ಅರಣ್ಯಕಾಂಡ 8 : 1 (OCVKN)
ದೇವಾಲಯದ ದೀಪಗಳು ಯೆಹೋವ ದೇವರು ಮೋಶೆಗೆ:
ಅರಣ್ಯಕಾಂಡ 8 : 2 (OCVKN)
“ಆರೋನನ ಸಂಗಡ ಮಾತನಾಡಿ ಅವನಿಗೆ ಹೀಗೆ ಹೇಳಬೇಕು, ‘ನೀನು ದೀಪಗಳನ್ನು ಹಚ್ಚುವಾಗ ಆ ಏಳು ದೀಪಗಳೂ ದೀಪಸ್ತಂಭದ ಎದುರಿಗಿರುವ ಸ್ಥಳಕ್ಕೆ ಪ್ರಕಾಶಕೊಡುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.”
ಅರಣ್ಯಕಾಂಡ 8 : 3 (OCVKN)
ಆರೋನನು ಹಾಗೆಯೇ ಮಾಡಿ, ದೀಪಸ್ತಂಭದ ಎದುರಿನ ಪ್ರದೇಶಕ್ಕೆ ಬೆಳಕುಕೊಡುವಂತೆ ಅದರ ದೀಪಗಳನ್ನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಹಚ್ಚಿದನು.
ಅರಣ್ಯಕಾಂಡ 8 : 4 (OCVKN)
ದೀಪಸ್ತಂಭವೂ ಅದರ ಬುಡಭಾಗವೂ, ಪುಷ್ಪಾಲಂಕಾರಗಳೂ ಬಂಗಾರದ ನಕಾಸಿ ಕೆಲಸದಿಂದ ಹೊಡೆದು ಮಾಡಲಾಗಿತ್ತು. ಯೆಹೋವ ದೇವರು ಮೋಶೆಗೆ ತೋರಿಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿದನು.
ಅರಣ್ಯಕಾಂಡ 8 : 5 (OCVKN)
ಲೇವಿಯರ ಶುದ್ಧೀಕರಣ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
ಅರಣ್ಯಕಾಂಡ 8 : 6 (OCVKN)
“ಲೇವಿಯರನ್ನು ಇಸ್ರಾಯೇಲರೊಳಗಿಂದ ತೆಗೆದುಕೊಂಡು ಅವರನ್ನು ಪ್ರತ್ಯೇಕಿಸಿ ಶುದ್ಧಮಾಡು.
ಅರಣ್ಯಕಾಂಡ 8 : 7 (OCVKN)
ಅವರನ್ನು ಶುದ್ಧಮಾಡುವುದಕ್ಕೆ ಅವರಿಗೆ ಮಾಡಬೇಕಾದದ್ದೇನೆಂದರೆ ಶುದ್ಧೀಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಅವರು ಸರ್ವಾಂಗ ಕ್ಷೌರ ಮಾಡಿಸಿಕೊಳ್ಳಲಿ. ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧ ಮಾಡಿಕೊಳ್ಳಬೇಕು.
ಅರಣ್ಯಕಾಂಡ 8 : 8 (OCVKN)
ಅವರು ದಹನಬಲಿಗಾಗಿ ಒಂದು ಎಳೆಯ ಹೋರಿಯನ್ನು, ಅದರೊಂದಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ದೋಷಪರಿಹಾರಕ ಬಲಿಗಾಗಿ ಮತ್ತೊಂದು ಹೋರಿಯನ್ನೂ ನೀನು ತೆಗೆದುಕೋ.
ಅರಣ್ಯಕಾಂಡ 8 : 9 (OCVKN)
ಆಗ ನೀನು ಲೇವಿಯರನ್ನು ದೇವದರ್ಶನದ ಗುಡಾರದ ಮುಂದೆ ಕರೆತಂದು, ಇಸ್ರಾಯೇಲರ ಸಮೂಹವನ್ನೆಲ್ಲಾ ಒಟ್ಟುಗೂಡಿಸಬೇಕು.
ಅರಣ್ಯಕಾಂಡ 8 : 10 (OCVKN)
ನೀನು ಲೇವಿಯರನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಕರೆತಂದಾಗ, ಇಸ್ರಾಯೇಲರು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.
ಅರಣ್ಯಕಾಂಡ 8 : 11 (OCVKN)
ಲೇವಿಯರು ಇಸ್ರಾಯೇಲರ ಪರವಾಗಿ ಯೆಹೋವ ದೇವರ ಸೇವೆಯನ್ನು ಮಾಡುವುದಕ್ಕೆ ಸಿದ್ಧರಾಗುವಂತೆ ಆರೋನನು ಅವರನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಬೇಕು.
ಅರಣ್ಯಕಾಂಡ 8 : 12 (OCVKN)
“ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯೆಹೋವ ದೇವರಿಗೆ ಒಂದು ಹೋರಿಯನ್ನು ದೋಷಪರಿಹಾರಕ ಬಲಿಗಾಗಿಯೂ ಮತ್ತೊಂದು ಹೋರಿಯನ್ನು ದಹನಬಲಿಗಾಗಿಯೂ ಸಮರ್ಪಿಸಬೇಕು.
ಅರಣ್ಯಕಾಂಡ 8 : 13 (OCVKN)
ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಪುತ್ರರ ಮುಂದೆಯೂ ನಿಲ್ಲಿಸಿ, ಅವರನ್ನು ಯೆಹೋವ ದೇವರಿಗೆ ನೈವೇದ್ಯದಂತೆ ಸಮರ್ಪಿಸಬೇಕು.
ಅರಣ್ಯಕಾಂಡ 8 : 14 (OCVKN)
ಹೀಗೆ ನೀನು ಲೇವಿಯರನ್ನು ಇಸ್ರಾಯೇಲರೊಳಗಿಂದ ಪ್ರತ್ಯೇಕಿಸಬೇಕು, ಆಗ ಲೇವಿಯರು ನನ್ನವರಾಗುವರು.
ಅರಣ್ಯಕಾಂಡ 8 : 15 (OCVKN)
“ಅದರ ತರುವಾಯ ಲೇವಿಯರು ಸೇವೆ ಮಾಡವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸುವರು. ಆಗ ನೀನು ಅವರನ್ನು ಶುದ್ಧೀಮಾಡಿ, ನೈವೇದ್ಯದಂತೆ ಸಮರ್ಪಿಸಬೇಕು.
ಅರಣ್ಯಕಾಂಡ 8 : 16 (OCVKN)
ಏಕೆಂದರೆ ಅವರು ಇಸ್ರಾಯೇಲರಲ್ಲಿ ನನಗೆ ಸಂಪೂರ್ಣವಾಗಿ ಸಮರ್ಪಿತರಾದವರು. ಚೊಚ್ಚಲು ಮಕ್ಕಳಿಗೆ ಬದಲಾಗಿ, ಅಂದರೆ ಇಸ್ರಾಯೇಲರ ಜೇಷ್ಠಪುತ್ರರಿಗೆ ಬದಲಾಗಿ ನಾನು ಅವರನ್ನೇ ನನಗೋಸ್ಕರ ತೆಗೆದುಕೊಂಡಿದ್ದೇನೆ.
ಅರಣ್ಯಕಾಂಡ 8 : 17 (OCVKN)
ಏಕೆಂದರೆ ಇಸ್ರಾಯೇಲರಲ್ಲಿ ಮನುಷ್ಯರಾದರೂ ಪಶುಗಳಾದರೂ ಜೇಷ್ಠರಾದದ್ದೆಲ್ಲಾ ನನ್ನದೇ. ನಾನು ಈಜಿಪ್ಟ್ ದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹರಿಸಿದಾಗ ಇಸ್ರಾಯೇಲರಲ್ಲಿ ಚೊಚ್ಚಲಾದದ್ದನ್ನು ನನ್ನ ಸ್ವಂತಕ್ಕಾಗಿ ಪ್ರತ್ಯೇಕಿಸಿಕೊಂಡೆನು.
ಅರಣ್ಯಕಾಂಡ 8 : 18 (OCVKN)
ಇಸ್ರಾಯೇಲರಲ್ಲಿರುವ ಎಲ್ಲಾ ಜೇಷ್ಠಪುತ್ರರಿಗೆ ಬದಲಾಗಿ ಲೇವಿಯರನ್ನು ನಾನು ತೆಗೆದುಕೊಂಡೆನು.
ಅರಣ್ಯಕಾಂಡ 8 : 19 (OCVKN)
ಅವರು ದೇವದರ್ಶನದ ಗುಡಾರದಲ್ಲಿ ಇಸ್ರಾಯೇಲರ ಸೇವೆಯನ್ನು ಮಾಡುವುದಕ್ಕೂ ಇಸ್ರಾಯೇಲರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲರು ಸಮೀಪಿಸುವಾಗ ಇಸ್ರಾಯೇಲರೊಳಗೆ ವ್ಯಾಧಿಯು ಇರದಂತೆ ನಾನು ಲೇವಿಯರನ್ನು ಇಸ್ರಾಯೇಲರೊಳಗಿಂದ ಆರೋನನಿಗೂ, ಅವನ ಪುತ್ರರಿಗೂ ದಾನವಾಗಿ ಕೊಟ್ಟಿದ್ದೇನೆ.”
ಅರಣ್ಯಕಾಂಡ 8 : 20 (OCVKN)
ಆಗ ಯೆಹೋವ ದೇವರು ಮೋಶೆಗೆ ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆಯೂ ಆರೋನನೂ ಮತ್ತು ಇಸ್ರಾಯೇಲರ ಸಮೂಹದವರೆಲ್ಲರೂ ಮಾಡಿದರು.
ಅರಣ್ಯಕಾಂಡ 8 : 21 (OCVKN)
ಲೇವಿಯರು ತಮ್ಮನ್ನು ಶುದ್ಧಿಮಾಡಿಕೊಂಡು, ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಯೆಹೋವ ದೇವರ ಮುಂದೆ ನೈವೇದ್ಯದಂತೆ ಅರ್ಪಿಸಿದನು. ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.
ಅರಣ್ಯಕಾಂಡ 8 : 22 (OCVKN)
ತರುವಾಯ ಲೇವಿಯರು ದೇವದರ್ಶನದ ಗುಡಾರದಲ್ಲಿ ಆರೋನನ ಮುಂದೆಯೂ, ಅವನ ಪುತ್ರರ ಮುಂದೆಯೂ ಅವರ ಸೇವೆ ಮಾಡುವುದಕ್ಕೆ ಒಳಗೆ ಪ್ರವೇಶಿಸಿದರು. ಯೆಹೋವ ದೇವರು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದರೋ, ಹಾಗೆಯೇ ಮಾಡಿದನು.
ಅರಣ್ಯಕಾಂಡ 8 : 23 (OCVKN)
ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
ಅರಣ್ಯಕಾಂಡ 8 : 24 (OCVKN)
“ಲೇವಿಯರಿಗೆ ಸಂಬಂಧಪಟ್ಟದ್ದು ಇದಾಗಿದೆ: ಇಪ್ಪತ್ತೈದು ವರ್ಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ದೇವದರ್ಶನದ ಗುಡಾರದ ಸೇವೆಗಾಗಿ ಒಳಗೆ ಸೇರಬೇಕು.
ಅರಣ್ಯಕಾಂಡ 8 : 25 (OCVKN)
ಆದರೆ ಐವತ್ತು ವರ್ಷದವರಾದ ನಂತರ ಸೇವೆಯನ್ನು ಬಿಟ್ಟು ನಿವೃತ್ತರಾಗಬೇಕು ಮತ್ತು ತದನಂತರ ಕೆಲಸಮಾಡಬಾರದು.
ಅರಣ್ಯಕಾಂಡ 8 : 26 (OCVKN)
ಆದರೆ ಅವರು ದೇವದರ್ಶನದ ಗುಡಾರದಲ್ಲಿ ಅಪ್ಪಣೆಯನ್ನು ಕೈಗೊಂಡು ತಮ್ಮ ಸಹೋದರರೊಂದಿಗೆ ಕೆಲಸಮಾಡಲಿ, ಆದರೆ ಅವರು ಸೇವೆಯನ್ನು ತಾವಾಗಿ ಮಾಡಬಾರದು. ಈ ಪ್ರಕಾರ ನೀನು ಲೇವಿಯರಿಗೆ ಕರ್ತವ್ಯಗಳನ್ನು ಆಜ್ಞಾಪಿಸಬೇಕು,” ಎಂಬುದು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26