ಅರಣ್ಯಕಾಂಡ 17 : 1 (OCVKN)
ಆರೋನನ ಕೋಲನ್ನು ಚಿಗುರಿಸಿದ್ದು ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
ಅರಣ್ಯಕಾಂಡ 17 : 2 (OCVKN)
“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಂದ ಅವರ ಪಿತೃಗಳ ಗೋತ್ರಗಳ ಪ್ರಕಾರ, ಅವರ ಪ್ರಧಾನರೆಲ್ಲರ ಪಿತೃಗಳ ಮನೆಯ ಪ್ರಕಾರ ಕೋಲುಗಳನ್ನು ತೆಗೆದುಕೊಂಡು, ಒಬ್ಬೊಬ್ಬನ ಹೆಸರನ್ನು ಅವನವನ ಕೋಲಿನ ಮೇಲೆ ನೀನು ಬರೆ.
ಅರಣ್ಯಕಾಂಡ 17 : 3 (OCVKN)
ಆರೋನನ ಹೆಸರನ್ನು ಲೇವಿಯ ಕೋಲಿನ ಮೇಲೆ ಬರೆಯಬೇಕು. ಏಕೆಂದರೆ ಅವರ ಪಿತೃಗಳ ಗೋತ್ರದ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು.
ಅರಣ್ಯಕಾಂಡ 17 : 4 (OCVKN)
ಅವುಗಳನ್ನು ದೇವದರ್ಶನ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಒಡಂಬಡಿಕೆಯ ಮಂಜೂಷದ ಮುಂದೆ ಇಡಬೇಕು.
ಅರಣ್ಯಕಾಂಡ 17 : 5 (OCVKN)
ನಾನು ಯಾವನನ್ನು ಆಯ್ದುಕೊಳ್ಳುತ್ತೇನೋ, ಆ ಮನುಷ್ಯನ ಕೋಲು ಚಿಗುರುವುದು. ಹೀಗೆ ಇಸ್ರಾಯೇಲರು ನಿಮಗೆ ವಿರೋಧವಾಗಿ ಗೊಣಗುಟ್ಟುವುದನ್ನು ನಾನು ನಿಲ್ಲಿಸಿಬಿಡುವೆನು,” ಎಂದರು.
ಅರಣ್ಯಕಾಂಡ 17 : 6 (OCVKN)
ಹಾಗೆಯೇ ಮೋಶೆಯು ಇಸ್ರಾಯೇಲರ ಸಂಗಡ ಮಾತನಾಡಿದನು. ಅವರ ಪ್ರಧಾನರೆಲ್ಲರೂ ತಮ್ಮ ಪಿತೃಗಳ ಗೋತ್ರಗಳ ಪ್ರಕಾರ ಒಬ್ಬೊಬ್ಬ ಪ್ರಧಾನನಿಗೋಸ್ಕರ ಒಂದೊಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಕೊಟ್ಟರು. ಆರೋನನ ಕೋಲು ಸಹ ಅವರ ಕೋಲುಗಳ ಮಧ್ಯದಲ್ಲಿ ಇತ್ತು.
ಅರಣ್ಯಕಾಂಡ 17 : 7 (OCVKN)
ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರದ ಒಳಗೆ ಯೆಹೋವ ದೇವರ ಸಮ್ಮುಖದಲ್ಲಿ ಇಟ್ಟನು.
ಅರಣ್ಯಕಾಂಡ 17 : 8 (OCVKN)
ಮರುದಿವಸದಲ್ಲಿ, ಮೋಶೆಯು ಸಾಕ್ಷಿ ಗುಡಾರದೊಳಗೆ ಪ್ರವೇಶಿಸುವಾಗ, ಲೇವಿಯ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ, ಮೊಗ್ಗು ಬಿಟ್ಟು, ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.
ಅರಣ್ಯಕಾಂಡ 17 : 9 (OCVKN)
ಆಗ ಮೋಶೆಯು ಕೋಲುಗಳನ್ನು ಯೆಹೋವ ದೇವರ ಸನ್ನಿಧಿಯಿಂದ ಎಲ್ಲಾ ಇಸ್ರಾಯೇಲರಿಗೆ ತೋರಿಸುವುದಕ್ಕಾಗಿ ಹೊರಗೆ ತಂದನು. ಆಗ ಅವರು ನೋಡಿ ತಮ್ಮ ತಮ್ಮ ಕೋಲುಗಳನ್ನು ತೆಗೆದುಕೊಂಡರು.
ಅರಣ್ಯಕಾಂಡ 17 : 10 (OCVKN)
ಯೆಹೋವ ದೇವರು ಮೋಶೆಗೆ, “ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಇಟ್ಟುಕೊಳ್ಳುವುದಕ್ಕೆ ಒಡಂಬಡಿಕೆಯ ಮಂಜೂಷದ ಮುಂದೆ ತಿರುಗಿ ಇಡು. ಗೊಣಗುಟ್ಟುವುದನ್ನು ನೀನು ಸಂಪೂರ್ಣವಾಗಿ ತೆಗೆದುಬಿಡಬೇಕು,” ಎಂದರು.
ಅರಣ್ಯಕಾಂಡ 17 : 11 (OCVKN)
ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರವೇ ಮೋಶೆ ಮಾಡಿದನು.
ಅರಣ್ಯಕಾಂಡ 17 : 12 (OCVKN)
ಆಗ ಇಸ್ರಾಯೇಲರು ಮೋಶೆಯ ಸಂಗಡ ಮಾತನಾಡಿ, “ನಾವೆಲ್ಲರೂ ಸಾಯುತ್ತೇವೆ, ನಾಶವಾಗುತ್ತೇವೆ. ನಾವೆಲ್ಲರೂ ನಾಶವಾಗುತ್ತೇವೆ.
ಅರಣ್ಯಕಾಂಡ 17 : 13 (OCVKN)
ಯೆಹೋವ ದೇವರ ಗುಡಾರದ ಸಮೀಪಕ್ಕೆ ಬರುವವರೆಲ್ಲರೂ ಸಾಯುವರು. ಹಾಗೆಯೇ ನಾವೆಲ್ಲರೂ ಸಾಯಬೇಕೋ?” ಎಂದರು.
❮
❯
1
2
3
4
5
6
7
8
9
10
11
12
13