ಲೂಕನು 2 : 1 (OCVKN)
ಕ್ರಿಸ್ತ ಯೇಸುವಿನ ಜನನವು ಆ ದಿನಗಳಲ್ಲಿ ಇಡೀ ರೋಮನ್ ರಾಜ್ಯದಲ್ಲಿ ಜನಗಣತಿಯಾಗಬೇಕೆಂದು ಕೈಸರ್ ಔಗುಸ್ತನಿಂದ ಶಾಸನವು ಹೊರಟಿತು.
ಲೂಕನು 2 : 2 (OCVKN)
ಕುರೇನ್ಯನು ಸಿರಿಯ ಪ್ರಾಂತಕ್ಕೆ ಅಧಿಪತಿಯಾಗಿದ್ದಾಗ, ಈ ಜನಗಣತಿಯು ಮೊದಲನೆಯ ಸಾರಿ ನಡೆಯಿತು.
ಲೂಕನು 2 : 3 (OCVKN)
ಆಗ ಎಲ್ಲರೂ ತಮ್ಮ ಹೆಸರುಗಳನ್ನು ದಾಖಲೆ ಮಾಡಿಸಿಕೊಳ್ಳುವುದಕ್ಕಾಗಿ ತಮ್ಮ ತಮ್ಮ ಸ್ವಂತ ಪಟ್ಟಣಗಳಿಗೆ ಹೋದರು.
ಲೂಕನು 2 : 4 (OCVKN)
ಯೋಸೇಫನು ದಾವೀದನ ಕುಟುಂಬದವನೂ ವಂಶದವನೂ ಆಗಿದ್ದರಿಂದ, ಅವನು ಸಹ ಗಲಿಲಾಯ ಪ್ರಾಂತದ ನಜರೇತೆಂಬ ಪಟ್ಟಣದಿಂದ ಯೂದಾಯ ಪ್ರಾಂತದ ಬೇತ್ಲೆಹೇಮ್ ಎಂಬ ದಾವೀದನ ಪಟ್ಟಣಕ್ಕೆ ಹೋದನು.
ಲೂಕನು 2 : 5 (OCVKN)
ಅವನು ತನಗೆ ನಿಶ್ಚಯಿಸಿದ್ದ ಮತ್ತು ಪೂರ್ಣ ಗರ್ಭಿಣಿಯಾಗಿದ್ದ ಮರಿಯಳೊಂದಿಗೆ ಜನಗಣತಿಯ ದಾಖಲೆ ಮಾಡಿಸಿಕೊಳ್ಳುವುದಕ್ಕಾಗಿ ಹೋದನು.
ಲೂಕನು 2 : 6 (OCVKN)
ಅವರು ಬೇತ್ಲೆಹೇಮಿನಲ್ಲಿ ಇದ್ದಾಗ, ಆಕೆಗೆ ಹೆರಿಗೆಯ ಕಾಲ ಸಮೀಪಿಸಿತು.
ಲೂಕನು 2 : 7 (OCVKN)
ಮರಿಯಳು ತನ್ನ ಚೊಚ್ಚಲು ಮಗನನ್ನು ಹೆತ್ತು, ಬಟ್ಟೆಗಳಿಂದ ಸುತ್ತಿ, ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಶಿಶುವನ್ನು ದನದ ಕೊಟ್ಟಿಗೆಯಲ್ಲಿ ಮಲಗಿಸಿದಳು.
ಲೂಕನು 2 : 8 (OCVKN)
ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು, ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು.
ಲೂಕನು 2 : 9 (OCVKN)
ಆಗ ಕರ್ತದೇವರ ದೂತನು ಅವರಿಗೆ ಪ್ರತ್ಯಕ್ಷನಾದನು. ಕರ್ತದೇವರ ಮಹಿಮೆಯು ಅವರ ಸುತ್ತಲೂ ಪ್ರಕಾಶಿಸಿತು, ಅವರು ಬಹಳವಾಗಿ ಹೆದರಿದರು.
ಲೂಕನು 2 : 10 (OCVKN)
ಆ ದೂತನು ಅವರಿಗೆ, “ಹೆದರಬೇಡಿರಿ. ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಶುಭಸಮಾಚಾರವನ್ನು ನಾನು ನಿಮಗೆ ತಿಳಿಸುತ್ತೇನೆ.
ಲೂಕನು 2 : 11 (OCVKN)
ಅದೇನೆಂದರೆ, ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕರು ಹುಟ್ಟಿದ್ದಾರೆ. ಅವರು ಯಾರೆಂದರೆ ಕರ್ತದೇವರು ಆಗಿರುವ ಕ್ರಿಸ್ತ.
ಲೂಕನು 2 : 12 (OCVKN)
ಅಲ್ಲಿ ಬಟ್ಟೆಯಿಂದ ಸುತ್ತಿರುವ ಶಿಶುವು ಕೊಟ್ಟಿಗೆಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ. ಇದೇ ನಿಮಗೆ ಗುರುತು,” ಎಂದು ಹೇಳಿದನು.
ಲೂಕನು 2 : 13 (OCVKN)
ಲೂಕನು 2 : 14 (OCVKN)
ತಕ್ಷಣವೇ ಆ ದೂತನ ಸಂಗಡ ಇದ್ದ ಪರಲೋಕ ಸೈನ್ಯದ ಸಮೂಹವು ದೇವರನ್ನು ಕೊಂಡಾಡುತ್ತಾ ಹೀಗೆ ಹೇಳಿದರು: “ಮಹೋನ್ನತದಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರ ಮೆಚ್ಚುಗೆ, ಮಾನವರಿಗೆ ಸಮಾಧಾನ.”
ಲೂಕನು 2 : 15 (OCVKN)
ಲೂಕನು 2 : 16 (OCVKN)
ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೋದ ಮೇಲೆ ಕುರುಬರು, “ದೇವರು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಅವಸರದಿಂದ ಹೋಗಿ ಮರಿಯಳನ್ನೂ ಯೋಸೇಫನನ್ನೂ ಕೊಟ್ಟಿಗೆಯಲ್ಲಿ ಮಲಗಿದ್ದ ಶಿಶುವನ್ನು ಕಂಡರು.
ಲೂಕನು 2 : 17 (OCVKN)
ಅನಂತರ, ಈ ಶಿಶುವಿನ ವಿಷಯವಾಗಿ ತಮಗೆ ತಿಳಿಯಪಡಿಸಿದ ದೇವದೂತನ ಮಾತನ್ನು ಪ್ರಕಟಮಾಡಿದರು.
ಲೂಕನು 2 : 18 (OCVKN)
ಕುರುಬರು ಹೇಳಿದ ವಿಷಯಗಳನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.
ಲೂಕನು 2 : 19 (OCVKN)
ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟುಕೊಂಡು ಆಲೋಚಿಸುತ್ತಿದ್ದಳು.
ಲೂಕನು 2 : 20 (OCVKN)
ತಮಗೆ ತಿಳಿಸಿದ ಪ್ರಕಾರವೇ ಕುರುಬರು ತಾವು ಕೇಳಿ, ಕಂಡ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ, ಕೊಂಡಾಡುತ್ತಾ ಹಿಂದಿರುಗಿ ಹೋದರು.
ಲೂಕನು 2 : 21 (OCVKN)
ಲೂಕನು 2 : 22 (OCVKN)
ಶಿಶುವಿಗೆ ಸುನ್ನತಿ ಮಾಡಬೇಕಾಗಿದ್ದ ಎಂಟನೆಯ ದಿನದಲ್ಲಿ, ಮರಿಯಳು ಗರ್ಭಿಣಿಯಾಗುವುದಕ್ಕೆ ಮುಂಚೆಯೇ ದೂತನು ಸೂಚಿಸಿದ್ದಂತೆ “ಯೇಸು” ಎಂದು ನಾಮಕರಣ ಮಾಡಿದರು. ಯೇಸುವನ್ನು ದೇವಾಲಯದಲ್ಲಿ ಸಮರ್ಪಿಸಿದ್ದು ಮೋಶೆಯ ನಿಯಮದ ಪ್ರಕಾರ ಮರಿಯಳಿಗೆ ಶುದ್ಧೀಕರಣದ* ಯಾಜಕ 12:1-8 ದಿವಸಗಳು ಮುಗಿದ ಮೇಲೆ, ಯೋಸೇಫನು ಮತ್ತು ಮರಿಯಳು ಶಿಶುವನ್ನು ಕರ್ತದೇವರಿಗೆ ಸಮರ್ಪಿಸುವುದಕ್ಕಾಗಿ ಯೆರೂಸಲೇಮಿಗೆ ತಂದರು.
ಲೂಕನು 2 : 23 (OCVKN)
ಕರ್ತದೇವರ ನಿಯಮದಲ್ಲಿ ಬರೆದಿರುವಂತೆ, “ಪ್ರತಿಯೊಂದು ಚೊಚ್ಚಲ ಗಂಡು ಮಗು ಕರ್ತದೇವರಿಗೆ ಪವಿತ್ರವಾಗಿ ಸಮರ್ಪಿಸಬೇಕು,” ವಿಮೋ 13:2,12
ಲೂಕನು 2 : 24 (OCVKN)
ಎಂತಲೂ, “ಒಂದು ಜೊತೆ ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ಬಲಿ ಅರ್ಪಿಸಬೇಕು,” ಯಾಜಕ 12:8 ಎಂತಲೂ ಕರ್ತದೇವರ ನಿಯಮದಲ್ಲಿ ಹೇಳಿರುವ ಪ್ರಕಾರ ಅವರು ಸಮರ್ಪಿಸಿದರು.
ಲೂಕನು 2 : 25 (OCVKN)
ಆಗ ಸಿಮೆಯೋನನೆಂಬ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಅವನು ನೀತಿವಂತನೂ ಭಕ್ತನೂ ಆಗಿದ್ದನು. ಅವನು ಇಸ್ರಾಯೇಲರನ್ನು ಸಂತೈಸುವ ಒಬ್ಬರ ಬರುವಿಕೆಗಾಗಿ ಕಾಯುತ್ತಿದ್ದನು. ಪವಿತ್ರಾತ್ಮ ದೇವರ ಪ್ರಸನ್ನತೆ ಅವನ ಮೇಲಿತ್ತು.
ಲೂಕನು 2 : 26 (OCVKN)
ಇದಲ್ಲದೆ, ಅವನು ಕರ್ತದೇವರು ಕಳುಹಿಸಲಿರುವ ಕ್ರಿಸ್ತನನ್ನು§ ಕ್ರಿಸ್ತ ಯೆಹೂದ್ಯರು ನಿರೀಕ್ಷಿಸುತ್ತಿದ್ದ ವಿಮೋಚಕನು ಕಾಣುವುದಕ್ಕಿಂತ ಮುಂಚೆ ಮರಣ ಹೊಂದುವುದಿಲ್ಲವೆಂದು ಪವಿತ್ರಾತ್ಮನಿಂದ ಅವನಿಗೆ ಪ್ರಕಟನೆಯಾಗಿತ್ತು.
ಲೂಕನು 2 : 27 (OCVKN)
ಅವನು ಪವಿತ್ರಾತ್ಮ ಪ್ರೇರಣೆಯಿಂದ ದೇವಾಲಯದ ಅಂಗಳದೊಳಗೆ ಬಂದನು, ಆಗ ನಿಯಮವನ್ನು ಪೂರೈಸಲು ತಂದೆತಾಯಿಗಳು ಶಿಶು ಯೇಸುವನ್ನು ಒಳಗೆ ತಂದರು.
ಲೂಕನು 2 : 28 (OCVKN)
ಆಗ ಸಿಮೆಯೋನನು ಶಿಶುವನ್ನು ತನ್ನ ಕೈಗಳಲ್ಲಿ ತೆಗೆದುಕೊಂಡು ದೇವರನ್ನು ಕೊಂಡಾಡುತ್ತಾ ಹೀಗೆಂದನು:
ಲೂಕನು 2 : 29 (OCVKN)
“ಸರ್ವೇಶ್ವರರಾದ ಕರ್ತದೇವರೇ, ನಿಮ್ಮ ವಾಗ್ದಾನದ ಪ್ರಕಾರ, ನಿಮ್ಮ ದಾಸನನ್ನು ಸಮಾಧಾನದಿಂದ ಈಗ ಕಳುಹಿಸಿರಿ.
ಲೂಕನು 2 : 30 (OCVKN)
ನನ್ನ ಕಣ್ಣುಗಳು ನಿಮ್ಮ ರಕ್ಷಣೆಯನ್ನು ಕಂಡವು,
ಲೂಕನು 2 : 31 (OCVKN)
ಈ ರಕ್ಷಣೆಯನ್ನು ನೀವು ಎಲ್ಲಾ ಜನಗಳ ಮುಂದೆ ಸಿದ್ಧಪಡಿಸಿದ್ದೀರಿ:
ಲೂಕನು 2 : 32 (OCVKN)
ಅದು ಯೆಹೂದ್ಯರಲ್ಲದವರಿಗೆ ಪ್ರಕಟಣೆಯ ಬೆಳಕೂ, ನಿಮ್ಮ ಪ್ರಜೆಯಾದ ಇಸ್ರಾಯೇಲರ ಮಹಿಮೆಯೂ ಆಗಿದೆ.”
ಲೂಕನು 2 : 33 (OCVKN)
ಶಿಶುವಿನ ವಿಷಯವಾಗಿ ಸಿಮೆಯೋನನು ಹೇಳಿದ ಮಾತುಗಳಿಗೆ ಶಿಶುವಿನ ತಂದೆತಾಯಿಗಳು ಆಶ್ಚರ್ಯಪಟ್ಟರು.
ಲೂಕನು 2 : 34 (OCVKN)
ಅನಂತರ ಸಿಮೆಯೋನನು ಅವರನ್ನು ಆಶೀರ್ವದಿಸಿ, ಶಿಶುವಿನ ತಾಯಿ ಮರಿಯಳಿಗೆ, “ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವುದಕ್ಕೂ ಏಳುವುದಕ್ಕೂ ಈ ಮಗು ನೇಮಕವಾಗಿದೆ, ಜನರು ಎದುರು ಮಾತನಾಡುವುದಕ್ಕೆ ಈ ಮಗು ಗುರುತಾಗಿರುವದು.
ಲೂಕನು 2 : 35 (OCVKN)
ಹೀಗೆ ಅನೇಕ ಹೃದಯಗಳ ಆಲೋಚನೆಗಳು ಪ್ರಕಟವಾಗುವವು. ನಿನ್ನ ಸ್ವಂತ ಪ್ರಾಣವನ್ನು ಸಹ ಖಡ್ಗವು ತಿವಿಯುವುದು” ಎಂದನು.
ಲೂಕನು 2 : 36 (OCVKN)
ಅಲ್ಲಿ ಆಶೇರನ ಗೋತ್ರದ ಫನೂಯೇಲನ ಮಗಳಾದ ಅನ್ನಳೆಂಬ ಒಬ್ಬ ಬಹು ಮುಪ್ಪಿನ ಪ್ರವಾದಿನಿಯಿದ್ದಳು. ಅವಳು ಮದುವೆಯಾಗಿ ಗಂಡನೊಂದಿಗೆ ಏಳು ವರ್ಷ ಬಾಳಿದ್ದಳು.
ಲೂಕನು 2 : 37 (OCVKN)
ಅವಳು ಎಂಬತ್ತನಾಲ್ಕು ವರ್ಷ ವಿಧವೆಯಾಗಿದ್ದು, ದೇವಾಲಯವನ್ನು ಬಿಟ್ಟುಹೋಗದೆ ಉಪವಾಸಗಳಿಂದಲೂ ಪ್ರಾರ್ಥನೆಗಳಿಂದಲೂ ರಾತ್ರಿ ಹಗಲೂ ಆರಾಧನೆ ಮಾಡುತ್ತಿದ್ದಳು.
ಲೂಕನು 2 : 38 (OCVKN)
ಆ ಸಂದರ್ಭದಲ್ಲಿ ಅನ್ನಳು ಬಂದು, ದೇವರನ್ನು ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಶಿಶುವಿನ ವಿಷಯವಾಗಿ ಮಾತನಾಡಿದಳು.
ಲೂಕನು 2 : 39 (OCVKN)
ಯೋಸೇಫನೂ ಮರಿಯಳೂ ಕರ್ತದೇವರ ನಿಯಮದ ಪ್ರಕಾರ ಎಲ್ಲವನ್ನು ಮಾಡಿ ಮುಗಿಸಿದ ಮೇಲೆ, ತಮ್ಮ ಊರಾಗಿದ್ದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.
ಲೂಕನು 2 : 40 (OCVKN)
ಆ ಶಿಶುವು ಬೆಳೆದು ಬಲಗೊಂಡು; ಜ್ಞಾನದಲ್ಲಿ ವೃದ್ಧಿಯಾಯಿತು ಮತ್ತು ದೇವರ ಕೃಪೆಯು ಶಿಶುವಿನ ಮೇಲೆ ಇತ್ತು.
ಲೂಕನು 2 : 41 (OCVKN)
ದೇವಾಲಯದಲ್ಲಿ ಬಾಲಕ ಯೇಸು ಯೇಸುವಿನ ತಂದೆತಾಯಿಗಳು ಪ್ರತಿವರ್ಷವೂ ಪಸ್ಕಹಬ್ಬಕ್ಕೆ* ಅಥವಾ ವಿಮೋಚನೆಯ ಹಬ್ಬ. ದೇವರು ಇಸ್ರಾಯೇಲರನ್ನು ಈಜಿಪ್ಟಿನಿಂದ ಹೇಗೆ ವಿಮೋಚಿಸಿದರು ಎನ್ನುವುದರ ನೆನಪಿಗಾಗಿ ಆಚರಿಸುವ ಹಬ್ಬ ಯೆರೂಸಲೇಮಿಗೆ ಹೋಗುತ್ತಿದ್ದರು.
ಲೂಕನು 2 : 42 (OCVKN)
ಯೇಸುವಿಗೆ ಹನ್ನೆರಡು ವರ್ಷವಾದಾಗ, ಪದ್ಧತಿಯ ಪ್ರಕಾರ ಅವರು ಹಬ್ಬಕ್ಕಾಗಿ ಯೆರೂಸಲೇಮಿಗೆ ಹೋದರು.
ಲೂಕನು 2 : 43 (OCVKN)
ಅವರು ಆ ಹಬ್ಬವನ್ನು ಮುಗಿಸಿಕೊಂಡು ಹಿಂದಿರುಗಿ ಬರುವಾಗ ಬಾಲಕ ಯೇಸು ಯೆರೂಸಲೇಮಿನಲ್ಲಿಯೇ ಉಳಿದದ್ದು, ತಂದೆತಾಯಿಗಳಿಗೆ ತಿಳಿದಿರಲಿಲ್ಲ.
ಲೂಕನು 2 : 44 (OCVKN)
ಯೇಸು ಗುಂಪಿನಲ್ಲಿ ಇದ್ದಿರಬಹುದೆಂದು ಅವರು ಭಾವಿಸಿ, ಒಂದು ದಿನದ ಪ್ರಯಾಣವನ್ನು ಮಾಡಿದ ಮೇಲೆ ತಮ್ಮ ಬಳಗದವರಲ್ಲಿಯೂ ಪರಿಚಿತರಲ್ಲಿಯೂ ಬಾಲಕ ಯೇಸುವನ್ನು ಹುಡುಕಿದರು.
ಲೂಕನು 2 : 45 (OCVKN)
ಆದರೆ ಅವರು ಯೇಸುವನ್ನು ಕಂಡುಕೊಳ್ಳದೆ ಹೋದುದರಿಂದ, ಅವರನ್ನು ಹುಡುಕುತ್ತಾ ಪುನಃ ಯೆರೂಸಲೇಮಿಗೆ ಹಿಂತಿರುಗಿ ಬಂದರು.
ಲೂಕನು 2 : 46 (OCVKN)
ಮೂರು ದಿವಸಗಳಾದ ಮೇಲೆ ಯೇಸುವನ್ನು ದೇವಾಲಯದಲ್ಲಿ ಕಂಡರು. ಬೋಧಕರ ನಡುವೆ ಕೂತುಕೊಂಡು, ಬಾಲಕ ಯೇಸು ಅವರ ಮಾತುಗಳನ್ನು ಕೇಳಿಸಿಕೊಳ್ಳುತ್ತಾ, ಪ್ರಶ್ನಿಸುತ್ತಾ ಇರುವುದನ್ನು ಅವರು ಕಂಡರು.
ಲೂಕನು 2 : 47 (OCVKN)
ಯೇಸು ಆಡಿದ ಮಾತುಗಳನ್ನು ಕೇಳಿದವರೆಲ್ಲರೂ ಅವರ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾದರು.
ಲೂಕನು 2 : 48 (OCVKN)
ತಂದೆತಾಯಿಗಳು ಯೇಸುವನ್ನು ಕಂಡಾಗ ಆಶ್ಚರ್ಯಪಟ್ಟರು. ಆತನ ತಾಯಿಯು, “ಮಗು, ನೀನು ನಮಗೆ ಹೀಗೇಕೆ ಮಾಡಿದೆ? ನಿನ್ನ ತಂದೆಯೂ ನಾನೂ ಎಷ್ಟೋ ಕಳವಳಗೊಂಡು ನಿನ್ನನ್ನು ಹುಡುಕಿದೆವು,” ಎಂದಳು.
ಲೂಕನು 2 : 49 (OCVKN)
ಯೇಸು ಅವರಿಗೆ, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕೆಂಬುದು ನಿಮಗೆ ತಿಳಿಯಲಿಲ್ಲವೋ?” ಎಂದರು.
ಲೂಕನು 2 : 50 (OCVKN)
ಆದರೆ ಯೇಸು ಅವರಿಗೆ ಹೇಳಿದ ಮಾತನ್ನು ಅವರು ಗ್ರಹಿಸಲಿಲ್ಲ.
ಲೂಕನು 2 : 51 (OCVKN)
ಬಳಿಕ ಯೇಸು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನರಾಗಿದ್ದರು. ಆದರೆ ಯೇಸುವಿನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು.
ಲೂಕನು 2 : 52 (OCVKN)
ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆದು, ದೇವರ ಮೆಚ್ಚುಗೆ ಮತ್ತು ಮನುಷ್ಯರ ಮೆಚ್ಚುಗೆ ಹೆಚ್ಚಾಗಿ ಅವರಿಗೆ ದೊರೆಯಿತು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52