ಯಾಜಕಕಾಂಡ 22 : 1 (OCVKN)
ತರುವಾಯ ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
ಯಾಜಕಕಾಂಡ 22 : 2 (OCVKN)
“ಆರೋನನೊಂದಿಗೂ, ಅವನ ಪುತ್ರರೊಂದಿಗೂ ಮಾತನಾಡು, ಅವರು ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡದಂತೆ ಇಸ್ರಾಯೇಲರು ನನಗೆ ಸಲ್ಲಿಸುವ ಪರಿಶುದ್ಧವಾದವುಗಳನ್ನು ಗೌರವದಿಂದ ಅವರು ಪ್ರತ್ಯೇಕವಾಗಿರಿಸಬೇಕು. ನಾನೇ ಯೆಹೋವ ದೇವರು.
ಯಾಜಕಕಾಂಡ 22 : 3 (OCVKN)
ಯಾಜಕಕಾಂಡ 22 : 4 (OCVKN)
“ಅವರಿಗೆ ನೀನು ಹೀಗೆ ಹೇಳು: ‘ನಿಮ್ಮ ಎಲ್ಲಾ ಸಂತತಿಯ ವಂಶಾವಳಿಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲರು ಯೆಹೋವ ದೇವರಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ, ಅವನನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು. ನಾನೇ ಯೆಹೋವ ದೇವರು. “ ‘ಆರೋನನ ಸಂತತಿಯವರಲ್ಲಿ ಯಾವನಾದರೂ ಚರ್ಮರೋಗ ಇಲ್ಲವೆ ಸ್ರಾವವುಳ್ಳವನಿದ್ದರೆ, ಅವನು ಶುದ್ಧನಾಗುವವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು
ಯಾಜಕಕಾಂಡ 22 : 5 (OCVKN)
ಇಲ್ಲವೆ ತನ್ನನ್ನು ಅಶುದ್ಧನಾಗುವಂತೆ ಹರಿದಾಡುವ ಯಾವುದನ್ನಾಗಲಿ ಇಲ್ಲವೆ ಅಶುದ್ಧ ಮನುಷ್ಯನನ್ನಾಗಲಿ ಮುಟ್ಟಿದವನು,
ಯಾಜಕಕಾಂಡ 22 : 6 (OCVKN)
ಸಂಜೆಯವರೆಗೆ ಅಶುದ್ಧನಾಗಿರಬೇಕು. ಅವನು ನೀರಿನಲ್ಲಿ ಸ್ನಾನಮಾಡಿದ ಮೇಲೆ ಪರಿಶುದ್ಧವಾದವುಗಳನ್ನು ತಿನ್ನಬಹುದು.
ಯಾಜಕಕಾಂಡ 22 : 7 (OCVKN)
ಸೂರ್ಯನು ಮುಳುಗಿದಾಗ ಅವನು ಶುದ್ಧನಾಗಿರುವನು. ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ. ಏಕೆಂದರೆ ಅದು ಅವನಿಗೆ ಆಹಾರ.
ಯಾಜಕಕಾಂಡ 22 : 8 (OCVKN)
ತನ್ನನ್ನು ಅಶುದ್ಧಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವುದನ್ನಾಗಲಿ ಇಲ್ಲವೆ ಕಾಡುಮೃಗಗಳಿಂದ ಕೊಂದದ್ದನ್ನಾಗಲಿ ತಿನ್ನಬಾರದು. ನಾನೇ ಯೆಹೋವ ದೇವರು.
ಯಾಜಕಕಾಂಡ 22 : 9 (OCVKN)
ಯಾಜಕಕಾಂಡ 22 : 10 (OCVKN)
“ ‘ಯಾಜಕರು ಅದನ್ನು ಅಪವಿತ್ರ ಪಡಿಸಿದರೆ, ಅದರ ನಿಮಿತ್ತ ಅಪರಾಧಿಯಾಗಿ ಸಾಯದಂತೆ ನನ್ನ ವಿಧಿಗಳನ್ನು ಕೈಗೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ. “ ‘ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಅತಿಥಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.
ಯಾಜಕಕಾಂಡ 22 : 11 (OCVKN)
ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ, ಅವನು ಅದರಲ್ಲಿ ತಿನ್ನಬಹುದು. ಅವನ ಮನೆಯಲ್ಲಿ ಹುಟ್ಟಿದವನು ಅದನ್ನು ತಿನ್ನಬಹುದು.
ಯಾಜಕಕಾಂಡ 22 : 12 (OCVKN)
ಯಾಜಕನ ಮಗಳು ಒಬ್ಬ ಯಾಜಕನಲ್ಲದವನನ್ನು ಮದುವೆಯಾದರೆ, ಅವಳು ಸಮರ್ಪಣೆಯಾದ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.
ಯಾಜಕಕಾಂಡ 22 : 13 (OCVKN)
ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಗಂಡಬಿಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ, ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ. ಆದರೆ ಯಾಜಕರಲ್ಲದ ಕುಟುಂಬದವರು ಅದರಲ್ಲಿ ತಿನ್ನಬಾರದು.
ಯಾಜಕಕಾಂಡ 22 : 14 (OCVKN)
“ ‘ಇದಲ್ಲದೆ ಯಾವನಾದರೂ ತಿಳಿಯದೆ ಪರಿಶುದ್ಧವಾದದ್ದನ್ನು ತಿಂದರೆ, ಅವನು ಅದರ ಐದನೆಯ ಪಾಲನ್ನು ಕೂಡಿಸಿ, ಪರಿಶುದ್ಧವಾದದ್ದನ್ನು ಯಾಜಕನಿಗೆ ಕೊಡಬೇಕು.
ಯಾಜಕಕಾಂಡ 22 : 15 (OCVKN)
ಇಸ್ರಾಯೇಲರು ಯೆಹೋವ ದೇವರಿಗೆ ಅರ್ಪಿಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು.
ಯಾಜಕಕಾಂಡ 22 : 16 (OCVKN)
ಇಲ್ಲವೆ ಅವರು ಪರಿಶುದ್ಧವಾದವುಗಳನ್ನು ತಿನ್ನುವುದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’ ”
ಯಾಜಕಕಾಂಡ 22 : 17 (OCVKN)
ಅಂಗೀಕೃತವಾಗದ ಅರ್ಪಣೆಗಳು ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
ಯಾಜಕಕಾಂಡ 22 : 18 (OCVKN)
“ಆರೋನನೊಂದಿಗೂ, ಅವನ ಪುತ್ರರೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದದ್ದು ಇದೇ, ‘ಇಸ್ರಾಯೇಲ್ ಮನೆತನದವರಲ್ಲಿಯಾಗಲಿ, ಇಸ್ರಾಯೇಲರಾದ ಪರಕೀಯರಲ್ಲಿಯಾಗಲಿ ಯಾರಾದರೂ ತಮ್ಮ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಯೆಹೋವ ದೇವರಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ
ಯಾಜಕಕಾಂಡ 22 : 19 (OCVKN)
ನೀವು ನಿಮ್ಮ ಸ್ವಯಿಚ್ಛೆಯಿಂದ ಕಳಂಕರಹಿತವಾದ ಗಂಡು ಪಶು, ಕುರಿ ಅಥವಾ ಮೇಕೆಯನ್ನೇ ಅರ್ಪಿಸಬೇಕು.
ಯಾಜಕಕಾಂಡ 22 : 20 (OCVKN)
ಆದರೆ ದೋಷವಿರುವ ಯಾವುದನ್ನೂ ಸಮರ್ಪಿಸಬಾರದು. ಏಕೆಂದರೆ ಅದು ನಿಮಗೋಸ್ಕರ ಅಂಗೀಕಾರವಾಗುವುದಿಲ್ಲ.
ಯಾಜಕಕಾಂಡ 22 : 21 (OCVKN)
ತಮ್ಮ ಪ್ರಮಾಣವನ್ನು ಪೂರೈಸುವ ಹಾಗೆ ಯಾರಾದರೂ ಸಮಾಧಾನದ ಬಲಿಯನ್ನಾಗಲಿ, ಪಶುಗಳನ್ನಾಗಲಿ, ಕುರಿಗಳನ್ನಾಗಲಿ ಉಚಿತವಾದ ಕಾಣಿಕೆಯಾಗಿ ಯೆಹೋವ ದೇವರಿಗೆ ಅರ್ಪಿಸುವುದಾದರೆ, ಅದು ಅಂಗೀಕಾರಕ್ಕೆ ಪರಿಪೂರ್ಣವುಳ್ಳದ್ದಾಗಿರಬೇಕು. ಅದರೊಳಗೆ ಯಾವ ದೋಷವೂ ಕಳಂಕವೂ ಇರಬಾರದು.
ಯಾಜಕಕಾಂಡ 22 : 22 (OCVKN)
ಕುರುಡಾದದ್ದು, ಮುರಿದದ್ದು, ಅಂಗಹೀನವಾದದ್ದು, ಬೊಕ್ಕೆಯುಳ್ಳದ್ದು, ಕಜ್ಜಿ ತುರಿಯುಳ್ಳದ್ದು, ಇವುಗಳನ್ನು ನೀವು ಯೆಹೋವ ದೇವರಿಗೆ ಸಮರ್ಪಿಸಲೂಬಾರದು ಮತ್ತು ಅವುಗಳನ್ನು ಬಲಿಪೀಠದ ಮೇಲೆ ದಹನಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಲೂಬಾರದು.
ಯಾಜಕಕಾಂಡ 22 : 23 (OCVKN)
ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆಯಿರುವುದಾದರೆ, ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು. ಆದರೆ ಹರಕೆಯಾಗಿ ಅದು ಅಂಗೀಕಾರವಾಗುವುದಿಲ್ಲ.
ಯಾಜಕಕಾಂಡ 22 : 24 (OCVKN)
ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವುದನ್ನೂ ಯೆಹೋವ ದೇವರಿಗೆ ಸಮರ್ಪಿಸಬಾರದು. ನಿಮ್ಮ ದೇಶದೊಳಗಿರುವ ಅಂಥ ಯಾವ ಬಲಿಯನ್ನಾದರೂ ನೀವು ಸಮರ್ಪಿಸಬಾರದು.
ಯಾಜಕಕಾಂಡ 22 : 25 (OCVKN)
ಇದಲ್ಲದೆ ಪರಕೀಯನಿಂದ ತೆಗೆದುಕೊಂಡ ಅಂತಹ ಯಾವ ಪಶುವನ್ನೂ ನಿಮ್ಮ ದೇವರಿಗೆ ಆಹಾರವಾಗಿ ಅರ್ಪಿಸಬಾರದು. ಏಕೆಂದರೆ ಅವರ ಕುಂದುಳ್ಳದ್ದು ಮತ್ತು ದೋಷಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರವಾಗಿ ಅಂಗೀಕಾರವಾಗುವುದಿಲ್ಲ.’ ”
ಯಾಜಕಕಾಂಡ 22 : 26 (OCVKN)
ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,
ಯಾಜಕಕಾಂಡ 22 : 27 (OCVKN)
“ಹೋರಿಯನ್ನಾಗಲಿ ಇಲ್ಲವೆ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ, ಏಳು ದಿವಸಗಳವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸಿದರೆ ಅಂಗೀಕಾರವಾಗುವುದು.
ಯಾಜಕಕಾಂಡ 22 : 28 (OCVKN)
ಹಸುವನ್ನಾಗಲಿ ಇಲ್ಲವೆ ಕುರಿಯನ್ನಾಗಲಿ ಅದರ ಮರಿಯೊಂದಿಗೆ ಎರಡನ್ನೂ ಒಂದೇ ದಿನದಲ್ಲಿ ವಧಿಸಬಾರದು.
ಯಾಜಕಕಾಂಡ 22 : 29 (OCVKN)
“ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು, ಯೆಹೋವ ದೇವರಿಗೆ ಮಾಡುವ ಬಲಿದಾನವನ್ನು ಮೆಚ್ಚಿಗೆಯಾದ ರೀತಿಯಲ್ಲಿ ಸಮರ್ಪಿಸಬೇಕು.
ಯಾಜಕಕಾಂಡ 22 : 30 (OCVKN)
ಅದೇ ದಿನದಲ್ಲಿ ಅದನ್ನು ತಿಂದುಬಿಡಬೇಕು. ಅದರಲ್ಲಿ ಯಾವುದನ್ನೂ ಮಾರನೆಯ ದಿನದವರೆಗೆ ಉಳಿಸಬಾರದು. ನಾನೇ ಯೆಹೋವ ದೇವರು.
ಯಾಜಕಕಾಂಡ 22 : 31 (OCVKN)
“ಆದ್ದರಿಂದ ನೀವು ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳನ್ನು ಮಾಡಬೇಕು. ನಾನೇ ಯೆಹೋವ ದೇವರು.
ಯಾಜಕಕಾಂಡ 22 : 32 (OCVKN)
ನನ್ನ ಪರಿಶುದ್ಧವಾದ ಹೆಸರನ್ನು ಅಪರಿಶುದ್ಧಗೊಳಿಸಬಾರದು, ಏಕೆಂದರೆ ಇಸ್ರಾಯೇಲರ ಮಧ್ಯದಲ್ಲಿ ನಾನು ಪರಿಶುದ್ಧನೆಂದು ಪರಿಗಣಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವ ದೇವರು ನಾನೇ.
ಯಾಜಕಕಾಂಡ 22 : 33 (OCVKN)
ನಿಮಗೆ ದೇವರಾಗಿರಲು ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದೆನು. ನಾನೇ ಯೆಹೋವ ದೇವರು.”

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33