ಮಿಕ 7 : 1 (OCVKN)
ಇಸ್ರಾಯೇಲಿನ ಕೊರಗುವಿಕೆ ಎಂತಹ ಸಂಕಟ ನನ್ನದು! ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವವರ ಹಾಗೆಯೂ ದ್ರಾಕ್ಷಿ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣುಗಳೂ ಇಲ್ಲ.
ಮಿಕ 7 : 2 (OCVKN)
ನಿಷ್ಠಾವಂತರು ಭೂಮಿಯೊಳಗಿಂದ ನಾಶವಾಗಿದ್ದಾರೆ. ಮನುಷ್ಯರಲ್ಲಿ ಯಥಾರ್ಥನು ಒಬ್ಬನು ಉಳಿದಿಲ್ಲ; ಎಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾ, ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
ಮಿಕ 7 : 3 (OCVKN)
ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವಂತೆ ಆಡಳಿತಗಾರರು ಉಡುಗೊರೆಗಳನ್ನು ಕೇಳುತ್ತಾರೆ. ನ್ಯಾಯಾಧಿಪತಿಗಳು ಲಂಚವನ್ನು ತೆಗೆದುಕೊಳ್ಳುತ್ತಾರೆ. ಶಕ್ತಿಶಾಲಿ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರೆಲ್ಲರೂ ಒಟ್ಟಾಗಿ ಒಳಸಂಚುಮಾಡುತ್ತಾರೆ.
ಮಿಕ 7 : 4 (OCVKN)
ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ. ದೇವರು ನಿನ್ನನ್ನು ಭೇಟಿಮಾಡುವ ದಿನ ಬಂದಿದೆ, ನಿನ್ನ ಕಾವಲುಗಾರರು ಎಚ್ಚರಿಕೆಯ ಗಂಟೆಯನ್ನು ಬಾರಿಸುತ್ತಾರೆ. ಈಗ ನೀವು ಭಯಭೀತರಾಗುವ ಸಮಯ.
ಮಿಕ 7 : 5 (OCVKN)
ನೆರೆಯವನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸೆ ಇಡಬೇಡಿರಿ; ನಿನ್ನ ಎದೆಯಲ್ಲಿ ಮಲಗುವವಳಿಗೆ ನಿನ್ನ ಬಾಯಿಯ ಬಾಗಿಲುಗಳನ್ನು ಕಾಯಿ.
ಮಿಕ 7 : 6 (OCVKN)
ಏಕೆಂದರೆ ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ. ಮಗಳು ತನ್ನ ತಾಯಿಗೂ, ಸೊಸೆಗೂ ಆಕೆಯ ಅತ್ತೆಗೂ ವಿರೋಧವಾಗಿ ಏಳುತ್ತಾರೆ. ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.
ಮಿಕ 7 : 7 (OCVKN)
ಆದರೆ ನಾನು ಯೆಹೋವ ದೇವರನ್ನು ಎದುರು ನೋಡುವೆನು. ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವರು.
ಮಿಕ 7 : 8 (OCVKN)
ಇಸ್ರಾಯೇಲು ಎದ್ದೇಳುವುದು ನನ್ನ ಶತ್ರುವೇ, ನನ್ನ ಮೇಲೆ ಸಂತೋಷ ಪಡಬೇಡ, ನಾನು ಬಿದ್ದಿದ್ದರೂ ತಿರುಗಿ ಏಳುವೆನು. ನಾನು ಕತ್ತಲೆಯಲ್ಲಿ ಕುಳಿತುಕೊಂಡರೂ ಯೆಹೋವ ದೇವರೇ ನನಗೆ ಬೆಳಕಾಗಿರುವರು.
ಮಿಕ 7 : 9 (OCVKN)
ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದರಿಂದ ಅವರು ನನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡೆಸುವ ತನಕ ಅವರ ಕೋಪವನ್ನು ತಾಳುವೆನು. ಆತನು ನನ್ನನ್ನು ಬೆಳಕಿಗೆ ತರುವನು. ಆತನ ನೀತಿಯನ್ನು ನೋಡುವೆನು.
ಮಿಕ 7 : 10 (OCVKN)
ಆಗ ನನ್ನ ಶತ್ರು ಇದನ್ನು ನೋಡುವನು. ಅವನ ಮುಖವನ್ನು ಅವಮಾನದಿಂದ ಮುಚ್ಚಿಕೊಳ್ಳುವನು, “ನಿನ್ನ ಯೆಹೋವ ದೇವರು ಎಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.
ಮಿಕ 7 : 11 (OCVKN)
ನಿನ್ನ ಗೋಡೆಗಳು ಪುನಃ ಕಟ್ಟುವ ಆ ದಿವಸ ಬರುವುದು. ಮತ್ತು ನಿಮ್ಮ ಮಿತಿಗಳನ್ನು ಹೆಚ್ಚಿಸುವ ದಿನ ಬರುತ್ತದೆ.
ಮಿಕ 7 : 12 (OCVKN)
ಆ ದಿವಸದಲ್ಲಿ ಅಸ್ಸೀರಿಯರಿಂದಲೂ ಈಜಿಪ್ಟ್ ಪಟ್ಟಣಗಳಿಂದಲೂ ಯೂಫ್ರೇಟೀಸ್ ನದಿಯವರೆಗೂ ಸಮುದ್ರದಿಂದ ಸಮುದ್ರದವರೆಗೂ ಬೆಟ್ಟದಿಂದ ಬೆಟ್ಟದವರೆಗೂ ಜನರೆಲ್ಲರು ನಿನ್ನ ಬಳಿಗೆ ಬರುವರು.
ಮಿಕ 7 : 13 (OCVKN)
ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವುದು.
ಮಿಕ 7 : 14 (OCVKN)
ಸ್ತೋತ್ರ ಮತ್ತು ಪ್ರಾರ್ಥನೆ ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆಯನ್ನೂ ನಿನ್ನ ಕೋಲಿನಿಂದ ಮೇಯಿಸು. ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.
ಮಿಕ 7 : 15 (OCVKN)
ನೀನು ಈಜಿಪ್ಟ್ ದೇಶದೊಳಗಿಂದ ಹೊರಡುವ ದಿವಸಗಳ ಹಾಗೆ ಅವರಿಗೆ ಆಶ್ಚರ್ಯವಾದವುಗಳನ್ನು ತೋರಿಸುವೆನು.
ಮಿಕ 7 : 16 (OCVKN)
ಜನಾಂಗಗಳು ನೋಡಿ ನಾಚಿಕೊಳ್ಳುವರು ತಮ್ಮ ತಮ್ಮ ಶಕ್ತಿಗೆ ವಂಚಿತರಾಗಿ ನಾಚಿಕೆಪಡುವರು. ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವುವು.
ಮಿಕ 7 : 17 (OCVKN)
ಅವರು ಹಾವಿನಂತೆ, ನೆಲದ ಮೇಲೆ ತೆವಳುವ ಜೀವಿಗಳಂತೆ ಧೂಳನ್ನು ನೆಕ್ಕುತ್ತಾರೆ. ಅವರು ರಂಧ್ರಗಳಿಂದ ಹೊರಗೆ ಬರುವರು. ನಮ್ಮ ದೇವರಾದ ಯೆಹೋವ ದೇವರಿಗೆ ಅವರು ಹೆದರುವರು. ನಿನಗೆ ಭಯಪಡುವರು.
ಮಿಕ 7 : 18 (OCVKN)
ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ, ನಿನ್ನ ಹಾಗೆ ಇರುವ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ. ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ.
ಮಿಕ 7 : 19 (OCVKN)
ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ನಮ್ಮ ಪಾಪಗಳನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವನು.
ಮಿಕ 7 : 20 (OCVKN)
ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.

1 2 3 4 5 6 7 8 9 10 11 12 13 14 15 16 17 18 19 20