ಅರಣ್ಯಕಾಂಡ 18 : 1 (OCVKN)
ಯಾಜಕರ ಮತ್ತು ಲೇವಿಯರ ಕರ್ತವ್ಯ ಯೆಹೋವ ದೇವರು ಆರೋನನಿಗೆ, “ನೀನೂ, ನಿನ್ನ ಪುತ್ರರೂ, ನಿನ್ನ ಪಿತೃಗಳ ಮನೆಯವರೂ ಪರಿಶುದ್ಧ ಸ್ಥಳಕ್ಕೆ ವಿರೋಧವಾಗಿ ನಡೆಯುವ ಕಾರ್ಯಗಳ ಜವಾಬ್ದಾರಿ ವಹಿಸಬೇಕು. ಯಾಜಕತ್ವಕ್ಕೆ ವಿರೋಧವಾಗಿ ನಡೆಯುವ ಅಕ್ರಮಗಳಿಗೆ ನೀನು ಮತ್ತು ನಿನ್ನ ಪುತ್ರರು ಮಾತ್ರ ಹೊಣೆಯಾಗಿರುತ್ತೀರಿ.
ಅರಣ್ಯಕಾಂಡ 18 : 2 (OCVKN)
ನಿನ್ನ ಗೋತ್ರದ ಮೂಲಪುರುಷನಾದ ಲೇವಿ ವಂಶದವರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಏಕೆಂದರೆ ಅವರು ನಿನ್ನ ಕೂಡ ಇದ್ದು, ನಿನಗೆ ಸೇವೆಮಾಡಬೇಕು. ಆದರೆ ನೀನು ಮತ್ತು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷಿ ಗುಡಾರದ ಮುಂದೆ ಸೇವೆಮಾಡಬೇಕು.
ಅರಣ್ಯಕಾಂಡ 18 : 3 (OCVKN)
ಅವರು ನಿನಗೂ ದೇವದರ್ಶನದ ಗುಡಾರದ ಕಾರ್ಯಗಳಿಗೂ ಜವಾಬ್ದಾರರಾಗಿರುವರು. ಆದರೆ ಪರಿಶುದ್ಧಸ್ಥಳದ ಸಲಕರಣೆಗಳ ಹತ್ತಿರವಾಗಲಿ, ಬಲಿಪೀಠದ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಮಾತ್ರವಲ್ಲ ನೀವೂ ಸಹ ಸಾಯುವಿರಿ.
ಅರಣ್ಯಕಾಂಡ 18 : 4 (OCVKN)
ಆದರೆ ಅವರು ನಿನ್ನ ಸಹಾಯಕರಾಗಿದ್ದು, ದೇವದರ್ಶನದ ಗುಡಾರದ ಎಲ್ಲಾ ಕಾರ್ಯಗಳಿಗೂ ಅದನ್ನು ಕಾಪಾಡುವುದಕ್ಕೂ ಜವಾಬ್ದಾರರಾಗಿರುವರು. ಬೇರೆ ಕುಲದವರು ನಿಮ್ಮ ಸಮೀಪಕ್ಕೆ ಬರಬಾರದು.
ಅರಣ್ಯಕಾಂಡ 18 : 5 (OCVKN)
“ಇಸ್ರಾಯೇಲರ ಮೇಲೆ ಇನ್ನು ಮುಂದೆ ಎಂದಿಗೂ ನನ್ನ ಕೋಪಾಗ್ನಿಯು ಬಾರದ ಹಾಗೆ ಪರಿಶುದ್ಧ ಸ್ಥಳವನ್ನು ಮತ್ತು ಬಲಿಪೀಠವನ್ನು ನೀವೇ ನೋಡಿಕೊಳ್ಳಬೇಕು.
ಅರಣ್ಯಕಾಂಡ 18 : 6 (OCVKN)
ನಾನು ನಿಮ್ಮ ಸಹೋದರರಾದ ಲೇವಿಯರನ್ನು ಇಸ್ರಾಯೇಲರೊಳಗಿಂದ ತೆಗೆದುಕೊಂಡಿದ್ದೇನೆ. ದೇವದರ್ಶನ ಗುಡಾರದ ಸೇವೆಯನ್ನು ಮಾಡುವುದಕ್ಕೆ ಅವರು ಯೆಹೋವ ದೇವರಿಗಾಗಿ ನಿಮಗೆ ಕಾಣಿಕೆಯಾಗಿ ಸಮರ್ಪಿತರಾಗಿದ್ದಾರೆ.
ಅರಣ್ಯಕಾಂಡ 18 : 7 (OCVKN)
ಆದ್ದರಿಂದ ನೀನು ನಿನ್ನ ಪುತ್ರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ತೆರೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವ ಸೇವೆಯನ್ನು ನಿಮಗೆ ದಾನವಾಗಿ ಕೊಟ್ಟಿದ್ದೇನೆ. ಪರಕೀಯನು ಸಮೀಪಕ್ಕೆ ಬಂದರೆ ಮರಣಶಿಕ್ಷೆಯಾಗಬೇಕು,” ಎಂದರು.
ಅರಣ್ಯಕಾಂಡ 18 : 8 (OCVKN)
ಯಾಜಕರ ಮತ್ತು ಲೇವಿಯರ ಕಾಣಿಕೆಗಳು ಯೆಹೋವ ದೇವರು ಮಾತನಾಡಿ ಆರೋನನಿಗೆ, “ನನಗೆ ಕೊಡುವ ಎಲ್ಲಾ ಕಾಣಿಕೆಗಳ ಮೇಲೆ ನಿನ್ನನ್ನು ನೇಮಿಸಿದ್ದೇನೆ. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಪರಿಶುದ್ಧವಾದ ಕಾಣಿಕೆಗಳನ್ನೆಲ್ಲಾ ನಿನಗೂ ನಿನ್ನ ಮಕ್ಕಳಿಗೂ ಶಾಶ್ವತ ಪಾಲನ್ನು ನೀಡುತ್ತೇನೆ,” ಎಂದರು.
ಅರಣ್ಯಕಾಂಡ 18 : 9 (OCVKN)
ದಹನಬಲಿಗೆ ಒಳಗಾಗದ ಮಹಾಪರಿಶುದ್ಧವಾದ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು ಯಾವುವೆಂದರೆ ಇಸ್ರಾಯೇಲರು ನನಗೆ ಸಮರ್ಪಿಸುವ ಧಾನ್ಯ, ದೋಷಪರಿಹಾರಕ ಬಲಿಗಳು ಮತ್ತು ಪ್ರಾಯಶ್ಚಿತ್ತ ಬಲಿಗಳು, ಇವುಗಳಲ್ಲಿ ದಹನವಾಗದೆ ಉಳಿದವುಗಳು ಮಹಾಪರಿಶುದ್ಧವಾದದರಿಂದ ನಿನಗೂ ನಿನ್ನ ಪುತ್ರರಿಗೂ ಸೇರಬೇಕು.
ಅರಣ್ಯಕಾಂಡ 18 : 10 (OCVKN)
ಮಹಾಪರಿಶುದ್ಧ ಸ್ಥಳದಲ್ಲಿ ನೀನು ಅದನ್ನು ತಿನ್ನಬೇಕು. ಪುರುಷರು ಅದನ್ನು ತಿನ್ನಬಹುದು. ಅದು ನಿನಗೆ ಪರಿಶುದ್ಧವಾಗಿರುವುದೆಂದು ಪರಿಗಣಿಸಬೇಕು.
ಅರಣ್ಯಕಾಂಡ 18 : 11 (OCVKN)
ಅರಣ್ಯಕಾಂಡ 18 : 12 (OCVKN)
“ಅವರು ಕೊಟ್ಟ ಅರ್ಪಣೆಯೂ ಇಸ್ರಾಯೇಲರು ನೈವೇದ್ಯವಾಗಿ ನಿವಾಳಿಸುವ ಎಲ್ಲಾ ಸಮರ್ಪಣೆಗಳೂ ನಿನ್ನದಾಗಿರುವುವು. ಅವುಗಳನ್ನು ನಾನು ನಿನಗೂ, ನಿನ್ನ ಪುತ್ರಪುತ್ರಿಯರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನೂ ಅದನ್ನು ತಿನ್ನಬಹುದು. “ಜನರು ಯೆಹೋವ ದೇವರಿಗೆ ಸಮರ್ಪಿಸುವ ಪ್ರಥಮ ಫಲಗಳನ್ನು ಅಂದರೆ ಎಲ್ಲಾ ಉತ್ತಮವಾದ ಎಣ್ಣೆಯೂ ಉತ್ತಮವಾದ ಹೊಸ ದ್ರಾಕ್ಷಾರಸ, ಧಾನ್ಯವೂ ನಿನಗೆ ಕೊಟ್ಟಿದ್ದೇನೆ.
ಅರಣ್ಯಕಾಂಡ 18 : 13 (OCVKN)
ಅವರು ಯೆಹೋವ ದೇವರಿಗೆ ತರುವ ಅವರ ದೇಶದಲ್ಲಿರುವ ಎಲ್ಲವುಗಳ ಪ್ರಥಮ ಫಲಗಳು ನಿನ್ನವುಗಳಾಗಿರುವುವು. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನೂ ಅದನ್ನು ತಿನ್ನಬಹುದು.
ಅರಣ್ಯಕಾಂಡ 18 : 14 (OCVKN)
“ಇಸ್ರಾಯೇಲರು ಯೆಹೋವ ದೇವರಿಗೆ ಹರಕೆಮಾಡಿ ಸಮರ್ಪಿಸಿದ ಪ್ರತಿಯೊಂದೂ ನಿನ್ನದಾಗಿದೆ.
ಅರಣ್ಯಕಾಂಡ 18 : 15 (OCVKN)
ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಯೆಹೋವ ದೇವರಿಗೆ ಸಮರ್ಪಿಸುವ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು. ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಅಪವಿತ್ರವಾದ ಗಂಡು ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು.
ಅರಣ್ಯಕಾಂಡ 18 : 16 (OCVKN)
ಅವು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗ, ದೇವರ ಸೇವೆಗೆ ನಿಗದಿಯಾದ ಇಪ್ಪತ್ತು ಗೇರಾ ತೂಕದ ನಾಣ್ಯದ ಮೇರೆಗೆ ಐದು ಶೆಕೆಲ್* ಸುಮಾರು 58 ಗ್ರಾಂ ನಾಣ್ಯವನ್ನು ತೆಗೆದುಕೊಂಡು ಅವುಗಳನ್ನು ವಿಮೋಚಿಸಿಕೊಳ್ಳಬೇಕು.
ಅರಣ್ಯಕಾಂಡ 18 : 17 (OCVKN)
“ಆದರೆ ಆಕಳಿನ ಚೊಚ್ಚಲನ್ನಾದರೂ ಕುರಿಯ ಚೊಚ್ಚಲನ್ನಾದರೂ ಮೇಕೆಯ ಚೊಚ್ಚಲನ್ನಾದರೂ ನೀನು ಬಿಟ್ಟುಬಿಡಬಾರದು. ಅವು ಪರಿಶುದ್ಧವಾಗಿವೆ, ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸಬೇಕು, ಅವುಗಳ ಕೊಬ್ಬನ್ನು ಯೆಹೋವ ದೇವರಿಗೆ ಸುವಾಸನೆಯ ದಹನಬಲಿ ಮಾಡಬೇಕು.
ಅರಣ್ಯಕಾಂಡ 18 : 18 (OCVKN)
ನೈವೇದ್ಯವಾಗಿ ನಿವಾಳಿಸುವ ಎದೆಯೂ ಬಲಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನದಾಗಿರಬೇಕು.
ಅರಣ್ಯಕಾಂಡ 18 : 19 (OCVKN)
ಇಸ್ರಾಯೇಲರು ಯೆಹೋವ ದೇವರಿಗೆ ನೈವೇದ್ಯ ಮಾಡುವ ಪರಿಶುದ್ಧವಾದ ಬಲಿಗಳನ್ನೆಲ್ಲಾ ನಿನಗೂ ನಿನ್ನ ಪುತ್ರಪುತ್ರಿಯರಿಗೂ ಕ್ರಮ ಪ್ರಕಾರವಾದ ಭಾಗವಾಗಿ ಕೊಟ್ಟಿದ್ದೇನೆ. ಇದು ಯೆಹೋವ ದೇವರ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು ಎಂದರೆ ಬದಲಾಯಿಸಲಾಗದ ಅಥವಾ ಮುರಿಯಲಾಗದ ಒಡಂಬಡಿಕೆ ,” ಎಂದರು.
ಅರಣ್ಯಕಾಂಡ 18 : 20 (OCVKN)
ಅರಣ್ಯಕಾಂಡ 18 : 21 (OCVKN)
ಯೆಹೋವ ದೇವರು ಆರೋನನಿಗೆ, “ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು, ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು. ನಾನೇ ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಪಾಲೂ ನಿನ್ನ ಸ್ವಾಸ್ತ್ಯವೂ ಆಗಿದ್ದೇನೆ. “ಅವರು ದೇವದರ್ಶನ ಗುಡಾರದ ಸೇವೆಯನ್ನೂ ಮಾಡುವುದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾಯೇಲರಲ್ಲಿ ಹತ್ತನೆಯ ಭಾಗವನ್ನು ಸೊತ್ತಾಗಿ ಕೊಟ್ಟಿದ್ದೇನೆ.
ಅರಣ್ಯಕಾಂಡ 18 : 22 (OCVKN)
ಇನ್ನು ಮೇಲೆ ಇಸ್ರಾಯೇಲರು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ದೇವದರ್ಶನದ ಗುಡಾರದ ಸಮೀಪಕ್ಕೆ ಬರಬಾರದು.
ಅರಣ್ಯಕಾಂಡ 18 : 23 (OCVKN)
ಆದರೆ ಲೇವಿಯರೇ ದೇವದರ್ಶನ ಗುಡಾರದ ಸೇವೆಯನ್ನು ಮಾಡಬೇಕು. ಅವರು ಅಲ್ಲಿ ಅಕ್ರಮವಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊತ್ತಿರಬೇಕು. ಇದು ನಿಮ್ಮ ಸಂತತಿಗಳಿಗೆ ಶಾಶ್ವತ ಕಟ್ಟಳೆಯಾಗಿದೆ, ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಾಸ್ತ್ಯ ಇರಬಾರದು.
ಅರಣ್ಯಕಾಂಡ 18 : 24 (OCVKN)
ಇಸ್ರಾಯೇಲರು ಯೆಹೋವ ದೇವರಿಗೆ ಬಲಿಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ. ಆದಕಾರಣ, ‘ಇಸ್ರಾಯೇಲರ ಮಧ್ಯದಲ್ಲಿ ಅವರಿಗೆ ಸೊತ್ತು ಇರಬಾರದು ಎಂದು ನಾನು ಅವರಿಗೆ ಹೇಳಿದ್ದೇನೆ,’ ” ಎಂದರು.
ಅರಣ್ಯಕಾಂಡ 18 : 25 (OCVKN)
ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
ಅರಣ್ಯಕಾಂಡ 18 : 26 (OCVKN)
“ನೀನು ಲೇವಿಯರಿಗೆ ಹೇಳಬೇಕಾದದ್ದೇನೆಂದರೆ, ‘ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ಇಸ್ರಾಯೇಲರಿಂದ ನೀವು ತೆಗೆದುಕೊಳ್ಳುವಾಗ ಅದರಲ್ಲಿ ಹತ್ತನೆಯದರಿಂದ ಒಂದು ಪಾಲನ್ನು ಪ್ರತ್ಯೇಕಿಸಿ ಯೆಹೋವ ದೇವರಿಗೆ ಸಮರ್ಪಿಸಬೇಕು.
ಅರಣ್ಯಕಾಂಡ 18 : 27 (OCVKN)
ಈ ನಿಮ್ಮ ಸಮರ್ಪಣೆಯನ್ನು ಕಣದ ಧಾನ್ಯದ ಹಾಗೆಯೂ ದ್ರಾಕ್ಷಿತೊಟ್ಟಿಯ ರಸದಂತೆಯೂ ಪರಿಗಣಿಸಲಾಗುವುದು.
ಅರಣ್ಯಕಾಂಡ 18 : 28 (OCVKN)
ಈ ಪ್ರಕಾರ ನೀವು ಸಹ ಇಸ್ರಾಯೇಲರ ಕಡೆಯಿಂದ ತೆಗೆದುಕೊಳ್ಳುವ ನಿಮ್ಮ ಎಲ್ಲಾ ಹತ್ತನೆಯ ಒಂದು ಭಾಗವನ್ನು ಯೆಹೋವ ದೇವರಿಗೆ ಕಾಣಿಕೆಯಾಗಿ ಅರ್ಪಿಸಬೇಕು, ನೀವು ಅದರಿಂದ ಯೆಹೋವ ದೇವರ ಯಾಜಕನಾದ ಆರೋನನಿಗೆ ಕೊಡಬೇಕು.
ಅರಣ್ಯಕಾಂಡ 18 : 29 (OCVKN)
ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಅದರ ಒಂದೊಂದರ ಉತ್ತಮವಾದದ್ದನ್ನು ಅದರೊಳಗಿನ ಪರಿಶುದ್ಧವಾದ ಭಾಗವನ್ನೇ ಯೆಹೋವ ದೇವರಿಗೆ ಸಮರ್ಪಣೆಯಾಗಿ ಅರ್ಪಿಸಬೇಕು.’
ಅರಣ್ಯಕಾಂಡ 18 : 30 (OCVKN)
“ನೀನು ಲೇವಿಯರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಅದರಲ್ಲಿ ಉತ್ತಮವಾದದ್ದನ್ನು ಸಮರ್ಪಿಸಿದ ನಂತರ ಉಳಿದವುಗಳನ್ನು ಕಣದಲ್ಲಿನ ದವಸದಂತೆಯೂ ದ್ರಾಕ್ಷಿತೊಟ್ಟಿಯ ರಸದಂತೆಯೂ ಪರಿಗಣಿಸಲಾಗುತ್ತದೆ.
ಅರಣ್ಯಕಾಂಡ 18 : 31 (OCVKN)
ನೀವೂ ನಿಮ್ಮ ಮನೆಯವರೂ ಅದನ್ನು ಸಕಲ ಸ್ಥಳಗಳಲ್ಲಿ ತಿನ್ನಬಹುದು. ಏಕೆಂದರೆ ದೇವದರ್ಶನದ ಗುಡಾರದಲ್ಲಿ ನೀವು ಮಾಡುವ ಸೇವೆಗೋಸ್ಕರ ಅದು ನಿಮಗೆ ಪ್ರತಿಫಲವಾಗಿದೆ.
ಅರಣ್ಯಕಾಂಡ 18 : 32 (OCVKN)
ಆದಕಾರಣ ನೀವು ಅದರಲ್ಲಿ ಉತ್ತಮವಾದದ್ದನ್ನು ಅರ್ಪಿಸಿದಾಗ, ಅದರ ದೆಸೆಯಿಂದ ಯಾವ ದೋಷಕ್ಕೂ ನೀವು ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ನೀವು ಸಾಯುವುದಿಲ್ಲ,’ ” ಎಂದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32