ಫಿಲಿಪ್ಪಿಯವರಿಗೆ 3 : 1 (OCVKN)
ಸ್ವಶರೀರದಲ್ಲಿ ಭರವಸೆಯಿಡದಿರುವುದು ಕಡೆಯದಾಗಿ ನನ್ನ ಪ್ರಿಯರೇ, ಕರ್ತನಲ್ಲಿ ಆನಂದಿಸಿರಿ. ಬರೆದದ್ದನ್ನೇ ನಿಮಗೆ ಬರೆಯುವುದರಲ್ಲಿ ನನಗೆ ಬೇಸರವಿಲ್ಲ, ಅದು ನಿಮಗೆ ಸುರಕ್ಷಿತವೇ.
ಫಿಲಿಪ್ಪಿಯವರಿಗೆ 3 : 2 (OCVKN)
ನಾಯಿಗಳಂತೆ ವರ್ತಿಸುವವರಿಗೆ ಎಚ್ಚರಿಕೆ. ದುಷ್ಟಕಾರ್ಯಮಾಡುವವರಿಗೆ ಎಚ್ಚರಿಕೆ, ಸುಳ್ಳು ಸುನ್ನತಿಗಾಗಿ ವಾಗ್ವಾದಿಸುವವರಿಗೆ ಎಚ್ಚರಿಕೆ.
ಫಿಲಿಪ್ಪಿಯವರಿಗೆ 3 : 3 (OCVKN)
ಏಕೆಂದರೆ ದೇವರನ್ನು ಪವಿತ್ರಾತ್ಮರಿಂದ ಆರಾಧಿಸಿ ಕ್ರಿಸ್ತ ಯೇಸುವನ್ನು ಮಹಿಮೆಪಡಿಸುತ್ತಾ ಹರ್ಷಗೊಳ್ಳುವವರೂ ಮಾಂಸದಲ್ಲಿ ಭರವಸೆಯಿಡದ ನಾವೇ ಸುನ್ನತಿಯಾಗಿದ್ದೇವೆ.
ಫಿಲಿಪ್ಪಿಯವರಿಗೆ 3 : 4 (OCVKN)
ಮಾಂಸದಲ್ಲಿ ಭರವಸೆ ಇಡಲು ನನಗೆ ಸಾಕಷ್ಟು ಕಾರಣಗಳಿವೆ. ಬೇರೆ ಯಾವನಾದರೂ ಮಾನವೀಯ ಪ್ರಯತ್ನಗಳಲ್ಲಿ ಭರವಸೆ ಇಡಬಹುದೆಂದು ಭಾವಿಸುವುದಾದರೆ, ನಾನು ಅದಕ್ಕಿಂತಲೂ ಹೆಚ್ಚಾಗಿ ಹೇಳಬಹುದು:
ಫಿಲಿಪ್ಪಿಯವರಿಗೆ 3 : 5 (OCVKN)
ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು, ನಾನು ಇಸ್ರಾಯೇಲ್ ವಂಶದವನು; ಬೆನ್ಯಾಮೀನನ ಕುಲದವನು; ಹೀಬ್ರಿಯರಿಂದ ಹುಟ್ಟಿದ ಹೀಬ್ರಿಯನು; ಮೋಶೆಯ ನಿಯಮದ ಅನುಸಾರವಾಗಿ ನಾನು ಫರಿಸಾಯನು.
ಫಿಲಿಪ್ಪಿಯವರಿಗೆ 3 : 6 (OCVKN)
ಆಸಕ್ತಿಯನ್ನು ನೋಡಿದರೆ, ನಾನು ಸಭೆಯ ಹಿಂಸಕನು; ಮೋಶೆಯ ನಿಯಮದಲ್ಲಿರುವ ನೀತಿಯ ಅನುಸಾರವಾಗಿ ನಾನು ನಿರ್ದೋಷಿ.
ಫಿಲಿಪ್ಪಿಯವರಿಗೆ 3 : 7 (OCVKN)
ನನಗೆ ಲಾಭವಾಗಿದ್ದ ಎಲ್ಲವನ್ನೂ ಈಗ ನಾನು ಕ್ರಿಸ್ತನ ನಿಮಿತ್ತ ನಷ್ಟವೆಂದು ಎಣಿಸುತ್ತೇನೆ.
ಫಿಲಿಪ್ಪಿಯವರಿಗೆ 3 : 8 (OCVKN)
ಇದಲ್ಲದೆ, ನನ್ನ ಕರ್ತದೇವರು ಆಗಿರುವ ಕ್ರಿಸ್ತ ಯೇಸುವನ್ನು ಅರಿತುಕೊಳ್ಳುವುದೇ ಅತಿ ಶ್ರೇಷ್ಠವಾದುದ್ದೆಂದು, ನಾನು ಎಲ್ಲವನ್ನೂ ನಷ್ಟವೆಂದು ಎಣಿಸುತ್ತೇನೆ. ಕ್ರಿಸ್ತನನ್ನೇ ಲಾಭವನ್ನಾಗಿಸಿಕೊಳ್ಳಲು ನಾನು ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.
ಫಿಲಿಪ್ಪಿಯವರಿಗೆ 3 : 9 (OCVKN)
ಹೀಗೆ ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ಅವರಲ್ಲಿ ಒಂದಾಗಿರ ಬಯಸುತ್ತೇನೆ. ನಿಯಮದಿಂದ ಬರುವ ಸ್ವನೀತಿಯನ್ನು ಆಶ್ರಯಿಸಿಕೊಳ್ಳದೆ, ಕ್ರಿಸ್ತನನ್ನು ನಂಬುವುದರ ಮೂಲಕ ವಿಶ್ವಾಸದ ಆಧಾರದ ಮೇಲೆ ದೇವರು ಕೊಡುವ ನೀತಿಯನ್ನೇ ಹೊಂದಿದವನಾಗಿರ ಬಯಸುತ್ತೇನೆ.
ಫಿಲಿಪ್ಪಿಯವರಿಗೆ 3 : 10 (OCVKN)
ಕ್ರಿಸ್ತನನ್ನೂ ಅವರ ಪುನರುತ್ಥಾನದ ಶಕ್ತಿಯನ್ನೂ ನಾನು ಅರಿತುಕೊಂಡು, ಕ್ರಿಸ್ತನ ಶ್ರಮೆಯಲ್ಲಿ ಪಾಲುಗೊಳ್ಳುವ ಅನ್ಯೋನ್ಯತೆಯನ್ನೂ ಅವರ ಮರಣದಲ್ಲಿ ಅವರ ಹಾಗೆ ಆಗುವುದನ್ನೂ ತಿಳಿಯುವುದೇ ನನ್ನ ಅಪೇಕ್ಷೆ.
ಫಿಲಿಪ್ಪಿಯವರಿಗೆ 3 : 11 (OCVKN)
ಹೇಗಾದರೂ, ನಾನೂ ಸಹ ಸತ್ತವರೊಳಗಿಂದ ಪುನರುತ್ಥಾನ ಹೊಂದುವೆನು.
ಫಿಲಿಪ್ಪಿಯವರಿಗೆ 3 : 12 (OCVKN)
ಇದನ್ನೆಲ್ಲಾ ನಾನು ಸಾಧಿಸಿದ್ದೇನೆಂದಲ್ಲ ಅಥವಾ ಈಗಲೇ ನಾನು ಪರಿಪೂರ್ಣನಾಗಿದ್ದೇನೆಂದೂ ನಾನು ಹೇಳುತ್ತಾ ಇಲ್ಲ. ಆದರೆ ಕ್ರಿಸ್ತ ಯೇಸು ನನ್ನನ್ನು ಅನುಸರಿಸಬೇಕೆಂದು ಯಾವುದಕ್ಕಾಗಿ ಆರಿಸಿಕೊಂಡರೋ, ಆ ಪೂರ್ಣತೆಯೆಡೆಗೆ ತಲುಪುವಂತೆ ನಾನು ಪರಿಶ್ರಮಿಸುತ್ತಿದ್ದೇನೆ.
ಫಿಲಿಪ್ಪಿಯವರಿಗೆ 3 : 13 (OCVKN)
ಪ್ರಿಯರೇ, ನಾನಂತೂ ಆ ಗುರಿಯನ್ನು ತಲುಪಿದ್ದೇನೆಂದು ಭಾವಿಸಿಕೊಂಡಿಲ್ಲ. ಆದರೆ ಒಂದು ಸಂಗತಿ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು, ಮುಂದಿನ ವಿಷಯಗಳನ್ನು ಮಾತ್ರ ಲಕ್ಷ್ಯವನ್ನಾಗಿ ಮಾಡಿಕೊಂಡು ಅದನ್ನೇ ಪಡೆದುಕೊಳ್ಳುವುದಕ್ಕಾಗಿ ಓಡುತ್ತಿದ್ದೇನೆ.
ಫಿಲಿಪ್ಪಿಯವರಿಗೆ 3 : 14 (OCVKN)
ಹೀಗೆ ನಾನು ಕ್ರಿಸ್ತ ಯೇಸುವಿನಲ್ಲಿ ದೇವರ ಸ್ವರ್ಗೀಯ ಕರೆಯ ಬಹುಮಾನದ ಗುರಿಯೆಡೆಗೆ ಮುಂದೆ ಸಾಗುತ್ತಾ ಇದ್ದೇನೆ.
ಫಿಲಿಪ್ಪಿಯವರಿಗೆ 3 : 15 (OCVKN)
ಪೌಲನ ಮಾದರಿಯನ್ನು ಅನುಸರಿಸುವುದು ಆದ್ದರಿಂದ ನಮ್ಮಲ್ಲಿ ಆತ್ಮಿಕ ಪರಿಪಕ್ವತೆಯುಳ್ಳವರು ಇದೇ ಮನೋಭಾವವುಳ್ಳವರಾಗಿರಬೇಕು. ಕೆಲವು ವಿಷಯಗಳ ಮೇಲೆ ಭಿನ್ನಾಭಿಪ್ರಾಯವಿದ್ದರೆ, ಅದನ್ನೂ ದೇವರು ನಿಮಗೆ ಸ್ಪಷ್ಟಪಡಿಸುವರು.
ಫಿಲಿಪ್ಪಿಯವರಿಗೆ 3 : 16 (OCVKN)
ಆದರೂ ಈಗಾಗಲೇ ನಾವು ಯಾವುದರಲ್ಲಿ ಮುಂದುವರೆದಿದ್ದೇವೋ ಆ ಸೂತ್ರದ ಪ್ರಕಾರ ಒಂದೇ ಮನಸ್ಸುಳ್ಳವರಾಗಿ ಬಾಳೋಣ.
ಫಿಲಿಪ್ಪಿಯವರಿಗೆ 3 : 17 (OCVKN)
ಪ್ರಿಯರೇ, ನೀವು ನನ್ನನ್ನು ಅನುಸರಿಸುವವರಾಗಿರಿ. ನಮ್ಮ ಹಾಗೆ ಬಾಳುವ ಆದರ್ಶದ ಪ್ರಕಾರ ನಡೆದುಕೊಳ್ಳುವವರನ್ನು ಗಮನಿಸಿರಿ.
ಫಿಲಿಪ್ಪಿಯವರಿಗೆ 3 : 18 (OCVKN)
ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ಬಾಳುತ್ತಿದ್ದಾರೆ. ಅವರ ವಿಷಯದಲ್ಲಿ ನಾನು ನಿಮಗೆ ಹಲವಾರು ಸಾರಿ ತಿಳಿಸಿರುವಂತೆ ಈಗಲೂ ಕಣ್ಣೀರಿನಿಂದ ಹೇಳುತ್ತೇನೆ.
ಫಿಲಿಪ್ಪಿಯವರಿಗೆ 3 : 19 (OCVKN)
ವಿನಾಶನವೇ ಅವರ ಅಂತ್ಯವು. ಹೊಟ್ಟೆಯೇ ಅವರ ದೇವರು. ನಾಚಿಕೆ ಕಾರ್ಯಗಳಲ್ಲಿಯೇ ಅವರ ಪ್ರಭಾವ. ಅವರು ಲೌಕಿಕವಾದವುಗಳ ಮೇಲೆ ಮನಸ್ಸಿಡುತ್ತಾರೆ.
ಫಿಲಿಪ್ಪಿಯವರಿಗೆ 3 : 20 (OCVKN)
ಆದರೆ ನಮ್ಮ ಪೌರತ್ವವು ಪರಲೋಕದಲ್ಲಿದೆ. ನಾವು ಪರಲೋಕದಿಂದಲೇ ರಕ್ಷಕರಾಗಿರುವ ಒಬ್ಬರ ಬರುವಿಕೆಗಾಗಿ ಆತುರದಿಂದ ಎದುರುನೋಡುತ್ತಿದ್ದೇವೆ. ಅವರೇ ಕರ್ತದೇವರು ಆಗಿರುವ ಕ್ರಿಸ್ತ ಯೇಸು.
ಫಿಲಿಪ್ಪಿಯವರಿಗೆ 3 : 21 (OCVKN)
ಹೀಗೆ ಕ್ರಿಸ್ತ ಯೇಸು ಎಲ್ಲವನ್ನೂ ತಮಗೆ ಅಧೀನ ಮಾಡಿಕೊಳ್ಳುವ ತಮ್ಮ ಶಕ್ತಿಯ ಪ್ರಕಾರ, ಮಹಿಮೆಯುಳ್ಳ ತಮ್ಮ ದೇಹಕ್ಕೆ ಸಮವಾಗಿ ಸಾರೂಪ್ಯವಾಗುವಂತೆ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸುವರು.
❮
❯
1
2
3
4
5
6
7
8
9
10
11
12
13
14
15
16
17
18
19
20
21