ಮಾರ್ಕನು 5 : 1 (OCVKN)
ದೆವ್ವ ಪೀಡಿತನನ್ನು ಗುಣಪಡಿಸಿದ್ದು ಅವರೆಲ್ಲರು ಸರೋವರದ ಆಚೆಯ ಕಡೆಯಲ್ಲಿದ್ದ ಗೆರಸೇನರ ಪ್ರಾಂತವನ್ನು ಸೇರಿದರು.
ಮಾರ್ಕನು 5 : 2 (OCVKN)
ಯೇಸು ದೋಣಿಯಿಂದ ಇಳಿದುಬರುವಾಗ, ಅಶುದ್ಧಾತ್ಮವುಳ್ಳ ಒಬ್ಬನು ಸಮಾಧಿಯ ಗುಹೆಯೊಳಗಿಂದ ಹೊರಬಂದು ಅವರನ್ನು ಸಂಧಿಸಿದನು.
ಮಾರ್ಕನು 5 : 3 (OCVKN)
ಅವನು ಸಮಾಧಿಯ ಗುಹೆಗಳ ನಡುವೆ ವಾಸಿಸುತ್ತಿದ್ದನು ಮತ್ತು ಯಾರಿಗೂ ಅವನನ್ನು ಬಂಧಿಸಲು ಸಾಧ್ಯವಾಗುತ್ತಿರಲಿಲ್ಲ. ಸರಪಣಿಯಿಂದಲೂ ಅವನನ್ನು ಕಟ್ಟಿ ಹಾಕಲು ಆಗುತ್ತಿರಲಿಲ್ಲ.
ಮಾರ್ಕನು 5 : 4 (OCVKN)
ಅನೇಕ ಸಾರಿ ಅವನ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿಹಾಕಿದ್ದರೂ ಅವನು ಅವುಗಳನ್ನು ಕಿತ್ತೆಸೆದು, ಬೇಡಿಗಳನ್ನು ತುಂಡುತುಂಡು ಮಾಡುತ್ತಿದ್ದನು. ಅವನನ್ನು ಹತೋಟಿಯಲ್ಲಿಡುವಷ್ಟು ಬಲ ಯಾರಿಗೂ ಇರಲಿಲ್ಲ.
ಮಾರ್ಕನು 5 : 5 (OCVKN)
ಅವನು ಹಗಲಿರುಳು ಸಮಾಧಿಯ ಗುಹೆಗಳಲ್ಲಿಯೂ ಗುಡ್ಡಗಳಲ್ಲಿಯೂ ಇರುವವನಾಗಿ ಅರಚುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಿದ್ದನು.
ಮಾರ್ಕನು 5 : 6 (OCVKN)
ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು, ಅವರ ಮುಂದೆ ಮೊಣಕಾಲೂರಿ,
ಮಾರ್ಕನು 5 : 7 (OCVKN)
ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!” ಎಂದು ಅರಚಿದನು.
ಮಾರ್ಕನು 5 : 8 (OCVKN)
ಏಕೆಂದರೆ ಯೇಸು ಅವನಿಗೆ, “ಅಶುದ್ಧಾತ್ಮವೇ ಅವನನ್ನು ಬಿಟ್ಟು ಹೊರಗೆ ಬಾ!” ಎಂದು ಹೇಳಿದ್ದರು.
ಮಾರ್ಕನು 5 : 9 (OCVKN)
ಅನಂತರ, ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದಾಗ, “ನನ್ನ ಹೆಸರು ಸೇನೆ,* ಸೇನೆ ಗ್ರೀಕ್ ಭಾಷೆಯಲ್ಲಿ ಲೀಜನ್ ಅಂದರೆ ಸುಮಾರು 4000 ದಿಂದ 6000 ಸೈನ್ಯದ ಸಮೂಹ. ಏಕೆಂದರೆ ನಾವು ಬಹುಮಂದಿ ಇದ್ದೇವೆ,” ಎಂದು ಹೇಳಿದನು.
ಮಾರ್ಕನು 5 : 10 (OCVKN)
ಅವುಗಳನ್ನು ಆ ಪ್ರಾಂತದಿಂದ ಹೊರಗಟ್ಟಬಾರದೆಂದು ಅವನು ಯೇಸುವನ್ನು ಬಹಳವಾಗಿ ಬೇಡಿಕೊಂಡನು.
ಮಾರ್ಕನು 5 : 11 (OCVKN)
ಹತ್ತಿರದಲ್ಲಿದ್ದ ಗುಡ್ಡದ ಸಮೀಪದಲ್ಲಿ ಹಂದಿಗಳ ಒಂದು ದೊಡ್ಡ ಹಿಂಡು ಮೇಯುತ್ತಿತ್ತು.
ಮಾರ್ಕನು 5 : 12 (OCVKN)
“ನಾವು ಆ ಹಂದಿಗಳ ಹಿಂಡಿನೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಅವುಗಳೊಳಗೆ ಕಳುಹಿಸಿಕೊಡಿ,” ಎಂದು ದೆವ್ವಗಳು ಯೇಸುವನ್ನು ಬೇಡಿಕೊಂಡವು.
ಮಾರ್ಕನು 5 : 13 (OCVKN)
ಯೇಸು ಅವುಗಳಿಗೆ ಅಪ್ಪಣೆಕೊಡಲು, ಆ ಅಶುದ್ಧಾತ್ಮಗಳು ಅವನಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಸುಮಾರು ಎರಡು ಸಾವಿರ ಹಂದಿಗಳಿದ್ದ ಆ ಹಿಂಡು ಓಡಿ ಕಡಿದಾದ ಬದಿಯಿಂದ ಸರೋವರದೊಳಗೆ ಬಿದ್ದು ಮುಳುಗಿ ಸತ್ತು ಹೋದವು.
ಮಾರ್ಕನು 5 : 14 (OCVKN)
ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ನಡೆದ ಸಂಗತಿಯನ್ನು ತಿಳಿಸಿದರು ಮತ್ತು ನಡೆದದ್ದನ್ನು ಕಾಣಲು ಜನರು ಬಂದರು.
ಮಾರ್ಕನು 5 : 15 (OCVKN)
ಅವರು ಯೇಸುವಿನ ಬಳಿಗೆ ಬಂದಾಗ, ದೆವ್ವಗಳ ಸೇನೆಯಿಂದ ಪೀಡಿತನಾಗಿದ್ದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಭಯಪಟ್ಟರು.
ಮಾರ್ಕನು 5 : 16 (OCVKN)
ನಡೆದದ್ದನ್ನು ಕಂಡವರು, ದೆವ್ವಪೀಡಿತನಾಗಿದ್ದವನಿಗೆ ಏನಾಯಿತೆಂಬುದನ್ನು ಮತ್ತು ಹಂದಿಗಳಿಗಾದ ಗತಿಯನ್ನು ಜನರಿಗೆ ತಿಳಿಸಿದರು.
ಮಾರ್ಕನು 5 : 17 (OCVKN)
ಆಗ ಅವರು ಯೇಸುವಿಗೆ, ತಮ್ಮ ಪ್ರಾಂತವನ್ನು ಬಿಟ್ಟು ಹೊರಟುಹೋಗಬೇಕೆಂದು ಕೇಳಿಕೊಂಡರು.
ಮಾರ್ಕನು 5 : 18 (OCVKN)
ಯೇಸು ದೋಣಿಯನ್ನು ಹತ್ತುತ್ತಿದ್ದಾಗ, ದೆವ್ವಪೀಡಿತನಾಗಿದ್ದವನು ತನ್ನನ್ನು ಅವರ ಜೊತೆಯಲ್ಲಿ ಕರೆದುಕೊಂಡು ಹೋಗಬೇಕೆಂದು ಬೇಡಿಕೊಂಡನು.
ಮಾರ್ಕನು 5 : 19 (OCVKN)
ಯೇಸು ಅದಕ್ಕೊಪ್ಪದೆ ಅವನಿಗೆ, “ನೀನು ಮನೆಗೆ ಹೋಗಿ ನಿನ್ನ ಜನರಿಗೆ ಕರ್ತದೇವರು ನಿನಗೆ ಮಾಡಿರುವ ಮಹಾಕಾರ್ಯಗಳನ್ನು ಮತ್ತು ನಿನ್ನನ್ನು ಹೇಗೆ ಕರುಣಿಸಿದ್ದಾರೆ ಎಂಬುದನ್ನು ತಿಳಿಸು,” ಎಂದರು.
ಮಾರ್ಕನು 5 : 20 (OCVKN)
ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಮಹಾಕಾರ್ಯಗಳನ್ನು ದೆಕಪೊಲಿಯಲ್ಲಿ† ಅಂದರೆ, ಹತ್ತು ಪಟ್ಟಣಗಳು ಸಾರಲಾರಂಭಿಸಿದನು ಮತ್ತು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.
ಮಾರ್ಕನು 5 : 21 (OCVKN)
ಯಾಯೀರನ ಸತ್ತ ಮಗಳು ಮತ್ತು ರಕ್ತಸ್ರಾವ ರೋಗಿಯಾದ ಸ್ತ್ರೀ ಯೇಸು ಪುನಃ ದೋಣಿಯಲ್ಲಿ ಆಚೆಯ ದಡವನ್ನು ಮುಟ್ಟಿದಾಗ, ಜನರು ದೊಡ್ಡ ಗುಂಪಾಗಿ ಅವರ ಸುತ್ತಲೂ ಸೇರಿ ಬಂದರು.
ಮಾರ್ಕನು 5 : 22 (OCVKN)
ಯೇಸು ಸರೋವರದ ದಡದಲ್ಲಿದ್ದಾಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನು ಅಲ್ಲಿಗೆ ಬಂದು ಯೇಸುವನ್ನು ಕಂಡು ಅವರ ಪಾದಕ್ಕೆ ಬಿದ್ದು,
ಮಾರ್ಕನು 5 : 23 (OCVKN)
“ನನ್ನ ಚಿಕ್ಕ ಮಗಳು ಸಾಯುತ್ತಿದ್ದಾಳೆ. ಅವಳು ಗುಣಹೊಂದಿ ಬದುಕುವಂತೆ ದಯಮಾಡಿ ಬಂದು ಅವಳ ಮೇಲೆ ನಿಮ್ಮ ಕೈಗಳನ್ನಿಡಬೇಕು,” ಎಂದು ಬಹಳವಾಗಿ ಬೇಡಿಕೊಂಡನು.
ಮಾರ್ಕನು 5 : 24 (OCVKN)
ಆಗ ಯೇಸು ಅವನೊಂದಿಗೆ ಹೋದರು. ಜನರು ದೊಡ್ಡ ಗುಂಪಾಗಿ ಯೇಸುವನ್ನು ನೂಕುತ್ತಾ ಹಿಂಬಾಲಿಸಿದರು.
ಮಾರ್ಕನು 5 : 25 (OCVKN)
ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು.
ಮಾರ್ಕನು 5 : 26 (OCVKN)
ಆಕೆ ಅನೇಕ ವೈದ್ಯರ ಚಿಕಿತ್ಸೆಯಿಂದ ಬಹು ಶ್ರಮಪಟ್ಟು, ತನಗಿದ್ದದ್ದೆಲ್ಲವನ್ನು ಖರ್ಚು ಮಾಡಿದ್ದರೂ ಸ್ವಲ್ಪವೂ ಪ್ರಯೋಜನವಾಗದೆ ಆ ರೋಗವು ಇನ್ನೂ ಹೆಚ್ಚಾಗುತ್ತಾ ಬಂತು.
ಮಾರ್ಕನು 5 : 27 (OCVKN)
ಆಕೆ ಯೇಸುವಿನ ವಿಷಯವಾಗಿ ಕೇಳಿ, ಜನರ ಗುಂಪಿನಲ್ಲಿ ಅವರ ಹಿಂದೆ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು.
ಮಾರ್ಕನು 5 : 28 (OCVKN)
ಏಕೆಂದರೆ, “ನಾನು ಯೇಸುವಿನ ಉಡುಪನ್ನು ಮುಟ್ಟಿದರೆ ಸಾಕು, ನನಗೆ ಗುಣವಾಗುವುದು,” ಎಂದುಕೊಂಡಿದ್ದಳು.
ಮಾರ್ಕನು 5 : 29 (OCVKN)
ಕೂಡಲೇ ಆಕೆಯ ರಕ್ತಸ್ರಾವವು ನಿಂತಿತು ಮತ್ತು ರೋಗಬಾಧೆಯಿಂದ ತಾನು ಗುಣಹೊಂದಿದಳೆಂದು ಆಕೆಗೆ ತಿಳಿಯಿತು.
ಮಾರ್ಕನು 5 : 31 (OCVKN)
ಕೂಡಲೇ ಗುಣಪಡಿಸುವ ಶಕ್ತಿಯು ತನ್ನಿಂದ ಹೊರಟಿತೆಂದು ಯೇಸು ತಿಳಿದು, ಜನರ ನಡುವೆ ಸುತ್ತಲೂ ನೋಡಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಿದರು.
ಮಾರ್ಕನು 5 : 32 (OCVKN)
ಯೇಸುವಿನ ಶಿಷ್ಯರು ಅವರಿಗೆ, “ಇಷ್ಟು ದೊಡ್ಡ ಗುಂಪು ನಿಮ್ಮ ಸುತ್ತಲೂ ನೂಕುತ್ತಿರುವುದನ್ನು ನೀವೇ ಕಾಣುತ್ತಿರುವಲ್ಲಿ, ‘ನನ್ನನ್ನು ಮುಟ್ಟಿದವರು ಯಾರು,’ ಎಂದು ಕೇಳುತ್ತೀರಲ್ಲಾ?” ಎಂದರು. ಆದರೆ ಯೇಸು ತಮ್ಮನ್ನು ಮುಟ್ಟಿದವರು ಯಾರು ಎಂದು ಕಾಣಲು ಸುತ್ತಲೂ ನೋಡಲಾರಂಭಿಸಿದರು.
ಮಾರ್ಕನು 5 : 33 (OCVKN)
ಆಗ ಆ ಸ್ತ್ರೀ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಬಂದು ಯೇಸುವಿನ ಮುಂದೆ ಅಡ್ಡಬಿದ್ದು, ಭಯದಿಂದ ನಡುಗುತ್ತಾ ನಡೆದ ಎಲ್ಲಾ ನಿಜಸಂಗತಿಯನ್ನು ತಿಳಿಸಿದಳು.
ಮಾರ್ಕನು 5 : 34 (OCVKN)
ಯೇಸು ಆ ಸ್ತ್ರೀಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು, ನಿನ್ನ ಬಾಧೆಯಿಂದ ನೀನು ಮುಕ್ತಳಾಗಿರುವೆ,” ಎಂದು ಹೇಳಿದರು.
ಮಾರ್ಕನು 5 : 36 (OCVKN)
ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಸಭಾಮಂದಿರದ ಅಧಿಕಾರಿಯಾದ ಯಾಯೀರನ ಮನೆಯಿಂದ ಕೆಲವರು ಬಂದು, “ನಿನ್ನ ಮಗಳು ತೀರಿಹೋದಳು. ಇನ್ನೂ ಗುರುವಿಗೆ ತೊಂದರೆಪಡಿಸುವುದೇಕೆ?” ಎಂದರು.
ಮಾರ್ಕನು 5 : 37 (OCVKN)
ಆದರೆ ಯೇಸು ಅವರು ಹೇಳಿದ ಮಾತನ್ನು ಲಕ್ಷ್ಯಮಾಡದೆ, ಆ ಸಭಾಮಂದಿರದ ಅಧಿಕಾರಿಗೆ, “ಭಯಪಡಬೇಡ ನಂಬಿಕೆ ಮಾತ್ರ ಇರಲಿ,” ಎಂದರು. ಯೇಸು ತಮ್ಮ ಸಂಗಡ ಪೇತ್ರ, ಯಾಕೋಬ ಮತ್ತು ಅವನ ತಮ್ಮ ಯೋಹಾನನನ್ನು ಹೊರತು ಬೇರೆ ಯಾರನ್ನೂ ಬರುವುದಕ್ಕೆ ಅನುಮತಿಸಲಿಲ್ಲ.
ಮಾರ್ಕನು 5 : 38 (OCVKN)
ಅವರು ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ, ಯೇಸು ಜನರು ಬಹಳವಾಗಿ ಗೋಳಾಡುವುದನ್ನೂ ಪ್ರಲಾಪಿಸುವುದನ್ನೂ ಕಂಡರು.
ಮಾರ್ಕನು 5 : 39 (OCVKN)
ಯೇಸು ಮನೆಯೊಳಗೆ ಹೋಗಿ, “ನೀವು ಗೋಳಾಡಿ ಅಳುವುದೇಕೆ? ಮಗು ಸತ್ತಿಲ್ಲ, ಅವಳು ನಿದ್ದೆ ಮಾಡುತ್ತಿದ್ದಾಳೆ,” ಎಂದರು.
ಮಾರ್ಕನು 5 : 40 (OCVKN)
ಆದರೆ ಅವರು ಯೇಸುವನ್ನು ಪರಿಹಾಸ್ಯ ಮಾಡಿದರು. ಯೇಸು ಅವರನ್ನೆಲ್ಲಾ ಹೊರಗೆ ಹಾಕಿ, ಆ ಹುಡುಗಿಯ ತಂದೆತಾಯಿ ಮತ್ತು ತನ್ನೊಂದಿಗಿದ್ದ ಶಿಷ್ಯರನ್ನು ಮಾತ್ರ ಕರೆದುಕೊಂಡು ಆ ಹುಡುಗಿಯನ್ನಿಟ್ಟಿದ್ದ ಕೋಣೆಗೆ ಹೋದರು.
ಮಾರ್ಕನು 5 : 41 (OCVKN)
ಯೇಸು ಆಕೆಯ ಕೈಹಿಡಿದು, “ತಲಿಥಾ ಕೂಮ್!” ಎಂದರು. ಅರಮೀಯ ಭಾಷೆಯಲ್ಲಿ ಇದರ ಅರ್ಥ, “ಚಿಕ್ಕ ಹುಡುಗಿಯೇ! ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂಬುದು.
ಮಾರ್ಕನು 5 : 42 (OCVKN)
ಕೂಡಲೇ ಆ ಹುಡುಗಿ ಎದ್ದು ನಡೆದಾಡಿದಳು. ಆಕೆಗೆ ಹನ್ನೆರಡು ವಯಸ್ಸಾಗಿತ್ತು. ಎಲ್ಲರೂ ಬಹಳ ಆಶ್ಚರ್ಯಪಟ್ಟರು.
ಮಾರ್ಕನು 5 : 43 (OCVKN)
ಯೇಸು ಅವರಿಗೆ ನಡೆದದ್ದನ್ನು ಯಾರಿಗೂ ತಿಳಿಸಬಾರದು ಎಂದು ಬಹು ಖಂಡಿತವಾಗಿ ಹೇಳಿ ಹುಡುಗಿಗೆ ತಿನ್ನಲು ಏನಾದರೂ ಕೊಡಬೇಕೆಂದು ಹೇಳಿದರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43