ಫಿಲೆಮೋನನಿಗೆ 1 : 1 (OCVKN)
ಸುವಾರ್ತೆಯನ್ನು ಸಾರಿದ್ದರಿಂದ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ, ನಮಗೆ ಪ್ರಿಯನೂ ಜೊತೆಗೆಲಸದವನೂ ಆಗಿರುವ ಫಿಲೆಮೋನನಿಗೂ
ಫಿಲೆಮೋನನಿಗೆ 1 : 2 (OCVKN)
ಸಹೋದರಿ ಅಪ್ಫಿಯಳಿಗೂ ನಮ್ಮ ಸಹ ಸೈನಿಕನಾದ ಅರ್ಖಿಪ್ಪನಿಗೂ ನಿಮ್ಮ ಮನೆಯಲ್ಲಿ ಸೇರುವ ಸಭೆಯವರಿಗೂ ಬರೆಯುವುದೇನೆಂದರೆ:
ಫಿಲೆಮೋನನಿಗೆ 1 : 3 (OCVKN)
ನಮ್ಮ ತಂದೆಯಾದ ದೇವರಿಂದಲೂ ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಇರಲಿ.
ಫಿಲೆಮೋನನಿಗೆ 1 : 4 (OCVKN)
ಕೃತಜ್ಞತಾ ಪ್ರಾರ್ಥನೆ ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ಜ್ಞಾಪಕಮಾಡಿಕೊಂಡು ನನ್ನ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
ಫಿಲೆಮೋನನಿಗೆ 1 : 5 (OCVKN)
ಏಕೆಂದರೆ, ನಮ್ಮ ಕರ್ತ ಆಗಿರುವ ಯೇಸುವಿನಲ್ಲಿ ನಿನಗಿರುವ ವಿಶ್ವಾಸವನ್ನೂ ಪರಿಶುದ್ಧರೆಲ್ಲರಿಗಾಗಿ ನಿನಗಿರುವ ಪ್ರೀತಿಯನ್ನೂ ಕುರಿತು ನಾನು ಕೇಳಿದ್ದೇನೆ.
ಫಿಲೆಮೋನನಿಗೆ 1 : 6 (OCVKN)
ನಿನ್ನ ವಿಶ್ವಾಸದಲ್ಲಿ ಅನ್ಯೋನ್ಯತೆಯು ನಿನ್ನ ಎಲ್ಲಾ ಒಳ್ಳೆಯದರ ಆಳವಾದ ತಿಳುವಳಿಕೆಯನ್ನು ಕ್ರಿಸ್ತ ಯೇಸುವಿಗಾಗಿ ಪರಿಣಾಮಗೊಳಿಸಿ ಹಂಚುವಂತೆ ನಾನು ಪ್ರಾರ್ಥಿಸುತ್ತೇನೆ.
ಫಿಲೆಮೋನನಿಗೆ 1 : 7 (OCVKN)
ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಉತ್ತೇಜನವಾದ್ದರಿಂದ, ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಆನಂದವೂ ಆದರಣೆಯೂ ಉಂಟಾದವು.
ಫಿಲೆಮೋನನಿಗೆ 1 : 8 (OCVKN)
ಓನೇಸಿಮನಿಗಾಗಿ ಪೌಲನ ಬೇಡಿಕೆ ಆದಕಾರಣ, ನಾನು ಈಗ ನಿನಗೆ ಏನು ಮಾಡಬೇಕೆಂದು ಆಜ್ಞಾಪಿಸುವುದಕ್ಕೆ ಕ್ರಿಸ್ತ ಯೇಸುವಿನಲ್ಲಿ ನನಗೆ ಬಹು ಧೈರ್ಯವಿದ್ದರೂ
ಫಿಲೆಮೋನನಿಗೆ 1 : 9 (OCVKN)
ಹಾಗೆ ಆಜ್ಞಾಪಿಸದೆ, ಈಗ ಕ್ರಿಸ್ತ ಯೇಸುವಿನ ಸೆರೆಯಾಳೂ ಮುದುಕನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.
ಫಿಲೆಮೋನನಿಗೆ 1 : 10 (OCVKN)
ನಾನು ಬಂಧಿಯಾಗಿರುವಾಗ ನನ್ನ ಮಗನಂತೆ ಬಂದ ಓನೇಸಿಮನ* ಓನೇಸಿಮ ಅಂದರೆ, ಪ್ರಯೋಜಕನು ವಿಷಯದಲ್ಲಿ ನಿನ್ನನ್ನು ಕೇಳಿಕೊಳ್ಳುತ್ತೇನೆ. ಏಕೆಂದರೆ ನಾನು ಸೆರೆಯಲ್ಲಿದ್ದಾಗ ಅವನು ನನಗೆ ಆತ್ಮಿಕ ಮಗನಾದನು.
ಫಿಲೆಮೋನನಿಗೆ 1 : 11 (OCVKN)
ಅವನು ಮೊದಲು ನಿನಗೆ ಅಪ್ರಯೋಜಕನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ.
ಫಿಲೆಮೋನನಿಗೆ 1 : 12 (OCVKN)
ನನಗೆ ಪ್ರಾಣವಾಗಿರುವ ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ನಾನು ಕಳುಹಿಸಿ ಕೊಡುತ್ತಿದ್ದೇನೆ.
ಫಿಲೆಮೋನನಿಗೆ 1 : 13 (OCVKN)
ಸುವಾರ್ತೆಯ ನಿಮಿತ್ತ ಸೆರೆಯಲ್ಲಿರುವ ನನಗೆ ಉಪಚಾರ ಮಾಡುವಂತೆ ನಿನಗೆ ಬದಲಾಗಿ ಓನೇಸಿಮನನನ್ನು ನನ್ನ ಬಳಿಯಲ್ಲೇ ಉಳಿಸಿಕೊಳ್ಳಲು ಅಪೇಕ್ಷಿಸಿದ್ದೆನು.
ಫಿಲೆಮೋನನಿಗೆ 1 : 14 (OCVKN)
ಆದರೆ ನಿನ್ನ ಉಪಚಾರವು ಬಲಾತ್ಕಾರದಿಂದಾಗದೆ, ಮನಃಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ, ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವುದಕ್ಕೂ ನನಗೆ ಇಷ್ಟವಿಲ್ಲ.
ಫಿಲೆಮೋನನಿಗೆ 1 : 15 (OCVKN)
ಓನೇಸಿಮನು ಸ್ವಲ್ಪಕಾಲ ನಿನ್ನಿಂದ ಅಗಲಿದ್ದು ಬಹುಶಃ ನೀನು ಅವನನ್ನು ನಿರಂತರವಾಗಿ ಸೇರಿಸಿಕೊಳ್ಳುವುದಕ್ಕಾಗಿಯೇ!
ಫಿಲೆಮೋನನಿಗೆ 1 : 16 (OCVKN)
ಇನ್ನು ಮೇಲೆ ಅವನು ದಾಸನಾಗದೆ, ದಾಸನಿಗಿಂತ ಮೇಲಾಗಿ ಪ್ರಿಯ ಸಹೋದರನಂತಾಗಬೇಕು. ಅವನು ವಿಶೇಷವಾಗಿ ನನಗೆ ಬಹು ಪ್ರಿಯನಾಗಿದ್ದಾನೆ. ಆದರೂ ಓನೇಸಿಮನು ನಿನಗೆ ಮಾನವ ರೀತಿಯಲ್ಲಿಯೂ ಕರ್ತ ಯೇಸುವಿನಲ್ಲಿಯೂ ಒಬ್ಬ ಸಹೋದರನಾಗಿ ಇನ್ನು ಎಷ್ಟೋ ಪ್ರಿಯನಾಗಿರಬೇಕಲ್ಲವೇ.
ಫಿಲೆಮೋನನಿಗೆ 1 : 17 (OCVKN)
ಆದಕಾರಣ ನಾನು ನಿನಗೆ ಅನ್ಯೋನ್ಯತೆವುಳ್ಳವನೆಂದು ನೀನು ಎಣಿಸುವುದಾದರೆ ನನ್ನನ್ನು ಸ್ವೀಕರಿಸಿಕೊಳ್ಳುವ ಪ್ರಕಾರವೇ ಅವನನ್ನು ಸ್ವೀಕರಿಸು.
ಫಿಲೆಮೋನನಿಗೆ 1 : 18 (OCVKN)
ಅವನು ನಿನಗೆ ಏನಾದರೂ ತಪ್ಪು ಮಾಡಿದ್ದರೆ ಅಥವಾ ಅವನು ಸಾಲವೇನಾದರೂ ತೀರಿಸಬೇಕಾಗಿದ್ದರೆ, ಅದನ್ನು ನನ್ನ ಲೆಕ್ಕಕ್ಕೆ ಹಾಕು.
ಫಿಲೆಮೋನನಿಗೆ 1 : 19 (OCVKN)
ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ನನ್ನ ಸ್ವಂತ ಕೈಯಲ್ಲಿ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನು ನಿನ್ನ ಪ್ರಾಣವನ್ನೇ ನನಗೆ ಸಾಲಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕಾಗಿಲ್ಲ.
ಫಿಲೆಮೋನನಿಗೆ 1 : 20 (OCVKN)
ಸಹೋದರನೇ ಹೌದು, ಕರ್ತ ಯೇಸುವಿನಲ್ಲಿ ನಿನ್ನಿಂದ ನನಗೆ ಈ ಸಹಾಯಮಾಡು; ಅದು ಕ್ರಿಸ್ತ ಯೇಸುವಿನಲ್ಲಿ ನನ್ನ ಹೃದಯವನ್ನು ಉತ್ತೇಜನಗೊಳಿಸಲಿ.
ಫಿಲೆಮೋನನಿಗೆ 1 : 21 (OCVKN)
ನಿನ್ನ ವಿಧೇಯತೆಯಲ್ಲಿ ಭರವಸೆಯುಳ್ಳವನಾಗಿ ನಾನು ನಿನಗೆ ಬರೆದಿದ್ದೇನೆ. ನಾನು ಹೇಳಿದ್ದಕ್ಕಿಂತಲೂ ಹೆಚ್ಚಾಗಿಯೇ ನೀನು ಮಾಡುವೆಯೆಂದು ನನಗೆ ಗೊತ್ತಿದೆ.
ಫಿಲೆಮೋನನಿಗೆ 1 : 22 (OCVKN)
ಇದಲ್ಲದೆ: ನಿಮ್ಮ ಪ್ರಾರ್ಥನೆಯ ದೆಸೆಯಿಂದ ನಾನು ಪುನಃ ನಿಮ್ಮ ಬಳಿಗೆ ಬರುತ್ತೇನೆಂದು ನನಗೆ ನಿರೀಕ್ಷೆ ಇರುವುದು. ಆದಕಾರಣ ನನಗಾಗಿ ಒಂದು ಅತಿಥಿ ಕೊಠಡಿಯನ್ನು ಸಿದ್ಧಮಾಡು.
ಫಿಲೆಮೋನನಿಗೆ 1 : 23 (OCVKN)
ಫಿಲೆಮೋನನಿಗೆ 1 : 24 (OCVKN)
ಕ್ರಿಸ್ತ ಯೇಸುವಿಗಾಗಿ ನನ್ನ ಜೊತೆ ಸೆರೆಯಾಳಾಗಿರುವ ಎಪಫ್ರನು ನಿನಗೆ ವಂದನೆ ತಿಳಿಸುತ್ತಾನೆ. ನನ್ನ ಜೊತೆಕೆಲಸದವರಾದ ಮಾರ್ಕ, ಅರಿಸ್ತಾರ್ಕ, ದೇಮ ಹಾಗೂ ಲೂಕ ನಿನ್ನನ್ನು ವಂದಿಸುತ್ತಾರೆ.
ಫಿಲೆಮೋನನಿಗೆ 1 : 25 (OCVKN)
ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ.
❮
❯