ಅರಣ್ಯಕಾಂಡ 34 : 1 (OCVKN)
ಕಾನಾನ್ ದೇಶದ ಮೇರೆಗಳು ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
ಅರಣ್ಯಕಾಂಡ 34 : 2 (OCVKN)
“ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ, ಅವರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಕಾನಾನ್ ದೇಶದೊಳಗೆ ಬರುವಾಗ, ನಿಮಗೆ ಸೊತ್ತಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು.
ಅರಣ್ಯಕಾಂಡ 34 : 3 (OCVKN)
“ ‘ನಿಮ್ಮ ದಕ್ಷಿಣ ಕಡೆಯು ಚಿನ್ ಮರುಭೂಮಿಯಿಂದ ಎದೋಮಿಗೆ ಅನುಸಾರವಾಗಿರಬೇಕು. ನಿಮ್ಮ ದಕ್ಷಿಣ ಮೇರೆಯು, ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.
ಅರಣ್ಯಕಾಂಡ 34 : 4 (OCVKN)
ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ, ಚಿನ್‌ಗೆ ಹಾದು, ಕಾದೇಶ್ ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು, ಅಲ್ಲಿಂದ ಹಚರದ್ದಾರಿಗೆ ಹೊರಟು, ಅಚ್ಮೋನಿಗೆ ಹಾದು ಹೋಗಬೇಕು.
ಅರಣ್ಯಕಾಂಡ 34 : 5 (OCVKN)
ಅಚ್ಮೋನಿನಿಂದ ಈಜಿಪ್ಟಿನ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು.
ಅರಣ್ಯಕಾಂಡ 34 : 6 (OCVKN)
ಪಶ್ಚಿಮದಲ್ಲಿ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು. ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವುದು.
ಅರಣ್ಯಕಾಂಡ 34 : 7 (OCVKN)
ನಿಮ್ಮ ಉತ್ತರ ಮೇರೆ ಯಾವುದೆಂದರೆ ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದವರೆಗೂ,
ಅರಣ್ಯಕಾಂಡ 34 : 8 (OCVKN)
ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ನೀವು ಲೆಬೊ ಹಮಾತಿನ ಪ್ರದೇಶದವರೆಗೆ ಸಾಲು ಮಾಡಿರಿ. ಮೇರೆಯು ಚೆದಾದಿಗೆ ಹೊರಟು
ಅರಣ್ಯಕಾಂಡ 34 : 9 (OCVKN)
ಜಿಫ್ರೋನಿಗೆ ಹೋಗಿ, ಹಚರ್ ಏನಾನಿನಲ್ಲಿ ಮುಗಿಯಲಿ. ಇದು ನಿಮ್ಮ ಉತ್ತರ ಮೇರೆ.
ಅರಣ್ಯಕಾಂಡ 34 : 10 (OCVKN)
ಪೂರ್ವದ ಮೇರೆಗೋಸ್ಕರ ಹಚರ್ ಏನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ.
ಅರಣ್ಯಕಾಂಡ 34 : 11 (OCVKN)
ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಾಕ್ಕೆ ಇಳಿದು, ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.
ಅರಣ್ಯಕಾಂಡ 34 : 12 (OCVKN)
ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರವಾಗಿ ಇಳಿದು, ಉಪ್ಪಿನ ಸಮುದ್ರದಲ್ಲಿ ಮುಗಿಯುವುದು. “ ‘ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.’ ”
ಅರಣ್ಯಕಾಂಡ 34 : 13 (OCVKN)
ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿ, “ನೀವು ಚೀಟುಹಾಕಿ ಸ್ವಾಧೀನಪಡಿಸಿಕೊಳ್ಳಬೇಕಾದ ದೇಶವು ಒಂಬತ್ತುವರೆ ಗೋತ್ರಗಳಿಗೆ ಕೊಡಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ ದೇಶವು ಇದೇ.
ಅರಣ್ಯಕಾಂಡ 34 : 14 (OCVKN)
ಏಕೆಂದರೆ ರೂಬೇನ್ಯರ ಮಕ್ಕಳ ಗೋತ್ರವೂ, ಗಾದನ ಮಕ್ಕಳ ಗೋತ್ರವೂ, ಮನಸ್ಸೆಯ ಅರ್ಧ ಗೋತ್ರವೂ ತಮ್ಮ ಪಿತೃಗಳ ಮನೆಯ ಪ್ರಕಾರವಾಗಿ ತಮ್ಮ ಸೊತ್ತನ್ನು ಪಡೆದುಕೊಂಡಿದ್ದಾರೆ.
ಅರಣ್ಯಕಾಂಡ 34 : 15 (OCVKN)
ಎರಡೂವರೆ ಗೋತ್ರಗಳು ತಮ್ಮ ಸೊತ್ತನ್ನು ಯೊರ್ದನಿನ ಈಚೆಯಲ್ಲಿ ಯೆರಿಕೋವಿಗೆ ಸೂರ್ಯನು ಉದಯಿಸುವ ಪೂರ್ವದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ,” ಎಂದನು.
ಅರಣ್ಯಕಾಂಡ 34 : 16 (OCVKN)
ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
ಅರಣ್ಯಕಾಂಡ 34 : 17 (OCVKN)
“ದೇಶವನ್ನು ನಿಮಗೆ ಹಂಚಬೇಕಾದ ಜನರ ಹೆಸರುಗಳು ಇವೇ. ಯಾಜಕನಾದ ಎಲಿಯಾಜರನೂ, ನೂನನ ಮಗ ಯೆಹೋಶುವನೂ
ಅರಣ್ಯಕಾಂಡ 34 : 18 (OCVKN)
ದೇಶದ ಸೊತ್ತನ್ನು ಹಂಚುವುದಕ್ಕೆ ನೀವು ಒಂದೊಂದು ಗೋತ್ರದಿಂದ ಒಬ್ಬೊಬ್ಬ ಪ್ರಧಾನನನ್ನು ತೆಗೆದುಕೊಳ್ಳಿರಿ.
ಅರಣ್ಯಕಾಂಡ 34 : 19 (OCVKN)
“ಈ ಜನರ ಹೆಸರುಗಳು ಇವೇ. “ಯೆಹೂದನ ಕುಟುಂಬದಿಂದ ಯೆಫುನ್ನೆಯ ಮಗ ಕಾಲೇಬನೂ,
ಅರಣ್ಯಕಾಂಡ 34 : 20 (OCVKN)
ಸಿಮೆಯೋನನ ಮಕ್ಕಳ ಗೋತ್ರದಿಂದ ಅಮ್ಮೀಹೂದನ ಮಗ ಶಮುವೇಲನೂ,
ಅರಣ್ಯಕಾಂಡ 34 : 21 (OCVKN)
ಬೆನ್ಯಾಮೀನನ ಗೋತ್ರದಿಂದ ಕಿಸ್ಲೋನನ ಮಗ ಎಲೀದಾದ್,
ಅರಣ್ಯಕಾಂಡ 34 : 22 (OCVKN)
ದಾನನ ಮಕ್ಕಳ ಗೋತ್ರದ ಪ್ರಧಾನನು, ಯೊಗ್ಲೀಯ ಮಗ ಬುಕ್ಕೀ,
ಅರಣ್ಯಕಾಂಡ 34 : 23 (OCVKN)
ಯೋಸೇಫನ ಮಕ್ಕಳಾದ ಮನಸ್ಸೆಯ ಗೋತ್ರದ ಪ್ರಧಾನನು ಏಫೋದನ ಮಗ ಹನ್ನೀಯೇಲನೂ,
ಅರಣ್ಯಕಾಂಡ 34 : 24 (OCVKN)
ಎಫ್ರಾಯೀಮ್ ಮಕ್ಕಳ ಗೋತ್ರದ ಪ್ರಧಾನನು ಶಿಫ್ಟಾನನ ಮಗ ಕೆಮೂಯೇಲನೂ,
ಅರಣ್ಯಕಾಂಡ 34 : 25 (OCVKN)
ಜೆಬುಲೂನನ ಮಕ್ಕಳ ಗೋತ್ರದ ಪ್ರಧಾನನು ಪರ್ನಾಕನ ಮಗ ಎಲೀಚಾಫಾನ್,
ಅರಣ್ಯಕಾಂಡ 34 : 26 (OCVKN)
ಇಸ್ಸಾಕಾರನ ಮಕ್ಕಳ ಗೋತ್ರದ ಪ್ರಧಾನನು ಅಜ್ಜಾನನ ಮಗ ಪಲ್ಟೀಯೇಲನೂ,
ಅರಣ್ಯಕಾಂಡ 34 : 27 (OCVKN)
ಆಶೇರನ ಮಕ್ಕಳ ಗೋತ್ರದ ಪ್ರಧಾನನು ಶೆಲೋಮಿಯ ಮಗ ಅಹೀಹೂದನೂ,
ಅರಣ್ಯಕಾಂಡ 34 : 28 (OCVKN)
ನಫ್ತಾಲಿಯ ಮಕ್ಕಳ ಗೋತ್ರದ ಪ್ರಧಾನನು ಅಮ್ಮೀಹೂದನ ಮಗ ಪೆದಹೇಲನೂ.”
ಅರಣ್ಯಕಾಂಡ 34 : 29 (OCVKN)
ಕಾನಾನ್ ದೇಶದಲ್ಲಿ ಇಸ್ರಾಯೇಲರಿಗೆ ಸೊತ್ತನ್ನು ಹಂಚುವುದಕ್ಕೆ ಯೆಹೋವ ದೇವರು ನೇಮಿಸಿದ ಮನುಷ್ಯರು ಇವರೇ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29