ಅರಣ್ಯಕಾಂಡ 6 : 1 (OCVKN)
ನಾಜೀರ ವ್ರತ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
ಅರಣ್ಯಕಾಂಡ 6 : 2 (OCVKN)
“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ: ‘ಪುರುಷನಾದರೂ, ಸ್ತ್ರೀಯಾದರೂ ಯೆಹೋವ ದೇವರಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರ ವ್ರತ ಕೈಗೊಂಡರೆ,
ಅರಣ್ಯಕಾಂಡ 6 : 3 (OCVKN)
ದ್ರಾಕ್ಷಾರಸಕ್ಕೂ ಮದ್ಯಪಾನಕ್ಕೂ ದೂರವಾಗಿದ್ದು, ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ, ದ್ರಾಕ್ಷಿಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ ಹಸಿಯದಾಗಲಿ, ಒಣಗಿದ್ದಾಗಲಿ ದ್ರಾಕ್ಷಿಹಣ್ಣನ್ನು ತಿನ್ನದೆ ಇರಬೇಕು.
ಅರಣ್ಯಕಾಂಡ 6 : 4 (OCVKN)
ತಮ್ಮ ನಾಜೀರತನದ ದಿವಸಗಳಲ್ಲೆಲ್ಲಾ ದ್ರಾಕ್ಷಿ ಬೀಜ ಮೊದಲುಗೊಂಡು ಸಿಪ್ಪೆಯವರೆಗೂ, ದ್ರಾಕ್ಷಿಬಳ್ಳಿಯಲ್ಲಿ ಬೆಳೆದದ್ದು ಯಾವುದನ್ನಾದರೂ ತಿನ್ನಬಾರದು.
ಅರಣ್ಯಕಾಂಡ 6 : 5 (OCVKN)
ಅರಣ್ಯಕಾಂಡ 6 : 6 (OCVKN)
“ ‘ಅವರ ನಾಜೀರ ವ್ರತದ ದಿನಗಳಲ್ಲೆಲ್ಲಾ ಕ್ಷೌರಮಾಡಿಸಿಕೊಳ್ಳಬಾರದು. ಅವರು ಯೆಹೋವ ದೇವರಿಗೆ ತಮ್ಮನ್ನು ಪ್ರತ್ಯೇಕಿಸಿಕೊಂಡ ದಿವಸಗಳು ಪೂರ್ತಿಯಾಗುವವರೆಗೆ ಅವರು ಪರಿಶುದ್ಧರಾಗಿರುವರು, ಅವರು ತಮ್ಮ ತಲೆಗೂದಲನ್ನು ಕತ್ತರಿಸದೇ ಬೆಳೆಯಬಿಡಬೇಕು. “ ‘ಅವರು ಯೆಹೋವ ದೇವರಿಗೆ ತಮ್ಮನ್ನು ಪ್ರತ್ಯೇಕಿಸಿಕೊಂಡ ದಿವಸಗಳಲ್ಲೆಲ್ಲಾ ಸತ್ತವರ ಬಳಿಗೆ ಬರಬಾರದು.
ಅರಣ್ಯಕಾಂಡ 6 : 7 (OCVKN)
ಅವರು ತಂದೆತಾಯಿ, ಸಹೋದರ ಸಹೋದರಿ ಸತ್ತರೂ ಅವರು ಅವರಿಗೋಸ್ಕರ ಅಪವಿತ್ರರಾಗಬಾರದು. ಏಕೆಂದರೆ ದೇವರಿಗೆ ಅವರ ಸಮರ್ಪಣೆಯ ಸಂಕೇತವು ಅವರ ತಲೆಯ ಮೇಲೆ ಇದೆ.
ಅರಣ್ಯಕಾಂಡ 6 : 8 (OCVKN)
ಅವರ ಸಮರ್ಪಣೆಯ ದಿವಸಗಳಲ್ಲೆಲ್ಲಾ ಅವರು ಯೆಹೋವ ದೇವರಿಗೆ ಮೀಸಲಾಗಿರಬೇಕು.
ಅರಣ್ಯಕಾಂಡ 6 : 9 (OCVKN)
“ ‘ಅವರ ಬಳಿಯಲ್ಲಿ ಯಾರಾದರೂ ಆಕಸ್ಮಿಕವಾಗಿ ಸತ್ತದ್ದರಿಂದ ಅವರ ತಲೆಯ ಕೂದಲು ಅಶುದ್ಧವಾದರೆ, ಅವರು ಶುದ್ಧರಾಗುವ ದಿವಸದಲ್ಲಿ ಅಂದರೆ ಏಳನೆಯ ದಿವಸದಲ್ಲಿ ತಮ್ಮ ತಲೆಯನ್ನು ಬೋಳಿಸಬೇಕು.
ಅರಣ್ಯಕಾಂಡ 6 : 10 (OCVKN)
ಎಂಟನೆಯ ದಿವಸದಲ್ಲಿ ಅವರು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಿಲಿಗೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು.
ಅರಣ್ಯಕಾಂಡ 6 : 11 (OCVKN)
ಯಾಜಕನು ಒಂದನ್ನು ದೋಷಪರಿಹಾರಕ ಬಲಿಯಾಗಿಯೂ, ಇನ್ನೊಂದನ್ನು ದಹನಬಲಿಯಾಗಿ ಅರ್ಪಿಸಿ, ಅವರು ಶವದ ಹತ್ತಿರವಿದ್ದು ಪಾಪಮಾಡಿದ್ದರಿಂದ, ಅವರಿಗೋಸ್ಕರ ಆ ದಿವಸದಲ್ಲಿ ಅವರ ತಲೆಯನ್ನು ಪ್ರತಿಷ್ಠಿಸಬೇಕು.
ಅರಣ್ಯಕಾಂಡ 6 : 12 (OCVKN)
ಎಷ್ಟು ದಿನಗಳವರೆಗೆ ತಮ್ಮನ್ನು ಪ್ರತಿಷ್ಠಿಸಿಕೊಂಡಿದ್ದಾರೋ, ಅಷ್ಟು ದಿನಗಳವರೆಗೆ ಹೊಸದಾಗಿ ತಮ್ಮನ್ನು ಯೆಹೋವ ದೇವರಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತ ಬಲಿಯಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಅವರ ಸಮರ್ಪಣೆಯ ಅವಧಿಯಲ್ಲಿ ಅವರು ಅಶುದ್ಧವಾದುದರಿಂದ ಮೊದಲಿನ ದಿವಸಗಳು ವ್ಯರ್ಥವಾದುವೆಂದು ಪರಿಗಣಿಸಬೇಕು.
ಅರಣ್ಯಕಾಂಡ 6 : 13 (OCVKN)
“ ‘ಇದು ನಾಜೀರ ವ್ರತವು. ಅವರ ಸಮರ್ಪಣೆಯ ದಿವಸಗಳು ಪೂರ್ಣವಾದ ಮೇಲೆ ಅವರನ್ನು ದೇವದರ್ಶನ ಗುಡಾರದ ಬಾಗಿಲಿನ ಬಳಿಗೆ ತರಬೇಕು.
ಅರಣ್ಯಕಾಂಡ 6 : 14 (OCVKN)
ಅವರು ಯೆಹೋವ ದೇವರಿಗೆ ತಮ್ಮ ಅರ್ಪಣೆಗಳನ್ನು ಅರ್ಪಿಸಬೇಕು. ಅದೇನೆಂದರೆ, ದಹನಬಲಿಗಾಗಿ ಒಂದು ವರ್ಷದ ಕಳಂಕವಿಲ್ಲದ ಒಂದು ಟಗರಿನ ಮರಿಯನ್ನೂ, ಪಾಪ ಪರಿಹಾರದ ಬಲಿಗಾಗಿ ಒಂದು ವರ್ಷದ ಕಳಂಕವಿಲ್ಲದ ಒಂದು ಹೆಣ್ಣು ಕುರಿಮರಿಯನ್ನೂ, ಸಮಾಧಾನದ ಬಲಿಗಾಗಿ ಒಂದು ಕಳಂಕವಿಲ್ಲದ ಟಗರನ್ನೂ ತರಬೇಕು.
ಅರಣ್ಯಕಾಂಡ 6 : 15 (OCVKN)
ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿಯಿಲ್ಲದ ರೊಟ್ಟಿಗಳ ಒಂದು ಬುಟ್ಟಿಯನ್ನೂ, ಎಣ್ಣೆ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ, ಧಾನ್ಯದ್ರವ್ಯ ಪಾನದ್ರವ್ಯ ಇವುಗಳನ್ನೆಲ್ಲಾ ಅರ್ಪಣೆಯಾಗಿ ತರಬೇಕು.
ಅರಣ್ಯಕಾಂಡ 6 : 16 (OCVKN)
“ ‘ಇವುಗಳನ್ನು ಯಾಜಕನು ಯೆಹೋವ ದೇವರ ಎದುರಿನಲ್ಲಿ ತಂದು, ಅವರ ದೋಷಪರಿಹಾರಕ ಬಲಿಯನ್ನೂ ಅವರ ದಹನಬಲಿಯನ್ನೂ ಅರ್ಪಿಸಬೇಕು.
ಅರಣ್ಯಕಾಂಡ 6 : 17 (OCVKN)
ಆ ಟಗರನ್ನು ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯ ಸಂಗಡ ಯೆಹೋವ ದೇವರಿಗೆ ಸಮಾಧಾನದ ಬಲಿಯಾಗಿ ಅರ್ಪಿಸಬೇಕು. ಇದಲ್ಲದೆ ಯಾಜಕನು ಅವರ ಧಾನ್ಯವನ್ನೂ, ಪಾನದ್ರವ್ಯವನ್ನೂ ಅರ್ಪಿಸಬೇಕು.
ಅರಣ್ಯಕಾಂಡ 6 : 18 (OCVKN)
ಅರಣ್ಯಕಾಂಡ 6 : 19 (OCVKN)
“ ‘ಇದಲ್ಲದೆ ನಾಜೀರರು ತಮ್ಮ ಸಮರ್ಪಣೆಯನ್ನು ಸಂಕೇತಿಸುವ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಪ್ರತ್ಯೇಕಿಸಿದ ತಮ್ಮ ತಲೆಗೂದಲನ್ನು ತೆಗೆದುಕೊಂಡು, ಸಮಾಧಾನದ ಬಲಿಗಳ ಬಲಿಯ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು. “ ‘ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ, ಆ ಪುಟ್ಟಿಯೊಳಗಿಂದ ಹುಳಿಯಿಲ್ಲದ ಒಂದು ರೊಟ್ಟಿಯನ್ನೂ, ಹುಳಿಯಿಲ್ಲದ ಒಂದು ದೋಸೆಯನ್ನೂ, ಆ ನಾಜೀರರ ಪ್ರತ್ಯೇಕಿಸಿದ ಕೂದಲನ್ನು ಕ್ಷೌರಮಾಡಿಸಿದ ತರುವಾಯ ಅವರ ಕೈಗಳಲ್ಲಿ ಕೊಡಬೇಕು.
ಅರಣ್ಯಕಾಂಡ 6 : 20 (OCVKN)
ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸುವ ಅರ್ಪಣೆಗಾಗಿ ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಸಂಗಡ ಅದು ಯಾಜಕನಿಗೆ ಪರಿಶುದ್ಧವಾಗಿದೆ. ಆಮೇಲೆ ನಾಜೀರರು ದ್ರಾಕ್ಷಾರಸವನ್ನು ಕುಡಿಯಬಹುದು.
ಅರಣ್ಯಕಾಂಡ 6 : 21 (OCVKN)
ಅರಣ್ಯಕಾಂಡ 6 : 22 (OCVKN)
“ ‘ಪ್ರಮಾಣ ಮಾಡಿಕೊಂಡ ನಾಜೀರರ ನಿಯಮವು ಇದೇ. ಸಂಬಂಧಪಟ್ಟದ್ದರೊಂದಿಗೆ ತಮ್ಮ ಕೈಲಾದ ಮಟ್ಟಿಗೆ ಅವರು ತಮ್ಮ ಪ್ರತ್ಯೇಕಿಸುವಿಕೆಗಾಗಿ ಯೆಹೋವ ದೇವರಿಗೆ ಕಾಣಿಕೆ ಅರ್ಪಿಸತಕ್ಕದ್ದು. ನಾಜೀರ ವ್ರತದ ಕ್ರಮದ ಪ್ರಕಾರ, ನೀವು ಮಾಡಿದ ಪ್ರಮಾಣಕ್ಕನುಸಾರವಾಗಿ ತಮ್ಮ ವ್ರತದ ಕ್ರಮಗಳನ್ನು ನೆರವೇರಿಸಬೇಕು.’ ” ಯಾಜಕರ ಆಶೀರ್ವಚನ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
ಅರಣ್ಯಕಾಂಡ 6 : 23 (OCVKN)
“ನೀನು ಆರೋನನಿಗೆ ಮತ್ತು ಅವನ ಪುತ್ರರಿಗೆ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು:
ಅರಣ್ಯಕಾಂಡ 6 : 24 (OCVKN)
“ ‘ “ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಲಿ, ನಿಮ್ಮನ್ನು ಕಾಪಾಡಲಿ.
ಅರಣ್ಯಕಾಂಡ 6 : 25 (OCVKN)
ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಪ್ರಕಾಶಿಸುವಂತೆ ಮಾಡಿ, ನಿಮಗೆ ಕೃಪೆ ತೋರಿಸಲಿ.
ಅರಣ್ಯಕಾಂಡ 6 : 26 (OCVKN)
ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಎತ್ತಿ, ನಿಮಗೆ ಸಮಾಧಾನ ಅನುಗ್ರಹಿಸಲಿ.” ’
ಅರಣ್ಯಕಾಂಡ 6 : 27 (OCVKN)
“ಹೀಗೆ ಅವರು ನನ್ನ ಹೆಸರನ್ನು ಇಸ್ರಾಯೇಲರ ಮೇಲೆ ಉಚ್ಛರಿಸುವರು. ನಾನೇ ಅವರನ್ನು ಆಶೀರ್ವದಿಸುವೆನು.”

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27