲಾಪಗಳು 3 : 26 (OCVKN)
ಮನುಷ್ಯನು ಮೌನವಾಗಿ ಯೆಹೋವ ದೇವರ ರಕ್ಷಣೆಗೆ ಕಾಯುವುದು ಒಳ್ಳೆಯದು.
ಪ್ರಲಾಪಗಳು 3 : 27 (OCVKN)
ತನ್ನ ಯೌವನದಲ್ಲಿ ನೊಗವನ್ನು ಹೊಂದಿರುವುದು ಮಾನವನಿಗೆ ಒಳ್ಳೆಯದು.
ಪ್ರಲಾಪಗಳು 3 : 28 (OCVKN)
ಅವನು ಒಂಟಿಯಾಗಿ ಕುಳಿತು ಮೌನವಾಗಿರಲಿ. ಏಕೆಂದರೆ ಯೆಹೋವ ದೇವರೇ ಅದನ್ನು ಅವನ ಮೇಲೆ ಹೊರಿಸಿದ್ದಾರೆ.
ಪ್ರಲಾಪಗಳು 3 : 29 (OCVKN)
ಒಂದು ವೇಳೆ ನಿರೀಕ್ಷೆ ಇರಬಹುದೇನೋ ಎಂದು ಅವನು ತನ್ನ ಮುಖವನ್ನು ಧೂಳಿನಲ್ಲಿ ಇಟ್ಟುಕೊಳ್ಳಲಿ.
ಪ್ರಲಾಪಗಳು 3 : 30 (OCVKN)
ಅವನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡಲಿ. ಅವನು ನಿಂದೆಯಿಂದಲೇ ತುಂಬಿರಲಿ.
ಪ್ರಲಾಪಗಳು 3 : 31 (OCVKN)
ಏಕೆಂದರೆ ಕರ್ತದೇವರು ಜನರನ್ನು ಎಂದೆಂದಿಗೂ ತಳ್ಳಿಬಿಡುವುದಿಲ್ಲ.
ಪ್ರಲಾಪಗಳು 3 : 32 (OCVKN)
ಆತನು ದುಃಖಪಡಿಸಿದರೂ, ತನ್ನ ಒಡಂಬಡಿಕೆಯ ಮಹಾಪ್ರೀತಿಯಿಂದ ಅನುಕಂಪ ತೋರಿಸುವರು.
ಪ್ರಲಾಪಗಳು 3 : 33 (OCVKN)
ಏಕೆಂದರೆ ಆತನು ಬೇಕೆಂದು ಮನುಷ್ಯರ ಮಕ್ಕಳಿಗೆ ಬಾಧೆಯನ್ನೂ, ದುಃಖವನ್ನೂ ಕೊಡುವುದಿಲ್ಲ.
ಪ್ರಲಾಪಗಳು 3 : 34 (OCVKN)
ಭೂಲೋಕದ ಸೆರೆಯವರನ್ನೆಲ್ಲಾ ಕಾಲುಗಳ ಕೆಳಗೆ ತುಳಿಯುವುದನ್ನೂ,
ಪ್ರಲಾಪಗಳು 3 : 35 (OCVKN)
ಮಹೋನ್ನತನ ಸನ್ನಿಧಿಯಲ್ಲಿ ಮನುಷ್ಯನ ನ್ಯಾಯವನ್ನು ನಿರಾಕರಿಸುವುದನ್ನೂ,
ಪ್ರಲಾಪಗಳು 3 : 36 (OCVKN)
ಮನುಷ್ಯನನ್ನು ಅವನ ಜಗಳದಲ್ಲಿ ಅನ್ಯಾಯವಾಗಿ ತೀರಿಸುವುದು ಕರ್ತದೇವರು ಮೆಚ್ಚುವುದಿಲ್ಲ.
ಪ್ರಲಾಪಗಳು 3 : 37 (OCVKN)
ಕರ್ತದೇವರು ಆಜ್ಞಾಪಿಸದೆ ಇರುವಾಗ, ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?
ಪ್ರಲಾಪಗಳು 3 : 38 (OCVKN)
ಮಹೋನ್ನತರ ಬಾಯಿಂದ ಕೇಡೂ, ಒಳ್ಳೆಯ ಸಂಗತಿಗಳೂ ಹೊರಡುವುದಿಲ್ಲವೇ?
ಪ್ರಲಾಪಗಳು 3 : 39 (OCVKN)
ಬದುಕುವ ಮನುಷ್ಯನು ತನ್ನ ಪಾಪಗಳ ಶಿಕ್ಷೆಗಾಗಿ ಗೊಣಗುಟ್ಟುವುದೇಕೆ?
ಪ್ರಲಾಪಗಳು 3 : 40 (OCVKN)
ನಾವು ನಮ್ಮ ಮಾರ್ಗಗಳನ್ನು ಪರಿಶೋಧಿಸಿ, ಪರೀಕ್ಷಿಸಿಕೊಂಡು ಆಮೇಲೆ ಯೆಹೋವ ದೇವರ ಬಳಿಗೆ ತಿರುಗಿಕೊಳ್ಳೋಣ.
ಪ್ರಲಾಪಗಳು 3 : 41 (OCVKN)
ನಮ್ಮ ಹೃದಯಗಳನ್ನು ನಮ್ಮ ಕೈಗಳೊಂದಿಗೆ ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ.
ಪ್ರಲಾಪಗಳು 3 : 42 (OCVKN)
ನಾವು ದ್ರೋಹಮಾಡಿದ್ದೇವೆ ಮತ್ತು ಎದುರು ಬಿದ್ದಿದ್ದೇವೆ, ನೀವು ಮನ್ನಿಸಲಿಲ್ಲ.
ಪ್ರಲಾಪಗಳು 3 : 43 (OCVKN)
ಕೋಪದಲ್ಲಿ ನಮ್ಮನ್ನು ಮುಚ್ಚಿ ಹಿಂಸಿಸಿದ್ದೀರಿ. ಕನಿಕರಿಸದೆ ಕೊಂದು ಹಾಕಿರುವಿರಿ.
ಪ್ರಲಾಪಗಳು 3 : 44 (OCVKN)
ನಮ್ಮ ಪ್ರಾರ್ಥನೆಯು ನಿನ್ನ ಸನ್ನಿಧಿಗೆ ಸೇರದಂತೆ ನಿನ್ನನ್ನು ಮೇಘದಿಂದ ಮುಚ್ಚಿಕೊಂಡಿದ್ದೀರಿ.
ಪ್ರಲಾಪಗಳು 3 : 45 (OCVKN)
ನೀನು ನಮ್ಮನ್ನು ಜನರ ಮಧ್ಯದಲ್ಲಿ ಕಲ್ಮಷವನ್ನಾಗಿಯೂ, ಕಸವನ್ನಾಗಿಯೂ ಮಾಡಿದ್ದೀಯೆ.
ಪ್ರಲಾಪಗಳು 3 : 46 (OCVKN)
ನಮ್ಮ ಎಲ್ಲಾ ಶತ್ರುಗಳು ನಮಗೆ ವಿರುದ್ಧವಾಗಿ ಅವರ ಬಾಯಿಗಳನ್ನು ತೆರೆದಿದ್ದಾರೆ.
ಪ್ರಲಾಪಗಳು 3 : 47 (OCVKN)
ಭಯವನ್ನೂ, ನಾಶವನ್ನೂ ನಾವು ಅನುಭವಿಸಿದ್ದೇವೆ.
ಪ್ರಲಾಪಗಳು 3 : 48 (OCVKN)
ನನ್ನ ಜನರ ನಾಶದ ನಿಮಿತ್ತವಾಗಿ, ನನ್ನ ಕಣ್ಣಿನಿಂದ ನೀರು ನದಿಯಾಗಿ ಹರಿದು ಹೋಗುತ್ತದೆ.
ಪ್ರಲಾಪಗಳು 3 : 49 (OCVKN)
ಯೆಹೋವ ದೇವರು ಕಟಾಕ್ಷಿಸಿ, ಪರಲೋಕದಿಂದ ನೋಡುವ ತನಕ ನೇತ್ರವು ನಿರಂತರ ಕಣ್ಣೀರು ಸುರಿಸುತ್ತದೆ.
ಪ್ರಲಾಪಗಳು 3 : 50 (OCVKN)
ವಿಶ್ರಮಿಸಿಕೊಳ್ಳುವುದೂ ಇಲ್ಲ.
ಪ್ರಲಾಪಗಳು 3 : 51 (OCVKN)
ನನ್ನ ನಗರದ ಪುತ್ರಿಯರೆಲ್ಲರ ನಿಮಿತ್ತವಾಗಿ ನನ್ನ ಕಣ್ಣುಗಳು ನನ್ನ ಹೃದಯವನ್ನು ಪೀಡಿಸಿದೆ.
ಪ್ರಲಾಪಗಳು 3 : 52 (OCVKN)
ನನ್ನ ಶತ್ರುಗಳು ಕಾರಣವಿಲ್ಲದೆ ಪಕ್ಷಿಯಂತೆ ನನ್ನನ್ನು ಕಠೋರವಾಗಿ ಹಿಂದಟ್ಟಿ ಬೇಟೆಯಾಡಿದರು.
ಪ್ರಲಾಪಗಳು 3 : 53 (OCVKN)
ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ, ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ.
ಪ್ರಲಾಪಗಳು 3 : 54 (OCVKN)
ನನ್ನ ತಲೆಯ ಮೇಲೆ ನೀರು ಹರಿಯಿತು. ಆಗ ನಾನು ನಾಶವಾದೆನು ಅಂದುಕೊಂಡೆನು.
ಪ್ರಲಾಪಗಳು 3 : 55 (OCVKN)
ಯೆಹೋವ ದೇವರೇ, ನಾನು ಆಳವಾದ ಕಾರಾಗೃಹದಿಂದ ನಿಮ್ಮ ಹೆಸರನ್ನು ಎತ್ತಿ ಬೇಡಿಕೊಂಡೆನು.
ಪ್ರಲಾಪಗಳು 3 : 56 (OCVKN)
ನೀನು ನನ್ನ ಸ್ವರವನ್ನು ಕೇಳಿದ್ದೀ. “ನನ್ನ ಶ್ವಾಸಕ್ಕೂ, ನನ್ನ ಕೂಗಿಗೂ ನಿನ್ನ ಕಿವಿಯನ್ನು ಮರೆಮಾಡಬೇಡಿರಿ.”
ಪ್ರಲಾಪಗಳು 3 : 57 (OCVKN)
ನಾನು ನಿನ್ನನ್ನು ಕರೆದ ದಿನದಲ್ಲಿ ನೀನು ಸಮೀಪಕ್ಕೆ ಬಂದು, “ಭಯಪಡಬೇಡ,” ಎಂದು ಹೇಳಿದಿರಿ.
ಪ್ರಲಾಪಗಳು 3 : 58 (OCVKN)
ಕರ್ತದೇವರೇ, ನೀನು ನನ್ನ ಪ್ರಾಣದ ವ್ಯಾಜ್ಯಗಳನ್ನು ನಡೆಸಿ, ನನ್ನ ಜೀವವನ್ನು ವಿಮೋಚಿಸಿದ್ದೀರಿ.
ಪ್ರಲಾಪಗಳು 3 : 59 (OCVKN)
ಯೆಹೋವ ದೇವರೇ, ನೀವು ನನ್ನ ಅನ್ಯಾಯವನ್ನು ನೋಡಿದ್ದೀರಿ, ನೀವು ನನ್ನ ನ್ಯಾಯವನ್ನು ತೀರಿಸಿರಿ.
ಪ್ರಲಾಪಗಳು 3 : 60 (OCVKN)
ನನಗೆ ವಿರುದ್ಧವಾಗಿ ಅವರ ಎಲ್ಲಾ ಪ್ರತೀಕಾರವನ್ನೂ ನೋಡಿದ್ದೀರಲ್ಲಾ.
ಪ್ರಲಾಪಗಳು 3 : 61 (OCVKN)
ಯೆಹೋವ ದೇವರೇ, ಅವರ ಎಲ್ಲಾ ಕಲ್ಪನೆಗಳನ್ನೂ ಮತ್ತು ನನಗೆ ವಿರುದ್ಧವಾಗಿ ಹೇಳುವವರ ತುಟಿಗಳನ್ನೂ,
ಪ್ರಲಾಪಗಳು 3 : 62 (OCVKN)
ದಿನವಿಡೀ ನನಗೆ ವಿರುದ್ಧವಾದ ಅವರ ದುರಾಲೋಚನೆಯನ್ನೂ ಕೇಳಿರುವಿರಿ.
ಪ್ರಲಾಪಗಳು 3 : 63 (OCVKN)
ಅವರನ್ನು ನೋಡು! ಕುಳಿತು ಅಥವಾ ನಿಂತಾಗ, ಅವರು ತಮ್ಮ ಹಾಡುಗಳಲ್ಲಿ ನನ್ನನ್ನು ಅಣಕಿಸುತ್ತಾರೆ.
ಪ್ರಲಾಪಗಳು 3 : 64 (OCVKN)
ಯೆಹೋವ ದೇವರೇ, ಅವರ ಕೈಕೆಲಸಗಳ ಪ್ರಕಾರ ಅವರಿಗೆ ಪ್ರತಿಫಲವನ್ನು ಕೊಡಿ.
ಪ್ರಲಾಪಗಳು 3 : 65 (OCVKN)
ಅವರಿಗೆ ದುಃಖಕರವಾದ ಹೃದಯವನ್ನೂ, ನಿಮ್ಮ ಶಾಪವನ್ನೂ ಕೊಡಿ.
ಪ್ರಲಾಪಗಳು 3 : 66 (OCVKN)
ಯೆಹೋವ ದೇವರೇ, ಆಕಾಶದ ಕೆಳಗಿನಿಂದ ಕೋಪದಿಂದ ಅವರನ್ನು ಹಿಂಸಿಸಿ ಹಾಳುಮಾಡಿರಿ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52
53
54
55
56
57
58
59
60
61
62
63
64
65
66