ಅರಣ್ಯಕಾಂಡ 31 : 1 (OCVKN)
ಇಸ್ರಾಯೇಲರು ಮಿದ್ಯಾನ್ಯರನ್ನು ಸಂಹರಿಸಿದ್ದು ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
ಅರಣ್ಯಕಾಂಡ 31 : 2 (OCVKN)
“ನೀನು ಇಸ್ರಾಯೇಲರಿಂದ ಮಿದ್ಯಾನ್ಯರಿಗೆ ಮುಯ್ಯನ್ನು ತೀರಿಸಬೇಕು. ತರುವಾಯ ನೀನು ನಿನ್ನ ಪೂರ್ವಜರ ಬಳಿಗೆ ಸೇರಬೇಕು,” ಎಂದರು.
ಅರಣ್ಯಕಾಂಡ 31 : 3 (OCVKN)
ಆಗ ಮೋಶೆಯು ಜನರ ಸಂಗಡ ಮಾತನಾಡಿ, “ನಿಮ್ಮೊಳಗಿಂದ ಜನರು ಯುದ್ಧಕ್ಕೆ ಸಿದ್ಧಮಾಡಿಕೊಳ್ಳಲಿ. ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ, ಯೆಹೋವ ದೇವರ ಪ್ರತೀಕಾರವನ್ನು ಅವರಿಗೆ ತೀರಿಸಬೇಕು.
ಅರಣ್ಯಕಾಂಡ 31 : 4 (OCVKN)
ಇಸ್ರಾಯೇಲರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು ಯುದ್ಧಕ್ಕೆ ಕಳುಹಿಸಬೇಕು,” ಎಂದನು.
ಅರಣ್ಯಕಾಂಡ 31 : 5 (OCVKN)
ಆಗ ಇಸ್ರಾಯೇಲರ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿ ಯುದ್ಧಕ್ಕೆ ಸಿದ್ಧವಾದ ಹನ್ನೆರಡು ಸಾವಿರ ಮಂದಿಯನ್ನು ಲೆಕ್ಕಿಸಿಕೊಟ್ಟರು.
ಅರಣ್ಯಕಾಂಡ 31 : 6 (OCVKN)
ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿರುವ ಅವರನ್ನೂ ಯಾಜಕನಾದ ಎಲಿಯಾಜರನ ಮಗ ಫೀನೆಹಾಸನನ್ನೂ ಪರಿಶುದ್ಧ ಸಲಕರಣೆಗಳ ಸಂಗಡವೂ ಸೂಚಿಸುವದಕ್ಕೋಸ್ಕರ ತುತೂರಿಗಳ ಸಂಗಡವೂ ಯುದ್ಧಕ್ಕೆ ಕಳುಹಿಸಿದನು.
ಅರಣ್ಯಕಾಂಡ 31 : 7 (OCVKN)
ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ,
ಅರಣ್ಯಕಾಂಡ 31 : 8 (OCVKN)
ಗಂಡಸರೆಲ್ಲರನ್ನು ಕೊಂದುಹಾಕಿದರು. ಈ ಹತರಾದವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದುಹಾಕಿದರು. ಅವರು ಮಿದ್ಯಾನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗ ಬಿಳಾಮನನ್ನೂ ಖಡ್ಗದಿಂದ ಕೊಂದುಹಾಕಿದರು.
ಅರಣ್ಯಕಾಂಡ 31 : 9 (OCVKN)
ಇಸ್ರಾಯೇಲರು ಮಿದ್ಯಾನ್ಯರ ಸ್ತ್ರೀಯರನ್ನೂ, ಅವರ ಮಕ್ಕಳನ್ನೂ ಸೆರೆಹಿಡಿದು, ಅವರ ಸಮಸ್ತ ಪಶುಗಳನ್ನೂ, ಅವರ ಸಮಸ್ತ ಹಿಂಡುಗಳನ್ನೂ, ಅವರ ಸಮಸ್ತ ಸಲಕರಣೆಗಳನ್ನೂ ಸುಲಿಗೆ ಮಾಡಿದರು.
ಅರಣ್ಯಕಾಂಡ 31 : 10 (OCVKN)
ಅವರು ವಾಸಮಾಡಿದ ಸಮಸ್ತ ಪಟ್ಟಣಗಳನ್ನೂ, ಅವರ ಸಮಸ್ತ ಕೋಟೆಗಳನ್ನೂ ಬೆಂಕಿಯಿಂದ ಸುಟ್ಟರು.
ಅರಣ್ಯಕಾಂಡ 31 : 11 (OCVKN)
ಮನುಷ್ಯರಲ್ಲಿಯೂ, ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ, ಸಮಸ್ತ ಲೂಟಿಯನ್ನೂ ತೆಗೆದುಕೊಂಡರು.
ಅರಣ್ಯಕಾಂಡ 31 : 12 (OCVKN)
ಅವರು ಸೆರೆಯವರನ್ನೂ, ಲೂಟಿಯನ್ನೂ, ಸುಲಿಗೆಯನ್ನೂ ಮೋಶೆ, ಯಾಜಕನಾದ ಎಲಿಯಾಜರನು, ಇಸ್ರಾಯೇಲರ ಸಭೆ ಇವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಮೇಲೆ ಇರುವ ಮೋವಾಬಿನ ಬಯಲುಗಳಲ್ಲಿ ಇದ್ದ ಪಾಳೆಯದೊಳಗೆ ತಂದರು.
ಅರಣ್ಯಕಾಂಡ 31 : 13 (OCVKN)
ಮೋಶೆಯೂ, ಯಾಜಕನಾದ ಎಲಿಯಾಜರನೂ, ಸಮೂಹದ ಪ್ರಧಾನರೆಲ್ಲರೂ ಅವರಿಗೆ ಎದುರಾಗಿ ಪಾಳೆಯದ ಹೊರಗೆ ಹೋದರು.
ಅರಣ್ಯಕಾಂಡ 31 : 14 (OCVKN)
ಆದರೆ ಮೋಶೆಯು ಯುದ್ಧದಿಂದ ಬಂದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಆಗಿರುವ ಪಾಳೆಯದ ಮೇಲೆ ಕೋಪಮಾಡಿಕೊಂಡರು.
ಅರಣ್ಯಕಾಂಡ 31 : 15 (OCVKN)
ಮೋಶೆಯು ಅವರಿಗೆ, “ಹೆಂಗಸರನ್ನೆಲ್ಲಾ ಉಳಿಸಿದರೋ?
ಅರಣ್ಯಕಾಂಡ 31 : 16 (OCVKN)
ಇವರೇ ಬಿಳಾಮನ ಮಾತಿನಿಂದ ಪೆಯೋರನ ಕಾರ್ಯದಲ್ಲಿ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡುವುದಕ್ಕೆ ಇಸ್ರಾಯೇಲರಿಗೆ ಕಾರಣವಾಗಿದ್ದರು. ಯೆಹೋವ ದೇವರ ಸಭೆಯೊಳಗೆ ಇವರಿಂದಲೇ ವ್ಯಾಧಿಯಾಯಿತು.
ಅರಣ್ಯಕಾಂಡ 31 : 17 (OCVKN)
ಆದಕಾರಣ ಈಗ ಬಾಲಕರನ್ನೂ, ಎಲ್ಲಾ ಪುರುಷನನ್ನು ಅರಿತಿರುವ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ.
ಅರಣ್ಯಕಾಂಡ 31 : 18 (OCVKN)
ಆದರೆ ಪುರುಷನನ್ನು ಅರಿಯದ ಎಲ್ಲಾ ಹೆಣ್ಣು ಮಕ್ಕಳನ್ನು ನಿಮಗಾಗಿ ಉಳಿಸಿಕೊಳ್ಳಿರಿ.
ಅರಣ್ಯಕಾಂಡ 31 : 19 (OCVKN)
“ಇದಲ್ಲದೆ ನಿಮ್ಮಲ್ಲಿ ಪ್ರಾಣ ತೆಗೆದವರು ಮತ್ತು ಶವವನ್ನು ಮುಟ್ಟಿದವರು ಏಳು ದಿವಸ ಪಾಳೆಯದ ಹೊರಗೆ ಇರಬೇಕು. ನೀವೂ, ನಿಮ್ಮ ಸೆರೆಯವರೂ ಮೂರನೆಯ ಹಾಗೂ ಏಳನೆಯ ದಿವಸಗಳಲ್ಲಿ ನಿಮ್ಮನ್ನು ಶುದ್ಧ ಮಾಡಿಕೊಳ್ಳಬೇಕು.
ಅರಣ್ಯಕಾಂಡ 31 : 20 (OCVKN)
ಎಲ್ಲಾ ಬಟ್ಟೆಗಳನ್ನೂ, ಎಲ್ಲಾ ಚರ್ಮದ ಸಲಕರಣೆಗಳನ್ನೂ, ಮೇಕೆ ಕೂದಲಿಂದ ಮಾಡಿದ್ದೆಲ್ಲವನ್ನೂ, ಕಟ್ಟಿಗೆ ಸಲಕರಣೆಗಳೆಲ್ಲವನ್ನೂ ಶುದ್ಧಮಾಡಬೇಕು,” ಎಂದು ಹೇಳಿದನು.
ಅರಣ್ಯಕಾಂಡ 31 : 21 (OCVKN)
ಯಾಜಕನಾದ ಎಲಿಯಾಜರನು ಯುದ್ಧಕ್ಕೆ ಹೋದ ಪಾಳೆಯದ ಜನರಿಗೆ, “ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ನ್ಯಾಯದ ಕಟ್ಟಳೆಯು ಇದೇ:
ಅರಣ್ಯಕಾಂಡ 31 : 22 (OCVKN)
ಬೆಂಕಿ ತಾಳುವ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು
ಅರಣ್ಯಕಾಂಡ 31 : 23 (OCVKN)
ನೀವು ಬೆಂಕಿಯಿಂದ ದಾಟಿಸಬೇಕು. ಆಗ ಅವು ಶುದ್ಧವಾಗುವುವು. ಶುದ್ಧೀಕರಣದ ನೀರಿನಲ್ಲಿ ಅದ್ದಿ ಶುದ್ಧಮಾಡಬೇಕು. ಆಗ ಅವು ಶುದ್ಧವಾಗುವುವು. ಆದರೆ ಬೆಂಕಿ ತಾಳದ ಸಮಸ್ತವನ್ನು ನೀವು ನೀರಿನಿಂದ ತೊಳೆಯಬೇಕು.
ಅರಣ್ಯಕಾಂಡ 31 : 24 (OCVKN)
ಏಳನೆಯ ದಿವಸದಲ್ಲಿ ನೀವು ನಿಮ್ಮ ಬಟ್ಟೆಗಳನ್ನು ಒಗೆದುಕೊಂಡು ಶುದ್ಧರಾಗಬೇಕು. ತರುವಾಯ ಪಾಳೆಯದೊಳಗೆ ಬರಬೇಕು,” ಎಂದು ಹೇಳಿದನು.
ಅರಣ್ಯಕಾಂಡ 31 : 25 (OCVKN)
ಸುಲಿಗೆಯನ್ನು ಪಾಲು ಮಾಡಿಕೊಂಡದ್ದು ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
ಅರಣ್ಯಕಾಂಡ 31 : 26 (OCVKN)
“ನೀನೂ, ಯಾಜಕನಾದ ಎಲಿಯಾಜರನೂ, ಕುಲಾಧಿಪತಿಗಳೂ ಸೈನಿಕರ ಕೈಗೆ ಸಿಕ್ಕಿರುವ ಮನುಷ್ಯರನ್ನೂ ಪಶುಗಳನ್ನೂ ಲೆಕ್ಕಮಾಡಿ ಒಟ್ಟು ಎಷ್ಟೆಂದು ತಿಳಿದುಕೊಳ್ಳಿರಿ.
ಅರಣ್ಯಕಾಂಡ 31 : 27 (OCVKN)
ಆ ಸುಲಿಗೆಯನ್ನು ಯುದ್ಧಕ್ಕೆ ಹೊರಟ ಯುದ್ಧಭಟರಿಗೂ, ಸಮಸ್ತ ಸಭೆಗೂ ಎರಡು ಪಾಲನ್ನು ಮಾಡಬೇಕು.
ಅರಣ್ಯಕಾಂಡ 31 : 28 (OCVKN)
ಜನರಿಂದಲೂ, ಪಶುಗಳಿಂದಲೂ, ಕತ್ತೆಗಳಿಂದಲೂ, ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಭಟರ ಕಡೆಯಿಂದ ಯೆಹೋವ ದೇವರಿಗೆ ಕಪ್ಪವಾಗಿ ಎತ್ತಬೇಕು.
ಅರಣ್ಯಕಾಂಡ 31 : 29 (OCVKN)
ಅವರ ಅರ್ಧ ಪಾಲಿನಿಂದ ಅದನ್ನು ತೆಗೆದುಕೊಂಡು, ಯೆಹೋವ ದೇವರಿಗೆ ಅರ್ಪಣೆಯಾಗಿ, ಯಾಜಕನಾದ ಎಲಿಯಾಜರನಿಗೆ ಕೊಡಬೇಕು.
ಅರಣ್ಯಕಾಂಡ 31 : 30 (OCVKN)
ಇಸ್ರಾಯೇಲರ ಅರ್ಧ ಪಾಲಿನಿಂದ ಜನರಿಂದಲೂ, ಕತ್ತೆಗಳಿಂದಲೂ, ಮಂದೆಗಳಿಂದಲೂ, ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತೆಗೆದುಕೊಂಡು, ಅವುಗಳನ್ನು ಯೆಹೋವ ದೇವರ ಗುಡಾರವನ್ನು ನಿರ್ವಹಿಸುವ ಲೇವಿಯರಿಗೆ ಕೊಡಬೇಕು,” ಎಂದರು.
ಅರಣ್ಯಕಾಂಡ 31 : 31 (OCVKN)
ಆಗ ಮೋಶೆಯೂ, ಯಾಜಕನಾದ ಎಲಿಯಾಜರನೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿದರು.
ಅರಣ್ಯಕಾಂಡ 31 : 32 (OCVKN)
ಯುದ್ಧಭಟರು ತೆಗೆದುಕೊಂಡು ಬಂದ ಲೂಟಿಯಲ್ಲಿ ಉಳಿದ ಸುಲಿಗೆ ಎಷ್ಟೆಂದರೆ 6,75,000 ಕುರಿಗಳು.
ಅರಣ್ಯಕಾಂಡ 31 : 33 (OCVKN)
72,000 ಪಶುಗಳು;
ಅರಣ್ಯಕಾಂಡ 31 : 34 (OCVKN)
ಕತ್ತೆಗಳು 61,000;
ಅರಣ್ಯಕಾಂಡ 31 : 35 (OCVKN)
ಪುರುಷರನ್ನು ಅರಿಯದ ಸ್ತ್ರೀಯರು 32,000 ಮಂದಿ.
ಅರಣ್ಯಕಾಂಡ 31 : 36 (OCVKN)
ಯುದ್ಧಕ್ಕೆ ಹೊರಟವರ ಅರ್ಧ ಭಾಗದ ಲೆಕ್ಕವಿದು: 3,37,500 ಕುರಿಗಳಿಂದ
ಅರಣ್ಯಕಾಂಡ 31 : 37 (OCVKN)
ಯೆಹೋವ ದೇವರಿಗೆ ಕೊಡಲಾದ ಕಪ್ಪವು 675;
ಅರಣ್ಯಕಾಂಡ 31 : 38 (OCVKN)
ಹಾಗೆಯೇ ಅವರಿಗೆ ದೊರಕಿದ 36,000 ದನಕರುಗಳಲ್ಲಿ ಯೆಹೋವ ದೇವರಿಗೆ ಉಂಟಾದ ಕಪ್ಪವು 72 ದನಕರುಗಳು;
ಅರಣ್ಯಕಾಂಡ 31 : 39 (OCVKN)
30,500 ಕತ್ತೆಗಳು; ಅವುಗಳಿಂದ ಯೆಹೋವ ದೇವರಿಗೆ ಉಂಟಾದ ಕಪ್ಪವು 61;
ಅರಣ್ಯಕಾಂಡ 31 : 40 (OCVKN)
16,000 ಜನರು, ಅವರಿಂದ ಯೆಹೋವ ದೇವರಿಗೆ ಉಂಟಾದ ಕಪ್ಪವು 32 ಜನ.
ಅರಣ್ಯಕಾಂಡ 31 : 41 (OCVKN)
ಅರಣ್ಯಕಾಂಡ 31 : 42 (OCVKN)
ಮೋಶೆಯು ಯೆಹೋವ ದೇವರಿಗೆ ಪಡೆಯುವ ಕಪ್ಪವನ್ನು ಯಾಜಕನಾದ ಎಲಿಯಾಜರನಿಗೆ ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರ ಕೊಟ್ಟನು. ಮೋಶೆಯು ಯುದ್ಧಕ್ಕೆ ಹೋದ ಜನರಿಂದ ತೆಗೆದುಕೊಂಡು ಇಸ್ರಾಯೇಲರಿಗೆ ಹಂಚಿದ ಅರ್ಧ ಭಾಗದ ವಿವರ:
ಅರಣ್ಯಕಾಂಡ 31 : 43 (OCVKN)
ಕುರಿಗಳಿಂದ ಸಭೆಯ ಅರ್ಧ 3, 37,500 ಕುರಿಗಳು;
ಅರಣ್ಯಕಾಂಡ 31 : 44 (OCVKN)
36,000 ಪಶುಗಳು;
ಅರಣ್ಯಕಾಂಡ 31 : 45 (OCVKN)
30,500 ಕತ್ತೆಗಳು;
ಅರಣ್ಯಕಾಂಡ 31 : 46 (OCVKN)
16,000 ಜನರು;
ಅರಣ್ಯಕಾಂಡ 31 : 47 (OCVKN)
ಮೋಶೆಯು ಇಸ್ರಾಯೇಲರ ಅರ್ಧದಿಂದ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಐವತ್ತರಲ್ಲಿ ಒಂದು ಪಾಲನ್ನು ತೆಗೆದುಕೊಂಡು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋವ ದೇವರ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.
ಅರಣ್ಯಕಾಂಡ 31 : 48 (OCVKN)
ಆಗ ಸೈನ್ಯದ ಅಧಿಕಾರಿಗಳಾದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು,
ಅರಣ್ಯಕಾಂಡ 31 : 49 (OCVKN)
ಮೋಶೆಗೆ ಅವರು, “ನಿನ್ನ ಸೇವಕರಾದ ನಾವು ನಮ್ಮ ಕೈಯಲ್ಲಿದ್ದ ಯುದ್ಧಭಟರ ಲೆಕ್ಕವನ್ನು ತೆಗೆದುಕೊಂಡೆವು. ಅವರೊಳಗೆ ಒಬ್ಬನಾದರೂ ಕಡಿಮೆಯಾಗಲಿಲ್ಲ.
ಅರಣ್ಯಕಾಂಡ 31 : 50 (OCVKN)
ಆದ್ದರಿಂದ ಯೆಹೋವ ದೇವರ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ವಸ್ತುಗಳಾದ ಸರಪಣಿಗಳನ್ನೂ, ಕಡಗಗಳನ್ನೂ, ಉಂಗುರಗಳನ್ನೂ, ವಾಲೆಗಳನ್ನೂ, ಪದಕಗಳನ್ನೂ ಯೆಹೋವ ದೇವರಿಗೆ ಕಾಣಿಕೆಯಾಗಿ ತಂದಿದ್ದೇವೆ,” ಎಂದು ಹೇಳಿದರು.
ಅರಣ್ಯಕಾಂಡ 31 : 51 (OCVKN)
ಮೋಶೆಯೂ, ಯಾಜಕನಾದ ಎಲಿಯಾಜರನೂ ವಿಚಿತ್ರ ಕೆಲಸವಾಗಿರುವ ಬಂಗಾರವನ್ನೆಲ್ಲಾ ಅದರಿಂದ ತೆಗೆದುಕೊಂಡರು.
ಅರಣ್ಯಕಾಂಡ 31 : 52 (OCVKN)
ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ ಯೆಹೋವ ದೇವರಿಗೆ ಅರ್ಪಿಸಿದ ಕಾಣಿಕೆಯ ಒಟ್ಟು ತೂಕ 16,750 ಶೆಕೆಲ್‌ಗಳು* ಸುಮಾರು 190 ಕಿಲೋಗ್ರಾಂ .
ಅರಣ್ಯಕಾಂಡ 31 : 53 (OCVKN)
ಯುದ್ಧದ ಜನರು ಒಬ್ಬೊಬ್ಬನು ಸ್ವಂತವಾಗಿ ಸುಲಿದುಕೊಂಡಿದ್ದನು.
ಅರಣ್ಯಕಾಂಡ 31 : 54 (OCVKN)
ಆಗ ಮೋಶೆಯೂ, ಯಾಜಕನಾದ ಎಲಿಯಾಜರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತೆಗೆದುಕೊಂಡು, ಯೆಹೋವ ದೇವರ ಸಮ್ಮುಖದಲ್ಲಿ ಇಸ್ರಾಯೇಲರಿಗೆ ಜ್ಞಾಪಕಕ್ಕಾಗಿ ದೇವದರ್ಶನ ಗುಡಾರದೊಳಗೆ ತಂದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54