ಯಾಜಕಕಾಂಡ 12 : 1 (OCVKN)
ಬಾಣಂತಿಯರ ಶುದ್ಧೀಕರಣದ ವಿಷಯ ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ, ಹೇಳಿದ್ದೇನೆಂದರೆ,
ಯಾಜಕಕಾಂಡ 12 : 2 (OCVKN)
“ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ಒಬ್ಬ ಸ್ತ್ರೀಯು ಗರ್ಭಧರಿಸಿ, ಗಂಡು ಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು. ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು.
ಯಾಜಕಕಾಂಡ 12 : 3 (OCVKN)
ಎಂಟನೆಯ ದಿನದಲ್ಲಿ ಮಗುವಿಗೆ ಸುನ್ನತಿ ಮಾಡಿಸಬೇಕು.
ಯಾಜಕಕಾಂಡ 12 : 4 (OCVKN)
ಅವಳು ಮೂವತ್ತಮೂರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಯಬೇಕು. ಅವಳ ಶುದ್ಧೀಕರಣದ ದಿನಗಳು ಪೂರೈಸುವ ತನಕ ಅವಳು ಪರಿಶುದ್ಧವಾದದ್ದನ್ನು ಮುಟ್ಟಬಾರದು, ಇಲ್ಲವೆ ಪರಿಶುದ್ಧ ಸ್ಥಳಕ್ಕೆ ಬರಬಾರದು.
ಯಾಜಕಕಾಂಡ 12 : 5 (OCVKN)
ಅವಳು ಹೆಣ್ಣು ಮಗುವನ್ನು ಹೆತ್ತರೆ, ಅವಳು ಮುಟ್ಟಿನಲ್ಲಿರುವಂತೆ ಎರಡು ವಾರಗಳು ಅಶುದ್ಧಳಾಗಿರಬೇಕು. ಅವಳು ಅರವತ್ತಾರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಯಬೇಕು.
ಯಾಜಕಕಾಂಡ 12 : 6 (OCVKN)
“ ‘ಮಗನಿಗಾಗಿ ಇಲ್ಲವೆ ಮಗಳಿಗಾಗಿ ಅವಳ ಶುದ್ಧ ದಿನಗಳು ಪೂರ್ತಿಯಾದರೆ, ಅವಳು ದಹನಬಲಿಗಾಗಿ ಒಂದು ವರ್ಷದ ಕುರಿಮರಿಯನ್ನೂ, ಪಾಪ ಪರಿಹಾರದ ಬಲಿಗಾಗಿ ಪಾರಿವಾಳದ ಮರಿಯನ್ನೂ, ಇಲ್ಲವೆ ಬೆಳವಕ್ಕಿಯನ್ನೂ ದೇವದರ್ಶನದ ಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು.
ಯಾಜಕಕಾಂಡ 12 : 7 (OCVKN)
ಅವನು ಯೆಹೋವ ದೇವರ ಮುಂದೆ ಅದನ್ನು ಅರ್ಪಿಸಿ, ಅವಳಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದಾದ ಅಶುದ್ಧತೆಯಿಂದ ಶುದ್ಧಳಾಗುವಳು. “ ‘ಗಂಡು ಮಗುವನ್ನಾಗಲಿ, ಹೆಣ್ಣು ಮಗುವನ್ನಾಗಲಿ ಹೆತ್ತವಳಿಗೆ ನಿಯಮವು ಇದೆ.
ಯಾಜಕಕಾಂಡ 12 : 8 (OCVKN)
ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ, ಅವಳು ದಹನಬಲಿಗಾಗಿ ಒಂದು ಪಾಪ ಪರಿಹಾರದ ಬಲಿಗಾಗಿ, ಇನ್ನೊಂದು ಎಂಬಂತೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವಳು ಶುದ್ಧಳಾಗುವಳು.’ ”
❮
❯
1
2
3
4
5
6
7
8