ಮಾರ್ಕನು 1 : 1 (OCVKN)
ಸ್ನಾನಿಕ ಯೋಹಾನನು ಮಾರ್ಗವನ್ನು ಸಿದ್ಧಪಡಿಸಿದ್ದು ದೇವಪುತ್ರರಾದ* ಕೆಲವು ಹಸ್ತಪ್ರತಿಗಳಲ್ಲಿ ದೇವಪುತ್ರ ಎಂಬ ಪದವಿಲ್ಲ. ಯೇಸುಕ್ರಿಸ್ತರ † ಕ್ರಿಸ್ತ ಎಂಬ ಗ್ರೀಕ್ ಪದಕ್ಕೆ ಮೆಸ್ಸೀಯ ಎಂಬ ಹೀಬ್ರೂ ಪದಕ್ಕೆ ಅಭಿಷಿಕ್ತರು ಎಂದರ್ಥ ಸುವಾರ್ತೆಯ ಆರಂಭ.
ಮಾರ್ಕನು 1 : 2 (OCVKN)
ಪ್ರವಾದಿ ಯೆಶಾಯನ ಗ್ರಂಥದಲ್ಲಿ: “ಇಗೋ, ನಿನ್ನ ಮುಂದೆ ನಾನು ನನ್ನ ದೂತನನ್ನು ಕಳುಹಿಸುತ್ತೇನೆ, ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.”‡ ಮಲಾಕಿ 3:1
ಮಾರ್ಕನು 1 : 3 (OCVKN)
“ ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವವನ ಸ್ವರವದೆ.”§ ಯೆಶಾಯ 40:3
ಮಾರ್ಕನು 1 : 4 (OCVKN)
4 ಎಂದು ಬರೆದಿಟ್ಟ ಪ್ರಕಾರ, ಸ್ನಾನಿಕನಾದ ಯೋಹಾನನು ಅರಣ್ಯದಲ್ಲಿ ಪಾಪಗಳ ಪರಿಹಾರಕ್ಕಾಗಿ ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು, ಸಾರುತ್ತಾ ಬಂದನು.
ಮಾರ್ಕನು 1 : 5 (OCVKN)
ಯೂದಾಯ ಪ್ರಾಂತದ ಎಲ್ಲಾ ಹಳ್ಳಿಗಳಿಂದ ಮತ್ತು ಯೆರೂಸಲೇಮ್ ನಗರದಿಂದ ಎಲ್ಲಾ ಜನರು ಅವನ ಬಳಿಗೆ ಬರುತ್ತಿದ್ದರು. ಅವರು ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
ಮಾರ್ಕನು 1 : 6 (OCVKN)
ಯೋಹಾನನು ಒಂಟೆಯ ಕೂದಲಿನ ಉಡುಪನ್ನು ಧರಿಸಿ,* 2 ಅರಸು 1:8 ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳು ಮತ್ತು ಕಾಡುಜೇನು ಅವನ ಆಹಾರವಾಗಿತ್ತು.
ಮಾರ್ಕನು 1 : 7 (OCVKN)
ಅವನು, “ನನಗಿಂತ ಶಕ್ತರೊಬ್ಬರು ನನ್ನ ನಂತರ ಬರುತ್ತಾರೆ, ಅವರ ಪಾದರಕ್ಷೆಗಳ ಪಟ್ಟಿಗಳನ್ನು ದಾಸನಂತೆ ಬಾಗಿ ಬಿಚ್ಚುವುದಕ್ಕೂ ನಾನು ಅರ್ಹನಲ್ಲ.
ಮಾರ್ಕನು 1 : 8 (OCVKN)
ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ, ಆದರೆ ಅವರು ನಿಮಗೆ ಪವಿತ್ರಾತ್ಮರಲ್ಲಿಯೇ ದೀಕ್ಷಾಸ್ನಾನ ಮಾಡಿಸುವರು,” ಎಂದು ಘೋಷಿಸುತ್ತಿದ್ದನು.
ಮಾರ್ಕನು 1 : 9 (OCVKN)
ಯೇಸುವಿನ ದೀಕ್ಷಾಸ್ನಾನ ಮತ್ತು ಅವರ ಶೋಧನೆ ಹೀಗಿರುವಲ್ಲಿ, ಒಂದು ದಿನ ಯೇಸು ಗಲಿಲಾಯ ಪ್ರಾಂತದ ನಜರೇತ್ ಎಂಬ ಪಟ್ಟಣದಿಂದ ಬಂದು, ಯೊರ್ದನ್ ನದಿಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡರು.
ಮಾರ್ಕನು 1 : 10 (OCVKN)
ಯೇಸು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಆಕಾಶವು ತೆರೆದು, ಪವಿತ್ರಾತ್ಮರು ಪಾರಿವಾಳದಂತೆ ತಮ್ಮ ಮೇಲೆ ಇಳಿದು ಬರುವುದನ್ನು ಕಂಡರು.
ಮಾರ್ಕನು 1 : 11 (OCVKN)
ಆಗ, “ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ,” ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು.
ಮಾರ್ಕನು 1 : 12 (OCVKN)
ಕೂಡಲೇ ಪವಿತ್ರಾತ್ಮ ದೇವರು ಯೇಸುವನ್ನು ಅರಣ್ಯಕ್ಕೆ ನಡೆಸಿದರು.
ಮಾರ್ಕನು 1 : 13 (OCVKN)
ಯೇಸು ಅಲ್ಲಿ ನಲವತ್ತು ದಿನಗಳು, ಸೈತಾನನಿಂದ ಶೋಧನೆಗೆ† ಗ್ರೀಕ್ ಭಾಷೆಯಲ್ಲಿ ಶೋಧನೆಗೆ ಪರೀಕ್ಷೆ ಎಂದರ್ಥ ಒಳಗಾದರು. ಕಾಡುಮೃಗಗಳೊಡನೆ ಅರಣ್ಯದಲ್ಲಿ ಇದ್ದು, ದೇವದೂತರಿಂದ ಉಪಚಾರ ಪಡೆದರು.
ಮಾರ್ಕನು 1 : 14 (OCVKN)
ಯೇಸು ಸುವಾರ್ತೆಯನ್ನು ಸಾರಿದ್ದು ಯೋಹಾನನು ಬಂಧಿತನಾಗಿ ಸೆರೆಯಾದ ತರುವಾಯ, ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಸಾರಿದರು:
ಮಾರ್ಕನು 1 : 15 (OCVKN)
“ಕಾಲವು ಪರಿಪೂರ್ಣವಾಗಿದೆ, ದೇವರ ರಾಜ್ಯವು ಸಮೀಪಿಸಿದೆ, ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ,” ಎಂದು ಹೇಳಿದರು.
ಮಾರ್ಕನು 1 : 16 (OCVKN)
ಯೇಸು ಪ್ರಥಮ ಶಿಷ್ಯರನ್ನು ಕರೆದದ್ದು ಯೇಸು ಗಲಿಲಾಯ ಸರೋವರದ ತೀರದಲ್ಲಿ ನಡೆದುಹೋಗುತ್ತಿರುವಾಗ, ಸೀಮೋನನು ಮತ್ತು ಅವನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾಗಿದ್ದ ಅವರು ಸರೋವರದಲ್ಲಿ ಬಲೆ ಬೀಸುತ್ತಿದ್ದರು.
ಮಾರ್ಕನು 1 : 17 (OCVKN)
ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ. ನಾನು ನಿಮ್ಮನ್ನು, ಮನುಷ್ಯರನ್ನು ದೇವರ ಮಾರ್ಗದಲ್ಲಿ ನಡೆಸುವವರನ್ನಾಗಿ ಮಾಡುವೆನು,”‡ ಅಂದರೆ ನಿಮ್ಮನ್ನು ಮನುಷ್ಯರನ್ನೇ ಹಿಡಿಯುವ ಬೆಸ್ತರನ್ನಾಗಿ ಮಾಡುವೆನು ಎಂದು ಹೇಳಿದರು.
ಮಾರ್ಕನು 1 : 18 (OCVKN)
ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
ಮಾರ್ಕನು 1 : 19 (OCVKN)
ಯೇಸು ಅಲ್ಲಿಂದ ಮುಂದೆ ಹೋಗುತ್ತಿದ್ದಾಗ, ಜೆಬೆದಾಯನ ಮಗ ಯಾಕೋಬ ಮತ್ತು ಅವನ ತಮ್ಮ ಯೋಹಾನನನ್ನು ಕಂಡರು. ಅವರು ತಮ್ಮ ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು.
ಮಾರ್ಕನು 1 : 20 (OCVKN)
ಕೂಡಲೇ ಯೇಸು ಅವರನ್ನು ಕರೆಯಲು, ಅವರು ತಮ್ಮ ತಂದೆ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
ಮಾರ್ಕನು 1 : 21 (OCVKN)
ಯೇಸು ದುರಾತ್ಮವನ್ನು ಓಡಿಸಿದ್ದು ಅವರು ಕಪೆರ್ನೌಮಿಗೆ ಹೋದರು, ಕೂಡಲೇ ಸಬ್ಬತ್§ ಸಬ್ಬತ್ ಇದು ವಾರದ ಏಳನೆಯ ದಿನ, ಈ ದಿನವನ್ನು ಯೆಹೂದ್ಯರು ಪವಿತ್ರ ದಿನ ಎನ್ನುತ್ತಿದ್ದರು. ಈ ದಿನದಲ್ಲಿ ಅವರು ಆರಾಧನೆ ಮತ್ತು ವಿಶ್ರಾಂತಿ ಮಾಡುತ್ತಿದ್ದರು. ದಿನದಂದು ಯೇಸು ಸಭಾಮಂದಿರಕ್ಕೆ ಹೋಗಿ ಬೋಧಿಸತೊಡಗಿದರು.
ಮಾರ್ಕನು 1 : 22 (OCVKN)
ಯೇಸುವಿನ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು. ಏಕೆಂದರೆ ಯೇಸು ನಿಯಮ ಬೋಧಕರಂತೆ ಬೋಧಿಸದೆ, ಅಧಿಕಾರವಿದ್ದವರಂತೆ ಬೋಧಿಸುತ್ತಿದ್ದರು.
ಮಾರ್ಕನು 1 : 23 (OCVKN)
ಆ ಸಮಯದಲ್ಲಿ ಸಭಾಮಂದಿರದೊಳಗೆ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನಿದ್ದನು.
ಮಾರ್ಕನು 1 : 24 (OCVKN)
ಅವನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀವು ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರುವೆಯೋ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರಿಂದ ಬಂದ ಪರಿಶುದ್ಧರು,” ಎಂದು ಕೂಗಿ ಹೇಳಿದನು.
ಮಾರ್ಕನು 1 : 25 (OCVKN)
ಆಗ ಯೇಸು, “ಸುಮ್ಮನಿರು, ಅವನೊಳಗಿಂದ ಹೊರಗೆ ಬಾ,” ಎಂದು ಗದರಿಸಿದರು.
ಮಾರ್ಕನು 1 : 26 (OCVKN)
ಅಶುದ್ಧಾತ್ಮವು ಅವನನ್ನು ಉಗ್ರವಾಗಿ ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂತು.
ಮಾರ್ಕನು 1 : 27 (OCVKN)
ಜನರೆಲ್ಲರು ಇದನ್ನು ಕಂಡು ವಿಸ್ಮಯಗೊಂಡು, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ಅಶುದ್ಧಾತ್ಮಗಳಿಗೆ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
ಮಾರ್ಕನು 1 : 28 (OCVKN)
ಕೂಡಲೇ ಯೇಸುವಿನ ಸುದ್ದಿಯು ಗಲಿಲಾಯದ ಸುತ್ತಮುತ್ತಲಿನ ಪ್ರಾಂತದಲ್ಲೆಲ್ಲಾ ಹಬ್ಬಿತು.
ಮಾರ್ಕನು 1 : 29 (OCVKN)
ಯೇಸು ಅನೇಕರನ್ನು ಗುಣಪಡಿಸಿದ್ದು ಅವರು ಸಭಾಮಂದಿರವನ್ನು ಬಿಟ್ಟ ಕೂಡಲೇ, ಯಾಕೋಬ ಯೋಹಾನರೊಡನೆ ಸೀಮೋನ ಅಂದ್ರೆಯರ ಮನೆಗೆ ಹೋದರು.
ಮಾರ್ಕನು 1 : 30 (OCVKN)
ಅಲ್ಲಿ ಸೀಮೋನನ ಅತ್ತೆಯು ಜ್ವರದಿಂದ ಮಲಗಿದ್ದಳು. ಕೂಡಲೇ ಅವರು ಆಕೆಯ ವಿಷಯವಾಗಿ ಯೇಸುವಿಗೆ ತಿಳಿಸಿದರು.
ಮಾರ್ಕನು 1 : 31 (OCVKN)
ಯೇಸು ಆಕೆಯ ಬಳಿಗೆ ಬಂದು, ಕೈಹಿಡಿದು ಎಬ್ಬಿಸಿದರು. ಜ್ವರವು ಆಕೆಯನ್ನು ಬಿಟ್ಟುಹೋಯಿತು ಮತ್ತು ಆಕೆಯು ಅವರಿಗೆ ಉಪಚರಿಸಿದಳು.
ಮಾರ್ಕನು 1 : 32 (OCVKN)
ಆ ಸಂಜೆ ಸೂರ್ಯಾಸ್ತವಾದ ಮೇಲೆ ಜನರು ಅಸ್ವಸ್ಥರಾದವರನ್ನು ಮತ್ತು ದೆವ್ವಪೀಡಿತರನ್ನು ಯೇಸುವಿನ ಬಳಿಗೆ ಕರೆತಂದರು.
ಮಾರ್ಕನು 1 : 33 (OCVKN)
ಇಡೀ ಊರಿನವರು ಕೂಡಿ ಆ ಮನೆಯ ಬಾಗಿಲಿನ ಬಳಿ ಬಂದರು.
ಮಾರ್ಕನು 1 : 34 (OCVKN)
ಯೇಸು ವಿವಿಧ ರೋಗಗಳಿಗೆ ಒಳಗಾದ ಅನೇಕರನ್ನು ಸ್ವಸ್ಥಪಡಿಸಿ, ಅನೇಕ ದೆವ್ವಗಳನ್ನು ಓಡಿಸಿದರು. ಆದರೆ ತಾನು ಯಾರೆಂದು ಆ ದೆವ್ವಗಳಿಗೆ ತಿಳಿದಿದ್ದರಿಂದ ಯೇಸು ಅವುಗಳಿಗೆ ಮಾತನಾಡಲು ಅನುಮತಿಸಲಿಲ್ಲ.
ಮಾರ್ಕನು 1 : 35 (OCVKN)
ಯೇಸು ಏಕಾಂತದಲ್ಲಿ ಪ್ರಾರ್ಥಿಸಿದ್ದು ಬೆಳಗಾಗುವ ಮೊದಲೇ, ಇನ್ನೂ ಕತ್ತಲಿರುವಾಗ, ಯೇಸು ಎದ್ದು ಏಕಾಂತ ಸ್ಥಳಕ್ಕೆ ಹೊರಟುಹೋಗಿ, ಅಲ್ಲಿ ಪ್ರಾರ್ಥನೆ ಮಾಡುತ್ತಿದ್ದರು.
ಮಾರ್ಕನು 1 : 36 (OCVKN)
ಆಗ ಸೀಮೋನನು ಮತ್ತು ಅವನ ಸಂಗಡಿಗರು ಯೇಸುವನ್ನು ಹುಡುಕಿಕೊಂಡು ಹೋದರು.
ಮಾರ್ಕನು 1 : 37 (OCVKN)
ಯೇಸುವನ್ನು ಕಂಡ ಮೇಲೆ, “ಎಲ್ಲರೂ ನಿಮ್ಮನ್ನು ಎದುರು ನೋಡುತ್ತಿದ್ದಾರೆ,” ಎಂದು ಹೇಳಿದರು.
ಮಾರ್ಕನು 1 : 38 (OCVKN)
ಯೇಸು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ. ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು. ನಾನು ಬಂದಿರುವುದು ಇದಕ್ಕಾಗಿಯೇ,” ಎಂದು ಹೇಳಿದರು.
ಮಾರ್ಕನು 1 : 39 (OCVKN)
ಆದ್ದರಿಂದ ಯೇಸು ಗಲಿಲಾಯ ಪ್ರಾಂತವನ್ನೆಲ್ಲಾ ಸಂಚರಿಸಿ, ಅವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೆವ್ವಗಳನ್ನು ಓಡಿಸುತ್ತಾ ಇದ್ದರು.
ಮಾರ್ಕನು 1 : 41 (OCVKN)
ಕುಷ್ಠರೋಗಿಯಾಗಿದ್ದ ಒಬ್ಬನು ಯೇಸುವಿನ ಬಳಿಗೆ ಬಂದು, ಮೊಣಕಾಲೂರಿ, “ನಿಮಗೆ ಮನಸ್ಸಿದ್ದರೆ, ನೀವು ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದು ಅವರನ್ನು ಬೇಡಿಕೊಂಡನು. ಯೇಸು ಕನಿಕರಪಟ್ಟು, ತಮ್ಮ ಕೈಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸಿದೆ, ನೀನು ಶುದ್ಧನಾಗು,” ಎಂದರು.
ಮಾರ್ಕನು 1 : 42 (OCVKN)
ತಕ್ಷಣವೇ ಕುಷ್ಠರೋಗವು ಹೋಗಿ ಅವನು ಶುದ್ಧನಾದನು.
ಮಾರ್ಕನು 1 : 43 (OCVKN)
(43-44)ಯೇಸು ಅವನಿಗೆ, “ನೋಡು, ಇದನ್ನು ಯಾರಿಗೂ ಹೇಳಬೇಡ. ಆದರೆ ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿ, ಮೋಶೆಯು ಆಜ್ಞಾಪಿಸಿದ್ದನ್ನು ಶುದ್ಧತ್ವಕ್ಕಾಗಿ ಸಮರ್ಪಿಸು ಇದು ಅವರಿಗೆ ಸಾಕ್ಷಿಯಾಗಿರಲಿ,” ಎಂದು ಅವನಿಗೆ ಕಟ್ಟುನಿಟ್ಟಾಗಿ ಎಚ್ಚರಿಸಿ, ಕೂಡಲೇ ಅವನನ್ನು ಕಳುಹಿಸಿಬಿಟ್ಟರು.
ಮಾರ್ಕನು 1 : 45 (OCVKN)
ಆದರೆ ಅವನು ಹೋಗಿ ಈ ವಿಷಯವನ್ನು ಎಲ್ಲಾ ಕಡೆಗಳಲ್ಲಿ ಹಬ್ಬಿಸಿದನು. ಇದರ ಪರಿಣಾಮವಾಗಿ ಯೇಸು ಯಾವ ಊರೊಳಗೂ ಬಹಿರಂಗವಾಗಿ ಪ್ರವೇಶಿಸಲಾಗದೆ, ನಿರ್ಜನ ಪ್ರದೇಶಗಳಲ್ಲಿರುತ್ತಿದ್ದರು. ಆದರೂ ಜನರು ಎಲ್ಲಾ ಕಡೆಗಳಿಂದ ಯೇಸುವಿನ ಬಳಿಗೆ ಬರುತ್ತಿದ್ದರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45