ಅರಣ್ಯಕಾಂಡ 33 : 1 (OCVKN)
ಈಜಿಪ್ಟ್ ದೇಶದಿಂದ ಇಸ್ರಾಯೇಲರ ಪ್ರಯಾಣದ ಹಂತಗಳು ಮೋಶೆ ಆರೋನರ ನಾಯಕತ್ವದಲ್ಲಿ ಈಜಿಪ್ಟ್ ದೇಶದೊಳಗಿಂದ ತಮ್ಮ ಸೈನ್ಯಗಳ ಪ್ರಕಾರ ಹೊರಟ ಇಸ್ರಾಯೇಲರ ಪ್ರಯಾಣದ ಹಂತಗಳ ವಿವರ ಇಲ್ಲಿವೆ.
ಅರಣ್ಯಕಾಂಡ 33 : 2 (OCVKN)
ಮೋಶೆಯು ಯೆಹೋವ ದೇವರ ಆಜ್ಞೆಯ ಪ್ರಕಾರ ಅವರ ಪ್ರಯಾಣದಲ್ಲಿ ತಂಗಿದ್ದ ಸ್ಥಳಗಳ ವಿವರಗಳನ್ನು ಬರೆದನು.
ಅರಣ್ಯಕಾಂಡ 33 : 3 (OCVKN)
3 ಅವರ ಪ್ರಯಾಣಗಳ ವಿವರಗಳು ಯಾವುವೆಂದರೆ: ಅವರು ಮೊದಲನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪಸ್ಕಹಬ್ಬದ ಮರುದಿನ ಇಸ್ರಾಯೇಲರು ಸಮಸ್ತ ಈಜಿಪ್ಟನವರ ಎದುರಿನಲ್ಲೇ ಅಟ್ಟಹಾಸದಿಂದ ರಮ್ಸೇಸಿನಿಂದ ಹೊರಟು ಹೋದರು.
ಅರಣ್ಯಕಾಂಡ 33 : 4 (OCVKN)
ಹೇಗೆಂದರೆ ಆ ಕಾಲದಲ್ಲಿ ಯೆಹೋವ ದೇವರು ಈಜಿಪ್ಟಿನವರ ಸಮಸ್ತ ಚೊಚ್ಚಲಿನವರನ್ನು ಹೊಡೆದು ಆ ಮಕ್ಕಳ ಶವಗಳನ್ನು ಹೂಣಿಟ್ಟರು, ಯೆಹೋವ ದೇವರು ಅವರ ದೇವರುಗಳಿಗೂ ಶಿಕ್ಷೆ ಮಾಡಿದರು.
ಅರಣ್ಯಕಾಂಡ 33 : 5 (OCVKN)
5 ಇಸ್ರಾಯೇಲರು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದರು.
ಅರಣ್ಯಕಾಂಡ 33 : 6 (OCVKN)
6 ಸುಕ್ಕೋತಿನಿಂದ ಹೊರಟು ಮರುಭೂಮಿಯ ಮೇರೆಯಲ್ಲಿರುವ ಏತಾಮಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 7 (OCVKN)
7 ಏತಾಮಿನಿಂದ ಹೊರಟು ಬಾಲ್ಜೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು, ಮಿಗ್ದೋಲಿಗೆ ಎದುರಾಗಿ ಇಳಿದುಕೊಂಡರು.
ಅರಣ್ಯಕಾಂಡ 33 : 8 (OCVKN)
8 ಪೀಹಹೀರೋತಿನಿಂದ ಹೊರಟು ಸಮುದ್ರದೊಳಗಿಂದ ಮರುಭೂಮಿಗೆ ದಾಟಿದರು. ಆಗ ಅವರು ಮೂರು ದಿವಸದ ಪ್ರಯಾಣಮಾಡಿ ಏತಾಮೆಂಬ ಮರುಭೂಮಿಯಲ್ಲಿ ನಡೆದು ಮಾರಾದಲ್ಲಿ ಇಳಿದರು.
ಅರಣ್ಯಕಾಂಡ 33 : 9 (OCVKN)
9 ಮಾರಾದಿಂದ ಹೊರಟು ಏಲೀಮಿಗೆ ಬಂದರು. ಎಲೀಮಿನಲ್ಲಿ ಹನ್ನೆರಡು ನೀರಿನ ಒರತೆಗಳೂ, ಎಪ್ಪತ್ತು ಖರ್ಜೂರ ಮರಗಳೂ ಇದ್ದುದರಿಂದ ಅಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 10 (OCVKN)
10 ಏಲೀಮಿನಿಂದ ಹೊರಟು ಕೆಂಪುಸಮುದ್ರದ ಬಳಿಯಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 11 (OCVKN)
11 ಕೆಂಪು ಸಮುದ್ರದಿಂದ ಹೊರಟು ಸೀನೆಂಬ ಮರುಭೂಮಿಯಲ್ಲಿ ಇಳಿದುಕೊಂಡು,
ಅರಣ್ಯಕಾಂಡ 33 : 12 (OCVKN)
12 ಸೀನೆಂಬ ಮರುಭೂಮಿಯಿಂದ ಹೊರಟು ದೊಫ್ಕದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 13 (OCVKN)
13 ದೊಫ್ಕದಿಂದ ಹೊರಟು ಆಲೂಷದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 14 (OCVKN)
14 ಆಲೂಷದಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಆದರೆ ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ.
ಅರಣ್ಯಕಾಂಡ 33 : 15 (OCVKN)
15 ರೆಫೀದೀಮಿನಿಂದ ಹೊರಟು ಸೀನಾಯಿ ಮರುಭೂಮಿಯಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 16 (OCVKN)
16 ಸೀನಾಯಿ ಮರುಭೂಮಿಯಿಂದ ಹೊರಟು ಕಿಬ್ರೋತ್ ಹತಾವದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 17 (OCVKN)
17 ಕಿಬ್ರೋತ್ ಹತಾವದಿಂದ ಹೊರಟು ಹಚೇರೋತಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 18 (OCVKN)
18 ಹಚೇರೋತಿನಿಂದ ಹೊರಟು ರಿತ್ಮದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 19 (OCVKN)
19 ರಿತ್ಮದಿಂದ ಹೊರಟು ರಿಮ್ಮೋನ್ ಪೆರೆಚಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 20 (OCVKN)
20 ರಿಮ್ಮೋನ್ ಪೆರೆಚಿನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 21 (OCVKN)
21 ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 22 (OCVKN)
22 ರಿಸ್ಸದಿಂದ ಹೊರಟು ಕೆಹೇಲಾತಾನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 23 (OCVKN)
23 ಕೆಹೇಲಾತಾನಿಂದ ಹೊರಟು ಶೆಫೆರ್ ಪರ್ವತದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 24 (OCVKN)
24 ಶೆಫೆರ್ ಪರ್ವತದಿಂದ ಹೊರಟು ಹರಾದಾದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 25 (OCVKN)
25 ಹರಾದಾದಿಂದ ಹೊರಟು ಮಖೇಲೋತಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 26 (OCVKN)
26 ಮಖೇಲೋತಿನಿಂದ ಹೊರಟು ತಹತಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 27 (OCVKN)
27 ತಹತಿನಿಂದ ಹೊರಟು ತೆರಹದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 28 (OCVKN)
28 ತೆರಹದಿಂದ ಹೊರಟು ಮಿತ್ಕಾದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 29 (OCVKN)
29 ಮಿತ್ಕಾದಿಂದ ಹೊರಟು ಹಷ್ಮೋನಾದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 30 (OCVKN)
30 ಹಷ್ಮೋನಾದಿಂದ ಹೊರಟು ಮೋಸೇರೋತಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 31 (OCVKN)
31 ಮೋಸೇರೋತಿನಿಂದ ಹೊರಟು ಬೆನೇಯಾಕಾನಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 32 (OCVKN)
32 ಬೆನೇಯಾಕಾನಿನಿಂದ ಹೊರಟು ಹೋರ್ಹಗಿದ್ಗಾದಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 33 (OCVKN)
33 ಹೋರ್ಹಗಿದ್ಗಾದಿನಿಂದ ಹೊರಟು ಯೊಟ್ಬಾತದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 34 (OCVKN)
34 ಯೊಟ್ಬಾತದಿಂದ ಹೊರಟು ಅಬ್ರೋನಾದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 35 (OCVKN)
35 ಅಬ್ರೋನಾದಿಂದ ಹೊರಟು ಎಚ್ಯೋನ್ ಗೆಬೆರಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 36 (OCVKN)
36 ಎಚ್ಯೋನ್ ಗೆಬೆರಿನಿಂದ ಹೊರಟು ಕಾದೇಶೆಂಬ ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 37 (OCVKN)
37 ಕಾದೇಶಿನಿಂದ ಹೊರಟು ಎದೋಮ್ ದೇಶದ ಅಂತ್ಯದಲ್ಲಿರುವ ಹೋರ್ ಗುಡ್ಡದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 38 (OCVKN)
ಆಗ ಯಾಜಕನಾದ ಆರೋನನು ಯೆಹೋವ ದೇವರ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ, ಅಲ್ಲಿ ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ನಾಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ನಿಧನ ಹೊಂದಿದನು.
ಅರಣ್ಯಕಾಂಡ 33 : 39 (OCVKN)
ಆರೋನನು ಹೋರ್ ಗುಡ್ಡದಲ್ಲಿ ಮರಣಹೊಂದಿದಾಗ ಅವನು ನೂರ ಇಪ್ಪತ್ತಮೂರು ವರ್ಷದವನಾಗಿದ್ದನು.
ಅರಣ್ಯಕಾಂಡ 33 : 40 (OCVKN)
40 ಆಗ ಕಾನಾನ್ ದೇಶದ ನೆಗೆವನಲ್ಲಿ ವಾಸವಾಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಇಸ್ರಾಯೇಲರು ಬರುವುದನ್ನು ಕೇಳಿದನು.
ಅರಣ್ಯಕಾಂಡ 33 : 41 (OCVKN)
41 ಹೋರ್ ಗುಡ್ಡದಿಂದ ಅವರು ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 42 (OCVKN)
42 ಚಲ್ಮೋನದಿಂದ ಹೊರಟು ಪೂನೋನಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 43 (OCVKN)
43 ಪೂನೋನಿನಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 44 (OCVKN)
44 ಓಬೋತಿನಿಂದ ಹೊರಟು ಮೋವಾಬಿನ ಮೇರೆಯಲ್ಲಿರುವ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 45 (OCVKN)
45 ಇಯೀಮಿನಿಂದ ಹೊರಟು ದೀಬೋನ್ ಗಾದಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 46 (OCVKN)
46 ದೀಬೋನ್ ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 47 (OCVKN)
47 ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ನೆಬೋವಿನ ಪೂರ್ವದಲ್ಲಿರುವ ಅಬಾರೀಮ್ ಬೆಟ್ಟಗಳಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 48 (OCVKN)
48 ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋವಿಗೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಇಳಿದುಕೊಂಡರು.
ಅರಣ್ಯಕಾಂಡ 33 : 49 (OCVKN)
ಅವರು ಯೊರ್ದನ್ ನದಿಯ ಬಳಿಯಲ್ಲಿರುವ ಬೇತ್ ಯೆಷೀಮೋತಿನಿಂದ ಮೋವಾಬಿನ ಬಯಲುಗಳಲ್ಲಿರುವ ಆಬೇಲ್ ಶಿಟ್ಟೀಮಿನ ಪರ್ಯಂತರದವರೆಗೂ ಇಳಿದುಕೊಂಡರು.
ಅರಣ್ಯಕಾಂಡ 33 : 50 (OCVKN)
ಯೆಹೋವ ದೇವರು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ,
ಅರಣ್ಯಕಾಂಡ 33 : 51 (OCVKN)
“ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನೀವು ಯೊರ್ದನನ್ನು ದಾಟಿ, ಕಾನಾನ್ ದೇಶಕ್ಕೆ ಬರುವಾಗ,
ಅರಣ್ಯಕಾಂಡ 33 : 52 (OCVKN)
ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ, ಅವರ ಚಿತ್ರಗಳನ್ನೂ ಅವರು ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ, ಅವರ ಸಮಸ್ತ ಪವಿತ್ರ ಸ್ಥಳಗಳನ್ನೂ ಹಾಳುಮಾಡಬೇಕು.
ಅರಣ್ಯಕಾಂಡ 33 : 53 (OCVKN)
ನೀವು ಆ ದೇಶವನ್ನು ತೆಗೆದುಕೊಂಡು ಅದರಲ್ಲಿ ವಾಸಮಾಡಿರಿ. ಏಕೆಂದರೆ ಅದನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ.
ಅರಣ್ಯಕಾಂಡ 33 : 54 (OCVKN)
ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟುಹಾಕಿ, ಸ್ವಾಧೀನಮಾಡಿ ಹಂಚಿಕೊಳ್ಳಬೇಕು. ಹೆಚ್ಚಾದವರಿಗೆ ಸೊತ್ತನ್ನು ಹೆಚ್ಚಿಸಿ, ಕಡಿಮೆಯಾದವರಿಗೆ ಸೊತ್ತನ್ನು ಕಡಿಮೆ ಮಾಡಬೇಕು. ಒಬ್ಬೊಬ್ಬನಿಗೆ ಚೀಟು ಎಲ್ಲಿ ಬೀಳುವುದೋ, ಅದೇ ಅವನಿಗಾಗಬೇಕು. ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.
ಅರಣ್ಯಕಾಂಡ 33 : 55 (OCVKN)
“ ‘ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿಗಳನ್ನು ಹೊರಡಿಸದಿದ್ದರೆ, ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ, ನಿಮ್ಮ ಪಕ್ಕೆಗಳಲ್ಲಿ ಕಂಟಕಗಳಾಗಿಯೂ ಇರುವರು. ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.
ಅರಣ್ಯಕಾಂಡ 33 : 56 (OCVKN)
ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.’ ”
❮
❯