ಲೂಕನು 19 : 1 (OCVKN)
ಸುಂಕದವನಾದ ಜಕ್ಕಾಯನು ಯೇಸು ಯೆರಿಕೋ ಪಟ್ಟಣವನ್ನು ಪ್ರವೇಶಿಸಿ ಅಲ್ಲಿಂದ ಪ್ರಯಾಣ ಮಾಡುತ್ತಿದ್ದರು.
ಲೂಕನು 19 : 2 (OCVKN)
ಅಲ್ಲಿ ಜಕ್ಕಾಯ ಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಸುಂಕದವರಲ್ಲಿ ಮುಖಂಡನೂ ಐಶ್ವರ್ಯವಂತನೂ ಆಗಿದ್ದನು.
ಲೂಕನು 19 : 3 (OCVKN)
ಅವನು ಯೇಸು ಯಾರೆಂದು ಕಾಣಬೇಕೆಂದು ಅಪೇಕ್ಷಿಸಿದರೂ ತಾನು ಕುಳ್ಳನಾಗಿದ್ದದರಿಂದ ಜನರ ಗುಂಪಿನ ನಿಮಿತ್ತವಾಗಿ ಅವರನ್ನು ಕಾಣಲಾರದೆ ಇದ್ದನು.
ಲೂಕನು 19 : 4 (OCVKN)
ಆಗ ಯೇಸುವನ್ನು ಕಾಣುವಂತೆ ಅವನು ಮುಂದಾಗಿ ಓಡಿಹೋಗಿ, ಒಂದು ಅತ್ತಿಮರವನ್ನು ಹತ್ತಿದನು. ಏಕೆಂದರೆ ಯೇಸು ಆ ಮಾರ್ಗವಾಗಿಯೇ ಬರುತ್ತಿದ್ದರು.
ಲೂಕನು 19 : 5 (OCVKN)
ಯೇಸು ಆ ಸ್ಥಳಕ್ಕೆ ಬಂದು, ಮೇಲಕ್ಕೆ ನೋಡಿ ಅವನಿಗೆ, “ಜಕ್ಕಾಯನೇ, ತಕ್ಷಣವೇ ಇಳಿದು ಬಾ. ನಾನು ಇಂದು ನಿನ್ನ ಮನೆಯಲ್ಲಿ ತಂಗಬೇಕು,” ಎಂದರು.
ಲೂಕನು 19 : 6 (OCVKN)
ಜಕ್ಕಾಯನು ತಕ್ಷಣವೇ ಇಳಿದುಬಂದು ಅವರನ್ನು ಸಂತೋಷದಿಂದ ಬರಮಾಡಿಕೊಂಡನು.
ಲೂಕನು 19 : 7 (OCVKN)
ಲೂಕನು 19 : 8 (OCVKN)
ಇದನ್ನು ಕಂಡವರೆಲ್ಲರೂ, “ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ,” ಎಂದು ಗೊಣಗುಟ್ಟಿದರು.
ಲೂಕನು 19 : 9 (OCVKN)
ಆದರೆ ಜಕ್ಕಾಯನು ನಿಂತುಕೊಂಡು ಕರ್ತದೇವರಿಗೆ, “ಸ್ವಾಮೀ, ಇಗೋ, ನನ್ನ ಸ್ವತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಟ್ಟುಬಿಡುತ್ತೇನೆ. ನಾನು ಯಾರಿಗಾದರೂ ಏನಾದರೂ ಮೋಸಮಾಡಿ ಅವರಿಂದ ತೆಗೆದುಕೊಂಡಿದ್ದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು. ಯೇಸು ಅವನಿಗೆ, “ಈ ದಿನವೇ ಈ ಮನೆಗೆ ರಕ್ಷಣೆ ಬಂದಿದೆ. ಏಕೆಂದರೆ ಇವನು ಸಹ ಅಬ್ರಹಾಮನ ಪುತ್ರನಲ್ಲವೇ?
ಲೂಕನು 19 : 10 (OCVKN)
ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು,” ಎಂದು ಹೇಳಿದರು.
ಲೂಕನು 19 : 11 (OCVKN)
ಹತ್ತು ನಾಣ್ಯಗಳ ಸಾಮ್ಯ ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ, ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದುದರಿಂದಲೂ ದೇವರ ರಾಜ್ಯವು ಕೂಡಲೇ ಪ್ರತ್ಯಕ್ಷವಾಗುವುದೆಂದು ಅವರು ಭಾವಿಸಿದ್ದರಿಂದ
ಲೂಕನು 19 : 12 (OCVKN)
ಯೇಸು ಇನ್ನೊಂದು ಸಾಮ್ಯವನ್ನು ಹೇಳಿದರು: “ಘನವಂತನಾಗಿದ್ದ ಒಬ್ಬನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರುಗಿ ಬರುವುದಕ್ಕಾಗಿ ದೂರದೇಶಕ್ಕೆ ಹೊರಟುಹೋದನು.
ಲೂಕನು 19 : 13 (OCVKN)
ಆ ವ್ಯಕ್ತಿ ತನ್ನ ಹತ್ತು ಕೆಲಸಗಾರರನ್ನು ಕರೆದು, ಅವರಿಗೆ ಹತ್ತು ನಾಣ್ಯಗಳನ್ನು* ಒಂದು ನಾಣ್ಯ, ಸುಮಾರು ಮೂರು ತಿಂಗಳ ಕೂಲಿಗೆ ಸಮ ಒಪ್ಪಿಸಿ, ‘ನಾನು ಬರುವವರೆಗೆ ವ್ಯಾಪಾರ ಮಾಡಿಕೊಂಡಿರಿ,’ ಎಂದು ಹೇಳಿದನು.
ಲೂಕನು 19 : 14 (OCVKN)
ಲೂಕನು 19 : 15 (OCVKN)
“ಆದರೆ ಅವನ ನಾಡಿನವರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮ್ಮ ಅರಸನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ಪ್ರತಿನಿಧಿಗಳನ್ನು ಕಳುಹಿಸಿದರು.
ಲೂಕನು 19 : 16 (OCVKN)
“ಆದರೂ ಅವನು ತನ್ನ ರಾಜ್ಯವನ್ನು ಪಡೆದು ಹಿಂದಿರುಗಿದಾಗ, ವ್ಯಾಪಾರದಿಂದ ಇನ್ನೂ ಎಷ್ಟು ಲಾಭಗಳಿಸಿದರೆಂದು ತಿಳಿದುಕೊಳ್ಳುವಂತೆ, ತಾನು ಹಣ ಕೊಟ್ಟ ಆ ಕೆಲಸಗಾರರನ್ನು ತನ್ನ ಬಳಿಗೆ ಕರೆತರಲು ಆಜ್ಞಾಪಿಸಿದನು.
ಲೂಕನು 19 : 17 (OCVKN)
“ಆಗ ಮೊದಲನೆಯವನು ಬಂದು, ‘ಸ್ವಾಮಿ, ನಿಮ್ಮ ಒಂದು ನಾಣ್ಯದಿಂದ ಇನ್ನೂ ಹತ್ತು ನಾಣ್ಯಗಳನ್ನು ಸಂಪಾದಿಸಿದೆ,’ ಎಂದನು.
ಲೂಕನು 19 : 18 (OCVKN)
“ಅದಕ್ಕೆ ಅವನು, ‘ಚೆನ್ನಾಗಿ ಮಾಡಿದಿ, ಒಳ್ಳೆಯ ಸೇವಕನೇ. ನೀನು ಅತ್ಯಂತ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ, ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು,’ ಎಂದನು.
ಲೂಕನು 19 : 19 (OCVKN)
“ಎರಡನೆಯವನು ಬಂದು, ‘ಸ್ವಾಮಿ, ನಿನ್ನ ಒಂದು ನಾಣ್ಯದಿಂದ ಇನ್ನೂ ಐದು ನಾಣ್ಯಗಳನ್ನು ಸಂಪಾದಿಸಿದೆ,’ ಎಂದನು.
ಲೂಕನು 19 : 20 (OCVKN)
“ಅದಕ್ಕೆ ಅವನು, ‘ನೀನು ಐದು ಪಟ್ಟಣಗಳ ಮೇಲೆ ಅಧಿಕಾರಿಯಾಗಿರು,’ ಎಂದು ಅವನಿಗೆ ಹೇಳಿದನು. “ಆಗ ಮತ್ತೊಬ್ಬನು ಬಂದು, ‘ಸ್ವಾಮಿ, ಇಗೋ, ನಾನು ಕರವಸ್ತ್ರದಲ್ಲಿ ಕಟ್ಟಿಟ್ಟಿದ್ದ ನಿಮ್ಮ ನಾಣ್ಯ ಇದೇ.
ಲೂಕನು 19 : 21 (OCVKN)
ನೀವು ಕಠಿಣ ಮನುಷ್ಯರೆಂದು ನಾನು ನಿಮಗೆ ಭಯಪಟ್ಟೆನು. ನೀನು ಕೂಡಿಡದಿರುವುದನ್ನು ತೆಗೆದುಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ,’ ಎಂದನು.
ಲೂಕನು 19 : 22 (OCVKN)
“ಆಗ ಆ ಯಜಮಾನನು, ‘ಕೆಟ್ಟ ಸೇವಕನೇ! ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿಸುವೆನು. ನಾನು ಕೂಡಿಡದೆ ಇರುವಲ್ಲಿ ತೆಗೆದುಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.
ಲೂಕನು 19 : 23 (OCVKN)
ಹಾಗಿದ್ದರೆ ನನ್ನ ಹಣವನ್ನು ಬಡ್ಡಿ ಅಂಗಡಿಯಲ್ಲಿ ಇದು ಈಗಿನ ಬ್ಯಾಂಕ್ ರೀತಿ ಏಕೆ ಹಾಕಲಿಲ್ಲ, ನಾನು ಹಿಂದಿರುಗಿದಾಗ ಹಣವನ್ನು ಬಡ್ಡಿ ಸಮೇತವಾಗಿ ತೆಗೆದುಕೊಳ್ಳುತ್ತಿದ್ದೆನು,’ ಎಂದು ಹೇಳಿದನು.
ಲೂಕನು 19 : 24 (OCVKN)
ಲೂಕನು 19 : 25 (OCVKN)
“ಯಜಮಾನನು ಹತ್ತಿರ ನಿಂತಿದ್ದವರಿಗೆ, ‘ಇವನಿಂದ ಆ ನಾಣ್ಯವನ್ನು ತೆಗೆದುಕೊಂಡು ಹತ್ತು ನಾಣ್ಯಗಳಿದ್ದವನಿಗೆ ಕೊಡಿರಿ,’ ಎಂದನು.
ಲೂಕನು 19 : 26 (OCVKN)
“ಆಗ ಅವರು, ‘ಸ್ವಾಮಿ, ಅವನಿಗೆ ಈಗಾಗಲೇ ಹತ್ತು ನಾಣ್ಯಗಳಿವೆಯಲ್ಲಾ!’ ಎಂದರು. “ಆಗ ಯಜಮಾನನು, ‘ಇದ್ದ ಪ್ರತಿಯೊಬ್ಬರಿಗೆ ಕೊಡಲಾಗುವುದು ಮತ್ತು ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ಕಸಿದುಕೊಳ್ಳಲಾಗುವುದು.
ಲೂಕನು 19 : 27 (OCVKN)
ಆದರೆ ತಮ್ಮ ಮೇಲೆ ನಾನು ಆಳಿಕೆ ಮಾಡುವುದನ್ನು ಇಷ್ಟಪಡದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ,’ ಎಂದನು.”
ಲೂಕನು 19 : 28 (OCVKN)
ಯೆರೂಸಲೇಮಿನ ಜಯ ಪ್ರವೇಶ ಯೇಸು ಹೀಗೆ ಹೇಳಿದ ತರುವಾಯ, ಶಿಷ್ಯರಿಗೆ ಮುಂದಾಗಿ, ಯೆರೂಸಲೇಮಿಗೆ ಹೊರಟರು.
ಲೂಕನು 19 : 29 (OCVKN)
ಇದಾದ ಮೇಲೆ ಅವರು ಓಲಿವ್ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ, ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕರೆದು,
ಲೂಕನು 19 : 30 (OCVKN)
“ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ, ನೀವು ಅದರೊಳಗೆ ಪ್ರವೇಶಿಸುತ್ತಿರುವಾಗ, ಅಲ್ಲಿ ಕಟ್ಟಿರುವ ಮತ್ತು ಯಾರೂ ಅದರ ಮೇಲೆ ಸವಾರಿ ಮಾಡದಿರುವ ಒಂದು ಕತ್ತೆಮರಿಯನ್ನು ಅಲ್ಲಿ ಕಾಣುವಿರಿ. ಅದನ್ನು ಬಿಚ್ಚಿ ಇಲ್ಲಿಗೆ ತೆಗೆದುಕೊಂಡು ಬನ್ನಿರಿ.
ಲೂಕನು 19 : 31 (OCVKN)
ಯಾರಾದರೂ ನಿಮಗೆ, ‘ಏಕೆ ಅದನ್ನು ಬಿಚ್ಚುತ್ತೀರಿ?’ ಎಂದು ಕೇಳಿದರೆ, ನೀವು ಅವರಿಗೆ, ‘ಇದು ಕರ್ತದೇವರಿಗೆ ಬೇಕಾಗಿದೆ,’ ಎಂದು ಹೇಳಿರಿ,” ಎಂದರು.
ಲೂಕನು 19 : 32 (OCVKN)
ಆ ಶಿಷ್ಯರಿಬ್ಬರೂ ತಮ್ಮ ಮಾರ್ಗವಾಗಿ ಹೊರಟುಹೋಗಿ ಯೇಸು ತಮಗೆ ಹೇಳಿದಂತೆಯೇ ಕಂಡರು.
ಲೂಕನು 19 : 33 (OCVKN)
ಅವರು ಆ ಕತ್ತೆಮರಿಯನ್ನು ಬಿಚ್ಚುತ್ತಿರುವಾಗ, ಅದರ ಯಜಮಾನರು ಅವರಿಗೆ, “ನೀವು ಕತ್ತೆಮರಿಯನ್ನು ಯಾಕೆ ಬಿಚ್ಚುತ್ತೀರಿ?” ಎಂದು ಕೇಳಿದ್ದಕ್ಕೆ,
ಲೂಕನು 19 : 34 (OCVKN)
ಲೂಕನು 19 : 35 (OCVKN)
ಅವರು, “ಇದು ಕರ್ತದೇವರಿಗೆ ಬೇಕಾಗಿದೆ,” ಎಂದರು. ಶಿಷ್ಯರು ಅದನ್ನು ಯೇಸುವಿನ ಬಳಿಗೆ ತಂದು, ತಮ್ಮ ಬಟ್ಟೆಗಳನ್ನು ಕತ್ತೆಮರಿಯ ಮೇಲೆ ಹಾಕಿ, ಅದರ ಮೇಲೆ ಯೇಸುವನ್ನು ಕೂರಿಸಿದರು.
ಲೂಕನು 19 : 36 (OCVKN)
ಯೇಸು ಹೋಗುತ್ತಿರುವಾಗ, ಜನರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.
ಲೂಕನು 19 : 37 (OCVKN)
ಲೂಕನು 19 : 38 (OCVKN)
ಇದಲ್ಲದೆ ಯೇಸು ಓಲಿವ್ ಗುಡ್ಡದಿಂದ ಇಳಿಜಾರನ್ನು ಸಮೀಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ಕಂಡ ಎಲ್ಲ ಮಹತ್ಕಾರ್ಯಗಳಿಗಾಗಿ ಸಂತೋಷಪಡುತ್ತಾ, ಮಹಾ ಸ್ವರದಿಂದ ದೇವರನ್ನು ಹೀಗೆ ಕೊಂಡಾಡಲಾರಂಭಿಸಿದರು: “ಕರ್ತದೇವರ ಹೆಸರಿನಲ್ಲಿ ಬರುವ ಅರಸನು ಆಶೀರ್ವಾದ ಹೊಂದಲಿ!” “ಪರಲೋಕದಲ್ಲಿ ಸಮಾಧಾನ, ಅತ್ಯುನ್ನತದಲ್ಲಿ ಮಹಿಮೆ!” ಕೀರ್ತನೆ 118:26
ಲೂಕನು 19 : 39 (OCVKN)
ಲೂಕನು 19 : 40 (OCVKN)
ಜನಸಮೂಹದಲ್ಲಿದ್ದ ಕೆಲವು ಫರಿಸಾಯರು ಯೇಸುವಿಗೆ, “ಬೋಧಕರೇ, ನಿಮ್ಮ ಶಿಷ್ಯರನ್ನು ಗದರಿಸಿ!” ಎಂದರು.
ಲೂಕನು 19 : 41 (OCVKN)
ಆಗ ಯೇಸು ಅವರಿಗೆ, “ಇವರು ಸುಮ್ಮನಾದರೆ, ಈ ಕಲ್ಲುಗಳು ಕೂಗುವವು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು. ತರುವಾಯ ಯೇಸು ಯೆರೂಸಲೇಮ ಪಟ್ಟಣವನ್ನೂ ಅದರ ಸ್ಥಿತಿಯನ್ನೂ ಕಂಡು, ಅದರ ಸಲುವಾಗಿ ಅತ್ತು,
ಲೂಕನು 19 : 42 (OCVKN)
“ನೀನು ಇಂದಾದರೂ ನಿನ್ನ ಸಮಾಧಾನದ ವಿಷಯಗಳನ್ನು ಅರಿತುಕೊಂಡಿದ್ದರೆ, ಚೆನ್ನಾಗಿತ್ತು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.
ಲೂಕನು 19 : 43 (OCVKN)
ನಿನ್ನ ಶತ್ರುಗಳು ನಿನ್ನ ಸುತ್ತಲೂ ಅಡ್ಡಗೋಡೆಯನ್ನು ಕಟ್ಟಿ, ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಬಂಧಿಸುವ ದಿನಗಳು ಬರುವವು.
ಲೂಕನು 19 : 44 (OCVKN)
ಇದಲ್ಲದೆ ಅವರು ಗೋಡೆಯೊಳಗಿನ ನಿನ್ನನ್ನೂ ನಿನ್ನ ಮಕ್ಕಳನ್ನೂ ನೆಲಕ್ಕೆ ಬಡಿಯುವರು. ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ ದೇವರು ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲ,” ಎಂದರು.
ಲೂಕನು 19 : 45 (OCVKN)
ದೇವಾಲಯದಲ್ಲಿ ಯೇಸು ಅನಂತರ ಯೇಸು ದೇವಾಲಯದ ಅಂಗಳದೊಳಗೆ ಹೋಗಿ, ಅದರಲ್ಲಿ ವ್ಯಾಪಾರಮಾಡುವವರನ್ನು ಹೊರಗೆ ಹಾಕುವುದಕ್ಕೆ ಪ್ರಾರಂಭಿಸಿ,
ಲೂಕನು 19 : 46 (OCVKN)
ಅವರಿಗೆ, “ ‘ನನ್ನ ಮನೆಯು ಪ್ರಾರ್ಥನೆಯ ಮನೆಯಾಗಿದೆ,’§ ಯೆಶಾಯ 56:7 ಎಂದು ಬರೆದದೆ. ನೀವೋ ಅದನ್ನು, ‘ಕಳ್ಳರ ಗವಿಯನ್ನಾಗಿ’ ಮಾಡಿದ್ದೀರಿ,” * ಯೆರೆ 7:11 ಎಂದರು.
ಲೂಕನು 19 : 47 (OCVKN)
ಯೇಸು ಪ್ರತಿದಿನವೂ ದೇವಾಲಯದಲ್ಲಿ ಬೋಧಿಸುತ್ತಿದ್ದರು. ಆದರೆ ಮುಖ್ಯಯಾಜಕರೂ ನಿಯಮ ಬೋಧಕರೂ ಜನರ ಪ್ರಮುಖರೂ ಯೇಸುವನ್ನು ಕೊಲ್ಲುವುದಕ್ಕೆ ಹವಣಿಸುತ್ತಿದ್ದರು.
ಲೂಕನು 19 : 48 (OCVKN)
ಜನರೆಲ್ಲರೂ ಯೇಸು ಹೇಳುವ ಒಂದೊಂದು ಮಾತಿಗೂ ಬಹಳ ಲಕ್ಷ್ಯಕೊಟ್ಟು ಯೇಸುವಿನ ಉಪದೇಶವನ್ನು ಕೇಳುತ್ತಿದ್ದುದರಿಂದ, ಅವರಿಗೆ ಏನು ಮಾಡಬೇಕೋ ತೋಚಲಿಲ್ಲ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48