ಲೂಕನು 24 : 1 (OCVKN)
ಯೇಸುವಿನ ಪುನರುತ್ಥಾನ ವಾರದ ಮೊದಲನೆಯ ದಿನದ, ಬೆಳಗಿನ ಜಾವದಲ್ಲಿ, ಆ ಸ್ತ್ರೀಯರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಹೋದರು.
ಲೂಕನು 24 : 2 (OCVKN)
ಆಗ ಸಮಾಧಿಯಿಂದ ಬಂಡೆ ಉರುಳಿಸಲಾಗಿದ್ದನ್ನು ಅವರು ಕಂಡರು,
ಲೂಕನು 24 : 3 (OCVKN)
ಅವರು ಅದರ ಒಳಗೆ ಪ್ರವೇಶಿಸಿದಾಗ, ಅಲ್ಲಿ ಕರ್ತದೇವರು ಯೇಸುವಿನ ದೇಹವನ್ನು ಕಾಣಲಿಲ್ಲ.
ಲೂಕನು 24 : 4 (OCVKN)
ಅವರು ಬಹಳವಾಗಿ ಗಲಿಬಿಲಿಗೊಂಡರು. ಆಗ ಮಿಂಚಿನಂತೆ ಹೊಳೆಯುವ ವಸ್ತ್ರಗಳನ್ನು ಧರಿಸಿದ್ದ ಇಬ್ಬರು ಪುರುಷರು ಫಕ್ಕನೆ ಅವರ ಬಳಿ ನಿಂತಿದ್ದರು.
ಲೂಕನು 24 : 5 (OCVKN)
ಆ ಸ್ತ್ರೀಯರು ಭಯಪಟ್ಟು ತಮ್ಮ ದೃಷ್ಟಿಯನ್ನು ನೆಲದ ಕಡೆಗೆ ನಾಟಿರಲು, ಆ ಪುರುಷರು ಅವರಿಗೆ, “ಜೀವಿಸುವವರನ್ನು ಸತ್ತವರೊಳಗೆ ನೀವು ಏಕೆ ಹುಡುಕುತ್ತೀರಿ?
ಲೂಕನು 24 : 6 (OCVKN)
ಅವರು ಇಲ್ಲಿಲ್ಲ; ಜೀವಂತರಾಗಿ ಎದ್ದಿದ್ದಾರೆ! ಅವರು ಇನ್ನೂ ಗಲಿಲಾಯದಲ್ಲಿದ್ದಾಗಲೇ:
ಲೂಕನು 24 : 7 (OCVKN)
‘ಮನುಷ್ಯಪುತ್ರನಾದ ನಾನು ಪಾಪಿಷ್ಠರ ಕೈಗೆ ಒಪ್ಪಿಸಿದವನಾಗಿ, ಶಿಲುಬೆಗೆ ಹಾಕಲಾಗಿ ಮೂರನೆಯ ದಿನದಲ್ಲಿ ತಿರುಗಿ ಜೀವಂತನಾಗಿ ಏಳುವೆನು,’ ಎಂದು ನಿಮಗೆ ಹೇಳಿದ್ದನ್ನು ನೀವು ನೆನಪುಮಾಡಿಕೊಳ್ಳಿರಿ,” ಎಂದರು.
ಲೂಕನು 24 : 8 (OCVKN)
ಆಗ ಆ ಸ್ತ್ರೀಯರು ಯೇಸುವಿನ ಮಾತುಗಳನ್ನು ನೆನಪು ಮಾಡಿಕೊಂಡರು.
ಲೂಕನು 24 : 9 (OCVKN)
ಸಮಾಧಿಯಿಂದ ಆ ಸ್ತ್ರೀಯರು ಹಿಂತಿರುಗಿ ಹೋಗಿ, ಆ ಹನ್ನೊಂದು ಮಂದಿಗೂ ಉಳಿದವರೆಲ್ಲರಿಗೂ ಈ ಎಲ್ಲಾ ವಿಷಯಗಳನ್ನು ತಿಳಿಸಿದರು.
ಲೂಕನು 24 : 10 (OCVKN)
ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು ಅಪೊಸ್ತಲರಿಗೆ ಈ ವಿಷಯಗಳನ್ನು ಹೇಳಿದರು.
ಲೂಕನು 24 : 11 (OCVKN)
ಅವರಿಗಾದರೋ ಈ ಸ್ತ್ರೀಯರು ಹೇಳಿದ್ದು ಕಟ್ಟು ಕಥೆಗಳಂತೆ ಕಂಡವು, ಅವರು ಅವುಗಳನ್ನು ನಂಬಲಿಲ್ಲ.
ಲೂಕನು 24 : 12 (OCVKN)
ಆಗ ಪೇತ್ರನು ಎದ್ದು, ಸಮಾಧಿ ಬಳಿಗೆ ಓಡಿಹೋಗಿ, ಅದರೊಳಗೆ ಬಗ್ಗಿ ನೋಡಿದಾಗ, ಅಲ್ಲಿ ನಾರುಬಟ್ಟೆಗಳು ಮಾತ್ರ ಬಿದ್ದಿರುವುದನ್ನು ಕಂಡು ನಡೆದ ಸಂಭವಕ್ಕಾಗಿ ತನ್ನೊಳಗೆ ಆಶ್ಚರ್ಯಪಡುತ್ತಾ ಹೊರಟುಹೋದನು.
ಲೂಕನು 24 : 13 (OCVKN)
ಎಮ್ಮಾಹುವಿನ ದಾರಿಯಲ್ಲಿ ಯೇಸು ಅದೇ ದಿನ ಶಿಷ್ಯರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಹನ್ನೊಂದು ಕಿಲೋಮೀಟರು ದೂರದಲ್ಲಿದ್ದ ಎಮ್ಮಾಹು ಎಂಬ ಹಳ್ಳಿಗೆ ಹೋಗುತ್ತಿದ್ದರು.
ಲೂಕನು 24 : 14 (OCVKN)
ಅವರು ನಡೆದ ಈ ಎಲ್ಲಾ ಸಂಭವಗಳ ಕುರಿತಾಗಿ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಿದ್ದರು.
ಲೂಕನು 24 : 15 (OCVKN)
ಅವರು ಮಾತನಾಡಿಕೊಂಡು ಚರ್ಚಿಸುತ್ತಾ ಹೋಗಲು, ಯೇಸು ತಾವೇ ಅವರನ್ನು ಸಮೀಪಿಸಿ ಅವರ ಜೊತೆಯಲ್ಲಿ ಹೋದರು;
ಲೂಕನು 24 : 16 (OCVKN)
ಆದರೆ ಅವರಿಗೆ ತಿಳಿಯದ ಹಾಗೆ ಕಣ್ಣಿಗೆ ಮರೆಯಾಗಿದ್ದರಿಂದ ಅವರು ಯೇಸುವಿನ ಗುರುತು ಹಿಡಿಯಲಿಲ್ಲ.
ಲೂಕನು 24 : 17 (OCVKN)
ಆಗ ಯೇಸು ಅವರಿಗೆ, “ನೀವು ದಾರಿಯಲ್ಲಿ ಒಬ್ಬರಿಗೊಬ್ಬರು ಚರ್ಚೆಮಾಡಿಕೊಂಡು ಹೋಗುತ್ತಿದ್ದೀರಲ್ಲಾ ಏನು ವಿಷಯ?” ಎಂದು ಕೇಳಿದರು. ಅವರು ತಕ್ಷಣವೇ ನಿಂತರು, ಅವರ ಮುಖ ದುಖಃಭರಿತವಾಗಿತ್ತು.
ಲೂಕನು 24 : 18 (OCVKN)
ಆಗ ಅವರಲ್ಲಿ ಒಬ್ಬನಾದ, ಕ್ಲೆಯೊಫ ಎಂಬುವನು ಯೇಸುವಿಗೆ, “ಇತ್ತೀಚೆಗೆ ಯೆರೂಸಲೇಮಿನೊಳಗೆ ನಡೆದಿರುವ ಘಟನೆಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನೇ ಆಗಿದ್ದೀಯಾ?” ಎಂದು ಕೇಳಿದನು.
ಲೂಕನು 24 : 19 (OCVKN)
ಅದಕ್ಕೆ ಯೇಸು ಅವರಿಗೆ, “ಯಾವ ಘಟನೆ?” ಎಂದು ಕೇಳಲು, ಅವರು ಯೇಸುವಿಗೆ, “ನಜರೇತಿನ ಯೇಸುವಿನ ವಿಷಯಗಳೇ, ಅವರು ಕೃತ್ಯಗಳಲ್ಲಿಯೂ ಮಾತುಗಳಲ್ಲಿಯೂ ದೇವರ ದೃಷ್ಟಿಯಲ್ಲಿಯೂ ಜನರೆಲ್ಲರ ದೃಷ್ಟಿಯಲ್ಲಿಯೂ ಬಹುಶಕ್ತಿವಂತರಾಗಿದ್ದ ಪ್ರವಾದಿಯಾಗಿದ್ದರು.
ಲೂಕನು 24 : 20 (OCVKN)
ಮುಖ್ಯಯಾಜಕರೂ ನಮ್ಮ ಅಧಿಕಾರಿಗಳೂ ಯೇಸುವನ್ನು ಮರಣದಂಡನೆಗೆ ಒಪ್ಪಿಸಿಕೊಟ್ಟು, ಅವರನ್ನು ಶಿಲುಬೆಗೆ ಹಾಕಿದರು.
ಲೂಕನು 24 : 21 (OCVKN)
ಆದರೆ ಇಸ್ರಾಯೇಲರನ್ನು ವಿಮೋಚಿಸುವವರು ಆ ಯೇಸುವೇ ಎಂದು ನಾವು ನಂಬಿಕೊಂಡಿದ್ದೆವು. ಇದಲ್ಲದೆ ಈ ಘಟನೆಗಳು ನಡೆದು ಇದು ಮೂರನೆಯ ದಿನವಾಗಿದೆ.
ಲೂಕನು 24 : 22 (OCVKN)
ನಮ್ಮವರಲ್ಲಿ, ಕೆಲವು ಸ್ತ್ರೀಯರು ಇಂದು ಬೆಳಗಿನ ಜಾವದಲ್ಲಿ ಸಮಾಧಿಗೆ ಹೋಗಿದ್ದರು.
ಲೂಕನು 24 : 23 (OCVKN)
ಅಲ್ಲಿ ಅವರು ಯೇಸುವಿನ ದೇಹವನ್ನು ಕಾಣದೆ ಬಂದು, ಯೇಸು ಜೀವದಿಂದ ಎದ್ದಿದ್ದಾರೆ, ಎಂದು ಹೇಳಿದ ದೇವದೂತರನ್ನೂ ಕಂಡಿದ್ದ ದೃಶ್ಯವನ್ನೂ ನಮಗೆ ಹೇಳಿದರು.
ಲೂಕನು 24 : 24 (OCVKN)
ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ, ಆ ಸ್ತ್ರೀಯರು ಹೇಳಿದ್ದನ್ನೇ ಕಂಡರು. ಆದರೆ ಅವರು ಯೇಸುವನ್ನು ಮಾತ್ರ ಕಾಣಲಿಲ್ಲ,” ಎಂದರು.
ಲೂಕನು 24 : 25 (OCVKN)
ಆಗ ಯೇಸು ಅವರಿಗೆ, “ಎಂಥ ಬುದ್ಧಿಹೀನರು ನೀವು, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವುದರಲ್ಲಿ ಮಂದ ಹೃದಯದವರೇ!
ಲೂಕನು 24 : 26 (OCVKN)
ಶ್ರಮೆಗಳನ್ನು ಅನುಭವಿಸಿದ ಮೇಲೆ ಕ್ರಿಸ್ತನು ಮಹಿಮೆಯಲ್ಲಿ ಪ್ರವೇಶಿಸುವುದು ಅಗತ್ಯವಾಗಿತ್ತಲ್ಲವೇ?” ಎಂದು ಹೇಳಿ,
ಲೂಕನು 24 : 27 (OCVKN)
ಮೋಶೆಯ ಮತ್ತು ಎಲ್ಲಾ ಪ್ರವಾದಿಗಳಿಂದ ಆರಂಭಿಸಿ, ಪವಿತ್ರ ವೇದಗಳಲ್ಲಿ ತನ್ನ ವಿಷಯವಾಗಿ ಬರೆದವುಗಳನ್ನು ಯೇಸು ಅವರಿಗೆ ವಿವರಿಸಿದರು.
ಲೂಕನು 24 : 28 (OCVKN)
ಅವರು ಹೋಗಬೇಕಾಗಿದ್ದ ಹಳ್ಳಿಯನ್ನು ಸಮೀಪಿಸುತ್ತಿದ್ದಾಗ, ಯೇಸು ಮುಂದೆ ಹೋಗುವವರಂತೆ ವರ್ತಿಸಿದರು.
ಲೂಕನು 24 : 29 (OCVKN)
ಆದರೆ ಅವರು ಯೇಸುವಿಗೆ, “ನಮ್ಮೊಂದಿಗೆ ಇರು, ಈಗ ಸಂಜೆಯಾಯಿತು. ಕತ್ತಲಾಯಿತು,” ಎಂದು ಹೇಳಿ, ಆತನನ್ನು ಬಲವಂತ ಮಾಡಿದರು. ಆಗ ಯೇಸು ಅವರೊಂದಿಗೆ ಇರುವುದಕ್ಕಾಗಿ ಹೋದರು.
ಲೂಕನು 24 : 30 (OCVKN)
ಯೇಸು ಆ ಇಬ್ಬರು ಶಿಷ್ಯರೊಂದಿಗೆ ಊಟಕ್ಕೆ ಕುಳಿತುಕೊಂಡಿರಲು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ, ಮುರಿದು ಅವರಿಗೆ ಕೊಟ್ಟರು.
ಲೂಕನು 24 : 31 (OCVKN)
ಆಗ ಅವರ ಕಣ್ಣುಗಳು ತೆರೆದವು. ಅವರು ಯೇಸುವಿನ ಗುರುತು ಹಿಡಿದರು ಮತ್ತು ಯೇಸು ಅವರ ದೃಷ್ಟಿಗೆ ಅದೃಶ್ಯರಾದರು.
ಲೂಕನು 24 : 32 (OCVKN)
ಅವರು ಒಬ್ಬರಿಗೊಬ್ಬರು, “ಅವರು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ, ಪವಿತ್ರ ವೇದವನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ಬೆಂಕಿಯಂತೆ ದಹಿಸಿತಲ್ಲವೇ?” ಎಂದುಕೊಂಡರು.
ಲೂಕನು 24 : 33 (OCVKN)
ಆ ಇಬ್ಬರು ಶಿಷ್ಯರು ಅದೇ ಗಳಿಗೆಯಲ್ಲಿ ಎದ್ದು ಯೆರೂಸಲೇಮಿಗೆ ಹಿಂದಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರೊಂದಿಗಿದ್ದವರೂ ಒಟ್ಟಾಗಿ ಕೂಡಿಕೊಂಡಿರುವುದನ್ನು ಕಂಡರು.
ಲೂಕನು 24 : 34 (OCVKN)
ಅಲ್ಲಿದ್ದವರು, “ಇದು ನಿಜವೇ! ಕರ್ತದೇವರು ಜೀವಂತರಾಗಿ ಎದ್ದಿದ್ದಾರೆ ಮತ್ತು ಸೀಮೋನನಿಗೆ ಕಾಣಿಸಿಕೊಂಡಿದ್ದಾರೆ,” ಎಂದು ಹೇಳಿದರು.
ಲೂಕನು 24 : 35 (OCVKN)
ಆಗ ಆ ಇಬ್ಬರು ಶಿಷ್ಯರು ದಾರಿಯಲ್ಲಿ ನಡೆದವುಗಳನ್ನೂ ರೊಟ್ಟಿ ಮುರಿಯುವುದರಲ್ಲಿ ಅವರು ಹೇಗೆ ಯೇಸುವಿನ ಗುರುತು ಹಿಡಿದರೆಂದೂ ವಿವರಿಸಿದರು.
ಲೂಕನು 24 : 36 (OCVKN)
ಯೇಸು ಶಿಷ್ಯರಿಗೆ ಕಾಣಿಸಿಕೊಂಡದ್ದು
ಲೂಕನು 24 : 37 (OCVKN)
ಅವರೆಲ್ಲರೂ ಹೀಗೆ ಮಾತನಾಡುತ್ತಿರುವಾಗ, ಯೇಸು ತಾವೇ ಅವರ ನಡುವೆ ನಿಂತು ಅವರಿಗೆ, “ನಿಮಗೆ ಸಮಾಧಾನವಾಗಲಿ,” ಎಂದರು. ಅವರು ತಾವು ಕಾಣುತ್ತಿರುವುದು ಭೂತವೆಂದು ಭಾವಿಸಿ, ದಿಗಿಲುಬಿದ್ದು ಭಯಹಿಡಿದವರಾದರು.
ಲೂಕನು 24 : 38 (OCVKN)
ಆದರೆ ಯೇಸು ಅವರಿಗೆ, “ಏಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಸಂಶಯಗಳು ಹುಟ್ಟುವುದು ಏಕೆ?
ಲೂಕನು 24 : 39 (OCVKN)
ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ. ನಾನೇ ಆತನು! ನನ್ನನ್ನು ಮುಟ್ಟಿ ನೋಡಿರಿ; ನೀವು ಕಾಣುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ,” ಎಂದರು.
ಲೂಕನು 24 : 40 (OCVKN)
ಹೀಗೆ ಯೇಸು ಮಾತನಾಡಿದ ಮೇಲೆ, ತನ್ನ ಕೈಗಳನ್ನು ತನ್ನ ಕಾಲುಗಳನ್ನು ಅವರಿಗೆ ತೋರಿಸಿದರು.
ಲೂಕನು 24 : 41 (OCVKN)
ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರುವಾಗ ಯೇಸು ಅವರಿಗೆ, “ನಿಮ್ಮಲ್ಲಿ ಆಹಾರವೇನಾದರೂ ಇದೆಯೋ?” ಎಂದು ಕೇಳಿದರು.
ಲೂಕನು 24 : 42 (OCVKN)
ಅವರು ಯೇಸುವಿಗೆ ಒಂದು ತುಂಡು ಸುಟ್ಟ ಮೀನನ್ನು ಕೊಟ್ಟರು.
ಲೂಕನು 24 : 43 (OCVKN)
ಯೇಸು ತೆಗೆದುಕೊಂಡು ಅವರ ಮುಂದೆ ತಿಂದರು.
ಲೂಕನು 24 : 44 (OCVKN)
ಲೂಕನು 24 : 45 (OCVKN)
ಯೇಸು ಶಿಷ್ಯರಿಗೆ, “ಮೋಶೆಯ ನಿಯಮದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆದಿರುವುದೆಲ್ಲವೂ ನೆರವೇರುವುದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ನಿಮಗೆ ಹೇಳಿದ್ದೇನೆ,” ಎಂದರು. ತರುವಾಯ ಅವರು ಪವಿತ್ರ ವೇದಗಳನ್ನು ಅರ್ಥಮಾಡಿಕೊಳ್ಳುವಂತೆ ಯೇಸು ಅವರ ಬುದ್ಧಿಯನ್ನು ತೆರೆದರು.
ಲೂಕನು 24 : 46 (OCVKN)
ಯೇಸು ಅವರಿಗೆ, “ಕ್ರಿಸ್ತನು ಹೀಗೆ ಬಾಧೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವುದು ಅಗತ್ಯವಾಗಿತ್ತೆಂತಲೂ
ಲೂಕನು 24 : 47 (OCVKN)
ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವರೊಳಗೆ ಆತನ ಹೆಸರಿನಲ್ಲಿ ಪಶ್ಚಾತ್ತಾಪಪಟ್ಟು ಮತ್ತು ಪಾಪಗಳ ಕ್ಷಮಾಪಣೆ ಸಾರಬೇಕೆಂತಲೂ ಬರೆಯಲಾಗಿದೆ.
ಲೂಕನು 24 : 48 (OCVKN)
ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾಗಿದ್ದೀರಿ.
ಲೂಕನು 24 : 49 (OCVKN)
ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮಗೆ ಕಳುಹಿಸುವೆನು; ಆದರೆ ನೀವು ಪರಲೋಕದ ಶಕ್ತಿಯನ್ನು ಹೊದಿಸುವ ತನಕ, ಈ ಪಟ್ಟಣದಲ್ಲಿಯೇ ಕಾದುಕೊಂಡಿರಿ,” ಎಂದರು.
ಲೂಕನು 24 : 50 (OCVKN)
ಸ್ವರ್ಗಕ್ಕೆ ಏರಿಹೋಗುವುದು ಯೇಸು ಶಿಷ್ಯರನ್ನು ಬೇಥಾನ್ಯದವರೆಗೆ ಕರೆದುಕೊಂಡು ಹೋಗಿ, ತಮ್ಮ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದರು.
ಲೂಕನು 24 : 51 (OCVKN)
ಯೇಸು ಅವರನ್ನು ಆಶೀರ್ವದಿಸುತ್ತಿರುವಾಗಲೇ ಅವರನ್ನು ಬಿಟ್ಟು ಮೇಲೆ ಪರಲೋಕಕ್ಕೆ ಏರಿದರು.
ಲೂಕನು 24 : 52 (OCVKN)
ಆಗ ಶಿಷ್ಯರು ಯೇಸುವನ್ನು ಆರಾಧಿಸಿ, ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂದಿರುಗಿದರು.
ಲೂಕನು 24 : 53 (OCVKN)
ಅವರು ಯಾವಾಗಲೂ ದೇವಾಲಯದಲ್ಲಿ, ದೇವರನ್ನು ಸ್ತುತಿಸುತ್ತಾ ಇದ್ದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53