ಅರಣ್ಯಕಾಂಡ 21 : 1 (OCVKN)
ಅರಾದ್ ಪಟ್ಟಣದ ಅರಸನನ್ನು ಜಯಿಸಿದ್ದು ನೆಗೆವನಲ್ಲಿ ವಾಸಿಸುವ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಇಸ್ರಾಯೇಲರು ಅತಾರೀಮ್ ಮಾರ್ಗವಾಗಿ ಬರುತ್ತಿದ್ದಾರೆಂದು ಕೇಳಿ, ಅವರ ಸಂಗಡ ಯುದ್ಧಮಾಡಿ, ಅವರಲ್ಲಿ ಕೆಲವರನ್ನು ಸೆರೆಹಿಡಿದನು.
ಅರಣ್ಯಕಾಂಡ 21 : 2 (OCVKN)
ಆಗ ಇಸ್ರಾಯೇಲರು ಯೆಹೋವ ದೇವರಿಗೆ ಪ್ರಮಾಣಮಾಡಿ, “ನೀನು ಈ ಜನರನ್ನು ನಮ್ಮ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ, ನಾವು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆವು,” ಎಂದರು.
ಅರಣ್ಯಕಾಂಡ 21 : 3 (OCVKN)
ಆಗ ಯೆಹೋವ ದೇವರು ಇಸ್ರಾಯೇಲರ ಧ್ವನಿಯನ್ನು ಕೇಳಿ ಕಾನಾನ್ಯರನ್ನು ಒಪ್ಪಿಸಿಕೊಟ್ಟನು. ಇಸ್ರಾಯೇಲರು ಅವರನ್ನೂ ಅವರ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಿಟ್ಟರು.
ಅರಣ್ಯಕಾಂಡ 21 : 4 (OCVKN)
ಕಂಚಿನ ಸರ್ಪ ಅವರು ಹೋರ್ ಎಂಬ ಬೆಟ್ಟದಿಂದ ಹೊರಟು, ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಆದರೆ ಜನರು ಈ ಪ್ರಯಾಣದಿಂದ ಆಯಾಸವಾಗಿ ಬಹಳ ಕುಂದಿಹೋದರು.
ಅರಣ್ಯಕಾಂಡ 21 : 5 (OCVKN)
ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ, “ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಈಜಿಪ್ಟ್ ದೇಶದಿಂದ ಏಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ. ನಾವು ಈ ನಿಸ್ಸಾರವಾದ ರೊಟ್ಟಿಯನ್ನು ತಿಂದು ನಮಗೆ ಬೇಸರವಾಗಿದೆ,” ಎಂದರು.
ಅರಣ್ಯಕಾಂಡ 21 : 6 (OCVKN)
ಆಗ ಯೆಹೋವ ದೇವರು ಜನರೊಳಗೆ ವಿಷಸರ್ಪಗಳನ್ನು ಕಳುಹಿಸಿದರು. ಅವು ಜನರನ್ನು ಕಚ್ಚಿದ್ದರಿಂದ, ಇಸ್ರಾಯೇಲರಲ್ಲಿ ಬಹುಜನರು ಸತ್ತುಹೋದರು.
ಅರಣ್ಯಕಾಂಡ 21 : 7 (OCVKN)
ಆದ್ದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ಯೆಹೋವ ದೇವರಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ. ಯೆಹೋವ ದೇವರು ನಮ್ಮ ಮೇಲಿಂದ ಸರ್ಪಗಳನ್ನು ದೂರಮಾಡುವ ಹಾಗೆ ಪ್ರಾರ್ಥನೆ ಮಾಡು,” ಎಂದರು. ಆಗ ಮೋಶೆಯು ಜನರಿಗೋಸ್ಕರ ಪ್ರಾರ್ಥನೆಮಾಡಿದನು.
ಅರಣ್ಯಕಾಂಡ 21 : 8 (OCVKN)
ಯೆಹೋವ ದೇವರು ಮೋಶೆಗೆ, “ನೀನು ಕಂಚಿನಿಂದ ಒಂದು ಸರ್ಪವನ್ನು ಮಾಡಿಸಿಕೊಂಡು, ಒಂದು ಕಂಬದ ಮೇಲೆ ಇಡು. ಆಗ ಕಚ್ಚಿಸಿಕೊಂಡವರೆಲ್ಲರೂ ಅದರ ಮೇಲೆ ದೃಷ್ಟಿ ಇಟ್ಟರೆ ಅವರು ಬದುಕುವರು,” ಎಂದರು.
ಅರಣ್ಯಕಾಂಡ 21 : 9 (OCVKN)
ಆಗ ಮೋಶೆಯು ಕಂಚಿನ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟನು. ಸರ್ಪದಿಂದ ಕಚ್ಚಿಸಿಕೊಂಡವರಲ್ಲಿ ಯಾರು ಆ ಕಂಚಿನ ಸರ್ಪದ ಕಡೆಗೆ ದೃಷ್ಟಿ ಇಟ್ಟು ನೋಡಿದರೋ, ಅವರು ಬದುಕಿಕೊಂಡರು.
ಅರಣ್ಯಕಾಂಡ 21 : 10 (OCVKN)
ಮೋವಾಬಿಗೆ ಪ್ರಯಾಣ ಇಸ್ರಾಯೇಲರು ಹೊರಟು ಓಬೋತಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 21 : 11 (OCVKN)
ಓಬೋತಿನಿಂದ ಹೊರಟು ಮೋವಾಬ್ ದೇಶಕ್ಕೆದುರಾಗಿ ಸೂರ್ಯೋದಯದ ಕಡೆಯಲ್ಲಿರುವ ಮರುಭೂಮಿಯಲ್ಲಿ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 21 : 12 (OCVKN)
ಅಲ್ಲಿಂದ ಅವರು ಹೊರಟು ಜೆರೆದ್ ಎಂಬ ಹಳ್ಳದ ಬಳಿಯಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 21 : 13 (OCVKN)
ಅಲ್ಲಿಂದ ಹೊರಟು ಅಮೋರಿಯರ ಪ್ರದೇಶದಿಂದ ಹೊರಗೆ ಬರುವ ಮರುಭೂಮಿಯಲ್ಲಿರುವ ಅರ್ನೋನ್ ಹೊಳೆಯ ಈಚೆಯಲ್ಲಿ ಇಳಿದುಕೊಂಡರು. ಏಕೆಂದರೆ ಅರ್ನೋನ್ ಮೋವಾಬರಿಗೂ ಅಮೋರಿಯರಿಗೂ ಮಧ್ಯದ ಮೋವಾಬಿನ ಗಡಿಯಾಗಿದೆ.
ಅರಣ್ಯಕಾಂಡ 21 : 14 (OCVKN)
ಆದಕಾರಣ ಯೆಹೋವ ದೇವರ ಯುದ್ಧಗಳ ಪುಸ್ತಕದಲ್ಲಿ ಹೀಗೆಂದು ಬರೆದಿದೆ: “ಸೂಫಕ್ಕೆ ಸೇರಿದ ವಾಹೇಬನ್ನು, ಅರ್ನೋನ್
ಅರಣ್ಯಕಾಂಡ 21 : 15 (OCVKN)
ಹೊಳೆಗೆ ಸೇರುವ ಹಳ್ಳಗಳನ್ನು, ಆರ್ ಪಟ್ಟಣದ ತನಕ ಮೋವಾಬಿನ ಎಲ್ಲೆಯಾಗಿರುವ ಕೊರಕಲನ್ನು.”
ಅರಣ್ಯಕಾಂಡ 21 : 16 (OCVKN)
16 ಅವರು ಅಲ್ಲಿಂದ ಬೇರ್ ಎಂಬಲ್ಲಿಗೆ ಬಂದರು. ಯೆಹೋವ ದೇವರು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು,” ಎಂದು ಯೆಹೋವ ದೇವರು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯನ್ನು ಕುರಿತೇ.
ಅರಣ್ಯಕಾಂಡ 21 : 17 (OCVKN)
ಆಗ ಇಸ್ರಾಯೇಲರು ಈ ಹಾಡನ್ನು ಹಾಡಿದರು: “ಬಾವಿಯೇ, ಉಕ್ಕು, ಜನರೇ, ಅದರ ಬಗ್ಗೆ ನೀವು ಹಾಡಿರಿ.
ಅರಣ್ಯಕಾಂಡ 21 : 18 (OCVKN)
ಪ್ರಭುಗಳು ಈ ಬಾವಿಯನ್ನು ಅಗೆದರು. ಜನರ ಅಧಿಪತಿಗಳು ನ್ಯಾಯಾಧಿಪತಿಯ ಸಲಹೆಯ ಮೇರೆಗೆ ತಮ್ಮ ಕೋಲುಗಳಿಂದ ಅದನ್ನು ತೋಡಿದರು.” ಆಮೇಲೆ ಅವರು ಮರುಭೂಮಿಯಿಂದ ಮತ್ತಾನಕ್ಕೆ ಬಂದರು.
ಅರಣ್ಯಕಾಂಡ 21 : 19 (OCVKN)
ಇದಲ್ಲದೆ ಅವರು ಮತ್ತಾನದಿಂದ ನಹಲಿಯೇಲಕ್ಕೆ ಬಂದರು. ನಹಲಿಯೇಲದಿಂದ ಬಾಮೋತಿಗೆ ಬಂದರು.
ಅರಣ್ಯಕಾಂಡ 21 : 20 (OCVKN)
ಬಾಮೋತಿನಿಂದ ಮೋವಾಬ್ ದೇಶದಲ್ಲಿರುವ ಕಣಿವೆಯಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಮರಳುಗಾಡು ಕಾಣಿಸುತ್ತದೆ.
ಅರಣ್ಯಕಾಂಡ 21 : 21 (OCVKN)
ಸೀಹೋನ್ ಮತ್ತು ಓಗನ ಸೋಲು
ಅರಣ್ಯಕಾಂಡ 21 : 22 (OCVKN)
ಆಗ ಇಸ್ರಾಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ, “ನಾವು ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಯಾವುದೇ ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ, ಬಾವಿಯ ನೀರನ್ನು ಕುಡಿಯದೆ, ನಿನ್ನ ದೇಶವನ್ನು ದಾಟುವವರೆಗೆ ರಾಜಮಾರ್ಗದಲ್ಲಿಯೇ ಹೋಗುತ್ತೇವೆ,” ಎಂದು ಬೇಡಿಕೊಂಡರು.
ಅರಣ್ಯಕಾಂಡ 21 : 23 (OCVKN)
ಆದರೆ ಸೀಹೋನನು ಇಸ್ರಾಯೇಲರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ, ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು, ಇಸ್ರಾಯೇಲರನ್ನು ಎದುರಿಸಲು ಮರುಭೂಮಿಗೆ ಹೊರಟನು. ಅವನು ಯಹಚಕ್ಕೆ ಬಂದು ಇಸ್ರಾಯೇಲರ ಸಂಗಡ ಯುದ್ಧಮಾಡಿದನು.
ಅರಣ್ಯಕಾಂಡ 21 : 24 (OCVKN)
ಆದರೆ ಇಸ್ರಾಯೇಲರು ಅವನನ್ನು ಖಡ್ಗದಿಂದ ಹೊಡೆದು, ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೆ ಅಮ್ಮೋನನ ಮಕ್ಕಳ ಮೇರೆಯವರೆಗೂ ಸ್ವಾಧೀನಪಡಿಸಿಕೊಂಡರು. ಏಕೆಂದರೆ ಅಮ್ಮೋನನ ಮಕ್ಕಳ ಮೇರೆಯು ಬಲಿಷ್ಠವಾಗಿತ್ತು.
ಅರಣ್ಯಕಾಂಡ 21 : 25 (OCVKN)
ಇಸ್ರಾಯೇಲರು ಆ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಇಸ್ರಾಯೇಲರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು.
ಅರಣ್ಯಕಾಂಡ 21 : 26 (OCVKN)
ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು. ಅವನು ಮೋವಾಬ್ ದೇಶದ ಹಿಂದಿನ ಅರಸನ ಸಂಗಡ ಯುದ್ಧಮಾಡಿ, ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯವರೆಗೂ ಅವನಿಂದ ವಶಪಡಿಸಿಕೊಂಡಿದ್ದನು.
ಅರಣ್ಯಕಾಂಡ 21 : 27 (OCVKN)
ಇದರ ಬಗ್ಗೆ ಕವಿಗಳು ಹೀಗೆಂದು ಹಾಡಿದ್ದಾರೆ: “ಹೆಷ್ಬೋನಿಗೆ ಬನ್ನಿರಿ ಅದನ್ನು ತಿರುಗಿ ಕಟ್ಟಬೇಕು. ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆ ಮಾಡಬೇಕು.
ಅರಣ್ಯಕಾಂಡ 21 : 28 (OCVKN)
“ಏಕೆಂದರೆ ಬೆಂಕಿ ಹೆಷ್ಬೋನಿನಿಂದಲೂ, ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು, ಮೋವಾಬಿನ ಆರ್ ಎಂಬ ಪಟ್ಟಣವನ್ನೂ, ಅರ್ನೋನ್ ಹೊಳೆಯ ಬಳಿಯಲ್ಲಿರುವ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.
ಅರಣ್ಯಕಾಂಡ 21 : 29 (OCVKN)
ಮೋವಾಬೇ, ನಿನಗೆ ದಿಕ್ಕಾರ! ಕೆಮೋಷಿನ ಜನವೇ ನಿಮಗೆ ದುರ್ಗತಿ ಉಂಟಾಯಿತಲ್ಲಾ! ಅವನು ತನ್ನ ಪುತ್ರರನ್ನು ದೇಶಭ್ರಷ್ಟರನ್ನಾಗಿಯೂ ತನ್ನ ಪುತ್ರಿಯರನ್ನು ಸೆರೆಯವರನ್ನಾಗಿಯೂ ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಒಪ್ಪಿಸಿಕೊಟ್ಟನು.
ಅರಣ್ಯಕಾಂಡ 21 : 30 (OCVKN)
“ನಾವು ಅವರನ್ನು ಪದಚ್ಚುತಿಗೊಳಿಸಿದೆವು. ಹೆಷ್ಬೋನು ದೀಬೋನಿನವರೆಗೂ ನಾಶವಾಯಿತು. ನಾವು ಅವರನ್ನು ಮೇದೆಬಾಕ್ಕೆ ಮುಟ್ಟುವ ನೋಫಹದ ತನಕ ಹಾಳುಮಾಡಿದೆವು.”
ಅರಣ್ಯಕಾಂಡ 21 : 31 (OCVKN)
ಅರಣ್ಯಕಾಂಡ 21 : 32 (OCVKN)
ಹೀಗೆ ಇಸ್ರಾಯೇಲರು ಅಮೋರಿಯರ ದೇಶದಲ್ಲಿ ವಾಸಮಾಡಿದರು. ಇದಲ್ಲದೆ ಮೋಶೆಯು ಯಜ್ಜೇರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದನು. ಅವರು ಅವರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿರುವ ಅಮೋರಿಯರನ್ನು ಹೊರಡಿಸಿಬಿಟ್ಟರು.
ಅರಣ್ಯಕಾಂಡ 21 : 33 (OCVKN)
ಅವರು ತಿರುಗಿ ಬಾಷಾನಿನ ಹಾದಿ ಏರಿದರು. ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವುದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು.
ಅರಣ್ಯಕಾಂಡ 21 : 34 (OCVKN)
ಅರಣ್ಯಕಾಂಡ 21 : 35 (OCVKN)
ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಅವನಿಗೆ ಭಯಪಡಬೇಡ, ಏಕೆಂದರೆ ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಇವನಿಗೂ ಮಾಡಬೇಕು,” ಎಂದರು. ಈ ಪ್ರಕಾರ ಅವರು ಅವನನ್ನೂ ಅವನ ಮಕ್ಕಳನ್ನೂ ಅವನ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು, ಅವನ ದೇಶವನ್ನು ವಶಮಾಡಿಕೊಂಡರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35