ಫಿಲಿಪ್ಪಿಯವರಿಗೆ 4 : 1 (OCVKN)
ಸ್ಥಿರತೆ ಮತ್ತು ಐಕ್ಯತೆಗೆ ಮುಕ್ತಾಯ ಬೇಡಿಕೆ
ಫಿಲಿಪ್ಪಿಯವರಿಗೆ 4 : 2 (OCVKN)
ಹೀಗಿರಲಾಗಿ, ನನಗೆ ಆಪ್ತರೂ ನಾನು ಹಂಬಲಿಸುವವರೂ ಆದ ನನ್ನ ಪ್ರಿಯರೇ, ನನ್ನ ಆನಂದವೂ ಕಿರೀಟವೂ ಆಗಿರುವ ಸ್ನೇಹಿತರೇ, ಈಗಲೂ ಕರ್ತ ದೇವರಲ್ಲಿ ದೃಢವಾಗಿ ನಿಲ್ಲಿರಿ! ಕರ್ತ ದೇವರಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.
ಫಿಲಿಪ್ಪಿಯವರಿಗೆ 4 : 3 (OCVKN)
ಜೀವಗ್ರಂಥದಲ್ಲಿ ಹೆಸರು ಬರೆದಿರುವ ಕ್ಲೇಮೆನ್ಸ್ ಮುಂತಾದ ನನ್ನ ಜೊತೆ ಕೆಲಸದವರೊಡನೆ ನನ್ನೊಂದಿಗೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟ ಆ ಸ್ತ್ರೀಯರಿಗೆ ನೀನೂ ಸಹಾಯಕನಾಗಿರಬೇಕೆಂದು ನಿಜ ಜೊತೆಗಾರನೇ, ನಿನ್ನನ್ನೂ ಕೇಳಿಕೊಳ್ಳುತ್ತೇನೆ.
ಫಿಲಿಪ್ಪಿಯವರಿಗೆ 4 : 4 (OCVKN)
ಅಂತಿಮ ಪ್ರಬೋಧನೆಗಳು ಯಾವಾಗಲೂ ಕರ್ತ ದೇವರಲ್ಲಿ ಆನಂದಿಸಿರಿ, ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.
ಫಿಲಿಪ್ಪಿಯವರಿಗೆ 4 : 5 (OCVKN)
ನಿಮ್ಮ ಸಹನೆಯು ಎಲ್ಲರಿಗೂ ತಿಳಿದಿರಲಿ. ಕರ್ತದೇವರ ಬರುವಿಕೆಯು ಹತ್ತಿರವಾಗಿದೆ.
ಫಿಲಿಪ್ಪಿಯವರಿಗೆ 4 : 6 (OCVKN)
ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.
ಫಿಲಿಪ್ಪಿಯವರಿಗೆ 4 : 7 (OCVKN)
ಆಗ ಎಲ್ಲಾ ಗ್ರಹಿಕೆಯನ್ನೂ ಮೀರುವ ದೇವರ ಸಮಾಧಾನವು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವುದು.
ಫಿಲಿಪ್ಪಿಯವರಿಗೆ 4 : 8 (OCVKN)
ಕಡೆಯದಾಗಿ ಪ್ರಿಯರೇ, ಯಾವುದು ಸತ್ಯವೂ ಯಾವುದು ಮಾನ್ಯವೂ ಯಾವುದು ನ್ಯಾಯವೂ ಯಾವುದು ಶುದ್ಧವೂ ಯಾವುದು ಪ್ರೀತಿಕರವೂ ಯಾವುದು ಮನೋಹರವೂ ಯಾವುದು ಉತ್ತಮವಾದದ್ದೋ ಯಾವುದು ಕೀರ್ತಿಗೆ ಯೋಗ್ಯವೋ ಅವೆಲ್ಲವುಗಳನ್ನೇ ಆಲೋಚಿಸಿರಿ.
ಫಿಲಿಪ್ಪಿಯವರಿಗೆ 4 : 9 (OCVKN)
ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿದ್ದೀರೋ ಅದನ್ನೇ ಮಾಡುವವರಾಗಿರಿ. ಆಗ ಸಮಾಧಾನದ ದೇವರು ನಿಮ್ಮೊಂದಿಗಿರುವರು.
ಫಿಲಿಪ್ಪಿಯವರಿಗೆ 4 : 10 (OCVKN)
ಉಡುಗೊರೆಗಳಿಗಾಗಿ ಧನ್ಯವಾದಗಳು ಅಂತೂ ಕೊನೆಯದಾಗಿ ನನ್ನ ಬಗ್ಗೆ ನಿಮಗಿರುವ ಆಸಕ್ತಿಯು ಪುನಃ ಚಿಗುರಿದ್ದಕ್ಕಾಗಿ ಕರ್ತ ದೇವರಲ್ಲಿ ಬಹಳವಾಗಿ ಆನಂದಿಸುತ್ತೇನೆ. ನೀವು ನನ್ನ ಬಗ್ಗೆ ಆಸಕ್ತಿ ಮೊದಲಿನಿಂದ ಹೊಂದಿದ್ದರೂ ಅದನ್ನು ತೋರಿಸಲು ನಿಮಗೆ ಸೂಕ್ತ ಅವಕಾಶ ಸಿಕ್ಕಿರಲಿಲ್ಲ.
ಫಿಲಿಪ್ಪಿಯವರಿಗೆ 4 : 11 (OCVKN)
ನನಗೆ ಕೊರತೆಯಿದೆ ಎಂಬುದಕ್ಕಾಗಿ ನಾನು ಇದನ್ನು ಹೇಳುತ್ತಿಲ್ಲ. ಯಾವುದೇ ಪರಿಸ್ಥಿತಿಯಲ್ಲಿ ಸಂತೃಪ್ತನಾಗಿರುವುದನ್ನು ನಾನು ಕಲಿತುಕೊಂಡಿದ್ದೇನೆ.
ಫಿಲಿಪ್ಪಿಯವರಿಗೆ 4 : 12 (OCVKN)
ಕೊರತೆಯಲ್ಲಾಗಲಿ, ಸಮೃದ್ಧಿಯಲ್ಲಾಗಲಿ ಹೇಗೆ ಜೀವಿಸಬೇಕೆಂಬ ಅನುಭವವನ್ನು ತಿಳಿದುಕೊಂಡಿದ್ದೇನೆ. ಚೆನ್ನಾಗಿ ಊಟಮಾಡಿರಲಿ, ಹಸಿವೆಯಿಂದಿರಲಿ, ಸಮೃದ್ಧಿಯುಳ್ಳವನಾಗಿರಲಿ, ಕೊರತೆಯುಳ್ಳವನಾಗಿರಲಿ, ಯಾವುದೇ ಪರಿಸ್ಥಿತಿಯಲ್ಲಿದ್ದರೂ ಎಲ್ಲಾ ಪರಿಸ್ಥಿತಿಗಳಲ್ಲಿ ತೃಪ್ತನಾಗಿರುವ ರಹಸ್ಯವನ್ನು ಕಲಿತುಕೊಂಡಿದ್ದೇನೆ.
ಫಿಲಿಪ್ಪಿಯವರಿಗೆ 4 : 13 (OCVKN)
ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
ಫಿಲಿಪ್ಪಿಯವರಿಗೆ 4 : 14 (OCVKN)
ಹೀಗಿದ್ದರೂ, ನನ್ನ ತೊಂದರೆಗಳಲ್ಲಿ ನೀವು ಭಾಗವಹಿಸಿದ್ದು ಒಳ್ಳೆಯದಾಯಿತು.
ಫಿಲಿಪ್ಪಿಯವರಿಗೆ 4 : 15 (OCVKN)
ಫಿಲಿಪ್ಪಿಯವರೇ, ನಾನು ಪ್ರಾರಂಭ ದಿನಗಳಲ್ಲಿ ನಿಮ್ಮ ನಡುವೆ ಸುವಾರ್ತೆ ಸಾರಿ ಮಕೆದೋನ್ಯದಿಂದ ಹೊರಟುಹೋದಾಗ, ನಿಮ್ಮನ್ನು ಬಿಟ್ಟು ಬೇರಾವ ಸಭೆಯವರು ಕೊಡುವ ಮತ್ತು ತೆಗೆದುಕೊಳ್ಳುವ ವಿಷಯದಲ್ಲಿ ಯಾರೂ ನನ್ನೊಂದಿಗೆ ಪಾಲುಗಾರರಾಗಲಿಲ್ಲ ಎಂಬುದನ್ನು ನೀವು ತಿಳಿದುಕೊಂಡಿದ್ದೀರಿ.
ಫಿಲಿಪ್ಪಿಯವರಿಗೆ 4 : 16 (OCVKN)
ನಾನು ಥೆಸಲೋನಿಕದಲ್ಲಿದ್ದಾಗಲೂ ನನಗೆ ಕೊರತೆಯಾದಾಗ ನೀವು ಒಂದೆರಡು ಬಾರಿ ಸಹಾಯ ಕಳುಹಿಸಿದಿರಿ.
ಫಿಲಿಪ್ಪಿಯವರಿಗೆ 4 : 17 (OCVKN)
ನಾನು ನಿಮ್ಮಿಂದ ದಾನವನ್ನು ನಿರೀಕ್ಷಿಸುವುದಿಲ್ಲ. ಆದರೆ ನಿಮ್ಮ ಲೆಕ್ಕಕ್ಕೆ ಲಾಭ ಹೆಚ್ಚಿಸುವುದನ್ನೇ ನೋಡುತ್ತಿದ್ದೇನೆ.
ಫಿಲಿಪ್ಪಿಯವರಿಗೆ 4 : 18 (OCVKN)
ನಾನು ಎಲ್ಲವನ್ನೂ ಪರಿಪೂರ್ಣವಾಗಿ ಹೊಂದಿದ್ದೇನೆ. ನನಗೆ ಅಗತ್ಯಕ್ಕಿಂತಲೂ ಹೆಚ್ಚು ದೊರೆತಿದೆ. ನೀವು ಎಪಫ್ರೊದೀತನಿಂದ ಕಳುಹಿಸುವವುಗಳು ಈಗ ನನಗೆ ತಲುಪಿದೆ; ನಿಮ್ಮ ಕೊಡುಗೆ ದೇವರನ್ನು ಮೆಚ್ಚಿಸುವ ಸುಗಂಧ ಕಾಣಿಕೆಯೂ ಸ್ವೀಕೃತವಾದ ಯಜ್ಞವೂ ಆಗಿರುತ್ತವೆ.
ಫಿಲಿಪ್ಪಿಯವರಿಗೆ 4 : 19 (OCVKN)
ನನ್ನ ದೇವರು, ಕ್ರಿಸ್ತ ಯೇಸುವಿನಲ್ಲಿರುವ ತಮ್ಮ ಮಹಿಮೆಯ ಐಶ್ವರ್ಯಕ್ಕೆ ತಕ್ಕಂತೆಯೇ ನಿಮ್ಮ ಎಲ್ಲಾ ಕೊರತೆಗಳನ್ನು ನೀಗಿಸುವರು.
ಫಿಲಿಪ್ಪಿಯವರಿಗೆ 4 : 20 (OCVKN)
ನಮ್ಮ ತಂದೆ ದೇವರಿಗೆ ನಿರಂತರವೂ ಮಹಿಮೆಯಾಗಲಿ. ಆಮೆನ್.
ಫಿಲಿಪ್ಪಿಯವರಿಗೆ 4 : 21 (OCVKN)
ಅಂತಿಮ ವಂದನೆಗಳು
ಫಿಲಿಪ್ಪಿಯವರಿಗೆ 4 : 22 (OCVKN)
ಕ್ರಿಸ್ತ ಯೇಸುವಿನಲ್ಲಿರುವ ಎಲ್ಲಾ ದೇವಜನರಿಗೂ ವಂದನೆಗಳನ್ನು ಹೇಳಿರಿ. ನನ್ನ ಜೊತೆಯಲ್ಲಿರುವ ಸಹೋದರರೂ ಸಹೋದರಿಯರೂ ವಂದನೆಗಳನ್ನು ತಿಳಿಸುತ್ತಾರೆ. ಎಲ್ಲಾ ದೇವಜನರೂ ವಿಶೇಷವಾಗಿ ಕೈಸರನ ಮನೆತನಕ್ಕೆ ಸೇರಿದವರೂ ನಿಮಗೆ ವಂದನೆಗಳನ್ನು ತಿಳಿಸುತ್ತಾರೆ.
ಫಿಲಿಪ್ಪಿಯವರಿಗೆ 4 : 23 (OCVKN)
ಕರ್ತದೇವರು ಆಗಿರುವ ಕ್ರಿಸ್ತ ಯೇಸುವಿನ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ. ಆಮೆನ್.

1 2 3 4 5 6 7 8 9 10 11 12 13 14 15 16 17 18 19 20 21 22 23