ಮಾರ್ಕನು 15 : 2 (OCVKN)
ಬೆಳಗಾದ ಕೂಡಲೇ ಮುಖ್ಯಯಾಜಕರೂ ಹಿರಿಯರೂ ನಿಯಮ ಬೋಧಕರ ಮತ್ತು ಆಲೋಚನಾ ಸಭೆಯವರೊಂದಿಗೆ ಸಮಾಲೋಚನೆ ಮಾಡಿಕೊಂಡು ಯೇಸುವಿಗೆ ಬೇಡಿಹಾಕಿಸಿ ಪಿಲಾತನಿಗೆ ಒಪ್ಪಿಸಿದರು.
ಮಾರ್ಕನು 15 : 3 (OCVKN)
ಆಗ ಪಿಲಾತನು ಯೇಸುವಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಲು, “ನೀನೇ ಅದನ್ನು ಹೇಳಿದ್ದೀ” ಎಂದು ಯೇಸು ಉತ್ತರಿಸಿದರು. ಇದಲ್ಲದೆ ಮುಖ್ಯಯಾಜಕರು ಯೇಸುವಿನ ಮೇಲೆ ಅನೇಕ ದೂರುಗಳನ್ನು ಹೇಳಿದರು.
ಮಾರ್ಕನು 15 : 4 (OCVKN)
ಆದರೆ ಪಿಲಾತನು ತಿರುಗಿ ಯೇಸುವಿಗೆ, “ನೀನು ಉತ್ತರ ಕೊಡುವುದಿಲ್ಲವೋ? ಇವರು ನಿನಗೆ ವಿರೋಧವಾಗಿ ಎಷ್ಟು ದೂರುಗಳನ್ನು ಹೇಳುತ್ತಾರೆ ನೋಡು,” ಎಂದು ಕೇಳಿದನು.
ಮಾರ್ಕನು 15 : 6 (OCVKN)
ಆದರೂ ಯೇಸು ಉತ್ತರ ಕೊಡದೆ ಇರಲಾಗಿ ಪಿಲಾತನು ಆಶ್ಚರ್ಯಪಟ್ಟನು. ಹಬ್ಬದಲ್ಲಿ ಜನರು ಕೋರಿದ ಒಬ್ಬ ಸೆರೆಯಾಳನ್ನು ಅವರಿಗೆ ಬಿಟ್ಟುಕೊಡುವ ಪದ್ಧತಿಯಿತ್ತು.
ಮಾರ್ಕನು 15 : 7 (OCVKN)
ದಂಗೆ ಮಾಡಿದವರೊಂದಿಗೆ ಬಂಧಿಸಲಾದ ಆ ದಂಗೆಯಲ್ಲಿ ಕೊಲೆಮಾಡಿದ ಬರಬ್ಬನೆಂಬ ಹೆಸರುಳ್ಳವನೊಬ್ಬನು ಸೆರೆಯಲ್ಲಿ ಇದ್ದನು.
ಮಾರ್ಕನು 15 : 8 (OCVKN)
ಜನಸಮೂಹವು ಪಿಲಾತನು ತಮಗೆ ಯಾವಾಗಲೂ ಮಾಡುತ್ತಿದ್ದ ಪ್ರಕಾರ ಮಾಡಬೇಕೆಂದು ಅವನನ್ನು ಬೇಡಿಕೊಳ್ಳಲಾರಂಭಿಸಿದರು.
ಮಾರ್ಕನು 15 : 9 (OCVKN)
ಪಿಲಾತನು ಅವರಿಗೆ, “ಯೆಹೂದ್ಯರ ಅರಸನನ್ನು ನಿಮಗಾಗಿ ನಾನು ಬಿಡಿಸಬೇಕೋ?” ಎಂದು ಕೇಳಿದನು.
ಮಾರ್ಕನು 15 : 10 (OCVKN)
ಮುಖ್ಯಯಾಜಕರು ಹೊಟ್ಟೆಕಿಚ್ಚಿನಿಂದ ಯೇಸುವನ್ನು ಒಪ್ಪಿಸಿಕೊಟ್ಟಿದ್ದರೆಂದು ಪಿಲಾತನಿಗೆ ತಿಳಿದಿತ್ತು.
ಮಾರ್ಕನು 15 : 11 (OCVKN)
ಆದರೆ ಮುಖ್ಯಯಾಜಕರು ತಮಗೆ ಬರಬ್ಬನನ್ನೇ ಬಿಟ್ಟುಕೊಡಬೇಕೆಂದು ಜನರನ್ನು ಪ್ರೇರೇಪಿಸಿದರು.
ಮಾರ್ಕನು 15 : 13 (OCVKN)
ಪಿಲಾತನು ಅವರಿಗೆ, “ಹಾಗಾದರೆ ನೀವು ಯೆಹೂದ್ಯರ ಅರಸನೆಂದು ಕರೆಯುವ ಈತನಿಗೆ ನಾನೇನು ಮಾಡಬೇಕೆನ್ನುತ್ತೀರಿ?” ಎಂದು ಕೇಳಿದನು.
ಮಾರ್ಕನು 15 : 14 (OCVKN)
ಅವರು, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಮತ್ತೆ ಕೂಗಿಕೊಂಡರು.
ಮಾರ್ಕನು 15 : 15 (OCVKN)
ಆಗ ಪಿಲಾತನು ಅವರಿಗೆ, “ಏಕೆ? ಆತನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಲು ಅವರು, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.
ಮಾರ್ಕನು 15 : 16 (OCVKN)
ಪಿಲಾತನು ಜನರನ್ನು ಮೆಚ್ಚಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು. ಸೈನಿಕರು ಯೇಸುವನ್ನು ಪರಿಹಾಸ್ಯ ಮಾಡಿದ್ದು ಸೈನಿಕರು ಯೇಸುವನ್ನು ರಾಜಭವನದ ಅಂಗಳದೊಳಕ್ಕೆ ತೆಗೆದುಕೊಂಡು ಬಂದು ತಮ್ಮ ದಳದವರನ್ನೆಲ್ಲಾ ಒಟ್ಟಾಗಿ ಕರೆದರು.
ಮಾರ್ಕನು 15 : 17 (OCVKN)
ಅವರು ಯೇಸುವಿಗೆ ಕಡುಗೆಂಪು ಬಣ್ಣದ ಮೇಲಂಗಿಯನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಅವರ ತಲೆಯ ಮೇಲೆ ಇಟ್ಟರು.
ಮಾರ್ಕನು 15 : 18 (OCVKN)
ತರುವಾಯ ಅವರು, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ,” ಎಂದರು.
ಮಾರ್ಕನು 15 : 19 (OCVKN)
ಅವರು ಬೆತ್ತದಿಂದ ಯೇಸುವಿನ ತಲೆಯ ಮೇಲೆ ಹೊಡೆದು, ಅವರ ಮೇಲೆ ಉಗುಳಿ ಮೊಣಕಾಲೂರಿ ಅವರಿಗೆ ನಮಸ್ಕರಿಸಿದರು.
ಮಾರ್ಕನು 15 : 20 (OCVKN)
ಹೀಗೆ ಅವರು ಯೇಸುವನ್ನು ಪರಿಹಾಸ್ಯ ಮಾಡಿದ ಮೇಲೆ ಕಡುಗೆಂಪು ಬಣ್ಣದ ಬಟ್ಟೆಯನ್ನು ಅವರಿಂದ ತೆಗೆದುಹಾಕಿ ಅವರ ಸ್ವಂತ ಬಟ್ಟೆಗಳನ್ನು ಅವರಿಗೆ ಉಡಿಸಿ ಶಿಲುಬೆಗೆ ಹಾಕುವುದಕ್ಕಾಗಿ ತೆಗೆದುಕೊಂಡು ಹೋದರು.
ಮಾರ್ಕನು 15 : 21 (OCVKN)
ಶಿಲುಬೆಗೇರಿಸಿದ್ದು ಅಲೆಕ್ಸಾಂದ್ರ ಮತ್ತು ರೂಫ ಎಂಬುವರ ತಂದೆಯಾದ ಕುರೇನೆದ ಸೀಮೋನನು ಗ್ರಾಮದಿಂದ ಹಾದು ಹೋಗುತ್ತಿರುವಾಗ, ಸೈನಿಕರು ಯೇಸುವಿನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.
ಮಾರ್ಕನು 15 : 22 (OCVKN)
ತರುವಾಯ “ತಲೆಬುರುಡೆಯ ಸ್ಥಳ” ಎಂದು ಅರ್ಥವಿದ್ದ “ಗೊಲ್ಗೊಥಾ” ಎಂಬ ಸ್ಥಳಕ್ಕೆ ಅವರು ಯೇಸುವನ್ನು ತೆಗೆದುಕೊಂಡು ಬಂದರು.
ಮಾರ್ಕನು 15 : 23 (OCVKN)
ಆಗ ಅವರು ಯೇಸುವಿಗೆ ರಕ್ತಬೋಳ* ರಕ್ತಬೋಳ ಒಂದು ವಿಧವಾದ ಅರಬ್ ದೇಶದ ಮರದ ರಸಗಂಧ ಬೆರೆಸಿದ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಆದರೆ ಯೇಸು ಅದನ್ನು ತೆಗೆದುಕೊಳ್ಳಲಿಲ್ಲ.
ಮಾರ್ಕನು 15 : 24 (OCVKN)
ಅವರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರ ಬಟ್ಟೆಗಳನ್ನು ಪಾಲುಮಾಡಿಕೊಂಡರು. ಯಾರಿಗೆ ಯಾವುದು ಬರುವುದೋ ಎಂದು ಚೀಟುಹಾಕಿದರು.
ಮಾರ್ಕನು 15 : 25 (OCVKN)
ಯೇಸುವನ್ನು ಶಿಲುಬೆಗೆ ಹಾಕಿದಾಗ ಮುಂಜಾನೆ ಒಂಬತ್ತು ಗಂಟೆಯಾಗಿತ್ತು.
ಮಾರ್ಕನು 15 : 26 (OCVKN)
ಯೇಸುವಿನ ಮೇಲೆ ಹೊರಿಸಿದ ದೋಷಾರೋಪಣೆ ಹೀಗೆ ಬರೆದಿತ್ತು: ಈತನು ಯೆಹೂದ್ಯರ ಅರಸನು.*
ಮಾರ್ಕನು 15 : 27 (OCVKN)
ಯೇಸುವಿನೊಂದಿಗೆ ಇಬ್ಬರು ಕಳ್ಳರನ್ನು ತಂದು, ಒಬ್ಬನನ್ನು ಬಲಗಡೆಯಲ್ಲಿ ಇನ್ನೊಬ್ಬನನ್ನು ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು.
ಮಾರ್ಕನು 15 : 28 (OCVKN)
ಹೀಗೆ, “ಆತನನ್ನು ಅಪರಾಧಿಗಳೊಂದಿಗೆ ಸೇರಿಸಿದರು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು.† ಕೆಲವು ಮೂಲ ಹಸ್ತಪ್ರತಿಗಳಲ್ಲಿ ಈ ವಾಕ್ಯ ಸೇರ್ಪಡೆಯಾಗಿರುವುದಿಲ್ಲ.
ಮಾರ್ಕನು 15 : 29 (OCVKN)
ಅಲ್ಲಿ ಹಾದು ಹೋಗುತ್ತಿದ್ದವರು ಯೇಸುವನ್ನು ದೂಷಿಸಿ, ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ, “ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,
ಮಾರ್ಕನು 15 : 30 (OCVKN)
ನಿನ್ನನ್ನು ರಕ್ಷಿಸಿಕೊಂಡು ಶಿಲುಬೆಯಿಂದ ಕೆಳಗಿಳಿದು ಬಾ,” ಎಂದು ಯೇಸುವನ್ನು ಅಪಹಾಸ್ಯ ಮಾಡಿದರು.
ಮಾರ್ಕನು 15 : 31 (OCVKN)
ಅದೇ ಪ್ರಕಾರ ಮುಖ್ಯಯಾಜಕರು ನಿಯಮ ಬೋಧಕರೂ ಯೇಸುವನ್ನು ಅಪಹಾಸ್ಯಮಾಡಿ, “ಈತನು ಇತರರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು!
ಮಾರ್ಕನು 15 : 32 (OCVKN)
ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ಕಂಡು ನಂಬುತ್ತೇವೆ,” ಎಂದು ತಮ್ಮಲ್ಲಿ ಪರಸ್ಪರ ಮಾತನಾಡಿಕೊಂಡರು. ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಗಿದ್ದವರೂ ಅವರನ್ನು ನಿಂದಿಸಿದರು.
ಮಾರ್ಕನು 15 : 33 (OCVKN)
ಯೇಸುವಿನ ಮರಣ ಮಧ್ಯಾಹ್ನದಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.
ಮಾರ್ಕನು 15 : 34 (OCVKN)
ಮೂರು ಗಂಟೆಯ ಸಮಯದಲ್ಲಿ ಯೇಸು, “ಎಲೋಹಿ, ಎಲೋಹಿ, ಲಮಾ ಸಬಕ್ತಾನೀ?” ಎಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ?”‡ ಕೀರ್ತನೆ 22:1 ಎಂದು ಮಹಾಧ್ವನಿಯಿಂದ ಕೂಗಿದರು.
ಮಾರ್ಕನು 15 : 36 (OCVKN)
ಹತ್ತಿರ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ಇಗೋ, ಈತನು ಎಲೀಯನನ್ನು ಕರೆಯುತ್ತಿದ್ದಾನೆ,” ಎಂದರು.
ಮಾರ್ಕನು 15 : 37 (OCVKN)
ಆಗ ಒಬ್ಬನು ಓಡಿಹೋಗಿ ಹೀರುವ ವಸ್ತುವಿನಿಂದ ಹುಳಿರಸದಲ್ಲಿ ಅದ್ದಿ ಒಂದು ಕೋಲಿಗೆ ಸಿಕ್ಕಿಸಿ ಯೇಸುವಿಗೆ ಕುಡಿಯಲು ಕೊಟ್ಟು, “ಬಿಡಿರಿ, ಈತನನ್ನು ಕೆಳಗೆ ಇಳಿಸುವುದಕ್ಕೆ ಎಲೀಯನು ಬರುವನೋ ನೋಡೋಣ,” ಎಂದನು.
ಮಾರ್ಕನು 15 : 38 (OCVKN)
ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟರು. ಆಗ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು.
ಮಾರ್ಕನು 15 : 39 (OCVKN)
ಯೇಸು ಹೀಗೆ ಕೂಗಿ ಪ್ರಾಣಬಿಟ್ಟಿದ್ದನ್ನು ಅವರ ಎದುರಿಗೆ ನಿಂತಿದ್ದ ಶತಾಧಿಪತಿಯು ಕಂಡು, “ನಿಜವಾಗಿಯೂ ಈ ಮನುಷ್ಯನು ದೇವಪುತ್ರ,” ಎಂದನು.
ಮಾರ್ಕನು 15 : 40 (OCVKN)
ಅಲ್ಲಿ ಸ್ತ್ರೀಯರು ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿ ಮರಿಯಳು, ಸಲೋಮೆಯು ಇದ್ದರು.
ಮಾರ್ಕನು 15 : 41 (OCVKN)
ಯೇಸು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಅವರನ್ನು ಹಿಂಬಾಲಿಸಿ, ಉಪಚರಿಸಿದರು. ಯೇಸುವಿನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರೂ ಅಲ್ಲಿದ್ದರು.
ಮಾರ್ಕನು 15 : 42 (OCVKN)
ಯೇಸುವಿನ ದೇಹವನ್ನು ಸಮಾಧಿಯಲ್ಲಿಟ್ಟದ್ದು ಸಂಜೆ ಸಮೀಪಿಸುತ್ತಿದ್ದಾಗ, ಅದು ಸಬ್ಬತ್ ದಿನದ ಸಿದ್ಧತೆಯ ಹಿಂದಿನ ದಿವಸವಾಗಿತ್ತು.
ಮಾರ್ಕನು 15 : 43 (OCVKN)
ಗೌರವವುಳ್ಳವನೂ ಆಲೋಚನಾಸಭೆಯ ಸದಸ್ಯನೂ ದೇವರ ರಾಜ್ಯಕ್ಕಾಗಿ ಕಾಯುತ್ತಿದ್ದವನೂ ಆದ ಅರಿಮಥಾಯದ ಯೋಸೇಫನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು.
ಮಾರ್ಕನು 15 : 44 (OCVKN)
ಯೇಸು ಅಷ್ಟು ಬೇಗ ಮರಣಹೊಂದಿದ್ದಾರೆಂದು ತಿಳಿದು ಪಿಲಾತನು ಆಶ್ಚರ್ಯಪಟ್ಟು ಶತಾಧಿಪತಿಯನ್ನು ತನ್ನ ಬಳಿಗೆ ಕರೆದು, “ಯೇಸು ಆಗಲೇ ಮೃತನಾದನೋ?” ಎಂದು ವಿಚಾರಿಸಿ
ಮಾರ್ಕನು 15 : 45 (OCVKN)
ತಿಳಿದುಕೊಂಡ ಮೇಲೆ ಪಾರ್ಥಿವ ಶರೀರವನ್ನು ಯೋಸೇಫನಿಗೆ ಒಪ್ಪಿಸಿದನು.
ಮಾರ್ಕನು 15 : 46 (OCVKN)
ಅವನು ಶುಭ್ರವಾದ ನಾರುಬಟ್ಟೆಯನ್ನು ಕೊಂಡುಕೊಂಡು ಬಂದು ಯೇಸುವನ್ನು ಶಿಲುಬೆಯಿಂದ ಇಳಿಸಿ ಆ ನಾರುಬಟ್ಟೆಯಲ್ಲಿ ಅದನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಯೇಸುವಿನ ಸಮಾಧಿಯ ದ್ವಾರಕ್ಕೆ ಒಂದು ಬಂಡೆಯನ್ನು ಉರುಳಿಸಿದನು.
ಮಾರ್ಕನು 15 : 47 (OCVKN)
ಮಗ್ದಲದ ಮರಿಯಳು ಮತ್ತು ಯೋಸೆಯ ತಾಯಿಯಾದ ಮರಿಯಳು ಯೇಸುವನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47