ಮತ್ತಾಯನು 28 : 2 (OCVKN)
ಸಬ್ಬತ್ ಮುಗಿದ ಮೇಲೆ, ವಾರದ ಮೊದಲನೆಯ ದಿನ ಬೆಳಗಾಗುವಾಗ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು. ಆಗ ಮಹಾ ಭೂಕಂಪವಾಯಿತು. ಕರ್ತನ ದೂತನು ಪರಲೋಕದಿಂದ ಇಳಿದುಬಂದು, ಬಾಗಿಲಿನಿಂದ ಬಂಡೆಯನ್ನು ಉರುಳಿಸಿ ಅದರ ಮೇಲೆ ಕುಳಿತುಕೊಂಡನು.
ಮತ್ತಾಯನು 28 : 3 (OCVKN)
ಅವನ ರೂಪವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು.
ಮತ್ತಾಯನು 28 : 4 (OCVKN)
ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತಂತಾದರು.
ಮತ್ತಾಯನು 28 : 5 (OCVKN)
ಆ ದೂತನು ಸ್ತ್ರೀಯರಿಗೆ, “ನೀವು ಭಯಪಡಬೇಡಿರಿ. ಶಿಲುಬೆಗೇರಿಸಿದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು.
ಮತ್ತಾಯನು 28 : 6 (OCVKN)
ಅವರು ಇಲ್ಲಿ ಇಲ್ಲ. ಅವರು ಹೇಳಿದಂತೆಯೇ ಜೀವಂತರಾಗಿ ಎದ್ದಿದ್ದಾರೆ. ಕರ್ತನನ್ನು ಇಟ್ಟಿದ್ದ ಸ್ಥಳವನ್ನು ಬಂದು ನೋಡಿರಿ.
ಮತ್ತಾಯನು 28 : 7 (OCVKN)
ಬೇಗನೆ ಹೋಗಿ ಅವರ ಶಿಷ್ಯರಿಗೆ, ‘ಅವರು ಮರಣದಿಂದ ಎದ್ದಿದ್ದಾರೆ. ಅವರು ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುತ್ತಾರೆ. ನೀವು ಅಲ್ಲಿಯೇ ಅವರನ್ನು ಕಾಣುವಿರಿ,’ ಎಂದು ತಿಳಿಸಿರಿ. ಇದೇ ನಾನು ನಿಮಗೆ ತಿಳಿಸಬೇಕಾದ ಸಂಗತಿ,” ಎಂದನು.
ಮತ್ತಾಯನು 28 : 8 (OCVKN)
ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು, ಶಿಷ್ಯರಿಗೆ ತಿಳಿಸುವುದಕ್ಕಾಗಿ ಓಡಿಹೋದರು.
ಮತ್ತಾಯನು 28 : 9 (OCVKN)
ಅವರು ಶಿಷ್ಯರಿಗೆ ತಿಳಿಸುವುದಕ್ಕೆ ಹೋಗುತ್ತಿದ್ದಾಗ, ಯೇಸು ಅವರನ್ನು ಸಂಧಿಸಿ, “ಶುಭವಾಗಲಿ” ಎಂದರು. ಅವರು ಬಂದು ಯೇಸುವಿನ ಪಾದಗಳನ್ನು ಹಿಡಿದು ಅವರನ್ನು ಆರಾಧಿಸಿದರು.
ಮತ್ತಾಯನು 28 : 10 (OCVKN)
ಆಗ ಯೇಸು ಅವರಿಗೆ, “ಭಯಪಡಬೇಡಿರಿ, ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವರೆಂದೂ ಹೋಗಿ ಅವರಿಗೆ ಹೇಳಿರಿ,” ಎಂದರು.
ಮತ್ತಾಯನು 28 : 11 (OCVKN)
ಕಾವಲುಗಾರರ ವರದಿ ಅವರು ಹೋಗುತ್ತಿರುವಾಗ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ಮುಖ್ಯಯಾಜಕರಿಗೆ ನಡೆದ ಸಂಗತಿಗಳನ್ನೆಲ್ಲಾ ಹೇಳಿದರು.
ಮತ್ತಾಯನು 28 : 12 (OCVKN)
ಇವರು ಹಿರಿಯರೊಂದಿಗೆ ಕೂಡಿಬಂದು ಆಲೋಚನೆ ಮಾಡಿ ಸೈನಿಕರಿಗೆ ಬಹಳ ಹಣಕೊಟ್ಟು,
ಮತ್ತಾಯನು 28 : 13 (OCVKN)
“ ‘ನಾವು ನಿದ್ರೆ ಮಾಡುತ್ತಿದ್ದಾಗ ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋದರು,’ ಎಂದು ನೀವು ಹೇಳಿರಿ.
ಮತ್ತಾಯನು 28 : 14 (OCVKN)
ಇದು ರಾಜ್ಯಪಾಲನ ಕಿವಿಗೆ ಬಿದ್ದರೆ, ನೀವು ತಪ್ಪಿಸಿಕೊಳ್ಳುವ ಹಾಗೆ ನಾವು ಅವನನ್ನು ಸಮಾಧಾನಪಡಿಸುವೆವು,” ಎಂದರು.
ಮತ್ತಾಯನು 28 : 15 (OCVKN)
ಹೀಗೆ ಅವರು ಆ ಹಣವನ್ನು ತೆಗೆದುಕೊಂಡು ತಮಗೆ ಕಲಿಸಿದಂತೆ ವರದಿಮಾಡಿದರು. ಈ ಕಥೆಯು ಈ ದಿನದವರೆಗೂ ಯೆಹೂದ್ಯರಲ್ಲಿ ಹಬ್ಬಿದೆ.
ಮತ್ತಾಯನು 28 : 16 (OCVKN)
ಮಹಾ ಆದೇಶವು ಆಗ ಹನ್ನೊಂದು ಮಂದಿ ಶಿಷ್ಯರು ಯೇಸು ತಮಗೆ ನೇಮಿಸಿದ ಗಲಿಲಾಯದಲ್ಲಿರುವ ಬೆಟ್ಟಕ್ಕೆ ಹೋದರು.
ಮತ್ತಾಯನು 28 : 17 (OCVKN)
ಅವರು ಯೇಸುವನ್ನು ಕಂಡು ಆರಾಧಿಸಿದರು. ಆದರೆ ಕೆಲವರು ಸಂದೇಹ ಪಟ್ಟರು.
ಮತ್ತಾಯನು 28 : 18 (OCVKN)
ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.
ಮತ್ತಾಯನು 28 : 19 (OCVKN)
ಆದ್ದರಿಂದ ನೀವು ಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ. ಅವರಿಗೆ ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿ,
ಮತ್ತಾಯನು 28 : 20 (OCVKN)
ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.
❮
❯
1
2
3
4
5
6
7
8
9
10
11
12
13
14
15
16
17
18
19
20