ಮತ್ತಾಯನು 2 : 1 (OCVKN)
ಪೂರ್ವದೇಶದ ಜ್ಞಾನಿಗಳ ಭೇಟಿ ಹೆರೋದ ರಾಜನ ಕಾಲದಲ್ಲಿ, ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಜನಿಸಿದಾಗ, ಪೂರ್ವ ದೇಶದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು,
ಮತ್ತಾಯನು 2 : 2 (OCVKN)
“ಯೆಹೂದ್ಯರ ಅರಸರಾಗಿ ಹುಟ್ಟಿದವರು ಎಲ್ಲಿ? ನಾವು ಅವರನ್ನು ಸೂಚಿಸುವ ನಕ್ಷತ್ರವನ್ನು ಪೂರ್ವದೇಶದಲ್ಲಿ ಕಂಡು ಅವರನ್ನು ಆರಾಧಿಸಲು ಬಂದಿದ್ದೇವೆ,” ಎಂದರು.
ಮತ್ತಾಯನು 2 : 3 (OCVKN)
ಇದನ್ನು ಕೇಳಿ ಹೆರೋದ ರಾಜನು ಮತ್ತು ಯೆರೂಸಲೇಮಿನ ಜನರೆಲ್ಲರು ಕಳವಳಗೊಂಡರು.
ಮತ್ತಾಯನು 2 : 4 (OCVKN)
ರಾಜನು ಯೆಹೂದ್ಯರ ಮುಖ್ಯಯಾಜಕರನ್ನೂ ನಿಯಮ ಬೋಧಕರನ್ನೂ ಕರೆದು, “ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ?” ಎಂದು ಅವರನ್ನು ವಿಚಾರಿಸಿದನು.
ಮತ್ತಾಯನು 2 : 5 (OCVKN)
ಅದಕ್ಕೆ ಅವರು, “ಯೂದಾಯ ಪ್ರಾಂತದ ಬೇತ್ಲೆಹೇಮಿನಲ್ಲಿಯೇ,” ಏಕೆಂದರೆ, ಪ್ರವಾದಿಯು ಬರೆದಿರುವದು ಈ ರೀತಿಯಾಗಿದೆ:
ಮತ್ತಾಯನು 2 : 6 (OCVKN)
“ ‘ಯೆಹೂದ ಪ್ರಾಂತದಲ್ಲಿರುವ ಬೇತ್ಲೆಹೇಮೇ, ಯೆಹೂದದ ಅಧಿಪತಿಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಅಲ್ಪವಲ್ಲ. ಏಕೆಂದರೆ ನನ್ನ ಪ್ರಜೆಗಳಾದ ಇಸ್ರಾಯೇಲನ್ನು ಪರಿಪಾಲಿಸಲು ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಬರುವನು,’* ಮೀಕ 5:2,4 ” ಎಂದು ಹೇಳಿದರು.
ಮತ್ತಾಯನು 2 : 7 (OCVKN)
ಆಗ ಹೆರೋದನು ಆ ಜ್ಞಾನಿಗಳನ್ನು ರಹಸ್ಯವಾಗಿ ಕರೆದು, ಆ ನಕ್ಷತ್ರ ಕಾಣಿಸಿಕೊಂಡ ಕಾಲವನ್ನು ಸೂಕ್ಷ್ಮವಾಗಿ ವಿಚಾರಿಸಿದನು.
ಮತ್ತಾಯನು 2 : 8 (OCVKN)
“ನೀವು ಹೋಗಿ ಆ ಮಗುವಿನ ವಿಷಯ ಜಾಗರೂಕತೆಯಿಂದ ವಿಚಾರಿಸಿ. ಆ ಮಗು ಸಿಕ್ಕಿದ ಮೇಲೆ ನನಗೆ ತಿಳಿಸಿರಿ, ಆಗ ನಾನೂ ಬಂದು ಅದನ್ನು ಆರಾಧಿಸುವೆನು,” ಎಂದು ಹೇಳಿ ಅವರನ್ನು ಬೇತ್ಲೆಹೇಮಿಗೆ ಕಳುಹಿಸಿದನು.
ಮತ್ತಾಯನು 2 : 9 (OCVKN)
ರಾಜನ ಮಾತನ್ನು ಕೇಳಿ ಅವರು ಹೊರಟಾಗ, ಪೂರ್ವದೇಶದಲ್ಲಿ ಅವರು ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು, ಅವರ ಮುಂದೆ ಮುಂದೆ ಸಾಗುತ್ತಾ, ಆ ಮಗು ಇದ್ದ ಸ್ಥಳದ ಮೇಲೆ ಬಂದು ನಿಂತಿತು.
ಮತ್ತಾಯನು 2 : 10 (OCVKN)
ಅವರು ನಕ್ಷತ್ರವನ್ನು ಕಂಡು, ಬಹಳವಾಗಿ ಸಂತೋಷಪಟ್ಟರು.
ಮತ್ತಾಯನು 2 : 11 (OCVKN)
ಜ್ಞಾನಿಗಳು ಮನೆಯನ್ನು ಪ್ರವೇಶಿಸಿ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಮಗುವಿಗೆ ಅಡ್ಡಬಿದ್ದು ಆರಾಧಿಸಿದರು. ತಮ್ಮ ಬೊಕ್ಕಸಗಳನ್ನು ತೆರೆದು ಮಗುವಿಗೆ ಚಿನ್ನ, ಧೂಪ ಮತ್ತು ರಕ್ತಬೋಳಗಳನ್ನು† ರಕ್ತಬೋಳ ಒಂದು ವಿಧವಾದ ಅರಬ್ ದೇಶದ ಮರದ ರಸಗಂಧ ಕಾಣಿಕೆಯಾಗಿ ಸಮರ್ಪಿಸಿದರು.
ಮತ್ತಾಯನು 2 : 12 (OCVKN)
ಅನಂತರ ಅವರು ಕನಸಿನಲ್ಲಿ ಹೆರೋದನ ಬಳಿಗೆ ಹಿಂತಿರುಗಬಾರದೆಂಬ ಎಚ್ಚರಿಕೆಯನ್ನು ಹೊಂದಿದ್ದರಿಂದ, ಬೇರೆ ದಾರಿಯಿಂದ ತಮ್ಮ ದೇಶಕ್ಕೆ ಹೊರಟು ಹೋದರು.
ಮತ್ತಾಯನು 2 : 14 (OCVKN)
ಆ ಜ್ಞಾನಿಗಳು ಹೊರಟುಹೋದ ಮೇಲೆ, ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಪ್ರತ್ಯಕ್ಷನಾಗಿ, “ಎದ್ದೇಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ನಾನು ನಿನಗೆ ತಿಳಿಸುವವರೆಗೆ ಅಲ್ಲಿಯೇ ಇರು, ಏಕೆಂದರೆ ಹೆರೋದನು ಮಗುವನ್ನು ಹುಡುಕಿ ಕೊಲ್ಲಬೇಕೆಂದಿದ್ದಾನೆ,” ಎಂದನು. ಆಗ ಯೋಸೇಫನು ಎದ್ದು, ಆ ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಅದೇ ರಾತ್ರಿ ಈಜಿಪ್ಟಿಗೆ ಹೊರಟುಹೋದನು.
ಮತ್ತಾಯನು 2 : 15 (OCVKN)
ಹೀಗೆ ಹೆರೋದನು ಸಾಯುವವರೆಗೆ ಯೋಸೇಫನು ಅಲ್ಲೇ ಇದ್ದನು. ಕರ್ತನು ತನ್ನ ಪ್ರವಾದಿಯ ಮೂಲಕ: “ಈಜಿಪ್ಟಿನಿಂದ ನನ್ನ ಮಗನನ್ನು ನಾನು ಕರೆದೆನು,”‡ ಹೋಶೇ 11:1 ಎಂದು ಹೇಳಿದ ಮಾತು ಇದರಿಂದ ನೆರವೇರಿತು.
ಮತ್ತಾಯನು 2 : 16 (OCVKN)
ಜ್ಞಾನಿಗಳು ತನಗೆ ಮೋಸಮಾಡಿದರೆಂದು ತಿಳಿದ ಹೆರೋದನು ಬಹಳ ಕೋಪಗೊಂಡನು, ಜ್ಞಾನಿಗಳಿಂದ ಸೂಕ್ಷ್ಮವಾಗಿ ವಿಚಾರಿಸಿಕೊಂಡ ಪ್ರಕಾರವೇ, ಬೇತ್ಲೆಹೇಮ್ ಮತ್ತು ಅದರ ಸುತ್ತಮುತ್ತಲ ಪ್ರದೇಶದಲ್ಲಿದ್ದ ಎರಡು ವರ್ಷದೊಳಗಿನ ಎಲ್ಲಾ ಗಂಡು ಮಕ್ಕಳನ್ನು ಕೊಂದುಹಾಕಿಸಿದನು.
ಮತ್ತಾಯನು 2 : 17 (OCVKN)
ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿದ ಮಾತು ನೆರವೇರಿತು:
ಮತ್ತಾಯನು 2 : 18 (OCVKN)
“ರಾಮದಲ್ಲಿ ರೋದನೆಯು ಕೇಳಿಸಿತು, ಗೋಳಾಟವೂ ಮಹಾ ಪ್ರಲಾಪವೂ ಕೇಳಿಬಂತು. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ, ಆದರಣೆ ಹೊಂದದೆ ಹೋಗಿದ್ದಾಳೆ. ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ.”§ ಯೆರೆ 31:15
ಮತ್ತಾಯನು 2 : 19 (OCVKN)
ನಜರೇತಿಗೆ ಹಿಂದಿರುಗುವಿಕೆ ಹೆರೋದನು ಸತ್ತಮೇಲೆ ಈಜಿಪ್ಟಿನಲ್ಲಿದ್ದ ಯೋಸೇಫನಿಗೆ ಕರ್ತನ ದೂತನು ಕನಸಿನಲ್ಲಿ ಕಾಣಿಸಿಕೊಂಡು,
ಮತ್ತಾಯನು 2 : 20 (OCVKN)
“ಎದ್ದೇಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹಿಂದಿರುಗು, ಮಗುವಿನ ಪ್ರಾಣ ತೆಗೆಯಬೇಕೆಂದಿದ್ದವರು ಸತ್ತುಹೋದರು,” ಎಂದು ಹೇಳಿದನು.
ಮತ್ತಾಯನು 2 : 21 (OCVKN)
ಆಗ ಅವನು ಎದ್ದು ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಬಂದನು.
ಮತ್ತಾಯನು 2 : 22 (OCVKN)
ಆದರೆ ಹೆರೋದನ ಮಗ ಅರ್ಖೆಲಾಯನು, ತಂದೆಯ ಬದಲಾಗಿ ಯೂದಾಯ ಪ್ರಾಂತವನ್ನು ಆಳುತ್ತಿದ್ದಾನೆಂದು ಕೇಳಿ, ಅಲ್ಲಿಗೆ ಹೋಗಲು ಭಯಪಟ್ಟನು. ಆಗ ಕನಸಿನಲ್ಲಿ ಹೊಂದಿದ ಎಚ್ಚರಿಕೆಯ ಪ್ರಕಾರ ಯೋಸೇಫನು ಗಲಿಲಾಯ ಪ್ರಾಂತಕ್ಕೆ ಹೋದನು.
ಮತ್ತಾಯನು 2 : 23 (OCVKN)
ಅಲ್ಲಿ ನಜರೇತ್ ಎಂಬ ಊರಲ್ಲಿ ವಾಸಮಾಡಿದನು. ಹೀಗೆ, “ನಜರಾಯನೆಂಬ ಹೆಸರು ಯೇಸುವಿಗೆ ಬರುವುದು,” ಎಂದು ಪ್ರವಾದಿಗಳು ಹೇಳಿದ ಮಾತು ನೆರವೇರಿತು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23