ಯಾಜಕಕಾಂಡ 15 : 1 (OCVKN)
ರಹಸ್ಯಾಂಗದ ಸ್ರಾವ ಯೆಹೋವ ದೇವರು ಮೋಶೆ ಆರೋನರೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
ಯಾಜಕಕಾಂಡ 15 : 2 (OCVKN)
“ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ಒಬ್ಬ ಪುರುಷನ ಶರೀರದಿಂದ ಮೇಹಸ್ರಾವ ಹರಿಯುವುದಾಗಿದ್ದರೆ, ಆ ಸ್ರಾವದ ನಿಮಿತ್ತವಾಗಿ ಅವನು ಅಶುದ್ಧನಾಗಿರುವನು.
ಯಾಜಕಕಾಂಡ 15 : 3 (OCVKN)
ಅವನ ಸ್ರಾವದಲ್ಲಿ ಅದು ಅವನ ಅಶುದ್ಧತೆಯಾಗಿರುವುದು. ಅವನ ಶರೀರವು ತನ್ನ ಸ್ರಾವದಿಂದ ಹರಿಯುವುದಾಗಿದ್ದರೂ, ಸ್ರಾವವು ಅವನ ಶರೀರದಲ್ಲಿ ನಿಂತು ಹೋಗಿದ್ದರೂ, ಅದು ಅವನ ಅಶುದ್ಧತೆಯಾಗಿರುವುದು. ಅವನ ವಿಸರ್ಜನೆಯು ಹೇಗೆ ಅಶುದ್ಧತೆಯನ್ನು ತರುತ್ತದೆ ಅಂದರೆ:
ಯಾಜಕಕಾಂಡ 15 : 4 (OCVKN)
“ ‘ಸ್ರಾವವಿರುವವನು ಮಲಗುವ ಪ್ರತಿಯೊಂದು ಹಾಸಿಗೆಯೂ ಅಶುದ್ಧವಾದದ್ದು, ಅವನು ಕೂತುಕೊಳ್ಳುವ ಪ್ರತಿಯೊಂದು ವಸ್ತುವೂ ಅಶುದ್ಧವಾಗಿರುವುದು.
ಯಾಜಕಕಾಂಡ 15 : 5 (OCVKN)
ಅವನ ಹಾಸಿಗೆಯನ್ನು ಮುಟ್ಟುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು, ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರಬೇಕು.
ಯಾಜಕಕಾಂಡ 15 : 6 (OCVKN)
ಇದಲ್ಲದೆ ಸ್ರಾವವಿರುವವನು ಕುಳಿತುಕೊಂಡ ಯಾವುದೇ ವಸ್ತುವಿನ ಮೇಲೆ ಕುಳಿತುಕೊಳ್ಳುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರುವರು.
ಯಾಜಕಕಾಂಡ 15 : 7 (OCVKN)
ಯಾಜಕಕಾಂಡ 15 : 8 (OCVKN)
“ ‘ಸ್ರಾವವಿರುವವನ ಶರೀರವನ್ನು ಮುಟ್ಟುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು ಮತ್ತು ಸಂಜೆಯವರೆಗೆ ಅವರು ಅಶುದ್ಧನಾಗಿರಬೇಕು.
ಯಾಜಕಕಾಂಡ 15 : 9 (OCVKN)
“ ‘ಶುದ್ಧರಾಗಿರುವವರ ಮೇಲೆ ಸ್ರಾವವಿರುವವನು ಉಗುಳಿದರೆ, ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರಬೇಕು. “ ‘ಸ್ರಾವವುಳ್ಳವನು ಏರಿ ಕುಳಿತುಕೊಂಡಿದ್ದ ತಡಿಯು ಅಶುದ್ಧವಾಗಿರುವುದು.
ಯಾಜಕಕಾಂಡ 15 : 10 (OCVKN)
ಅವನ ಕೆಳಗಿರುವ ಯಾವುದಾದರೂ ವಸ್ತುವನ್ನು ಮುಟ್ಟಿದವನು ಸಂಜೆಯವರೆಗೆ ಅಶುದ್ಧನಾಗಿರಬೇಕು, ಅವುಗಳಲ್ಲಿ ಯಾವುದನ್ನಾದರೂ ಹೊತ್ತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವನು ಅಶುದ್ಧನಾಗಿರುವನು.
ಯಾಜಕಕಾಂಡ 15 : 11 (OCVKN)
ಯಾಜಕಕಾಂಡ 15 : 12 (OCVKN)
“ ‘ಸ್ರಾವವುಳ್ಳವನು ತನ್ನ ಕೈಗಳನ್ನು ನೀರಿನಿಂದ ತೊಳೆದುಕೊಳ್ಳದೆ, ಯಾರನ್ನಾದರೂ ಮುಟ್ಟಿದರೆ ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರಬೇಕು.
ಯಾಜಕಕಾಂಡ 15 : 13 (OCVKN)
“ ‘ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು. ಮರದ ಪ್ರತಿಯೊಂದು ಪಾತ್ರೆಯನ್ನು ನೀರಿನಲ್ಲಿ ಜಾಲಿಸಿ ತೊಳೆಯಬೇಕು. “ ‘ಸ್ರಾವವುಳ್ಳವನು ತನ್ನ ಸ್ರಾವದಿಂದ ತನ್ನ ಶುದ್ಧತೆಗಾಗಿ ಏಳು ದಿನಗಳನ್ನು ಲೆಕ್ಕ ಮಾಡಿ, ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಇದಲ್ಲದೆ ಹರಿಯುವ ನೀರಿನಲ್ಲಿ ಸ್ನಾನಮಾಡಬೇಕು. ಆಗ ಅವನು ಶುದ್ಧನಾಗಿರುವನು.
ಯಾಜಕಕಾಂಡ 15 : 14 (OCVKN)
ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳ ಮರಿಗಳನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲ ಬಳಿ ಯೆಹೋವ ದೇವರ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು.
ಯಾಜಕಕಾಂಡ 15 : 15 (OCVKN)
ಆಗ ಯಾಜಕನು ಒಂದನ್ನು ಪಾಪ ಪರಿಹಾರದ ಬಲಿಗಾಗಿ ಮತ್ತು ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು, ಯಾಜಕನು ಅವನ ಸ್ರಾವಕ್ಕೋಸ್ಕರ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.
ಯಾಜಕಕಾಂಡ 15 : 16 (OCVKN)
“ ‘ಒಬ್ಬನಿಗೆ ವೀರ್ಯವು ಹೊರಟು ಹೋದರೆ, ಅವನು ತನ್ನ ಶರೀರವನ್ನೆಲ್ಲಾ ನೀರಿನಲ್ಲಿ ತೊಳೆದು, ಸಂಜೆಯವರೆಗೆ ಅಶುದ್ಧನಾಗಿರಬೇಕು.
ಯಾಜಕಕಾಂಡ 15 : 17 (OCVKN)
ವೀರ್ಯವು ಬಿದ್ದ ಪ್ರತಿಯೊಂದು ಬಟ್ಟೆ ಮತ್ತು ಪ್ರತಿಯೊಂದು ಚರ್ಮವನ್ನು ನೀರಿನಿಂದ ತೊಳೆದು, ಸಂಜೆಯವರೆಗೆ ಅಶುದ್ಧವಾಗಿರಬೇಕು.
ಯಾಜಕಕಾಂಡ 15 : 18 (OCVKN)
ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ, ವೀರ್ಯ ಸ್ರಾವವಾಗಿದ್ದರೆ, ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅಶುದ್ಧರಾಗಿರಬೇಕು.
ಯಾಜಕಕಾಂಡ 15 : 19 (OCVKN)
ಯಾಜಕಕಾಂಡ 15 : 20 (OCVKN)
“ ‘ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತ ಸ್ರಾವವಿದ್ದರೆ, ಅವಳು ಏಳು ದಿವಸಗಳವರೆಗೆ ಪ್ರತ್ಯೇಕವಾಗಿರಬೇಕು, ಅವಳನ್ನು ಯಾರಾದರೂ ಮುಟ್ಟಿದರೆ, ಅವರು ಸಂಜೆಯವರೆಗೆ ಅಶುದ್ಧರಾಗಿರುವರು. “ ‘ಅವಳು ಮುಟ್ಟಾದಾಗ ಅವಳು ಮಲಗುವ ಪ್ರತಿಯೊಂದು ಹಾಸಿಗೆ ಅಶುದ್ಧವಾಗಿರುವುದು. ಅವಳು ಕೂತುಕೊಳ್ಳುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರುವುದು.
ಯಾಜಕಕಾಂಡ 15 : 21 (OCVKN)
ಅವಳ ಹಾಸಿಗೆಯನ್ನು ಮುಟ್ಟುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅಶುದ್ಧರಾಗಿರುವರು.
ಯಾಜಕಕಾಂಡ 15 : 22 (OCVKN)
ಅವಳು ಯಾವುದರ ಮೇಲೆ ಕುಳಿತಿದ್ದಳೋ, ಅದನ್ನು ಮುಟ್ಟಿದವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು.
ಯಾಜಕಕಾಂಡ 15 : 23 (OCVKN)
ಇದಲ್ಲದೆ ಅವಳ ಹಾಸಿಗೆಯ ಮೇಲಾಗಲಿ ಇಲ್ಲವೆ ಅವಳು ಕುಳಿತುಕೊಂಡ ಯಾವದರ ಮೇಲಾಗಲಿ ಇರುವುದನ್ನು ಮುಟ್ಟಿದವರು ಸಂಜೆಯವರೆಗೆ ಅಶುದ್ಧರಾಗಿರುವರು.
ಯಾಜಕಕಾಂಡ 15 : 24 (OCVKN)
ಯಾಜಕಕಾಂಡ 15 : 25 (OCVKN)
“ ‘ಯಾವನಾದರೂ ಅವಳೊಂದಿಗೆ ಸಂಗಮಿಸಿದರೆ ಮತ್ತು ಅವಳ ಸ್ರಾವವು ಅವನಿಗೆ ತಗಲಿದರೆ, ಅವನು ಏಳು ದಿವಸ ಅಶುದ್ಧನಾಗಿರಬೇಕು. ಅವನು ಮಲಗಿಕೊಳ್ಳುವ ಹಾಸಿಗೆಯೆಲ್ಲಾ ಅಶುದ್ಧವಾಗಿರುವುದು. “ ‘ಇದಲ್ಲದೆ ಸ್ತ್ರೀಗೆ ಅವಳ ಮುಟ್ಟಿನ ಕಾಲಕ್ಕಿಂತಲೂ ಹೆಚ್ಚು ದಿನ ರಕ್ತಸ್ರಾವವು ಇದ್ದರೆ, ಇಲ್ಲವೆ ಮುಟ್ಟಾಗಿದ್ದ ಕಾಲದಲ್ಲಾಗುವ ರಕ್ತಸ್ರಾವಕ್ಕಿಂತ ಹೆಚ್ಚಾಗಿ ಹರಿಯುತ್ತಿದ್ದರೆ, ಅವಳ ಸ್ರಾವದ ಅಶುದ್ಧತ್ವದ ಎಲ್ಲಾ ದಿನಗಳು ಅವಳ ಮುಟ್ಟಿನ ದಿನಗಳಂತೆ ಇರಬೇಕು. ಅವಳು ಅಶುದ್ಧಳಾಗಿರುವಳು.
ಯಾಜಕಕಾಂಡ 15 : 26 (OCVKN)
ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಹಾಸಿಗೆಯು, ಅವಳ ಮುಟ್ಟಿನ ಹಾಸಿಗೆಯಂತೆ ಅಶುದ್ಧವಾಗಿರುವುದು. ಅವಳು ಕುಳಿತುಕೊಳ್ಳುವುದೆಲ್ಲವೂ ಅವಳ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವುದು.
ಯಾಜಕಕಾಂಡ 15 : 27 (OCVKN)
ಯಾರಾದರೂ ಆ ವಸ್ತುಗಳನ್ನು ಮುಟ್ಟಿದರೆ ಅಶುದ್ಧರಾಗಿರುವರು. ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು.
ಯಾಜಕಕಾಂಡ 15 : 28 (OCVKN)
“ ‘ಅವಳು ತನ್ನ ಸ್ರಾವದಿಂದ ಶುದ್ಧಳಾದರೆ, ಅವಳು ಶುದ್ಧಳಾದಂದಿನಿಂದ ತನಗಾಗಿ ಏಳು ದಿನಗಳನ್ನು ಲೆಕ್ಕಿಸಬೇಕು.
ಯಾಜಕಕಾಂಡ 15 : 29 (OCVKN)
ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು, ದೇವದರ್ಶನದ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರಬೇಕು.
ಯಾಜಕಕಾಂಡ 15 : 30 (OCVKN)
ಯಾಜಕನು ಒಂದನ್ನು ಪಾಪ ಪರಿಹಾರದ ಬಲಿಗಾಗಿಯೂ, ಇನ್ನೊಂದನ್ನು ದಹನಬಲಿಗಾಗಿಯೂ ಸಮರ್ಪಿಸಬೇಕು, ಯಾಜಕನು ಅವಳಿಗಾಗಿ ಅವಳ ಅಶುದ್ಧತೆಯ ಸ್ರಾವದ ವಿಷಯದಲ್ಲಿ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು.
ಯಾಜಕಕಾಂಡ 15 : 31 (OCVKN)
ಯಾಜಕಕಾಂಡ 15 : 32 (OCVKN)
“ ‘ಹೀಗೆ ನೀವು ಇಸ್ರಾಯೇಲರನ್ನು ಅಶುದ್ಧತೆಯಿಂದ ದೂರವಾಗಿರುವಂತೆ ನೋಡಿಕೊಳ್ಳಬೇಕು. ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಅಶುದ್ಧ ಮಾಡದೆ, ತಮ್ಮ ಅಶುದ್ಧತ್ವದಿಂದ ಸಾಯುವುದಿಲ್ಲ.’ ” ಮೇಹಸ್ರಾವವುಳ್ಳವನಿಗೂ ವೀರ್ಯ ಸ್ರಾವವುಳ್ಳವನಿಗೂ ಅವುಗಳಿಂದ ಅಶುದ್ಧವಾಗುವವರೆಗೂ ಇರುವ ನಿಯಮವು ಇದೆ.
ಯಾಜಕಕಾಂಡ 15 : 33 (OCVKN)
ಮುಟ್ಟು ಇರುವವಳಿಗೂ, ಸ್ರಾವವಿರುವ ಪುರುಷನಿಗೂ ಸ್ತ್ರೀಗೂ, ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮ ಇದೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33