ಯಾಜಕಕಾಂಡ 18 : 1 (OCVKN)
ಅಕ್ರಮ ಲೈಂಗಿಕ ಸಂಬಂಧಗಳು ಯೆಹೋವ ದೇವರು ಮೋಶೆಗೆ,
ಯಾಜಕಕಾಂಡ 18 : 2 (OCVKN)
“ನೀನು ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳಬೇಕು, ‘ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
ಯಾಜಕಕಾಂಡ 18 : 3 (OCVKN)
ನೀವು ವಾಸವಾಗಿದ್ದ ಈಜಿಪ್ಟ್ ದೇಶದ ಆಚಾರಗಳನ್ನು ಅನುಸರಿಸಬಾರದು. ನಿಮ್ಮನ್ನು ಸೇರಿಸಲಿರುವ ಕಾನಾನ್ ದೇಶದವರ ಆಚಾರಗಳನ್ನು ನೀವು ಮಾಡಬಾರದು. ಇಲ್ಲವೆ ನೀವು ಅವರ ಪದ್ಧತಿಗಳನುಸಾರ ನಡೆಯಬಾರದು.
ಯಾಜಕಕಾಂಡ 18 : 4 (OCVKN)
ನೀವು ನನ್ನ ನಿರ್ಣಯಗಳನ್ನು ಕೈಗೊಂಡು ಕಟ್ಟಳೆಗಳ ಪ್ರಕಾರ ನಡೆಯಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.
ಯಾಜಕಕಾಂಡ 18 : 5 (OCVKN)
ಆದ್ದರಿಂದ ನೀವು ನನ್ನ ನಿಯಮಗಳನ್ನೂ, ನನ್ನ ನಿರ್ಣಯಗಳನ್ನೂ ಕೈಗೊಳ್ಳಿರಿ. ಇವುಗಳನ್ನು ಅನುಸರಿಸುವವರು ನಿಯಮಗಳ ಮೂಲಕವೇ ಬದುಕುವರು, ನಾನೇ ಯೆಹೋವ ದೇವರು.
ಯಾಜಕಕಾಂಡ 18 : 7 (OCVKN)
“ ‘ನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯೊಡನೆ ಲೈಂಗಿಕ ಸಂಬಂಧ ಬೆಳೆಸಬಾರದು, ನಾನೇ ಯೆಹೋವ ದೇವರು.
ಯಾಜಕಕಾಂಡ 18 : 8 (OCVKN)
“ ‘ನಿನ್ನ ತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಿ, ನಿನ್ನ ತಂದೆಯನ್ನು ಅಗೌರವಿಸಬೇಡ. ಆಕೆ ನಿನ್ನ ತಾಯಿ: ಆಕೆಯೊಂದಿಗೆ ಇಂಥ ಸಂಬಂಧ ಬೇಡ.
ಯಾಜಕಕಾಂಡ 18 : 9 (OCVKN)
“ ‘ನಿನ್ನ ಮಲತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನ್ನ ತಂದೆಗೆ ಅಗೌರವವನ್ನುಂಟು ಮಾಡುವುದು.
ಯಾಜಕಕಾಂಡ 18 : 10 (OCVKN)
“ ‘ನಿನ್ನ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ತಂದೆಯ ಮಗಳಾಗಿರಬಹುದು ಇಲ್ಲವೆ ತಾಯಿಯ ಮಗಳಾಗಿರಬಹುದು. ಆಕೆ ಒಂದೇ ಮನೆಯಲ್ಲಿ ಹುಟ್ಟಿರಬಹುದು ಇಲ್ಲವೆ ಬೇರೆ ಕಡೆಯಲ್ಲಿ ಹುಟ್ಟಿರಬಹುದು ಆಕೆಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ.
ಯಾಜಕಕಾಂಡ 18 : 11 (OCVKN)
“ ‘ನಿನ್ನ ಮಗನ ಮಗಳ ಕೂಡ, ಇಲ್ಲವೆ ಮಗಳ ಮಗಳ ಕೂಡ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನಗೆ ಅಗೌರವವಾಗಿದೆ.
ಯಾಜಕಕಾಂಡ 18 : 12 (OCVKN)
“ ‘ನಿನ್ನ ತಂದೆಯಿಂದ ಜನಿಸಿದ ನಿನ್ನ ತಂದೆಯ ಮಗಳೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ಸಹೋದರಿ.
ಯಾಜಕಕಾಂಡ 18 : 13 (OCVKN)
“ ‘ನಿನ್ನ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ತಂದೆಯ ಸಮೀಪ ಬಂಧು.
ಯಾಜಕಕಾಂಡ 18 : 14 (OCVKN)
“ ‘ನಿನ್ನ ತಾಯಿಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅವಳು ನಿನ್ನ ತಾಯಿಗೆ ಹತ್ತಿರದ ಸಂಬಂಧಿಯಾಗಿದ್ದಾಳೆ.
ಯಾಜಕಕಾಂಡ 18 : 15 (OCVKN)
“ ‘ನಿನ್ನ ತಂದೆಯ ಸಹೋದರನ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಬೇಡ. ನಿನ್ನ ತಂದೆಯ ಸಹೋದರನನ್ನು ಅಗೌರವಿಸಬೇಡ. ಆಕೆ ನಿನ್ನ ದೊಡ್ಡಮ್ಮ.
ಯಾಜಕಕಾಂಡ 18 : 16 (OCVKN)
“ ‘ನಿನ್ನ ಸೊಸೆಯೊಂದಿಗೆ ಲೈಂಗಿಕ ಸಂಪರ್ಕ ಬೇಡ. ಆಕೆ ನಿನ್ನ ಮಗನ ಹೆಂಡತಿ. ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.
ಯಾಜಕಕಾಂಡ 18 : 17 (OCVKN)
“ ‘ನೀನು ನಿನ್ನ ಸಹೋದರನ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನ್ನ ಸಹೋದರನನ್ನು ಅಗೌರವಿಸುವುದು.
ಯಾಜಕಕಾಂಡ 18 : 18 (OCVKN)
“ ‘ಸ್ತ್ರೀಯೊಂದಿಗೂ, ಆಕೆಯ ಮಗಳೊಂದಿಗೂ ಒಟ್ಟಿಗೆ ಲೈಂಗಿಕ ಸಂಪರ್ಕ ಬೇಡ. ಆಕೆಯ ಮಗನ ಮಗಳೊಂದಿಗಾದರೂ, ಮಗಳ ಮಗಳೊಂದಿಗಾದರೂ ಲೈಂಗಿಕ ಸಂಪರ್ಕ ಬೇಡ. ಅವರು ಆಕೆಯ ಹತ್ತಿರ ಸಂಬಂಧಿಗಳು. ಅದು ದುಷ್ಟತನ.
ಯಾಜಕಕಾಂಡ 18 : 19 (OCVKN)
“ ‘ನಿನ್ನ ಹೆಂಡತಿಗೆ ವೈರಿಯಾಗುವ ಹಾಗೆ ಅವಳ ಸಹೋದರಿಯನ್ನು ಹೆಂಡತಿಯಾಗಿ ತೆಗೆದುಕೊಳ್ಳಬೇಡ. ಒಬ್ಬಳು ಜೀವಂತವಾಗಿರುವಾಗ ಮತ್ತೊಬ್ಬಳೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ.
ಯಾಜಕಕಾಂಡ 18 : 20 (OCVKN)
“ ‘ಮುಟ್ಟಿನಿಂದ ಅಶುದ್ಧಳಾದ ಸ್ತ್ರೀಯ ಸಂಪರ್ಕ ಮಾಡಬೇಡ.
ಯಾಜಕಕಾಂಡ 18 : 21 (OCVKN)
“ ‘ಪರರ ಹೆಂಡತಿಯೊಂದಿಗೆ ನೀನು ಸಂಗಮಿಸಿ ಅಶುದ್ಧನಾಗಬೇಡ.
ಯಾಜಕಕಾಂಡ 18 : 22 (OCVKN)
“ ‘ನಿನ್ನ ಮಕ್ಕಳಲ್ಲಿ ಯಾರನ್ನೂ ಮೋಲೆಕ್ ದೇವತೆಗೆ ಸಮರ್ಪಿಸಿ, ನಿನ್ನ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು. ನಾನು ಯೆಹೋವ ದೇವರು.
ಯಾಜಕಕಾಂಡ 18 : 23 (OCVKN)
“ ‘ಸ್ತ್ರೀಯೊಂದಿಗೆ ಮಲಗಿಕೊಳ್ಳುವಂತೆ ಪುರುಷನೊಂದಿಗೆ ಮಲಗಬಾರದು. ಅದು ಅಸಹ್ಯವಾದದ್ದು.
ಯಾಜಕಕಾಂಡ 18 : 24 (OCVKN)
“ ‘ಇದಲ್ಲದೆ ಪಶುವಿನೊಂದಿಗೆ ನೀನು ಮಲಗಿ ನಿನ್ನನ್ನು ಅಶುದ್ಧಮಾಡಿಕೊಳ್ಳಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು. ಅದು ಸ್ವಭಾವಕ್ಕೆ ವ್ಯತಿರಿಕ್ತವಾದದ್ದು. “ ‘ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು. ಏಕೆಂದರೆ ನಿಮ್ಮ ಮುಂದೆಯೇ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಿಂದ ಹೊಲೆಯಾಗಿವೆ.
ಯಾಜಕಕಾಂಡ 18 : 25 (OCVKN)
ದೇಶವೂ ಅಶುದ್ಧವಾಗಿದೆ. ಆದ್ದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು. ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವುದು.
ಯಾಜಕಕಾಂಡ 18 : 26 (OCVKN)
ಆದ್ದರಿಂದ ನೀವು ನನ್ನ ನಿಯಮಗಳನ್ನು, ನನ್ನ ನಿರ್ಣಯಗಳನ್ನು ಕೈಗೊಳ್ಳಬೇಕು. ಸ್ವದೇಶದವರಲ್ಲಿ ಯಾವನಾಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನೂ ಮಾಡಬಾರದು.
ಯಾಜಕಕಾಂಡ 18 : 27 (OCVKN)
ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲಾ ಅಸಹ್ಯವಾದವುಗಳನ್ನು ಮಾಡಿದ್ದರಿಂದ ದೇಶವೂ ಅಶುದ್ಧವಾಯಿತು.
ಯಾಜಕಕಾಂಡ 18 : 28 (OCVKN)
ನೀವೂ ಅದನ್ನು ಅಶುದ್ಧಮಾಡಿದರೆ, ಅದು ನಿಮಗಿಂತ ಮೊದಲಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವುದು.
ಯಾಜಕಕಾಂಡ 18 : 29 (OCVKN)
“ ‘ಏಕೆಂದರೆ ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವುದನ್ನಾದರೂ ಮಾಡಿದರೆ, ಅವನನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
ಯಾಜಕಕಾಂಡ 18 : 30 (OCVKN)
ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30