ಮಿಕ 3 : 1 (OCVKN)
ನಾಯಕರನ್ನು ಪ್ರವಾದಿಗಳನ್ನು ಗದರಿಸಿದ್ದು ಆಗ ನಾನು, “ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ. ನೀವು ನ್ಯಾಯವನ್ನು ಪ್ರೀತಿಸಬಾರದೇ.
ಮಿಕ 3 : 2 (OCVKN)
ಒಳ್ಳೆಯದನ್ನು ದ್ವೇಷಮಾಡಿ ಕೆಟ್ಟದ್ದನ್ನು ಪ್ರೀತಿ ಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ನನ್ನ ಜನರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತು ಕೊಳ್ಳುವವರೇ,
ಮಿಕ 3 : 3 (OCVKN)
ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ. ಅವರ ಚರ್ಮವನ್ನು ಸುಲಿದುಹಾಕುತ್ತಾರೆ. ಅವರ ಎಲುಬುಗಳನ್ನು ಮುರಿದುಹಾಕುತ್ತೀರಿ. ಹಂಡೆಯಲ್ಲಿನ ತುಂಡುಗಳಂತೆ, ಮಡಕೆಯಲ್ಲಿನ ಮಾಂಸದ ಚೂರುಗಳಂತೆ ನನ್ನ ಪ್ರಜೆಯನ್ನು ಚೂರುಚೂರಾಗಿ ಕತ್ತರಿಸಿಹಾಕಿದ್ದೀರಿ.”
ಮಿಕ 3 : 4 (OCVKN)
ಆಗ ಅವರು ಯೆಹೋವ ದೇವರಿಗೆ ಮೊರೆಯಿಡುವರು; ಆದರೆ ಅವರು ಅವರಿಗೆ ಉತ್ತರ ಕೊಡುವುದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತಮ್ಮ ಮುಖವನ್ನು ಮರೆಮಾಡುವರು.
ಮಿಕ 3 : 5 (OCVKN)
ಯೆಹೋವ ದೇವರು ಹೇಳುವುದೇನೆಂದರೆ, “ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವ ಪ್ರವಾದಿಗಳಿಗೆ ತಿನ್ನಲು ಕೊಟ್ಟರೆ ‘ಸಮಾಧಾನವಾಗಲಿ’ ಎನ್ನುವರು. ಆದರೆ ಅವರಿಗೆ ತಿನ್ನಲು ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.
ಮಿಕ 3 : 6 (OCVKN)
ದರ್ಶನವಿಲ್ಲದೆ, ನಿಮಗೆ ರಾತ್ರಿಯಾಗುವುದು; ಶಕುನವಿಲ್ಲದೆ ನಿಮಗೆ ಕತ್ತಲಾಗುವುದು. ಪ್ರವಾದಿಗಳಿಗೆ ಸೂರ್ಯ ಮುಳುಗುವುದು. ಅವರ ಮೇಲೆ ಹಗಲು ಕತ್ತಲೆಯಾಗುವುದು.
ಮಿಕ 3 : 7 (OCVKN)
ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ಅವಮಾನಗೊಳ್ಳುವರು. ದೇವರಿಂದ ಉತ್ತರವಿಲ್ಲದ ಕಾರಣ, ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿಕೊಳ್ಳುವರು.”
ಮಿಕ 3 : 8 (OCVKN)
ಆದರೆ ನಿಶ್ಚಯವಾಗಿ ನಾನು ಯಾಕೋಬಿನ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವುದಕ್ಕೆ ಯೆಹೋವ ದೇವರ ಆತ್ಮದ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.
ಮಿಕ 3 : 9 (OCVKN)
ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾಧಿಪತಿಗಳೇ, ನ್ಯಾಯವನ್ನು ನಿಂದಿಸಿ ಸರಿಯಾದದ್ದನ್ನೆಲ್ಲಾ ಡೊಂಕುಮಾಡುವವರೇ,
ಮಿಕ 3 : 10 (OCVKN)
ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.
ಮಿಕ 3 : 11 (OCVKN)
ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. ಆದರೂ ಯೆಹೋವ ದೇವರ ಮೇಲೆ ಆತುಕೊಂಡು, “ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ.
ಮಿಕ 3 : 12 (OCVKN)
ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. ಯೆರೂಸಲೇಮು ಹಾಳುದಿಬ್ಬಗಳಾಗುವುದು. ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.
❮
❯
1
2
3
4
5
6
7
8
9
10
11
12