ಮಾರ್ಕನು 3 : 1 (OCVKN)
ಯೇಸು ಯೆಹೂದ್ಯರ ಸಬ್ಬತ್ ದಿನದಂದು ಸ್ವಸ್ಥಪಡಿಸಿದ್ದು ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದರು. ಅಲ್ಲಿ ಕೈ ಬತ್ತಿದ ಒಬ್ಬ ಮನುಷ್ಯನಿದ್ದನು.
ಮಾರ್ಕನು 3 : 2 (OCVKN)
ಕೆಲವರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು, ಸಬ್ಬತ್* ಸಬ್ಬತ್ ಅಂದರೆ ವಿಶ್ರಾಂತಿ ದಿನ ದಿನದಲ್ಲಿ ಅವನನ್ನು ಯೇಸು ಗುಣಪಡಿಸುವರೋ ಏನೋ ಎಂದು ಲಕ್ಷವಿಟ್ಟು ನೋಡುತ್ತಿದ್ದರು.
ಮಾರ್ಕನು 3 : 3 (OCVKN)
ಯೇಸು ಕೈಬತ್ತಿದವನಿಗೆ, “ಎದ್ದು ಮುಂದೆ ಬಾ,” ಎಂದರು.
ಮಾರ್ಕನು 3 : 4 (OCVKN)
ಮಾರ್ಕನು 3 : 5 (OCVKN)
ಆಗ ಯೇಸು ಅವರನ್ನು, “ಸಬ್ಬತ್ ದಿನದಲ್ಲಿ ಒಳ್ಳೆಯದನ್ನು ಮಾಡುವುದು ನಿಯಮಕ್ಕೆ ಸಮ್ಮತವೋ ಅಥವಾ ಕೆಟ್ಟದ್ದನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ತೆಗೆಯುವುದೋ?” ಎಂದು ಕೇಳಿದರು. ಅದಕ್ಕೆ ಅವರು ಸುಮ್ಮನಿದ್ದರು. ಆಗ ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ನೋಡಿ, ಅವರ ಹೃದಯಕಾಠಿಣ್ಯಕ್ಕಾಗಿ ದುಃಖಪಟ್ಟು, ಆ ಮನುಷ್ಯನಿಗೆ, “ನಿನ್ನ ಕೈಚಾಚು,” ಎಂದು ಹೇಳಿದರು. ಅವನು ಕೈಚಾಚಿದಾಗ, ಅವನ ಕೈ ಸಂಪೂರ್ಣವಾಗಿ ಗುಣವಾಯಿತು.
ಮಾರ್ಕನು 3 : 6 (OCVKN)
ಫರಿಸಾಯರು ಅಲ್ಲಿಂದ ಹೊರಗೆ ಹೋಗಿ ಕೂಡಲೇ ಹೆರೋದ್ಯರೊಂದಿಗೆ ಸೇರಿಕೊಂಡು ಯೇಸುವನ್ನು ಹೇಗೆ ಕೊಲ್ಲಬೇಕೆಂದು ಅವರ ವಿರೋಧವಾಗಿ ಒಳಸಂಚು ಮಾಡಿದರು.
ಮಾರ್ಕನು 3 : 7 (OCVKN)
ಜನರ ಗುಂಪುಗಳು ಯೇಸುವನ್ನು ಹಿಂಬಾಲಿಸಿದ್ದು ಯೇಸು ತಮ್ಮ ಶಿಷ್ಯರೊಂದಿಗೆ ಸರೋವರದ ಬಳಿಗೆ ಹೊರಟು ಹೋದರು. ಗಲಿಲಾಯದಿಂದ ಬಂದ ಒಂದು ದೊಡ್ಡ ಜನರ ಗುಂಪು ಯೇಸುವನ್ನು ಹಿಂಬಾಲಿಸಿತು.
ಮಾರ್ಕನು 3 : 8 (OCVKN)
ಯೇಸು ಮಾಡುತ್ತಿದ್ದ ಎಲ್ಲವನ್ನು ಕೇಳಿ, ಬಹುಜನರು ಯೂದಾಯದಿಂದಲೂ ಯೆರೂಸಲೇಮ್ ನಗರದಿಂದಲೂ ಇದುಮಾಯದಿಂದಲೂ ಯೊರ್ದನ್ ನದಿಯ ಆಚೆಕಡೆಯಿಂದಲೂ ಟೈರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಯೇಸುವಿನ ಬಳಿಗೆ ಬಂದರು.
ಮಾರ್ಕನು 3 : 9 (OCVKN)
ಜನರ ಗುಂಪು ಹೆಚ್ಚಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು ತಮಗಾಗಿ ಒಂದು ಚಿಕ್ಕ ದೋಣಿಯನ್ನು ಸಿದ್ಧವಾಗಿಡಲು ತಮ್ಮ ಶಿಷ್ಯರಿಗೆ ಹೇಳಿದರು.
ಮಾರ್ಕನು 3 : 10 (OCVKN)
ಯೇಸು ಅನೇಕರನ್ನು ಗುಣಪಡಿಸಿದ್ದರಿಂದ ರೋಗಿಗಳೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ನುಗ್ಗುತ್ತಿದ್ದರು.
ಮಾರ್ಕನು 3 : 11 (OCVKN)
ದುರಾತ್ಮಗಳು ಯೇಸುವನ್ನು ಕಂಡಾಗಲೆಲ್ಲಾ ಅವರ ಮುಂದೆ ಬಿದ್ದು, “ನೀವು ದೇವರ ಪುತ್ರ,” ಎಂದು ಕಿರುಚಿದವು.
ಮಾರ್ಕನು 3 : 12 (OCVKN)
ಆದರೆ ಯೇಸು, ತಾನು ಯಾರೆಂದು ಯಾರಿಗೂ ಪ್ರಕಟಿಸಬಾರದೆಂದು ಅವುಗಳಿಗೆ ಕಟ್ಟಪ್ಪಣೆ ಮಾಡಿದರು.
ಮಾರ್ಕನು 3 : 13 (OCVKN)
ಯೇಸು ಹನ್ನೆರಡು ಮಂದಿ ಶಿಷ್ಯರನ್ನು ನೇಮಿಸಿದ್ದು ಯೇಸು ಬೆಟ್ಟವನ್ನೇರಿ ತಮಗೆ ಬೇಕಾದವರನ್ನು ಕರೆದರು. ಅವರು ಯೇಸುವಿನ ಬಳಿಗೆ ಬಂದರು.
ಮಾರ್ಕನು 3 : 14 (OCVKN)
ಯೇಸು ಹನ್ನೆರಡು ಮಂದಿಯನ್ನು ತಮ್ಮ ಸಂಗಡ ಇರಲು ಮತ್ತು ಅವರನ್ನು ಉಪದೇಶಮಾಡಲು ನೇಮಿಸಿ, ಅವರಿಗೆ “ಅಪೊಸ್ತಲರು” ಎಂದು ಕರೆದರು.
ಮಾರ್ಕನು 3 : 15 (OCVKN)
ಅವರಿಗೆ ದೆವ್ವಗಳನ್ನು ಓಡಿಸುವ ಅಧಿಕಾರ ಕೊಟ್ಟರು.
ಮಾರ್ಕನು 3 : 16 (OCVKN)
ಯೇಸು ನೇಮಿಸಿದ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಇಂತಿವೆ: ಸೀಮೋನನಿಗೆ ಯೇಸು “ಪೇತ್ರ” ಎಂಬ ಹೆಸರನ್ನು ಕೊಟ್ಟರು.
ಮಾರ್ಕನು 3 : 17 (OCVKN)
ಜೆಬೆದಾಯನ ಮಗ ಯಾಕೋಬ ಮತ್ತು ಅವನ ತಮ್ಮ ಯೋಹಾನ ಇವರಿಗೆ ಯೇಸು “ಬೊವನೆರ್ಗೆಸ್” ಎಂದರೆ ಗುಡುಗಿನ ಪುತ್ರರು ಎಂಬ ಹೆಸರಿಟ್ಟರು.
ಮಾರ್ಕನು 3 : 18 (OCVKN)
ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನನು.
ಮಾರ್ಕನು 3 : 19 (OCVKN)
ಯೇಸುವಿಗೆ ದ್ರೋಹಮಾಡಿದ ಇಸ್ಕರಿಯೋತ ಯೂದ.
ಮಾರ್ಕನು 3 : 20 (OCVKN)
ಯೇಸು ಮತ್ತು ಬೆಲ್ಜೆಬೂಲನು ಯೇಸು ಒಂದು ಮನೆಯೊಳಗೆ ಹೋದಾಗ, ಜನರು ತಿರುಗಿ ಗುಂಪಾಗಿ ನೆರೆದು ಬಂದದ್ದರಿಂದ ಯೇಸುವಿಗೂ ಅವರ ಶಿಷ್ಯರಿಗೂ ಊಟಮಾಡುವುದಕ್ಕೂ ಸಾಧ್ಯವಾಗಲಿಲ್ಲ.
ಮಾರ್ಕನು 3 : 21 (OCVKN)
ಯೇಸುವಿನ ಕುಟುಂಬದವರು ಇದನ್ನು ಕೇಳಿದಾಗ, “ಆತನಿಗೆ ಹುಚ್ಚುಹಿಡಿದಿದೆ,” ಎಂದು ಹೇಳಿ, ಯೇಸುವನ್ನು ಹಿಡಿದು ತರಲು ಹೊರಟರು.
ಮಾರ್ಕನು 3 : 22 (OCVKN)
ಮಾರ್ಕನು 3 : 23 (OCVKN)
ಯೆರೂಸಲೇಮಿನಿಂದ ಬಂದ ನಿಯಮ ಬೋಧಕರು, “ಈತನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ! ದೆವ್ವಗಳ ಅಧಿಪತಿಯ ಸಹಾಯದಿಂದಲೇ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು. ಆಗ ಯೇಸು ಅವರನ್ನು ಹತ್ತಿರಕ್ಕೆ ಕರೆದು ಸಾಮ್ಯರೂಪದಲ್ಲಿ ಹೇಳಿದ್ದೇನೆಂದರೆ: “ಸೈತಾನನು ಸೈತಾನನನ್ನು ಓಡಿಸುವುದು ಹೇಗೆ?
ಮಾರ್ಕನು 3 : 24 (OCVKN)
ಒಂದು ರಾಜ್ಯ ತನಗೆ ವಿರೋಧವಾಗಿ ವಿಭಾಗಿಸಿಕೊಂಡರೆ ಆ ರಾಜ್ಯವು ನಿಲ್ಲುವುದಿಲ್ಲ.
ಮಾರ್ಕನು 3 : 25 (OCVKN)
ಒಂದು ಕುಟುಂಬ ತನಗೆ ವಿರೋಧವಾಗಿ ವಿಭಾಗಿಸಿಕೊಂಡರೆ ಆ ಕುಟುಂಬವು ನಿಲ್ಲುವುದಿಲ್ಲ.
ಮಾರ್ಕನು 3 : 26 (OCVKN)
ಸೈತಾನನು ತನಗೆ ವಿರೋಧವಾಗಿ ತಾನೇ ಎದ್ದು ವಿಭಾಗಿಸಿಕೊಂಡರೆ, ಅವನು ನಿಲ್ಲಲಾರದೆ ನಾಶವಾಗುವನು.
ಮಾರ್ಕನು 3 : 27 (OCVKN)
ಒಬ್ಬನು ಬಲಿಷ್ಠನ ಮನೆಗೆ ನುಗ್ಗಿ ಮೊದಲು ಅವನನ್ನು ಕಟ್ಟಿಹಾಕದೆ ಅವನ ಸೊತ್ತನ್ನು ಸೂರೆ ಮಾಡಲಾಗುವುದಿಲ್ಲ. ಮೊದಲು ಅವನನ್ನು ಕಟ್ಟಿದ ನಂತರ ಅವನ ಮನೆಯನ್ನು ಕೊಳ್ಳೆ ಹೊಡೆಯಬಹುದು.
ಮಾರ್ಕನು 3 : 28 (OCVKN)
ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೆ ಮತ್ತು ದೂಷಣೆಗಳಿಗೆ ಕ್ಷಮಾಪಣೆ ದೊರೆಯುವುದು.
ಮಾರ್ಕನು 3 : 29 (OCVKN)
ಆದರೆ ಪವಿತ್ರಾತ್ಮರನ್ನು ದೂಷಿಸುವವನಿಗೆ ಎಂದಿಗೂ ಕ್ಷಮಾಪಣೆ ದೊರೆಯುವುದಿಲ್ಲ. ಅವನು ನಿತ್ಯ ಪಾಪದ ಅಪರಾಧಿಯಾಗಿದ್ದಾನೆ,” ಎಂದರು.
ಮಾರ್ಕನು 3 : 30 (OCVKN)
ಮಾರ್ಕನು 3 : 31 (OCVKN)
“ಆತನಲ್ಲಿ ಅಶುದ್ಧಾತ್ಮವಿದೆ,” ಎಂದು ಅವರು ಹೇಳುತ್ತಿದ್ದುದರಿಂದ ಯೇಸು ಹೀಗೆ ಹೇಳಿದರು. ಆಗ ಯೇಸುವಿನ ತಾಯಿ ಮತ್ತು ಸಹೋದರರು ಬಂದು ಹೊರಗೆ ನಿಂತುಕೊಂಡು, ಯೇಸುವನ್ನು ಕರೆಯಲು ಹೇಳಿ ಕಳುಹಿಸಿದರು.
ಮಾರ್ಕನು 3 : 32 (OCVKN)
ಯೇಸುವಿನ ಸುತ್ತಲೂ ಗುಂಪಾಗಿ ಕುಳಿತಿದ್ದ ಜನರು ಅವರಿಗೆ, “ನಿಮ್ಮ ತಾಯಿಯೂ ಸಹೋದರರೂ ನಿಮಗಾಗಿ ಹೊರಗೆ ಕಾದಿದ್ದಾರೆ,” ಎಂದು ಹೇಳಿದರು.
ಮಾರ್ಕನು 3 : 33 (OCVKN)
ಮಾರ್ಕನು 3 : 34 (OCVKN)
ಅದಕ್ಕೆ ಯೇಸು, “ನನ್ನ ತಾಯಿ ಮತ್ತು ಸಹೋದರರು ಯಾರು?” ಎಂದು ಕೇಳಿದರು. ಅನಂತರ ತಮ್ಮ ಸುತ್ತಲೂ ಕುಳಿತ್ತಿದ್ದವರನ್ನು ನೋಡಿ, “ಇಗೋ, ಇವರೇ ನನ್ನ ತಾಯಿ ಮತ್ತು ನನ್ನ ಸಹೋದರರು!
ಮಾರ್ಕನು 3 : 35 (OCVKN)
ದೇವರ ಚಿತ್ತದಂತೆ ಮಾಡುವವರೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ ಆಗಿದ್ದಾರೆ,” ಎಂದು ಹೇಳಿದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35