ಯಾಜಕಕಾಂಡ 1 : 1 (OCVKN)
ದಹನಬಲಿ ಯೆಹೋವ ದೇವರು ಮೋಶೆಯನ್ನು ಕರೆದು, ದೇವದರ್ಶನದ ಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ,
ಯಾಜಕಕಾಂಡ 1 : 2 (OCVKN)
ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನಂದರೆ: “ ‘ನಿಮ್ಮಲ್ಲಿ ಯಾರಾದರೂ ಯೆಹೋವ ದೇವರಿಗೆ ಒಂದು ಪ್ರಾಣಿಯನ್ನು ಕಾಣಿಕೆಯಾಗಿ ಸಮರ್ಪಿಸಲು ಆಶಿಸಿದರೆ, ಅದನ್ನು ದನಕರುಗಳಿಂದಾಗಲಿ, ಆಡು ಕುರಿಗಳಿಂದಾಗಲಿ ಆಯ್ದುಕೊಂಡು ಸಮರ್ಪಿಸಲಿ.
ಯಾಜಕಕಾಂಡ 1 : 3 (OCVKN)
“ ‘ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ, ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಯೆಹೋವ ದೇವರಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.
ಯಾಜಕಕಾಂಡ 1 : 4 (OCVKN)
ದಹನಬಲಿ ಅರ್ಪಿಸುವವನು ತನ್ನ ಕೈಯನ್ನು ಆ ಪ್ರಾಣಿಯ ತಲೆಯ ಮೇಲೆ ಇಡಬೇಕು. ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವುದು.
ಯಾಜಕಕಾಂಡ 1 : 5 (OCVKN)
ಅವನು ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು. ಆಗ ಯಾಜಕರಾದ ಆರೋನನ ಪುತ್ರರು ರಕ್ತವನ್ನು ತಂದು, ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ಬಲಿಪೀಠದ ಸುತ್ತಲೂ ಚಿಮುಕಿಸಬೇಕು.
ಯಾಜಕಕಾಂಡ 1 : 6 (OCVKN)
ಅವನು ಆ ದಹನಬಲಿಯ ಚರ್ಮವನ್ನು ಸುಲಿದು, ಅದರ ದೇಹವನ್ನು ಕಡಿದು, ತುಂಡುತುಂಡಾಗಿ ಮಾಡಬೇಕು.
ಯಾಜಕಕಾಂಡ 1 : 7 (OCVKN)
ಯಾಜಕನಾದ ಆರೋನನ ಪುತ್ರರು ಬಲಿಪೀಠದ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು.
ಯಾಜಕಕಾಂಡ 1 : 8 (OCVKN)
ಆಗ ಯಾಜಕರಾದ ಆರೋನನ ಪುತ್ರರು ಅದರ ಭಾಗಗಳನ್ನು ಅಂದರೆ, ತಲೆಯನ್ನೂ ಮತ್ತು ಕೊಬ್ಬನ್ನೂ ಬಲಿಪೀಠದ ಮೇಲೆ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.
ಯಾಜಕಕಾಂಡ 1 : 9 (OCVKN)
ಅದರ ಕರುಳುಗಳನ್ನೂ, ಕಾಲುಗಳನ್ನೂ ಅವರು ನೀರಿನಲ್ಲಿ ತೊಳೆಯಬೇಕು. ಯಾಜಕನು ಎಲ್ಲವನ್ನೂ ಬಲಿಪೀಠದ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ, ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
ಯಾಜಕಕಾಂಡ 1 : 10 (OCVKN)
“ ‘ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆಯಿಂದ ತರುವುದಾದರೆ ಅವನು ಕುರಿಗಳಲ್ಲಾಗಲಿ, ಮೇಕೆಗಳಲ್ಲಾಗಲಿ, ಕಳಂಕರಹಿತ ಒಂದು ಗಂಡನ್ನು ತರಬೇಕು.
ಯಾಜಕಕಾಂಡ 1 : 11 (OCVKN)
ಅವನು ಅದನ್ನು ಬಲಿಪೀಠದ ಉತ್ತರದ ಕಡೆಯಲ್ಲಿ ಯೆಹೋವ ದೇವರ ಮುಂದೆ ವಧಿಸಬೇಕು. ಇದಲ್ಲದೆ ಯಾಜಕರಾದ ಆರೋನನ ಪುತ್ರರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.
ಯಾಜಕಕಾಂಡ 1 : 12 (OCVKN)
ಅರ್ಪಿಸುವವನು ಆ ಪ್ರಾಣಿಯ ದೇಹವನ್ನು ತುಂಡುತುಂಡಾಗಿ ಕಡಿದ ಮೇಲೆ, ಯಾಜಕನು ಆ ತುಂಡುಗಳನ್ನೂ, ತಲೆಯನ್ನೂ, ಕೊಬ್ಬನ್ನೂ ಬಲಿಪೀಠದ ಮೇಲಿನ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.
ಯಾಜಕಕಾಂಡ 1 : 13 (OCVKN)
ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು. ಆಗ ಯಾಜಕನು ಅವೆಲ್ಲವುಗಳನ್ನೂ ತಂದು ಬಲಿಪೀಠದ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
ಯಾಜಕಕಾಂಡ 1 : 14 (OCVKN)
“ ‘ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವಂಥದ್ದು ಪಕ್ಷಿಗಳಾಗಿದ್ದರೆ, ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯನ್ನಾಗಲಿ ಇಲ್ಲವೆ ಪಾರಿವಾಳದ ಮರಿಯನ್ನಾಗಲಿ ತರಬೇಕು.
ಯಾಜಕಕಾಂಡ 1 : 15 (OCVKN)
ಆಗ ಯಾಜಕನು ಅದನ್ನೂ ಬಲಿಪೀಠದ ಬಳಿಗೆ ತಂದು ಅದರ ತಲೆಯನ್ನು ಮುರಿದು, ಬಲಿಪೀಠದ ಮೇಲೆ ಸುಡಬೇಕು. ಅದರ ರಕ್ತವನ್ನು ಬಲಿಪೀಠದ ಹೊರಬದಿಯಲ್ಲಿ ಹಿಂಡಬೇಕು.
ಯಾಜಕಕಾಂಡ 1 : 16 (OCVKN)
ಇದಲ್ಲದೆ ಅವನು ಅದರ ರೆಕ್ಕೆ ಪುಕ್ಕಗಳೊಂದಿಗೆ ಕರುಳುಗಳನ್ನೂ ಕಿತ್ತು, ಬಲಿಪೀಠದ ಬಳಿ ಪೂರ್ವ ಭಾಗದಲ್ಲಿ ಬೂದಿಯಿರುವ ಸ್ಥಳದಲ್ಲಿ ಬಿಸಾಡಬೇಕು.
ಯಾಜಕಕಾಂಡ 1 : 17 (OCVKN)
ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು. ಆದರೆ ಬೇರೆಬೇರೆಯಾಗಿ ವಿಭಾಗಿಸಬಾರದು. ಆಗ ಯಾಜಕನು ಅದನ್ನು ಬಲಿಪೀಠದ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆ ಸುಡಬೇಕು.

1 2 3 4 5 6 7 8 9 10 11 12 13 14 15 16 17