ಮತ್ತಾಯನು 7 : 1 (OCVKN)
ತೀರ್ಪು ಮಾಡುವುದು “ತೀರ್ಪುಮಾಡಬೇಡಿರಿ, ಆಗ ನಿಮಗೂ ಸಹ ತೀರ್ಪಾಗುವುದಿಲ್ಲ.
ಮತ್ತಾಯನು 7 : 2 (OCVKN)
ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.
ಮತ್ತಾಯನು 7 : 3 (OCVKN)
“ನೀನು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ನೋಡುವುದೇಕೆ?
ಮತ್ತಾಯನು 7 : 4 (OCVKN)
ನಿನ್ನ ಕಣ್ಣಿನಲ್ಲಿಯೇ ಮರದ ದಿಮ್ಮಿ ಇರುವಾಗ, ನಿನ್ನ ಸಹೋದರನಿಗೆ, ‘ನಾನು ನಿನ್ನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆದುಬಿಡುತ್ತೇನೆ,’ ಎಂದು ನೀನು ಹೇಳುವುದು ಹೇಗೆ?
ಮತ್ತಾಯನು 7 : 5 (OCVKN)
ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ತೆಗೆದುಹಾಕು. ಆಮೇಲೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯಲು, ನಿನ್ನ ಕಣ್ಣು ಸ್ಪಷ್ಟವಾಗಿ ಕಾಣುವುದು.
ಮತ್ತಾಯನು 7 : 7 (OCVKN)
“ಪವಿತ್ರವಾದದ್ದನ್ನು ನಾಯಿಗಳಿಗೆ ಕೊಡಬೇಡಿರಿ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಚೆಲ್ಲಬೇಡಿರಿ. ಹಾಗೆ ಮಾಡಿದರೆ ಹಂದಿಗಳು ಮುತ್ತುಗಳನ್ನು ತಮ್ಮ ಕಾಲುಗಳಿಂದ ತುಳಿದು ಹಾಕಿಯಾವು. ನಾಯಿಗಳು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು. ಬೇಡಿರಿ, ಹುಡುಕಿರಿ, ತಟ್ಟಿರಿ “ಬೇಡಿಕೊಳ್ಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.
ಮತ್ತಾಯನು 7 : 8 (OCVKN)
ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬರು ಪಡೆದುಕೊಳ್ಳುವರು; ಹುಡುಕುವವರಿಗೆ ಸಿಗುವುದು; ತಟ್ಟುವವರಿಗೆ ಬಾಗಿಲು ತೆರೆಯಲಾಗುವುದು.
ಮತ್ತಾಯನು 7 : 9 (OCVKN)
“ನಿಮ್ಮಲ್ಲಿ ಯಾವನಾದರೂ ತನ್ನ ಮಗನು ರೊಟ್ಟಿಯನ್ನು ಕೇಳಿದರೆ ಅವನಿಗೆ ಕಲ್ಲನ್ನು ಕೊಡುವನೇ?
ಮತ್ತಾಯನು 7 : 10 (OCVKN)
ಇಲ್ಲವೆ ಮೀನನ್ನು ಕೇಳಿದರೆ ಅವನಿಗೆ ಹಾವನ್ನು ಕೊಡುವನೇ?
ಮತ್ತಾಯನು 7 : 11 (OCVKN)
ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ತಮ್ಮಲ್ಲಿ ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುವರಲ್ಲವೇ!
ಮತ್ತಾಯನು 7 : 12 (OCVKN)
ಆದ್ದರಿಂದ, ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಬಯಸುತ್ತೀರೋ, ಅದರಂತೆಯೇ ನೀವು ಅವರಿಗೆ ಮಾಡಿರಿ; ಇದೇ ನಿಯಮ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶವು.
ಮತ್ತಾಯನು 7 : 13 (OCVKN)
ಇಕ್ಕಟ್ಟಾದ ಹಾಗೂ ವಿಶಾಲ ಬಾಗಿಲು “ಇಕ್ಕಟ್ಟಾದ ಬಾಗಿಲಿನಿಂದ ಪ್ರವೇಶಿಸಿರಿ. ಏಕೆಂದರೆ ನಾಶಕ್ಕೆ ಒಯ್ಯುವ ಬಾಗಿಲು, ಅಗಲವೂ ಅದರ ಮಾರ್ಗವು ವಿಶಾಲವೂ ಆಗಿವೆ; ಅದರೊಳಗೆ ಪ್ರವೇಶಿಸುವವರು ಅನೇಕರು.
ಮತ್ತಾಯನು 7 : 14 (OCVKN)
ಜೀವಕ್ಕೆ ಒಯ್ಯುವ ಬಾಗಿಲು ಇಕ್ಕಟ್ಟಾದದ್ದೂ ದಾರಿಯು ಕಷ್ಟಕರವಾದದ್ದೂ ಆಗಿದೆ; ಅದನ್ನು ಕಂಡು ಹಿಡಿಯುವವರು ಕೆಲವರು ಮಾತ್ರ.
ಮತ್ತಾಯನು 7 : 15 (OCVKN)
ಮರ ಹಾಗೂ ಫಲ “ಕುರಿಯ ವೇಷಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆ. ಏಕೆಂದರೆ ಅವರು ಒಳಗೆ ಕ್ರೂರವಾದ ತೋಳಗಳಾಗಿದ್ದಾರೆ.
ಮತ್ತಾಯನು 7 : 16 (OCVKN)
ಅವರವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಿಂದ ದ್ರಾಕ್ಷಿಯನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಕೀಳುವರೋ?
ಮತ್ತಾಯನು 7 : 17 (OCVKN)
ಅದರಂತೆಯೇ, ಪ್ರತಿಯೊಂದು ಒಳ್ಳೆಯ ಮರವು ಒಳ್ಳೆಯ ಫಲವನ್ನು ಕೊಡುತ್ತದೆ. ಆದರೆ ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ.
ಮತ್ತಾಯನು 7 : 18 (OCVKN)
ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು, ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡಲಾರದು.
ಮತ್ತಾಯನು 7 : 19 (OCVKN)
ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.
ಮತ್ತಾಯನು 7 : 20 (OCVKN)
ಆದ್ದರಿಂದ ಅವರವರ ಫಲಗಳಿಂದಲೇ ನೀವು ಅವರನ್ನು ತಿಳಿದುಕೊಳ್ಳುವಿರಿ.
ಮತ್ತಾಯನು 7 : 21 (OCVKN)
ನಿಜ ಹಾಗೂ ಸುಳ್ಳು ಶಿಷ್ಯರು “ನನ್ನನ್ನು, ‘ಸ್ವಾಮೀ, ಸ್ವಾಮೀ,’ ಎಂದು ಹೇಳುವವರೆಲ್ಲರೂ ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ. ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ಅದರಲ್ಲಿ ಪ್ರವೇಶಿಸುವನು.
ಮತ್ತಾಯನು 7 : 22 (OCVKN)
ಆ ದಿನದಲ್ಲಿ, ‘ಕರ್ತದೇವರೇ, ಕರ್ತದೇವರೇ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿಮ್ಮ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?’ ಎಂದು ಅನೇಕರು ನನಗೆ ಹೇಳುವರು.
ಮತ್ತಾಯನು 7 : 23 (OCVKN)
ಆಗ ನಾನು ಅವರಿಗೆ, ‘ನಿಮ್ಮನ್ನು ನಾನೆಂದೂ ಅರಿಯೆನು, ನಿಯಮ ಮೀರಿ ಬಾಳಿದವರೇ ನನ್ನಿಂದ ತೊಲಗಿಹೋಗಿರಿ!’* ಕೀರ್ತನೆ 6:8; ಕೀರ್ತನೆ 119:115 ಎಂದು ಹೇಳಿಬಿಡುವೆನು.
ಮತ್ತಾಯನು 7 : 24 (OCVKN)
ಬುದ್ಧಿವಂತ ಹಾಗೂ ಬುದ್ಧಿಹೀನ “ಆದ್ದರಿಂದ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವ ಪ್ರತಿಯೊಬ್ಬನೂ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಸಮಾನ.
ಮತ್ತಾಯನು 7 : 25 (OCVKN)
ಮಳೆಯು ಸುರಿದು ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಆ ಮನೆ ಬೀಳಲಿಲ್ಲ. ಏಕೆಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಕಟ್ಟಲಾಗಿತ್ತು.
ಮತ್ತಾಯನು 7 : 26 (OCVKN)
ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ, ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಸಮಾನ.
ಮತ್ತಾಯನು 7 : 27 (OCVKN)
ಮಳೆಯು ಸುರಿದು, ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆಗ ಆ ಮನೆ ಕುಸಿದು ಬಿತ್ತು. ಅದರ ಬೀಳುವಿಕೆಯು ಭಯಂಕರವಾಗಿತ್ತು,” ಎಂದರು.
ಮತ್ತಾಯನು 7 : 28 (OCVKN)
ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ, ಅವರ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು.
ಮತ್ತಾಯನು 7 : 29 (OCVKN)
ಏಕೆಂದರೆ, ಯೇಸು ಅವರ ನಿಯಮ ಬೋಧಕರಂತೆ ಬೋಧಿಸದೆ, ಅಧಿಕಾರವಿದ್ದವರಂತೆ ಬೋಧಿಸುತ್ತಿದ್ದರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29