ಮಾರ್ಕನು 4 : 1 (OCVKN)
ಬಿತ್ತುವವನ ಸಾಮ್ಯ ಯೇಸು ಮತ್ತೊಮ್ಮೆ ಗಲಿಲಾಯ ಸರೋವರದ ತೀರದಲ್ಲಿ ಬೋಧಿಸಲಾರಂಭಿಸಿದರು. ಜನರು ಗುಂಪುಗುಂಪಾಗಿ ಯೇಸುವಿನ ಸುತ್ತಲೂ ನೆರೆದು ಬಂದದ್ದರಿಂದ ಯೇಸು ಸರೋವರದಲ್ಲಿದ್ದ ದೋಣಿಯನ್ನು ಹತ್ತಿ ಕುಳಿತುಕೊಂಡರು. ಜನರು ದಡದಲ್ಲಿ ಸುತ್ತಲೂ ನಿಂತಿದ್ದರು.
ಮಾರ್ಕನು 4 : 2 (OCVKN)
ಯೇಸು ಸಾಮ್ಯಗಳ ಮೂಲಕ ಅನೇಕ ಸಂಗತಿಗಳನ್ನು ಅವರಿಗೆ ಬೋಧಿಸಿ ಹೇಳಿದ್ದೇನೆಂದರೆ:
ಮಾರ್ಕನು 4 : 3 (OCVKN)
“ಕೇಳಿರಿ! ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು.
ಮಾರ್ಕನು 4 : 4 (OCVKN)
ಅವನು ಬಿತ್ತುತ್ತಿರುವಾಗ ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು. ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು.
ಮಾರ್ಕನು 4 : 5 (OCVKN)
ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು. ಅಲ್ಲಿ ಆಳವಾದ ಮಣ್ಣಿಲ್ಲದ ಕಾರಣ ಅವು ಬೇಗನೆ ಮೊಳೆತವು.
ಮಾರ್ಕನು 4 : 6 (OCVKN)
ಆದರೆ ಬಿಸಿಲೇರಿದಾಗ ಅವು ಬಾಡಿಹೋಗಿ, ಬೇರಿಲ್ಲದ ಕಾರಣ ಒಣಗಿಹೋದವು.
ಮಾರ್ಕನು 4 : 7 (OCVKN)
ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು. ಮುಳ್ಳುಗಿಡಗಳು ಬೆಳೆದು ಆ ಎಳೆಯ ಸಸಿಗಳನ್ನು ಅಡಗಿಸಿಬಿಟ್ಟಿದ್ದರಿಂದ ಅವು ಫಲ ಕೊಡಲಿಲ್ಲ.
ಮಾರ್ಕನು 4 : 8 (OCVKN)
ಇನ್ನು ಕೆಲವು ಬೀಜಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಬೆಳೆದು ಮೂವತ್ತರಷ್ಟು, ಅರವತ್ತರಷ್ಟು, ನೂರರಷ್ಟು ಫಲಕೊಟ್ಟವು.”
ಮಾರ್ಕನು 4 : 10 (OCVKN)
ಅನಂತರ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ,” ಎಂದು ಹೇಳಿದರು. ಯೇಸು ಒಬ್ಬರೇ ಇದ್ದಾಗ, ಹನ್ನೆರಡು ಮಂದಿ ಶಿಷ್ಯರು ಮತ್ತು ಯೇಸುವಿನ ಸುತ್ತಲಿದ್ದವರು ಬಂದು ಆ ಸಾಮ್ಯಗಳ ವಿಷಯವಾಗಿ ಕೇಳಿದರು.
ಮಾರ್ಕನು 4 : 11 (OCVKN)
ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯವನ್ನು ತಿಳಿದುಕೊಳ್ಳುವ ಜ್ಞಾನ ನಿಮಗೆ ಕೊಡಲಾಗಿದೆ. ಆದರೆ ಹೊರಗಿನವರಿಗೆ ಎಲ್ಲವೂ ಸಾಮ್ಯದ ರೂಪದಲ್ಲಿ ಹೇಳಲಾಗಿದೆ.
ಮಾರ್ಕನು 4 : 12 (OCVKN)
ಈ ಕಾರಣದಿಂದ, “ ‘ಅವರು ಕಣ್ಣಿದ್ದರೂ ಕಾಣುವುದಿಲ್ಲ. ಕೇಳಿಸಿಕೊಳ್ಳುತ್ತಿದ್ದರೂ ಗ್ರಹಿಸುವುದಿಲ್ಲ. ಹಾಗೆ ಮಾಡುವುದಾದರೆ, ಅವರು ದೇವರ ಕಡೆಗೆ ತಿರುಗಿಕೊಂಡು ಕ್ಷಮೆಹೊಂದುತ್ತಿದ್ದರು!’* ಯೆಶಾಯ 6:9,10 ” ಎಂದರು.
ಮಾರ್ಕನು 4 : 13 (OCVKN)
ಅನಂತರ ಯೇಸು ಅವರಿಗೆ, “ನಿಮಗೆ ಈ ಸಾಮ್ಯ ಅರ್ಥವಾಗಲಿಲ್ಲವೇ? ಹಾಗಾದರೆ ನೀವು ಬೇರೆ ಸಾಮ್ಯಗಳನ್ನು ಹೇಗೆ ಅರ್ಥಮಾಡಿಕೊಳ್ಳುವಿರಿ?
ಮಾರ್ಕನು 4 : 14 (OCVKN)
ರೈತನು ‘ವಾಕ್ಯ’ ಎಂಬ ಬೀಜ ಬಿತ್ತುತ್ತಾನೆ.
ಮಾರ್ಕನು 4 : 15 (OCVKN)
ಕೆಲವರು ದಾರಿಯ ಪಕ್ಕದಲ್ಲಿ ಬಿದ್ದ ಬೀಜದಂತಿದ್ದಾರೆ. ಅವರು ವಾಕ್ಯ ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ದೇವರ ವಾಕ್ಯವನ್ನು ತೆಗೆದುಬಿಡುತ್ತಾನೆ.
ಮಾರ್ಕನು 4 : 16 (OCVKN)
ಇನ್ನೂ ಕೆಲವರು ಕಲ್ಲು ನೆಲದ ಮೇಲೆ ಬಿದ್ದ ಬೀಜದಂತಿರುವರು. ಅವರು ವಾಕ್ಯವನ್ನು ಕೇಳಿದ ಕೂಡಲೇ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ.
ಮಾರ್ಕನು 4 : 17 (OCVKN)
ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ.
ಮಾರ್ಕನು 4 : 18 (OCVKN)
ಮತ್ತೆ ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜದಂತಿದ್ದಾರೆ. ಅವರು ವಾಕ್ಯವನ್ನು ಕೇಳುತ್ತಾರೆ.
ಮಾರ್ಕನು 4 : 19 (OCVKN)
ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ಇನ್ನಿತರ ಅಭಿಲಾಷೆಗಳು ಸೇರಿ ದೇವರ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ.
ಮಾರ್ಕನು 4 : 20 (OCVKN)
ಇನ್ನೂ ಕೆಲವರು ಒಳ್ಳೆಯ ಭೂಮಿಯಲ್ಲಿ ಬಿದ್ದ ಬೀಜದಂತಿದ್ದು, ವಾಕ್ಯವನ್ನು ಕೇಳಿ ಅಂಗೀಕರಿಸಿ, ಮೂವತ್ತರಷ್ಟು, ಅರವತ್ತರಷ್ಟು, ನೂರರಷ್ಟು ಫಲಕೊಡುತ್ತಾರೆ,” ಎಂದರು.
ಮಾರ್ಕನು 4 : 21 (OCVKN)
ದೀಪಸ್ತಂಭದ ಮೇಲಿನ ದೀಪ ಯೇಸು ಅವರಿಗೆ, “ಯಾರಾದರೂ ದೀಪವನ್ನು ತಂದು ಬೋಗುಣಿಯೊಳಗೆ ಅಥವಾ ಮಂಚದ ಕೆಳಗೆ ಇಡುತ್ತಾರೋ? ಅದರ ಬದಲು ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ.
ಮಾರ್ಕನು 4 : 22 (OCVKN)
ಮರೆಯಾಗಿರುವ ಯಾವುದೂ ವ್ಯಕ್ತವಾಗದೇ ಇರುವುದಿಲ್ಲ. ರಹಸ್ಯಗಳು ಬಹಿರಂಗವಾಗದೆ ಇರುವುದಿಲ್ಲ.
ಮಾರ್ಕನು 4 : 24 (OCVKN)
ಮತ್ತು ಯೇಸು ಅವರಿಗೆ, “ನೀವು ಕೇಳುವುದನ್ನು ಎಚ್ಚರಿಕೆಯಿಂದ ಗಮನಿಸಿರಿ; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು; ಇನ್ನೂ ಹೆಚ್ಚಾಗಿ ಸೇರಿಸಿಕೊಡಲಾಗುವುದು.
ಮಾರ್ಕನು 4 : 25 (OCVKN)
ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು,” ಎಂದು ಹೇಳಿದರು.
ಮಾರ್ಕನು 4 : 26 (OCVKN)
ಬೆಳೆಯುವ ಬೀಜದ ಸಾಮ್ಯ ಯೇಸು, “ದೇವರ ರಾಜ್ಯವು ಹೀಗಿದೆ: ಒಬ್ಬನು ತನ್ನ ಹೊಲದಲ್ಲಿ ಬೀಜವನ್ನು ಬಿತ್ತಿದನು.
ಮಾರ್ಕನು 4 : 27 (OCVKN)
ರಾತ್ರಿ ಅವನು ಮಲಗಿದ್ದರೂ ಹಗಲು ಎದ್ದಿದ್ದರೂ ಆ ಬೀಜವು ಅವನಿಗೆ ತಿಳಿಯದ ರೀತಿಯಲ್ಲಿ ಅಂಕುರಿಸಿ ಬೆಳೆಯುತ್ತದೆ.
ಮಾರ್ಕನು 4 : 28 (OCVKN)
ಭೂಮಿಯು ಮೊದಲು ಸಸಿಯನ್ನು ಆಮೇಲೆ ಹೊಡೆಯನ್ನು ಅನಂತರ ತೆನೆಯ ತುಂಬಾ ಕಾಳನ್ನು ತನ್ನಷ್ಟಕ್ಕೆ ತಾನೇ ಬೆಳೆಸುತ್ತದೆ.
ಮಾರ್ಕನು 4 : 29 (OCVKN)
ಬೆಳೆಯು ಮಾಗಿದ ಕೂಡಲೇ, ಅವನು ಕುಡುಗೋಲನ್ನು ಉಪಯೋಗಿಸುತ್ತಾನೆ. ಏಕೆಂದರೆ ಸುಗ್ಗಿಯು ಬಂದಿದೆ,” ಎಂದರು.
ಮಾರ್ಕನು 4 : 30 (OCVKN)
ಸಾಸಿವೆಕಾಳಿನ ಸಾಮ್ಯ ಯೇಸು ಮುಂದುವರಿಸಿ, “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ ಅಥವಾ ಅದನ್ನು ವಿವರಿಸಲು ಯಾವ ಸಾಮ್ಯವನ್ನು ಉಪಯೋಗಿಸೋಣ?
ಮಾರ್ಕನು 4 : 31 (OCVKN)
ಅದು ಭೂಮಿಯ ಎಲ್ಲಾ ಬೀಜಗಳಿಗಿಂತ ಅತಿ ಚಿಕ್ಕದಾದ ಸಾಸಿವೆ ಕಾಳಿನಂತಿದೆ.
ಮಾರ್ಕನು 4 : 32 (OCVKN)
ಅದನ್ನು ಬಿತ್ತಿದ ಮೇಲೆ, ಅದು ಬೆಳೆದು ತೋಟದ ಎಲ್ಲಾ ಸಸ್ಯಗಳಿಗಿಂತಲೂ ದೊಡ್ಡ ರೆಂಬೆಗಳುಳ್ಳ ಮರವಾಗಿ ಬೆಳೆಯುತ್ತದೆ. ಆಕಾಶದ ಪಕ್ಷಿಗಳು ಬಂದು ಅದರ ನೆರಳಿನಲ್ಲಿ ಗೂಡು ಕಟ್ಟಿ ವಾಸಿಸುತ್ತವೆ,” ಎಂದು ಹೇಳಿದರು.
ಮಾರ್ಕನು 4 : 33 (OCVKN)
ಈ ರೀತಿಯ ಅನೇಕ ಸಾಮ್ಯಗಳಿಂದ ಅವರ ಗ್ರಹಿಕೆಗೆ ತಕ್ಕ ಹಾಗೆ ಯೇಸು ಅವರಿಗೆ ವಾಕ್ಯವನ್ನು ಉಪದೇಶಿಸುತ್ತಿದ್ದರು.
ಮಾರ್ಕನು 4 : 34 (OCVKN)
ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ. ಆದರೆ ಯೇಸು ತಮ್ಮ ಶಿಷ್ಯರೊಡನೆ ಏಕಾಂತವಾಗಿದ್ದಾಗ ಮಾತ್ರ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.
ಮಾರ್ಕನು 4 : 35 (OCVKN)
ಯೇಸು ಬಿರುಗಾಳಿಯನ್ನು ಶಾಂತಗೊಳಿಸಿದ್ದು ಆ ದಿನ ಸಂಜೆಯಾದಾಗ ಯೇಸು ತಮ್ಮ ಶಿಷ್ಯರಿಗೆ, “ನಾವು ಆಚೆದಡಕ್ಕೆ ಹೋಗೋಣ,” ಎಂದು ಹೇಳಿದರು.
ಮಾರ್ಕನು 4 : 36 (OCVKN)
ಅವರು ಜನರ ಗುಂಪನ್ನು ಬಿಟ್ಟು, ಯೇಸುವನ್ನು ಇದ್ದ ಹಾಗೆಯೇ ದೋಣಿಯಲ್ಲಿ ಕರೆದುಕೊಂಡು ಹೋದರು. ಯೇಸುವಿನ ಸಂಗಡ ಬೇರೆ ದೋಣಿಗಳೂ ಇದ್ದವು.
ಮಾರ್ಕನು 4 : 37 (OCVKN)
ಇದ್ದಕ್ಕಿದ್ದ ಹಾಗೆ ದೊಡ್ಡ ಬಿರುಗಾಳಿಯು ರಭಸವಾಗಿ ಬೀಸಿದ್ದರಿಂದ ಅಲೆಗಳು ದೋಣಿಗೆ ಅಪ್ಪಳಿಸಿದವು. ಆಗ ದೋಣಿಯೊಳಗೆ ನೀರು ನುಗ್ಗಿ ಅದು ಮುಳುಗಿ ಹೋಗುವುದರಲ್ಲಿತ್ತು.
ಮಾರ್ಕನು 4 : 38 (OCVKN)
ಯೇಸು ದೋಣಿಯ ಹಿಂಭಾಗದಲ್ಲಿ ದಿಂಬಿನ ಮೇಲೆ ಒರಗಿ ನಿದ್ದೆಮಾಡುತ್ತಿದ್ದರು. ಶಿಷ್ಯರು ಯೇಸುವನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿ ಸಾಯುತ್ತಿದ್ದೇವೆ. ನಿಮಗೆ ಚಿಂತೆಯಿಲ್ಲವೇ?” ಎಂದು ಕೇಳಿದರು.
ಮಾರ್ಕನು 4 : 40 (OCVKN)
ಯೇಸು ಎದ್ದು ಬಿರುಗಾಳಿಯನ್ನು ಗದರಿಸಿದರು ಮತ್ತು ಅಲೆಗಳಿಗೆ, “ಸುಮ್ಮನಿರು, ಶಾಂತವಾಗು!” ಎಂದು ಆಜ್ಞಾಪಿಸಿದರು. ಆಗ ಬಿರುಗಾಳಿಯು ನಿಂತು ಹೋಗಿ ಎಲ್ಲವೂ ಪ್ರಶಾಂತವಾಯಿತು.
ಮಾರ್ಕನು 4 : 41 (OCVKN)
ಯೇಸು ತಮ್ಮ ಶಿಷ್ಯರಿಗೆ, “ನೀವು ಏಕೆ ಭಯಪಡುತ್ತೀರಿ? ನಿಮಗೆ ಇನ್ನೂ ನಂಬಿಕೆಯಿಲ್ಲವೇ?” ಎಂದರು. ಶಿಷ್ಯರು ಭಯಭೀತರಾಗಿ, “ಇವರು ಯಾರಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41