ಮತ್ತಾಯನು 14 : 1 (OCVKN)
ಸ್ನಾನಿಕನಾದ ಯೋಹಾನನ ಶಿರಚ್ಛೇದನ ಆ ಕಾಲದಲ್ಲಿ ಚತುರಾಧಿಪತಿಯಾದ* ನಾಲ್ಕರಲ್ಲಿ ಒಂದು ಭಾಗವನ್ನು ಆಳುವವನು ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ,
ಮತ್ತಾಯನು 14 : 2 (OCVKN)
ತನ್ನ ಸೇವಕರಿಗೆ, “ಈತನು ಸ್ನಾನಿಕನಾದ ಯೋಹಾನನೇ. ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ! ಆದ್ದರಿಂದಲೇ ಈತನಲ್ಲಿ ಅದ್ಭುತಕಾರ್ಯಗಳನ್ನು ನಡೆಸುವ ಶಕ್ತಿಗಳಿವೆ,” ಎಂದು ಹೇಳಿದನು.
ಮತ್ತಾಯನು 14 : 3 (OCVKN)
ಹೆರೋದನು ತನ್ನ ಸಹೋದರ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ, ಯೋಹಾನನನ್ನು ಹಿಡಿಸಿ, ಕಟ್ಟಿ ಸೆರೆಯಲ್ಲಿ ಹಾಕಿಸಿದ್ದನು.
ಮತ್ತಾಯನು 14 : 4 (OCVKN)
ಏಕೆಂದರೆ ಯೋಹಾನನು, “ನೀನು ಅವಳನ್ನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಅವನಿಗೆ ಹೇಳಿದ್ದನು.
ಮತ್ತಾಯನು 14 : 5 (OCVKN)
ಹೆರೋದನು ಯೋಹಾನನನ್ನು ಕೊಲ್ಲಬೇಕೆಂದಿದ್ದರೂ ಜನಸಮೂಹಕ್ಕೆ ಭಯಪಟ್ಟನು. ಅವರು ಯೋಹಾನನನ್ನು ಪ್ರವಾದಿಯೆಂದು ಎಣಿಸಿದ್ದರು.
ಮತ್ತಾಯನು 14 : 6 (OCVKN)
ಆದರೆ ಹೆರೋದನ ಹುಟ್ಟಿದ ದಿನವನ್ನು ಆಚರಿಸುವಾಗ, ಹೆರೋದ್ಯಳ ಮಗಳು ಅವರ ಮುಂದೆ ನರ್ತನ ಮಾಡಿ ಹೆರೋದನನ್ನು ಬಹಳ ಮೆಚ್ಚಿಸಿದಳು.
ಮತ್ತಾಯನು 14 : 7 (OCVKN)
ಆದ್ದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅರಸನು ಆಣೆಯಿಟ್ಟು ಪ್ರಮಾಣ ಮಾಡಿದನು.
ಮತ್ತಾಯನು 14 : 8 (OCVKN)
ಅವಳು ತನ್ನ ತಾಯಿಯ ಸಲಹೆ ಪಡೆದು, “ಸ್ನಾನಿಕನಾದ ಯೋಹಾನನ ತಲೆಯನ್ನು ಇಲ್ಲಿಯೇ ಒಂದು ತಟ್ಟೆಯಲ್ಲಿ ನನಗೆ ತರಿಸಿಕೊಡು,” ಎಂದು ಹೇಳಿದಳು.
ಮತ್ತಾಯನು 14 : 9 (OCVKN)
ಆಗ ಅರಸನು ದುಃಖಪಟ್ಟರೂ ತನ್ನ ಪ್ರಮಾಣದ ನಿಮಿತ್ತವಾಗಿ ಮತ್ತು ಭೋಜನಕ್ಕೆ ಬಂದ ಅತಿಥಿಗಳ ನಿಮಿತ್ತವಾಗಿ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು.
ಮತ್ತಾಯನು 14 : 10 (OCVKN)
ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿದ್ದ ಯೋಹಾನನ ತಲೆಯನ್ನು ಕಡಿಸಿದನು.
ಮತ್ತಾಯನು 14 : 11 (OCVKN)
ಇದಲ್ಲದೆ ಅವನ ತಲೆಯನ್ನು ಒಂದು ತಟ್ಟೆಯಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು.
ಮತ್ತಾಯನು 14 : 12 (OCVKN)
ಬಳಿಕ ಯೋಹಾನನ ಶಿಷ್ಯರು ಬಂದು ಅವನ ಶವವನ್ನು ತೆಗೆದುಕೊಂಡುಹೋಗಿ ಸಮಾಧಿಮಾಡಿದರು. ಅನಂತರ ಹೋಗಿ ಯೇಸುವಿಗೆ ತಿಳಿಸಿದರು.
ಮತ್ತಾಯನು 14 : 13 (OCVKN)
ಯೇಸು ಐದು ಸಾವಿರ ಜನರಿಗೆ ಊಟಮಾಡಿಸಿದ್ದು ಯೇಸು ಆ ವಿಷಯವನ್ನು ಕೇಳಿದಾಗ ದೋಣಿಯನ್ನು ಹತ್ತಿ ಅಲ್ಲಿಂದ ಏಕಾಂತ ಸ್ಥಳಕ್ಕೆ ಹೊರಟರು. ಜನರು ಇದನ್ನು ಕೇಳಿ ಪಟ್ಟಣಗಳಿಂದ ಕಾಲು ನಡಿಗೆಯಲ್ಲಿ ಯೇಸುವನ್ನು ಹಿಂಬಾಲಿಸಿದರು.
ಮತ್ತಾಯನು 14 : 14 (OCVKN)
ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ಕಂಡು, ಅವರ ಮೇಲೆ ಕನಿಕರಪಟ್ಟು, ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದರು.
ಮತ್ತಾಯನು 14 : 16 (OCVKN)
ಸಂಜೆಯಾದಾಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನಪ್ರದೇಶ, ಸಮಯವು ದಾಟಿದೆ. ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು,” ಎಂದರು.
ಮತ್ತಾಯನು 14 : 17 (OCVKN)
ಆದರೆ ಯೇಸುವು, “ಅವರು ಹೋಗಬೇಕಾಗಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದು ಹೇಳಿದರು.
ಮತ್ತಾಯನು 14 : 18 (OCVKN)
ಅವರು ಯೇಸುವಿಗೆ, “ನಮ್ಮ ಹತ್ತಿರ ಐದು ರೊಟ್ಟಿ ಎರಡು ಮೀನುಗಳು ಮಾತ್ರ ಇವೆ,” ಎಂದು ಉತ್ತರಕೊಟ್ಟರು. ಯೇಸು, “ಅವುಗಳನ್ನು ತೆಗೆದುಕೊಂಡು ನನ್ನ ಬಳಿಗೆ ಬನ್ನಿರಿ,” ಎಂದರು.
ಮತ್ತಾಯನು 14 : 19 (OCVKN)
ಜನಸಮೂಹವು ಹುಲ್ಲಿನ ಮೇಲೆ ಕುಳಿತುಕೊಳ್ಳಬೇಕೆಂದು ಯೇಸು ಅಪ್ಪಣೆಕೊಟ್ಟು, ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟರು. ಶಿಷ್ಯರು ಜನಸಮೂಹಕ್ಕೆ ಕೊಟ್ಟರು.
ಮತ್ತಾಯನು 14 : 20 (OCVKN)
ಅವರೆಲ್ಲರೂ ತಿಂದು ತೃಪ್ತರಾದರು. ಶಿಷ್ಯರು ಉಳಿದ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿ ತುಂಬಿದವು.
ಮತ್ತಾಯನು 14 : 21 (OCVKN)
ಊಟಮಾಡಿದವರಲ್ಲಿ ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿ ಇದ್ದರು.
ಮತ್ತಾಯನು 14 : 22 (OCVKN)
ಯೇಸು ನೀರಿನ ಮೇಲೆ ನಡೆದದ್ದು ಇದಾದ ಕೂಡಲೇ ಯೇಸು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ತಮ್ಮ ಶಿಷ್ಯರು ದೋಣಿಯನ್ನು ಹತ್ತಿ ತಮಗಿಂತ ಮುಂದಾಗಿ ಆಚೆದಡಕ್ಕೆ ಹೋಗಬೇಕೆಂದು ಆಜ್ಞಾಪಿಸಿದರು.
ಮತ್ತಾಯನು 14 : 23 (OCVKN)
ಯೇಸು ಜನಸಮೂಹವನ್ನು ಕಳುಹಿಸಿದ ಮೇಲೆ, ಪ್ರಾರ್ಥನೆಮಾಡಲು ಏಕಾಂತವಾಗಿ ಬೆಟ್ಟಕ್ಕೆ ಹೋದರು. ಸಂಜೆಯಾದಾಗ ಯೇಸು ಒಬ್ಬರೇ ಅಲ್ಲಿ ಇದ್ದರು.
ಮತ್ತಾಯನು 14 : 24 (OCVKN)
ಅಷ್ಟರಲ್ಲಿ ದೋಣಿಯು ತೀರದಿಂದ ಬಹುದೂರ ಹೋಗಿತ್ತು, ಎದುರುಗಾಳಿ ಬೀಸುತ್ತಿದ್ದದರಿಂದ ತೆರೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.
ಮತ್ತಾಯನು 14 : 25 (OCVKN)
ರಾತ್ರಿ ಮೂರು ಗಂಟೆಯಲ್ಲಿ ಯೇಸು ಸರೋವರದ ಮೇಲೆ, ನಡೆಯುತ್ತಾ ಶಿಷ್ಯರ ಬಳಿಗೆ ಬಂದರು.
ಮತ್ತಾಯನು 14 : 26 (OCVKN)
ಯೇಸು ಸರೋವರದ ಮೇಲೆ ನಡೆಯುವುದನ್ನು ಶಿಷ್ಯರು ಕಂಡು ಕಳವಳಪಟ್ಟು, “ಅದು ಭೂತ,” ಎಂದು ಭೀತಿಯಿಂದ ಕೂಗಿಕೊಂಡರು.
ಮತ್ತಾಯನು 14 : 28 (OCVKN)
ಯೇಸು ತಕ್ಷಣವೇ ಅವರಿಗೆ, “ಧೈರ್ಯವಾಗಿರಿ, ನಾನೇ, ಭಯಪಡಬೇಡಿರಿ,” ಎಂದರು.
ಮತ್ತಾಯನು 14 : 29 (OCVKN)
ಆಗ ಪೇತ್ರನು ಯೇಸುವಿಗೆ, “ಸ್ವಾಮೀ, ನೀವೇ ಆಗಿದ್ದರೆ, ನೀರಿನ ಮೇಲೆ ನಡೆದು ನಿಮ್ಮ ಬಳಿಗೆ ಬರಲು ನನಗೆ ಅಪ್ಪಣೆಕೊಡಿರಿ,” ಎಂದನು. ಅದಕ್ಕೆ ಯೇಸು, “ಬಾ,” ಎಂದರು. ಆಗ ಪೇತ್ರನು ದೋಣಿಯಿಂದ ಇಳಿದು, ಯೇಸುವಿನ ಬಳಿಗೆ ಹೋಗುವುದಕ್ಕಾಗಿ ನೀರಿನ ಮೇಲೆ ನಡೆದನು.
ಮತ್ತಾಯನು 14 : 30 (OCVKN)
ಆದರೆ ಬಲವಾದ ಗಾಳಿಯನ್ನು ಕಂಡು, ಅವನು ಭಯಪಟ್ಟು ಮುಳುಗುತ್ತಾ, “ಸ್ವಾಮಿ, ನನ್ನನ್ನು ಕಾಪಾಡಿರಿ!” ಎಂದು ಕೂಗಿ ಹೇಳಿದನು.
ಮತ್ತಾಯನು 14 : 32 (OCVKN)
ತಕ್ಷಣವೇ ಯೇಸು ತಮ್ಮ ಕೈಯನ್ನು ಚಾಚಿ ಪೇತ್ರನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ, ನೀನು ಏಕೆ ಸಂದೇಹಪಟ್ಟೆ?” ಎಂದರು. ಅವರು ದೋಣಿ ಹತ್ತಿದಾಗ, ಗಾಳಿ ನಿಂತುಹೋಯಿತು.
ಮತ್ತಾಯನು 14 : 33 (OCVKN)
ದೋಣಿಯಲ್ಲಿದ್ದವರು ಯೇಸುವಿನ ಬಳಿಗೆ ಬಂದು ಅವರನ್ನು ಆರಾಧಿಸಿ, “ನಿಜವಾಗಿಯೂ ನೀವು ದೇವಪುತ್ರ,” ಎಂದು ಹೇಳಿದರು.
ಮತ್ತಾಯನು 14 : 34 (OCVKN)
ಅವರು ಸರೋವರವನ್ನು ದಾಟಿ, ಗೆನೆಜರೇತ್ ಊರಿಗೆ ಬಂದರು.
ಮತ್ತಾಯನು 14 : 35 (OCVKN)
ಆಗ ಅಲ್ಲಿದ್ದ ಜನರು ಯೇಸುವಿನ ಗುರುತು ಹಿಡಿದು, ಸುತ್ತುಮುತ್ತಲಿನ ಊರುಗಳಿಗೆಲ್ಲಾ ಹೇಳಿ ಕಳುಹಿಸಿ, ರೋಗಿಗಳನ್ನೆಲ್ಲಾ ಯೇಸುವಿನ ಬಳಿಗೆ ತಂದರು.
ಮತ್ತಾಯನು 14 : 36 (OCVKN)
ಅವರು ಯೇಸುವಿನ ಉಡುಪಿನ ಅಂಚನ್ನಾದರೂ ಸ್ಪರ್ಶಿಸಬೇಕೆಂದು ಅವರನ್ನು ಬೇಡಿಕೊಂಡರು. ಯೇಸುವನ್ನು ಮುಟ್ಟಿದವರೆಲ್ಲರೂ ಸ್ವಸ್ಥರಾದರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36