ಅರಣ್ಯಕಾಂಡ 1 : 1 (OCVKN)
ಮೊದಲನೆ ಜನಗಣತಿ ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ನಂತರದ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದೊಳಗೆ ಮೋಶೆಯ ಸಂಗಡ ಹೀಗೆ ಮಾತನಾಡಿದರು:
ಅರಣ್ಯಕಾಂಡ 1 : 2 (OCVKN)
“ಇಸ್ರಾಯೇಲ್ ಜನಸಮೂಹದ ಗಂಡಸರನ್ನು ಗೋತ್ರ ಹಾಗೂ ಕುಟುಂಬಗಳಿಗೆ ಅನುಗುಣವಾಗಿ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಎಣಿಸಬೇಕು.
ಅರಣ್ಯಕಾಂಡ 1 : 3 (OCVKN)
ಇಸ್ರಾಯೇಲರಲ್ಲಿ ಸೈನಿಕ ಸೇವೆ ಸಲ್ಲಿಸತಕ್ಕವರನ್ನು ಅಂದರೆ, ಇಪ್ಪತ್ತು ವರ್ಷಕ್ಕಿಂತಲೂ ಹೆಚ್ಚಾದ ವಯಸ್ಸುಳ್ಳ ಎಲ್ಲರನ್ನು ಸೈನ್ಯಸೈನ್ಯವಾಗಿ ನೀನು ಮತ್ತು ಆರೋನನು ಪಟ್ಟಿಮಾಡಬೇಕು.
ಅರಣ್ಯಕಾಂಡ 1 : 4 (OCVKN)
ಪ್ರತಿಯೊಂದು ಗೋತ್ರದ ಒಬ್ಬೊಬ್ಬ ಮುಖ್ಯಸ್ಥನು ನಿಮಗೆ ಸಹಾಯಕನಾಗಿರಲಿ.
ಅರಣ್ಯಕಾಂಡ 1 : 5 (OCVKN)
“ನಿಮಗೆ ಸಹಾಯ ಮಾಡಬೇಕಾದ ಪುರುಷರ ಹೆಸರುಗಳು: “ರೂಬೇನ್ ಗೋತ್ರದಿಂದ ಶೆದೇಯೂರನ ಮಗ ಎಲೀಚೂರ್,
ಅರಣ್ಯಕಾಂಡ 1 : 6 (OCVKN)
ಸಿಮೆಯೋನ್ ಗೋತ್ರದಿಂದ ಚುರೀಷದ್ದೈಯನ ಮಗ ಶೆಲುಮೀಯೇಲ್,
ಅರಣ್ಯಕಾಂಡ 1 : 7 (OCVKN)
ಯೆಹೂದ ಗೋತ್ರದಿಂದ ಅಮ್ಮೀನಾದಾಬನ ಮಗ ನಹಶೋನ್,
ಅರಣ್ಯಕಾಂಡ 1 : 8 (OCVKN)
ಇಸ್ಸಾಕರ್ ಗೋತ್ರದಿಂದ ಚೂವಾರನ ಮಗ ನೆತನೆಯೇಲ್,
ಅರಣ್ಯಕಾಂಡ 1 : 9 (OCVKN)
ಜೆಬುಲೂನ್ ಗೋತ್ರದಿಂದ ಹೇಲೋನನ ಮಗ ಎಲೀಯಾಬ್,
ಅರಣ್ಯಕಾಂಡ 1 : 10 (OCVKN)
ಯೋಸೇಫನ ಗೋತ್ರದಲ್ಲಿ, ಎಫ್ರಾಯೀಮ್ನಿಂದ ಅಮ್ಮೀಹೂದನ ಮಗ ಎಲೀಷಾಮಾ, ಮನಸ್ಸೆ ಗೋತ್ರದಿಂದ ಪೆದಾಚೂರನ ಮಗನಾದ ಗಮಲಿಯೇಲ್,
ಅರಣ್ಯಕಾಂಡ 1 : 11 (OCVKN)
ಬೆನ್ಯಾಮೀನ್ ಗೋತ್ರದಿಂದ ಗಿದ್ಯೋನಿನ ಮಗನಾದ ಅಬೀದಾನ,
ಅರಣ್ಯಕಾಂಡ 1 : 12 (OCVKN)
ದಾನ್ ಗೋತ್ರದಿಂದ ಅಮ್ಮೀಷದ್ದೈಯನ ಮಗ ಅಹೀಗೆಜೆರ್,
ಅರಣ್ಯಕಾಂಡ 1 : 13 (OCVKN)
ಆಶೇರ್ ಗೋತ್ರದಿಂದ ಒಕ್ರಾನನ ಮಗ ಪಗೀಯೇಲ್,
ಅರಣ್ಯಕಾಂಡ 1 : 14 (OCVKN)
ಗಾದ್ ಗೋತ್ರದಿಂದ ದೆವುಯೇಲನ ಮಗ ಎಲ್ಯಾಸಾಫ್,
ಅರಣ್ಯಕಾಂಡ 1 : 15 (OCVKN)
ನಫ್ತಾಲಿ ಗೋತ್ರದಿಂದ ಏನಾನನ ಮಗ ಅಹೀರನು.”
ಅರಣ್ಯಕಾಂಡ 1 : 16 (OCVKN)
ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಪುರಾತನ ಗೋತ್ರಗಳ ನಾಯಕರು. ಇವರು ಇಸ್ರಾಯೇಲಿನ ಗೋತ್ರಗಳ ಪ್ರಮುಖರು.
ಅರಣ್ಯಕಾಂಡ 1 : 17 (OCVKN)
ಹೆಸರಿನಿಂದ ಸೂಚಿತರಾದ ಈ ಪುರುಷರನ್ನು ಮೋಶೆ ಮತ್ತು ಆರೋನನು ತಮ್ಮ ಜೊತೆ ತೆಗೆದುಕೊಂಡರು.
ಅರಣ್ಯಕಾಂಡ 1 : 18 (OCVKN)
ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಜನರು ತಮ್ಮ ಗೋತ್ರ ಮತ್ತು ಕುಟುಂಬಗಳ ಅನುಸಾರವಾಗಿ ತಮ್ಮ ವಂಶಾವಳಿಯನ್ನು ನೊಂದಾಯಿಸಿದರು. ಹಾಗೂ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಹೆಚ್ಚಾದ ವಯಸ್ಸಿನವರ ಹೆಸರುಗಳನ್ನು ಒಬ್ಬೊಬ್ಬರಾಗಿ ಪಟ್ಟಿಮಾಡಲಾಯಿತು.
ಅರಣ್ಯಕಾಂಡ 1 : 19 (OCVKN)
ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಮೋಶೆ ಸೀನಾಯಿ ಮರುಭೂಮಿಯಲ್ಲಿ ಜನಗಣತಿ ಮಾಡಿದನು.
ಅರಣ್ಯಕಾಂಡ 1 : 20 (OCVKN)
ಇಸ್ರಾಯೇಲಿನ ಚೊಚ್ಚಲ ಮಗ ರೂಬೇನನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.
ಅರಣ್ಯಕಾಂಡ 1 : 21 (OCVKN)
ರೂಬೇನನ ಗೋತ್ರದಲ್ಲಿ ಎಣಿಕೆಯಾದವರು 46,500 ಜನರು.
ಅರಣ್ಯಕಾಂಡ 1 : 22 (OCVKN)
ಸಿಮೆಯೋನನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.
ಅರಣ್ಯಕಾಂಡ 1 : 23 (OCVKN)
ಸಿಮೆಯೋನನ ಗೋತ್ರದಲ್ಲಿ ಎಣಿಕೆಯಾದವರು 59,300 ಜನರು.
ಅರಣ್ಯಕಾಂಡ 1 : 24 (OCVKN)
ಗಾದನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.
ಅರಣ್ಯಕಾಂಡ 1 : 25 (OCVKN)
ಗಾದನ ಗೋತ್ರದಲ್ಲಿ ಎಣಿಕೆಯಾದವರು 45,650 ಜನರು.
ಅರಣ್ಯಕಾಂಡ 1 : 26 (OCVKN)
ಯೆಹೂದ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.
ಅರಣ್ಯಕಾಂಡ 1 : 27 (OCVKN)
ಯೆಹೂದ ಗೋತ್ರದಲ್ಲಿ ಎಣಿಕೆಯಾದವರು 74,600 ಜನರು.
ಅರಣ್ಯಕಾಂಡ 1 : 28 (OCVKN)
ಇಸ್ಸಾಕಾರನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.
ಅರಣ್ಯಕಾಂಡ 1 : 29 (OCVKN)
ಇಸ್ಸಾಕಾರನ ಗೋತ್ರದಲ್ಲಿ ಎಣಿಕೆಯಾದವರು 54,400 ಜನರು.
ಅರಣ್ಯಕಾಂಡ 1 : 30 (OCVKN)
ಜೆಬುಲೂನನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.
ಅರಣ್ಯಕಾಂಡ 1 : 31 (OCVKN)
ಜೆಬುಲೂನ್ ಗೋತ್ರದಲ್ಲಿ ಎಣಿಕೆಯಾದವರು 57,400 ಜನರು.
ಅರಣ್ಯಕಾಂಡ 1 : 32 (OCVKN)
ಯೋಸೇಫನ ಮಕ್ಕಳಾದ ಎಫ್ರಾಯೀಮನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.
ಅರಣ್ಯಕಾಂಡ 1 : 33 (OCVKN)
ಎಫ್ರಾಯೀಮನ ಗೋತ್ರದಲ್ಲಿ ಎಣಿಕೆಯಾದವರು 40,500 ಜನರು.
ಅರಣ್ಯಕಾಂಡ 1 : 34 (OCVKN)
ಮನಸ್ಸೆಯ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.
ಅರಣ್ಯಕಾಂಡ 1 : 35 (OCVKN)
ಮನಸ್ಸೆಯ ಗೋತ್ರದಲ್ಲಿ ಎಣಿಕೆಯಾದವರು 32,200 ಜನರು.
ಅರಣ್ಯಕಾಂಡ 1 : 36 (OCVKN)
ಬೆನ್ಯಾಮೀನ್ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.
ಅರಣ್ಯಕಾಂಡ 1 : 37 (OCVKN)
ಬೆನ್ಯಾಮೀನನ ಗೋತ್ರದಲ್ಲಿ ಎಣಿಕೆಯಾದವರು 35,400 ಜನರು.
ಅರಣ್ಯಕಾಂಡ 1 : 38 (OCVKN)
ದಾನನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.
ಅರಣ್ಯಕಾಂಡ 1 : 39 (OCVKN)
ದಾನನ ಗೋತ್ರದಲ್ಲಿ ಎಣಿಕೆಯಾದವರು 62,700 ಜನರು.
ಅರಣ್ಯಕಾಂಡ 1 : 40 (OCVKN)
ಆಶೇರನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.
ಅರಣ್ಯಕಾಂಡ 1 : 41 (OCVKN)
ಆಶೇರನ ಗೋತ್ರದಲ್ಲಿ ಎಣಿಕೆಯಾದವರು 41,500 ಜನರು.
ಅರಣ್ಯಕಾಂಡ 1 : 42 (OCVKN)
ನಫ್ತಾಲಿಯ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.
ಅರಣ್ಯಕಾಂಡ 1 : 43 (OCVKN)
ನಫ್ತಾಲಿಯ ಗೋತ್ರದಲ್ಲಿ ಎಣಿಕೆಯಾದವರು 53,400 ಜನರು.
ಅರಣ್ಯಕಾಂಡ 1 : 44 (OCVKN)
ಮೋಶೆ, ಆರೋನ್ ಮತ್ತು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ನಾಯಕರು ಲೆಕ್ಕಮಾಡಿದ ಇಸ್ರಾಯೇಲರ ಜನರು ಇವರೇ. ಪ್ರತಿಯೊಬ್ಬರೂ ತಮ್ಮ ತಮ್ಮ ಕುಟುಂಬವನ್ನು ಪ್ರತಿನಿಧಿಸುತ್ತಿದ್ದರು.
ಅರಣ್ಯಕಾಂಡ 1 : 45 (OCVKN)
ಹೀಗೆ ಇಸ್ರಾಯೇಲರಲ್ಲಿ ಎಣಿಕೆಯಾದವರೆಲ್ಲರೂ ಅವರ ಕುಟುಂಬಗಳ ಪ್ರಕಾರ ಇಪ್ಪತ್ತು ವರ್ಷದವರೂ, ಅದಕ್ಕಿಂತ ಹೆಚ್ಚಾದ ಪ್ರಾಯವುಳ್ಳವರೂ, ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಶಕ್ತರಾದವರೂ ಆಗಿದ್ದರು.
ಅರಣ್ಯಕಾಂಡ 1 : 46 (OCVKN)
ಎಣಿಕೆಯಾದವರು ಒಟ್ಟು 6,03,550 ಮಂದಿಯಾಗಿದ್ದರು.
ಅರಣ್ಯಕಾಂಡ 1 : 47 (OCVKN)
ಲೇವಿಯರ ತಂದೆಗಳ ಗೋತ್ರವನ್ನು ಇತರರೊಂದಿಗೆ ಎಣಿಸಲಿಲ್ಲ.
ಅರಣ್ಯಕಾಂಡ 1 : 48 (OCVKN)
ಇದಲ್ಲದೆ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ:
ಅರಣ್ಯಕಾಂಡ 1 : 49 (OCVKN)
“ನೀವು ಲೇವಿಯ ಕುಲವನ್ನು ಎಣಿಸಬಾರದು ಅಥವಾ ಇತರ ಇಸ್ರಾಯೇಲರ ಜನಗಣತಿಯಲ್ಲಿ ಅವರನ್ನು ಸೇರಿಸಬಾರದು.
ಅರಣ್ಯಕಾಂಡ 1 : 50 (OCVKN)
ಆದರೆ ನೀನು ಸಾಕ್ಷಿಯ ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಅದಕ್ಕೆ ಬೇಕಾದ ಎಲ್ಲವನ್ನೂ ನೋಡಿಕೊಳ್ಳಲು ಲೇವಿಯರನ್ನು ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಹೊತ್ತುಕೊಳ್ಳುವರು. ಅದರ ಸೇವೆಮಾಡಿ, ಗುಡಾರದ ಸುತ್ತುಮುತ್ತಲೂ ಇಳಿದುಕೊಳ್ಳಬೇಕು.
ಅರಣ್ಯಕಾಂಡ 1 : 51 (OCVKN)
ದೇವದರ್ಶನ ಗುಡಾರವು ಹೊರಡುವಾಗ ಲೇವಿಯರು ಅದನ್ನು ತೆಗೆಯಲಿ. ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ. ಬೇರೆ ಯಾವನಾದರೂ ಸಮೀಪಿಸಿದರೆ ಅವನು ಸಾಯಬೇಕು.
ಅರಣ್ಯಕಾಂಡ 1 : 52 (OCVKN)
ಇಸ್ರಾಯೇಲರು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಧ್ವಜದ ಬಳಿ ಇಳಿದುಕೊಳ್ಳಬೇಕು.
ಅರಣ್ಯಕಾಂಡ 1 : 53 (OCVKN)
ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದುಕೊಳ್ಳಬೇಕು. ಹೀಗೆ ಇಸ್ರಾಯೇಲರ ಸಭೆಯ ಮೇಲೆ ನನ್ನ ಕೋಪಕ್ಕೆ ಆಸ್ಪದವಿರದು. ಲೇವಿಯರು ಸಭೆಯ ಗುಡಾರ ಕಾಯುವ ಜವಾಬ್ದಾರಿಕೆಯುಳ್ಳವರಾಗಿರಬೇಕು.”
ಅರಣ್ಯಕಾಂಡ 1 : 54 (OCVKN)
ಇಸ್ರಾಯೇಲರು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನು ಮಾಡಿದರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52
53
54