ಫಿಲಿಪ್ಪಿಯವರಿಗೆ 2 : 1 (OCVKN)
ಕ್ರಿಸ್ತನ ದೀನತೆಯ ಅನುಸರಣೆ ನೀವು ಕ್ರಿಸ್ತನೊಂದಿಗೆ ಐಕ್ಯವಾಗಿರುವುದರಿಂದ ಉತ್ತೇಜನ, ಅವರ ಪ್ರೀತಿಯಿಂದ ಸಂತೈಸುವಿಕೆ, ಆತ್ಮನಲ್ಲಿ ಅನ್ಯೋನ್ಯತೆ, ಕನಿಕರದ ವಾತ್ಸಲ್ಯಗಳು ಇರುವುದಾದರೆ,
ಫಿಲಿಪ್ಪಿಯವರಿಗೆ 2 : 2 (OCVKN)
ನೀವು ಒಂದೇ ಮನಸ್ಸು, ಒಂದೇ ಪ್ರೀತಿ, ಆತ್ಮ, ಹಾಗೂ ಒಂದೇ ಗುರಿಯುಳ್ಳವರಾಗಿ, ನನ್ನ ಸಂತೋಷವನ್ನು ಪರಿಪೂರ್ಣಗೊಳಿಸಿರಿ.
ಫಿಲಿಪ್ಪಿಯವರಿಗೆ 2 : 3 (OCVKN)
ಸ್ವಾರ್ಥ ಉದ್ದೇಶದಿಂದಾಗಲಿ, ವ್ಯರ್ಥ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ ಪ್ರತಿಯೊಬ್ಬನೂ ದೀನತ್ವದಿಂದ ಮತ್ತೊಬ್ಬನನ್ನು ತನಗಿಂತಲೂ ಶ್ರೇಷ್ಠನೆಂದು ಎಣಿಸಲಿ.
ಫಿಲಿಪ್ಪಿಯವರಿಗೆ 2 : 4 (OCVKN)
ಪ್ರತಿಯೊಬ್ಬನೂ ಸ್ವಹಿತವನ್ನು ನೋಡದೆ ಪರಹಿತವನ್ನು ಸಹ ನೋಡಲಿ.
ಫಿಲಿಪ್ಪಿಯವರಿಗೆ 2 : 5 (OCVKN)
ಫಿಲಿಪ್ಪಿಯವರಿಗೆ 2 : 6 (OCVKN)
ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿಯೂ ಇರಲಿ: ಅವರು ದೇವರ ಸ್ವರೂಪವಾಗಿದ್ದರೂ, ದೇವರಿಗೆ ಸಮಾನರಾಗಿರುವುದನ್ನು ಬಿಡಲೊಲ್ಲೆನೆಂದು ಎಣಿಸದೆ,
ಫಿಲಿಪ್ಪಿಯವರಿಗೆ 2 : 7 (OCVKN)
ತಮ್ಮನ್ನು ತಾವೇ ಬರಿದುಮಾಡಿಕೊಂಡು ಗುಲಾಮನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದರು.
ಫಿಲಿಪ್ಪಿಯವರಿಗೆ 2 : 8 (OCVKN)
ಹೀಗೆ ಅವರು ಆಕಾರದಲ್ಲಿ ಮನುಷ್ಯರಾಗಿ ಕಾಣಿಸಿಕೊಂಡಾಗ ತಮ್ಮನ್ನು ತಾವೇ ತಗ್ಗಿಸಿಕೊಂಡು ಮರಣವನ್ನು ಎಂದರೆ ಶಿಲುಬೆಯ ಮರಣವನ್ನೂ ಹೊಂದುವಷ್ಟು ವಿಧೇಯರಾದರು.
ಫಿಲಿಪ್ಪಿಯವರಿಗೆ 2 : 9 (OCVKN)
ಈ ಕಾರಣದಿಂದಲೇ ದೇವರು ಅವರನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಅವರಿಗೆ ದಯಪಾಲಿಸಿದ್ದಾರೆ.
ಫಿಲಿಪ್ಪಿಯವರಿಗೆ 2 : 10 (OCVKN)
ಆದ್ದರಿಂದ ಪರಲೋಕ, ಭೂಲೋಕ, ಭೂಮಿಯ ಕೆಳಗಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ,
ಫಿಲಿಪ್ಪಿಯವರಿಗೆ 2 : 11 (OCVKN)
ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತದೇವರು ಎಂಬುದಾಗಿ ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವುದು.
ಫಿಲಿಪ್ಪಿಯವರಿಗೆ 2 : 12 (OCVKN)
ಗೊಣಗುಟ್ಟದೆ ಎಲ್ಲವನ್ನೂ ಮಾಡಿರಿ ಹೀಗಿರುವಲ್ಲಿ ನನ್ನ ಪ್ರಿಯ ಸ್ನೇಹಿತರೇ, ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ನೀವು ಯಾವಾಗಲೂ ನನಗೆ ವಿಧೇಯರಾದಂತೆ ಈಗಲೂ ವಿಧೇಯರಾಗಿ, ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ರಕ್ಷಣೆಯನ್ನು ಕಾರ್ಯರೂಪಕ್ಕೆ ತನ್ನಿರಿ.
ಫಿಲಿಪ್ಪಿಯವರಿಗೆ 2 : 13 (OCVKN)
ಏಕೆಂದರೆ, ತಮ್ಮ ಸದುದ್ದೇಶವನ್ನು ನೆರವೇರಿಸುವಂತೆ ನಿಮ್ಮಲ್ಲಿ ಬಯಕೆಯನ್ನೂ ಕಾರ್ಯಸಾಧನೆಯನ್ನೂ ನಿರ್ಮಿಸುವವರು ದೇವರೇ.
ಫಿಲಿಪ್ಪಿಯವರಿಗೆ 2 : 14 (OCVKN)
ಗೊಣಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನೂ ಮಾಡಿರಿ.
ಫಿಲಿಪ್ಪಿಯವರಿಗೆ 2 : 15 (OCVKN)
ಹೀಗೆ ನೀವು ನಿಂದಾರಹಿತರೂ ದೋಷವಿಲ್ಲದವರೂ, “ನಿಷ್ಕಳಂಕರಾದ ದೇವರ ಮಕ್ಕಳಾಗಿ, ವಕ್ರವಾದ ದುಷ್ಟ ಜನಾಂಗದ ಮಧ್ಯದಲ್ಲಿ,”* ಧರ್ಮೋ 32:5 ಜೀವವಾಕ್ಯವನ್ನು ಹಿಡಿದುಕೊಂಡು, ಲೋಕದಲ್ಲಿ ನಕ್ಷತ್ರಗಳಂತೆ ಹೊಳೆಯುವವರಾಗಿರುವಿರಿ.
ಫಿಲಿಪ್ಪಿಯವರಿಗೆ 2 : 16 (OCVKN)
ನೀವು ಜೀವವಾಕ್ಯವನ್ನು ಹಿಡಿದವರಾಗಿದ್ದರೆ, ಹೀಗೆ ನಾನು ಓಡಿದ ಓಟವೂ ಪ್ರಯಾಸವೂ ವ್ಯರ್ಥವಾಗಲಿಲ್ಲವೆಂದು ತಿಳಿದು ಕ್ರಿಸ್ತನ ಪುನರಾಗಮನ ದಿನದಲ್ಲಿ ಅಭಿಮಾನ ಪಡುವೆನು.
ಫಿಲಿಪ್ಪಿಯವರಿಗೆ 2 : 17 (OCVKN)
ನಿಮ್ಮ ವಿಶ್ವಾಸದಿಂದ ಬರುವ ಯಜ್ಞದ ಮೇಲೆಯೂ ಸೇವೆಯ ಮೇಲೆಯೂ ನಾನು ಪಾನಸಮರ್ಪಣೆಯಾದರೂ ಸಹ ಹರ್ಷದಿಂದ ನಿಮ್ಮೆಲ್ಲರೊಡನೆ ಆನಂದಿಸುವೆನು.
ಫಿಲಿಪ್ಪಿಯವರಿಗೆ 2 : 18 (OCVKN)
ಇದಕ್ಕಾಗಿಯೇ ನೀವೂ ಹರ್ಷಿಸಿರಿ. ನನ್ನೊಡನೆ ಆನಂದಿಸಿರಿ.
ಫಿಲಿಪ್ಪಿಯವರಿಗೆ 2 : 19 (OCVKN)
ತಿಮೊಥೆಯನೂ ಎಪಫ್ರೊದೀತನೂ ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವುದಕ್ಕೆ ಕರ್ತ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಹೀಗೆ ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಉತ್ತೇಜನಗೊಳ್ಳುವೆನು.
ಫಿಲಿಪ್ಪಿಯವರಿಗೆ 2 : 20 (OCVKN)
ಅವನ ಹಾಗೆ ನಿಮ್ಮ ಯೋಗಕ್ಷೇಮವನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು, ನನ್ನ ಬಳಿ ಬೇರೆ ಯಾರೂ ಇಲ್ಲ.
ಫಿಲಿಪ್ಪಿಯವರಿಗೆ 2 : 21 (OCVKN)
ಎಲ್ಲರೂ ಸ್ವಕಾರ್ಯಗಳನ್ನೇ ಹುಡುಕುತ್ತಾರೆಯೇ ಹೊರತು ಕ್ರಿಸ್ತ ಯೇಸುವಿನ ಕಾರ್ಯಗಳನ್ನು ಹುಡುಕುವುದಿಲ್ಲ.
ಫಿಲಿಪ್ಪಿಯವರಿಗೆ 2 : 22 (OCVKN)
ಆದರೆ ತಿಮೊಥೆಯನ ಗುಣಸ್ವಭಾವವನ್ನು ನೀವು ಬಲ್ಲಿರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಶ್ರಮಿಸಿದ್ದಾನೆ.
ಫಿಲಿಪ್ಪಿಯವರಿಗೆ 2 : 23 (OCVKN)
ಆದ್ದರಿಂದ ನನಗೆ ಏನು ಸಂಭವಿಸುವುದು ಎಂದು ತಿಳಿದ ಕೂಡಲೇ ಅವನನ್ನು ಕಳುಹಿಸುವ ನಿರೀಕ್ಷೆಯಿದೆ.
ಫಿಲಿಪ್ಪಿಯವರಿಗೆ 2 : 24 (OCVKN)
ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತ ದೇವರಲ್ಲಿ ಭರವಸೆಯುಳ್ಳವನಾಗಿದ್ದೇನೆ.
ಫಿಲಿಪ್ಪಿಯವರಿಗೆ 2 : 25 (OCVKN)
ಆದರೂ ನನ್ನ ಸಹೋದರನೂ ಜೊತೆ ಕೆಲಸದವನೂ ಸಹಸೈನಿಕನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ನಾನು ನೆನೆಸಿದ್ದೇನೆ. ಅವನು ನನ್ನ ಕೊರತೆಯಲ್ಲಿ ಸೇವೆ ಮಾಡುವಂತೆ ನೀವು ಕಳುಹಿಸಿದ ನಿಮ್ಮ ಸಂದೇಶಕನೂ ಆಗಿದ್ದಾನೆ.
ಫಿಲಿಪ್ಪಿಯವರಿಗೆ 2 : 26 (OCVKN)
ಏಕೆಂದರೆ ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದಾನೆ. ತಾನು ಅಸ್ವಸ್ಥನಾದ ಸುದ್ದಿಯು ನಿಮಗೆ ಮುಟ್ಟಿತೆಂದು ತಿಳಿದು ತುಂಬಾ ವ್ಯಸನಪಡುತ್ತಿದ್ದಾನೆ.
ಫಿಲಿಪ್ಪಿಯವರಿಗೆ 2 : 27 (OCVKN)
ಅವನು ಅಸ್ವಸ್ಥನಾಗಿ ಸಾಯುವ ಹಾಗೆ ಇದ್ದದ್ದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದರು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನು ಕರುಣಿಸಿದರು.
ಫಿಲಿಪ್ಪಿಯವರಿಗೆ 2 : 28 (OCVKN)
ಆದ್ದರಿಂದ ನೀವು ಅವನನ್ನು ನೋಡಿ ಪುನಃ ಆನಂದಿಸುವಂತೆಯೂ ನನಗೆ ದುಃಖ ಕಡಿಮೆಯಾಗುವಂತೆಯೂ ನಾನು ಅವನನ್ನು ಅತ್ಯಾಸಕ್ತಿಯಿಂದ ಕಳುಹಿಸಿದ್ದೇನೆ.
ಫಿಲಿಪ್ಪಿಯವರಿಗೆ 2 : 29 (OCVKN)
ನೀವು ಅವನನ್ನು ಪೂರ್ಣ ಆನಂದದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ.
ಫಿಲಿಪ್ಪಿಯವರಿಗೆ 2 : 30 (OCVKN)
ಅವನು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಹಾಗಿದ್ದನು. ನೀವು ನನಗೆ ಮಾಡಲು ಸಾಧ್ಯವಾಗದೆ ಹೋದ ಸಹಾಯವನ್ನು ತಾನೇ ಪೂರ್ತಿ ಮಾಡುವುದಕ್ಕಾಗಿ, ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಗುರಿಪಡಿಸಿಕೊಂಡನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30