ಮಾರ್ಕನು 13 : 1 (OCVKN)
ಯುಗದ ಸಮಾಪ್ತಿಯ ಸೂಚನೆಗಳು
ಮಾರ್ಕನು 13 : 2 (OCVKN)
ಯೇಸು ದೇವಾಲಯದೊಳಗಿಂದ ಹೊರಗೆ ಹೋಗುತ್ತಿದ್ದಾಗ ಅವರ ಶಿಷ್ಯರಲ್ಲಿ ಒಬ್ಬನು ಯೇಸುವಿಗೆ, “ಬೋಧಕರೇ, ಇಲ್ಲಿ ಎಂಥಾ ಭಾರಿ ಕಲ್ಲುಗಳು ಮತ್ತು ಎಂಥಾ ಮಹಾ ಕಟ್ಟಡಗಳು ಇವೆ ನೋಡಿರಿ!” ಎಂದನು.
ಮಾರ್ಕನು 13 : 3 (OCVKN)
ಯೇಸು ಅವನಿಗೆ ಉತ್ತರವಾಗಿ, “ನೀನು ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯೋ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲಾಗುವವು,” ಎಂದರು. ಯೇಸು ಓಲಿವ್ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ ಇವರು ಪ್ರತ್ಯೇಕವಾಗಿ ಯೇಸುವಿಗೆ,
ಮಾರ್ಕನು 13 : 4 (OCVKN)
“ಇವೆಲ್ಲಾ ಯಾವಾಗ ಆಗುವವು? ಇವೆಲ್ಲವೂ ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು,” ಎಂದು ಕೇಳಿದರು.
ಮಾರ್ಕನು 13 : 5 (OCVKN)
ಯೇಸು ಅವರಿಗೆ ಹೀಗೆಂದನು, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ.
ಮಾರ್ಕನು 13 : 6 (OCVKN)
ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
ಮಾರ್ಕನು 13 : 7 (OCVKN)
ಇದಲ್ಲದೆ ಯುದ್ಧಗಳನ್ನೂ, ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಏಕೆಂದರೆ ಇವೆಲ್ಲವು ಸಂಭವಿಸುವುದು ಅಗತ್ಯ. ಆದರೆ ಇದು ಇನ್ನೂ ಅಂತ್ಯವಲ್ಲ.
ಮಾರ್ಕನು 13 : 8 (OCVKN)
ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಬರಗಾಲಗಳು ಉಂಟಾಗುವವು, ಇವು ಪ್ರಸವವೇದನೆಯ ಪ್ರಾರಂಭ ಮಾತ್ರ.
ಮಾರ್ಕನು 13 : 9 (OCVKN)
“ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು, ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ನನ್ನ ನಿಮಿತ್ತವಾಗಿ ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಿಸುವರು. ಹೀಗೆ ಇದು ಅವರಿಗೆ ಸಾಕ್ಷಿಯಾಗಿರುವುದು.
ಮಾರ್ಕನು 13 : 10 (OCVKN)
ಸುವಾರ್ತೆಯು ಮೊದಲು ಎಲ್ಲಾ ಜನಾಂಗಗಳಲ್ಲಿ ಸಾರುವುದು ಅಗತ್ಯವಾಗಿದೆ.
ಮಾರ್ಕನು 13 : 11 (OCVKN)
ಅವರು ನಿಮ್ಮನ್ನು ಬಂಧಿಸಿ ಒಪ್ಪಿಸುವುದಕ್ಕಾಗಿ ತೆಗೆದುಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬುದನ್ನು ಮುಂಚಿತವಾಗಿಯೇ ಚಿಂತಿಸಬೇಡಿರಿ. ಆ ಗಳಿಗೆಯಲ್ಲಿ ನಿಮ್ಮ ಮನಸ್ಸಿನಲ್ಲಿ ನಿಮಗೆ ಯಾವುದು ಕೊಡಲಾಗುವುದೋ ಅದನ್ನೇ ಮಾತನಾಡಿರಿ. ಏಕೆಂದರೆ ಮಾತನಾಡುವವರು ನೀವಲ್ಲ, ಪವಿತ್ರಾತ್ಮನೇ.
ಮಾರ್ಕನು 13 : 12 (OCVKN)
“ಸಹೋದರನು ತನ್ನ ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.
ಮಾರ್ಕನು 13 : 13 (OCVKN)
ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಮಾಡುವರು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.
ಮಾರ್ಕನು 13 : 14 (OCVKN)
“ಆದರೆ ‘ಅಸಹ್ಯ ವಸ್ತು’* ದಾನಿ 9:27; 11:31; 12:11 ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ ಓದುವವನು ತಿಳಿದುಕೊಳ್ಳಲಿ. ಆಗ ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
ಮಾರ್ಕನು 13 : 15 (OCVKN)
ಮಾಳಿಗೆಯ ಮೇಲಿದ್ದವರು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದಿರಲಿ; ತಮ್ಮ ಮನೆಯೊಳಗೆ ಪ್ರವೇಶಿಸಿ ಅದರೊಳಗಿಂದ ಏನನ್ನೂ ತೆಗೆದುಕೊಳ್ಳದಿರಲಿ.
ಮಾರ್ಕನು 13 : 16 (OCVKN)
ಹೊಲದಲ್ಲಿರುವವರು ಬಟ್ಟೆಗಳನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗದಿರಲಿ.
ಮಾರ್ಕನು 13 : 17 (OCVKN)
ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ!
ಮಾರ್ಕನು 13 : 18 (OCVKN)
ಈ ಸಂಕಟ ಚಳಿಗಾಲದಲ್ಲಿ ಆಗದಂತೆ ನೀವು ಪ್ರಾರ್ಥಿಸಿರಿ.
ಮಾರ್ಕನು 13 : 19 (OCVKN)
ಆ ದಿವಸಗಳಲ್ಲಿ ಮಹಾ ಸಂಕಟವಿರುವುದು, ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ಸಮಯದವರೆಗೂ ಅಂಥ ಸಂಕಟವು ಆಗಲಿಲ್ಲ. ಇನ್ನು ಮುಂದೆಯೂ ಆಗುವುದಿಲ್ಲ.
ಮಾರ್ಕನು 13 : 20 (OCVKN)
“ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾರೂ ತಪ್ಪಿಹೋಗುವುದಿಲ್ಲ. ಆದರೆ ತಾನು ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾರೆ.
ಮಾರ್ಕನು 13 : 21 (OCVKN)
ಆಗ ಯಾರಾದರೂ ನಿಮಗೆ, ‘ಇಗೋ, ಕ್ರಿಸ್ತನು ಇಲ್ಲಿದ್ದಾನೆ, ಅಗೋ, ಆತನು ಅಲ್ಲಿದ್ದಾನೆ,’ ಎಂದು ಹೇಳಿದರೆ ನಂಬಬೇಡಿರಿ.
ಮಾರ್ಕನು 13 : 22 (OCVKN)
ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು, ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.
ಮಾರ್ಕನು 13 : 23 (OCVKN)
ಆದರೆ ನೀವು ಜಾಗರೂಕರಾಗಿರಿ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೆ ಹೇಳಿದ್ದೇನೆ.
ಮಾರ್ಕನು 13 : 24 (OCVKN)
“ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ, “ ‘ಸೂರ್ಯನಿಗೆ ಕತ್ತಲು ಮುಸುಕುವುದು; ಚಂದ್ರನು ಕಾಂತಿಹೀನನಾಗುವನು.
ಮಾರ್ಕನು 13 : 25 (OCVKN)
ಆಕಾಶದಿಂದ ನಕ್ಷತ್ರಗಳು ಬೀಳುವವು ಮತ್ತು ಆಕಾಶದ ಶಕ್ತಿಗಳು ಕದಲುವವು.’ ಯೆಶಾಯ 13:10; 34:4
ಮಾರ್ಕನು 13 : 26 (OCVKN)
“ಆಗ ಮನುಷ್ಯಪುತ್ರನಾದ ನಾನು ಬಹು ಶಕ್ತಿಯಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ಕಾಣುವರು.
ಮಾರ್ಕನು 13 : 27 (OCVKN)
ನಾನು ನನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ನಾನು ಆರಿಸಿಕೊಂಡವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವೆನು.
ಮಾರ್ಕನು 13 : 28 (OCVKN)
“ಅಂಜೂರದ ಮರದ ಸಾಮ್ಯದಿಂದ ಈ ಪಾಠವನ್ನು ಕಲಿತುಕೊಳ್ಳಿರಿ: ಅದರ ರೆಂಬೆ ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.
ಮಾರ್ಕನು 13 : 29 (OCVKN)
ಅದೇ ಪ್ರಕಾರ ಇವೆಲ್ಲವೂ ಸಂಭವಿಸುವುದನ್ನು ನೀವು ಕಾಣುವಾಗ, ಮನುಷ್ಯಪುತ್ರನಾದ ನಾನು ಬಾಗಿಲ ಹತ್ತಿರದಲ್ಲಿಯೇ ಇದ್ದೇನೆ ಎಂದು ತಿಳಿದುಕೊಳ್ಳಿರಿ.
ಮಾರ್ಕನು 13 : 30 (OCVKN)
ಇವೆಲ್ಲವೂ ನೆರವೇರುವವರೆಗೆ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ಮಾರ್ಕನು 13 : 31 (OCVKN)
ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.
ಮಾರ್ಕನು 13 : 32 (OCVKN)
ಆ ದಿನವು ಮತ್ತು ಆ ಗಳಿಗೆಯು ಯಾರಿಗೂ ತಿಳಿಯದು “ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ತಂದೆಗೆ ಹೊರತು ಯಾವ ಮನುಷ್ಯನಿಗಾಗಲಿ, ಪರಲೋಕದಲ್ಲಿರುವ ದೂತರಿಗಾಗಲಿ, ಪುತ್ರನಿಗಾಗಲಿ ತಿಳಿಯದು.
ಮಾರ್ಕನು 13 : 33 (OCVKN)
ನೀವು ಎಚ್ಚರವಾಗಿರಿ, ಜಾಗರೂಕರಾಗಿರಿ. ಏಕೆಂದರೆ ಆ ಕಾಲವು ಬರುವುದು ಯಾವಾಗ ಎಂದು ನಿಮಗೆ ತಿಳಿಯದು.
ಮಾರ್ಕನು 13 : 34 (OCVKN)
ಅದು ಒಬ್ಬ ಮನುಷ್ಯನು ದೂರ ಪ್ರಯಾಣಕ್ಕಾಗಿ ತನ್ನ ಮನೆಯನ್ನು ಬಿಟ್ಟು, ತನ್ನ ಸೇವಕರಿಗೆ ಅಧಿಕಾರವನ್ನೂ ಪ್ರತಿಯೊಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಿಲು ಕಾಯುವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ ಎಂದು ನಾನು ನಿಮಗೆ ಹೇಳುತ್ತಿದ್ದೇನೆ.
ಮಾರ್ಕನು 13 : 35 (OCVKN)
“ಆದ್ದರಿಂದ ಜಾಗರೂಕರಾಗಿರಿ. ಮನೆಯಜಮಾನನು ಸಂಜೆಯಲ್ಲಿಯೋ ಮಧ್ಯರಾತ್ರಿಯಲ್ಲಿಯೋ ಹುಂಜ ಕೂಗುವಾಗಲೋ ಬೆಳಕಾಗುವಾಗಲೋ, ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.
ಮಾರ್ಕನು 13 : 36 (OCVKN)
ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವುದನ್ನು ಕಂಡಾನು.
ಮಾರ್ಕನು 13 : 37 (OCVKN)
ನಿಮಗೆ ಹೇಳುವುದನ್ನು ನಾನು ಎಲ್ಲರಿಗೂ ಹೇಳುತ್ತೇನೆ: ‘ಎಚ್ಚರವಾಗಿರಿ,’ ” ಎಂದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37